ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
1 ಅರಸುಗಳು

1 ಅರಸುಗಳು ಅಧ್ಯಾಯ 22

ಮೀಕಾಯನು ಅಹಾಬನ ವಿರುದ್ಧ ಪ್ರವಾದಿಸಿದ್ದು 1 ಅರಾಮ್ಯರಿಗೂ, ಇಸ್ರಾಯೇಲರಿಗೂ ಮೂರು ವರ್ಷ ಯುದ್ಧ ನಡೆಯಲಿಲ್ಲ. 2 ಮೂರನೆಯ ವರ್ಷದಲ್ಲಿ, ಯೆಹೂದದ ಅರಸನಾದ ಯೆಹೋಷಾಫಾಟನು ಇಸ್ರಾಯೇಲಿನ ಅರಸನ ಬಳಿಗೆ ಬಂದನು. 3 ಇಸ್ರಾಯೇಲಿನ ಅರಸನು ತನ್ನ ಸೇವಕರಿಗೆ, “ಗಿಲ್ಯಾದಿನ ರಾಮೋತ್ ನಮ್ಮದೆಂದು ನಿಮಗೆ ಗೊತ್ತುಂಟಲ್ಲಾ? ನಾವು ಅದನ್ನು ಅರಾಮಿನ ಅರಸನ ಕೈಯಿಂದ ತೆಗೆದುಕೊಳ್ಳದೆ ಸುಮ್ಮನೆ ಇದ್ದೇವೆ,” ಎಂದನು. 4 ಆಗ ಅವನು ಯೆಹೋಷಾಫಾಟನಿಗೆ, “ನೀನು ಗಿಲ್ಯಾದಿನ ರಾಮೋತಿನ ಮೇಲೆ ಯುದ್ಧಮಾಡಲು ನನ್ನ ಸಂಗಡ ಬರುತ್ತೀಯಾ?” ಎಂದನು. ಯೆಹೋಷಾಫಾಟನು ಇಸ್ರಾಯೇಲಿನ ಅರಸನಿಗೆ, “ನಾನೂ ನೀನೂ, ನನ್ನ ಜನರೂ ನಿನ್ನ ಜನರೂ, ನನ್ನ ಕುದುರೆಗಳೂ ನಿನ್ನ ಕುದುರೆಗಳೂ ಒಂದೇ ಅಲ್ಲವೇ?” ಎಂದನು. 5 ಆದರೆ ಯೆಹೋಷಾಫಾಟನು ಇಸ್ರಾಯೇಲಿನ ಅರಸನಿಗೆ, “ಈ ಹೊತ್ತು ಮೊದಲು ಯೆಹೋವ ದೇವರ ಆಲೋಚನೆಯನ್ನು ವಿಚಾರಿಸಿರಿ,” ಎಂದನು. 6 7 ಆಗ ಇಸ್ರಾಯೇಲಿನ ಅರಸನು ಹೆಚ್ಚು ಕಡಿಮೆ ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ, ಅವರಿಗೆ, “ನಾನು ಗಿಲ್ಯಾದಿನ ರಾಮೋತಿನ ಮೇಲೆ ಯುದ್ಧಕ್ಕೆ ಹೋಗಬಹುದೋ, ಬೇಡವೋ?” ಎಂದು ಕೇಳಿದನು. ಅದಕ್ಕವರು, “ಹೋಗು, ಯೆಹೋವ ದೇವರು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವರು,” ಎಂದರು. 8 ಆದರೆ ಯೆಹೋಷಾಫಾಟನು, “ಯೆಹೋವ ದೇವರ ಪ್ರವಾದಿಗಳಲ್ಲಿ ಇವರ ಹೊರತಾಗಿ ನಾವು ವಿಚಾರಿಸುವ ಹಾಗೆ ಬೇರೆ ಪ್ರವಾದಿ ಇಲ್ಲಿ ಇಲ್ಲವೋ?” ಎಂದು ಕೇಳಿದನು. 9 ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ, “ನಾವು ಯೆಹೋವ ದೇವರನ್ನು ವಿಚಾರಿಸುವ ಹಾಗೆ ಇಮ್ಲನ ಮಗ ಮೀಕಾಯನೆಂಬ ಇನ್ನೊಬ್ಬನಿದ್ದಾನೆ. ಆದರೆ ನಾನು ಅವನನ್ನು ದ್ವೇಷ ಮಾಡುತ್ತೇನೆ. ಏಕೆಂದರೆ ಅವನು ನನ್ನನ್ನು ಕುರಿತು ಒಳ್ಳೆಯದನ್ನಲ್ಲ ಯಾವಾಗಲೂ ಕೆಟ್ಟದ್ದನ್ನು ಪ್ರವಾದಿಸುತ್ತಾನೆ,” ಎಂದನು. ಅದಕ್ಕೆ ಯೆಹೋಷಾಫಾಟನು, “ಅರಸನು ಹಾಗೆ ಅನ್ನದಿರಲಿ,” ಎಂದನು. 10 ಆಗ ಇಸ್ರಾಯೇಲಿನ ಅರಸನು ಒಬ್ಬ ಅಧಿಕಾರಿಯನ್ನು ಕರೆದು, “ಇಮ್ಲನ ಮಗನಾದ ಮೀಕಾಯನನ್ನು ಶೀಘ್ರವಾಗಿ ಕರೆದುಕೊಂಡು ಬಾ,” ಎಂದನು. ಇಸ್ರಾಯೇಲಿನ ಅರಸನೂ, ಯೆಹೂದದ ಅರಸನಾದ ಯೆಹೋಷಾಫಾಟನೂ, ರಾಜವಸ್ತ್ರಗಳನ್ನು ಧರಿಸಿಕೊಂಡು ಸಮಾರ್ಯದ ಬಾಗಿಲಿನ ಮುಂದೆ ಬಯಲಿನಲ್ಲಿ ತಮ್ಮ ತಮ್ಮ ಸಿಂಹಾಸನಗಳ ಮೇಲೆ ಕುಳಿತುಕೊಂಡಿದ್ದರು. ಸಕಲ ಪ್ರವಾದಿಗಳೂ ಅವರ ಮುಂದೆ ಪ್ರವಾದಿಸುತ್ತಿದ್ದರು. 11 ಆಗ ಕೆನಾನನ ಮಗನಾದ ಚಿದ್ಕೀಯನು, “ತನಗೆ ಕಬ್ಬಿಣದ ಕೊಂಬುಗಳನ್ನು ಮಾಡಿಕೊಂಡು, ‘ಇವುಗಳಿಂದ ನೀನು ಅರಾಮ್ಯರನ್ನು ನಿರ್ಮೂಲ ಮಾಡುವವರೆಗೂ ಇರಿದು ಹಾಕುವೆ,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು. 12 13 ಸಮಸ್ತ ಪ್ರವಾದಿಗಳೂ ಹಾಗೆಯೇ ಪ್ರವಾದಿಸಿ, “ಗಿಲ್ಯಾದಿನ ರಾಮೋತಿಗೆ ಹೋಗಿ ಜಯ ಹೊಂದು, ಯೆಹೋವ ದೇವರು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವರು,” ಎಂದರು. 14 ಆದರೆ ಮೀಕಾಯನನ್ನು ಕರೆಯಲು ಹೋದ ದೂತನು ಅವನಿಗೆ, “ನೋಡು, ಎಲ್ಲ ಪ್ರವಾದಿಗಳು ಏಕಮನಸ್ಸಿನಿಂದ ಅರಸನಿಗೆ ಒಳ್ಳೆಯದನ್ನೇ ಪ್ರವಾದಿಸಿದ್ದಾರೆ. ನಿನ್ನ ಮಾತು ಅವರಲ್ಲಿ ಒಬ್ಬನ ಮಾತಿನ ಹಾಗೆಯೇ ಇರಲಿ; ಒಳ್ಳೆಯ ಮಾತು ಆಡು,” ಎಂದನು. 15 ಅದಕ್ಕೆ ಮೀಕಾಯನು, “ಯೆಹೋವ ದೇವರ ಜೀವದಾಣೆ, ಯೆಹೋವ ದೇವರು ನನಗೆ ಏನು ಹೇಳುವರೋ, ಅದನ್ನೇ ಮಾತನಾಡುವೆನು,” ಎಂದನು. 16 ಅವನು ಅರಸನ ಬಳಿಗೆ ಬಂದಾಗ ಅರಸನು ಅವನಿಗೆ, “ಮೀಕಾಯೆಹುವೇ, ನಾವು ಗಿಲ್ಯಾದಿನ ರಾಮೋತ್ ವಿರುದ್ಧವಾಗಿ ಯುದ್ಧಕ್ಕೆ ಹೋಗಬಹುದೋ ಅಥವಾ ಬೇಡವೋ?” ಎಂದನು. ಆಗ ಅವನು, “ಹೋಗಿ ಜಯ ಹೊಂದಿರಿ. ಯೆಹೋವ ದೇವರು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವರು,” ಎಂದನು. 17 ಆಗ ಅರಸನು ಅವನಿಗೆ, “ನೀನು ಯೆಹೋವ ದೇವರ ಹೆಸರಿನಲ್ಲಿ ಸತ್ಯವನ್ನಲ್ಲದೆ ಬೇರೊಂದು ನನಗೆ ಹೇಳಬಾರದೆಂದು ನಾನು ಎಷ್ಟು ಸಾರಿ ನಿನಗೆ ಆಣೆ ಇಡಬೇಕು?” ಎಂದನು. 18 ಅದಕ್ಕೆ ಮೀಕಾಯನು, “ಇಸ್ರಾಯೇಲರೆಲ್ಲರು ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳ ಮೇಲೆ ಚದರಿಹೋದದ್ದನ್ನು ಕಂಡೆನು. ಆಗ ಯೆಹೋವ ದೇವರು, ‘ಇವರಿಗೆ ಯಜಮಾನನು ಇಲ್ಲ, ಪ್ರತಿ ಮನುಷ್ಯನು ತನ್ನ ತನ್ನ ಮನೆಗೆ ಸಮಾಧಾನವಾಗಿ ಹಿಂದಿರುಗಿ ಹೋಗಲಿ,’ ಎಂಬುದಾಗಿ ಹೇಳಿದರು,” ಎಂದನು. 19 ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ, “ಇವನು ನನ್ನನ್ನು ಕುರಿತು ಒಳ್ಳೆಯದನ್ನಲ್ಲ, ಕೆಟ್ಟದ್ದನ್ನೇ ಪ್ರವಾದಿಸುವನೆಂದು ನಾನು ನಿನಗೆ ಹೇಳಲಿಲ್ಲವೇ?” ಎಂದನು. ಆಗ ಮೀಕಾಯನು, “ಆದ್ದರಿಂದ ಯೆಹೋವ ದೇವರ ವಾಕ್ಯವನ್ನು ಕೇಳು: ಯೆಹೋವ ದೇವರು ತಮ್ಮ ಸಿಂಹಾಸನದ ಮೇಲೆ ಕುಳಿತುಕೊಂಡಿರುವುದನ್ನೂ ಆಕಾಶದ ಸಮಸ್ತ ಸೈನ್ಯವು ಅವರ ಬಲಗಡೆ, ಎಡಗಡೆ ಮತ್ತು ಸುತ್ತಲೂ ನಿಂತಿರುವುದನ್ನೂ ನಾನು ಕಂಡೆನು. 20 ಆಗ ಯೆಹೋವ ದೇವರು, ‘ಅಹಾಬನು ಹೋಗಿ ಗಿಲ್ಯಾದಿನ ರಾಮೋತಿನಲ್ಲಿ ಬೀಳುವ ಹಾಗೆ, ಅವನನ್ನು ಮರುಳುಗೊಳಿಸುವವನು ಯಾರು?’ ಎಂದರು. “ಒಬ್ಬನು ಒಂದು ವಿಧವಾಗಿಯೂ ಮತ್ತೊಬ್ಬನು ಇನ್ನೊಂದು ವಿಧವಾಗಿಯೂ ಹೇಳುತ್ತಿದ್ದರು. 21 ಕೊನೆಯಲ್ಲಿ, ಒಂದು ಆತ್ಮವು ಹೊರಟುಬಂದು ಯೆಹೋವ ದೇವರ ಮುಂದೆ ನಿಂತು, ‘ನಾನು ಅವನನ್ನು ಮರುಳುಗೊಳಿಸುತ್ತೇನೆ,’ ಎಂದಿತು. 22 23 “ಆಗ ಯೆಹೋವ ದೇವರು, ‘ಅದು ಹೇಗೆ?’ ಎಂದರು. “ಅದಕ್ಕದು, ‘ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಲ್ಲಿ ಸುಳ್ಳನ್ನಾಡುವ ಆತ್ಮವಾಗಿರುವೆನು,’ ಎಂದಿತು. “ಅದಕ್ಕೆ ಅವರು, ‘ನೀನು ಅವನನ್ನು ಮರುಳುಗೊಳಿಸುವೆ ಮತ್ತು ಜಯಿಸುವೆ. ಹೊರಟುಹೋಗಿ ಹಾಗೆ ಮಾಡು,’ ಎಂದರು. 24 “ಆದ್ದರಿಂದ ಇಗೋ, ಯೆಹೋವ ದೇವರು ಈ ಎಲ್ಲಾ ನಿನ್ನ ಪ್ರವಾದಿಗಳ ಬಾಯಿಯಲ್ಲಿ ಸುಳ್ಳನ್ನಾಡುವ ಆತ್ಮವನ್ನು ಇಟ್ಟಿದ್ದಾರೆ. ಇದಲ್ಲದೆ ಯೆಹೋವ ದೇವರು ನಿನ್ನನ್ನು ಕುರಿತು ಕೇಡನ್ನು ಹೇಳಿದ್ದಾರೆ,” ಎಂದನು. 25 ಆಗ ಕೆನಾನನ ಮಗನಾದ ಚಿದ್ಕೀಯನು ಸಮೀಪಕ್ಕೆ ಬಂದು, ಮೀಕಾಯನ ಕೆನ್ನೆಯ ಮೇಲೆ ಹೊಡೆದು, “ಯೆಹೋವ ದೇವರ ಆತ್ಮವು ನನ್ನನ್ನು ಬಿಟ್ಟು, ನಿನ್ನ ಸಂಗಡ ಮಾತನಾಡಲು ಯಾವ ಮಾರ್ಗವಾಗಿ ಬಂದಿತು?” ಎಂದನು. 26 ಅದಕ್ಕೆ ಮೀಕಾಯನು, “ಇಗೋ, ನಿನ್ನನ್ನು ಬಚ್ಚಿಟ್ಟುಕೊಳ್ಳಲು ಒಳಕೊಠಡಿಗೆ ನೀನು ಹೋಗುವ ದಿವಸದಲ್ಲಿ ನೋಡುವೆ,” ಎಂದನು. ಆಗ ಇಸ್ರಾಯೇಲಿನ ಅರಸನು ಹೇಳಿದ್ದೇನೆಂದರೆ, “ನೀವು ಮೀಕಾಯನನ್ನು ಹಿಡಿದು ಪಟ್ಟಣದ ಅಧಿಪತಿಯಾದ ಆಮೋನನ ಬಳಿಗೂ, ಅರಸನ ಮಗನಾದ ಯೋವಾಷನ ಬಳಿಗೂ ತೆಗೆದುಕೊಂಡುಹೋಗಿ, 27 ‘ನಾನು ಸಮಾಧಾನವಾಗಿ ತಿರುಗಿ ಬರುವವರೆಗೂ ನೀವು ಇವನನ್ನು ಸೆರೆಮನೆಯಲ್ಲಿಟ್ಟು, ಅವನಿಗೆ ರೊಟ್ಟಿ ಮತ್ತು ನೀರನ್ನು ಬಿಟ್ಟು ಮತ್ತೇನೂ ಕೊಡಬೇಡಿರೆಂದು ಅರಸನು ಹೇಳಿದ್ದಾನೆ,’ ಎಂದು ತಿಳಿಸು,” ಎಂದನು. 28 29 ಅದಕ್ಕೆ ಮೀಕಾಯನು, “ನೀನು ಸಮಾಧಾನದಿಂದ ನಿಜವಾಗಿ ಬಂದರೆ, ಯೆಹೋವ ದೇವರು ನನ್ನ ಮುಖಾಂತರ ಮಾತನಾಡಿಲ್ಲ, ಎಂದು ಹೇಳಿ; ಜನರೇ ನೀವೆಲ್ಲರೂ ನನ್ನ ಮಾತನ್ನು ಗಮನದಲ್ಲಿಡಿರಿ!” ಎಂದು ಕೂಗಿ ಹೇಳಿದನು. ಅಹಾಬನು ಗಿಲ್ಯಾದಿನ ರಾಮೋತಿನಲ್ಲಿ ಹತನಾದದ್ದು ಹೀಗೆಯೇ ಇಸ್ರಾಯೇಲಿನ ಅರಸನೂ, ಯೆಹೂದದ ಅರಸನಾದ ಯೆಹೋಷಾಫಾಟನೂ ಗಿಲ್ಯಾದಿನ ರಾಮೋತಿಗೆ ಹೋದರು. 30 ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ, “ನಾನು ವೇಷಹಾಕಿಕೊಂಡು ಯುದ್ಧದಲ್ಲಿ ಪ್ರವೇಶಿಸುವೆನು. ಆದರೆ ನೀನು ನಿನ್ನ ರಾಜವಸ್ತ್ರಗಳನ್ನು ಧರಿಸಿಕೊಂಡಿರು,” ಎಂದನು. ಹಾಗೆಯೇ ಇಸ್ರಾಯೇಲಿನ ಅರಸನು ವೇಷಹಾಕಿಕೊಂಡು ಯುದ್ಧಕ್ಕೆ ಹೋದನು. 31 ಅರಾಮಿನ ಅರಸನು ತನ್ನ ರಥಗಳ ಮೇಲೆ ಅಧಿಕಾರವುಳ್ಳ ಮೂವತ್ತೆರಡು ಮಂದಿ ಪ್ರಧಾನರಿಗೆ, “ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ ಅಧಿಪತಿಗಳನ್ನೂ ಬಿಟ್ಟು ಇಸ್ರಾಯೇಲಿನ ಅರಸನನ್ನು ಮಾತ್ರ ಗುರಿಯಾಗಿಸಿಕೊಂಡು ಯುದ್ಧಮಾಡಿರಿ,” ಎಂದು ಆಜ್ಞಾಪಿಸಿದನು. 32 ಆದ್ದರಿಂದ ರಥಗಳ ಅಧಿಪತಿಗಳು ಯೆಹೋಷಾಫಾಟನನ್ನು ಕಂಡಾಗ, “ನಿಶ್ಚಯವಾಗಿ ಇವನೇ ಇಸ್ರಾಯೇಲಿನ ಅರಸನು,” ಎಂದು ಹೇಳಿ, ಅವನ ಸಂಗಡ ಯುದ್ಧಮಾಡುವುದಕ್ಕೆ ತಿರುಗಿಕೊಂಡರು. ಆಗ ಯೆಹೋಷಾಫಾಟನು ಕೂಗಿಕೊಂಡನು. 33 ಅವನು ಇಸ್ರಾಯೇಲಿನ ಅರಸನಲ್ಲವೆಂದು ರಥಗಳ ಅಧಿಪತಿಗಳಿಗೆ ಗೊತ್ತಾದಾಗ, ಅವರು ಅವನನ್ನು ಬಿಟ್ಟುಹೋದರು. 34 ಆದರೆ ಅರಾಮ್ಯರ ಸೈನಿಕನೊಬ್ಬನು ಗುರಿ ಇಡದೆ ಬಿಲ್ಲಿಗೆ ಬಾಣವನ್ನೇರಿಸಿ ಹೊಡೆಯಲು, ಅದು ಇಸ್ರಾಯೇಲಿನ ಅರಸನಿಗೆ, ಅವನ ಕವಚದ ಸಂದಿನಲ್ಲಿ ಬಂದು ತಾಕಿತು. ಆದ್ದರಿಂದ ಅವನು ತನ್ನ ರಥ ನಡೆಸುವವನಿಗೆ, “ನೀನು ರಥವನ್ನು ತಿರುಗಿಸಿ ನನ್ನನ್ನು ಸೈನ್ಯದೊಳಗಿಂದ ಆಚೇಕಡೆಗೆ ತೆಗೆದುಕೊಂಡು ಹೋಗು, ನನಗೆ ದೊಡ್ಡ ಗಾಯವಾಗಿದೆ,” ಎಂದನು. 35 ಆ ದಿವಸವೆಲ್ಲಾ ಯುದ್ಧವು ಬಹು ಘೋರವಾದದ್ದರಿಂದ ಇಸ್ರಾಯೇಲಿನ ಅರಸನು ಅರಾಮ್ಯರಿಗೆ ಎದುರಾಗಿ ರಥದಲ್ಲಿಯೇ ಆತುಕೊಂಡು ನಿಂತಿದ್ದನು. ಅವನ ಗಾಯದ ರಕ್ತವು ರಥದ ಅಡಿಭಾಗದಲ್ಲಿ ಸುರಿದು ನಿಂತಿತ್ತು, ಸಾಯಂಕಾಲದಲ್ಲಿ ಅವನು ಮರಣಹೊಂದಿದನು. 36 ಸಾಯಂಕಾಲವಾದಾಗ, “ಪ್ರತಿ ಮನುಷ್ಯನು ತನ್ನ ತನ್ನ ಪಟ್ಟಣಕ್ಕೂ, ಪ್ರತಿ ಮನುಷ್ಯನು ತನ್ನ ತನ್ನ ದೇಶಕ್ಕೂ ಹೋಗಲಿ,” ಎಂದು ಸೈನ್ಯದಲ್ಲಿ ಪ್ರಕಟಮಾಡಲಾಯಿತು. 37 ಇಸ್ರಾಯೇಲಿನ ಅರಸನ ಶವವನ್ನು ಸಮಾರ್ಯಕ್ಕೆ ತಂದು ಅಲ್ಲಿ ಸಮಾಧಿಮಾಡಿದರು. 38 ಆ ರಥವನ್ನು ವೇಶ್ಯೆಯರು ಸ್ನಾನ ಮಾಡುವ ಸಮಾರ್ಯದ ಕೆರೆಯಲ್ಲಿ ತೊಳೆಯುತ್ತಿದ್ದಾಗ, ಯೆಹೋವ ದೇವರು ಹೇಳಿದ ವಾಕ್ಯದ ಪ್ರಕಾರವೇ ನಾಯಿಗಳು ಅವನ ರಕ್ತವನ್ನು ನೆಕ್ಕಿದವು. 39 ಅಹಾಬನ ಇತರ ಕ್ರಿಯೆಗಳೂ, ಅವನು ಮಾಡಿದ್ದೆಲ್ಲವೂ, ಅವನು ಕಟ್ಟಿಸಿದ ದಂತದ ಮನೆಯೂ, ಅವನು ಕಟ್ಟಿಸಿದ ಎಲ್ಲಾ ಪಟ್ಟಣಗಳೂ ಇಸ್ರಾಯೇಲಿನ ಅರಸುಗಳ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ. 40 ಅಹಾಬನು ಮೃತನಾಗಿ ತನ್ನ ಪಿತೃಗಳ ಜೊತೆ ಸೇರಿದನು. ಅವನ ಮಗ ಅಹಜ್ಯನು ಅವನಿಗೆ ಬದಲಾಗಿ ಅರಸನಾದನು. ಯೆಹೂದ್ಯರ ಅರಸನಾದ ಯೆಹೋಷಾಫಾಟನು 41 ಇಸ್ರಾಯೇಲರ ಅರಸ ಅಹಾಬನ ನಾಲ್ಕನೆಯ ವರ್ಷದಲ್ಲಿ ಆಸನ ಮಗ ಯೆಹೋಷಾಫಾಟನು ಯೆಹೂದ್ಯರ ಅರಸನಾದನು. 42 ಅವನು ಅರಸನಾದಾಗ ಮೂವತ್ತೈದು ವರ್ಷದವನಾಗಿದ್ದನು. ಯೆರೂಸಲೇಮಿನಲ್ಲಿ ಇಪ್ಪತ್ತೈದು ವರ್ಷ ಆಳಿದನು. ಶಿಲ್ಹಿಯ ಮಗಳಾದ ಅಜೂಬಳೆಂಬಾಕೆಯು ಅವನ ತಾಯಿ. 43 ಅವನು ತನ್ನ ತಂದೆ ಆಸನ ಮಾರ್ಗಗಳಲ್ಲಿ ನಡೆದು, ಅದನ್ನು ಬಿಟ್ಟು ತೊಲಗದೇ, ಯೆಹೋವ ದೇವರ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿದನು. ಆದರೂ ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲ ಆದ್ದರಿಂದ ಜನರು ಪೂಜಾಸ್ಥಳಗಳ ಮೇಲೆ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುವುದನ್ನು ಮುಂದುವರೆಸಿದ್ದರು. 44 ಯೆಹೋಷಾಫಾಟನು ಇಸ್ರಾಯೇಲಿನ ಅರಸನ ಸಂಗಡ ಸಮಾಧಾನ ಮಾಡಿಕೊಂಡನು. 45 ಯೆಹೋಷಾಫಾಟನ ಇತರ ಕ್ರಿಯೆಗಳೂ, ಅವನು ತೋರಿಸಿದ ಪರಾಕ್ರಮವೂ, ಅವನು ಯುದ್ಧ ಮಾಡಿದ ವಿಧವೂ, ಯೆಹೂದದ ಅರಸುಗಳ ಇತಿಹಾಸಗಳ ಗ್ರಂಥದಲ್ಲಿ ಬರೆದಿರುತ್ತವೆ. 46 ಅವನ ತಂದೆ ಆಸನ ಕಾಲದಲ್ಲಿ ಉಳಿದಿದ್ದ ಪುರುಷಗಾಮಿಗಳನ್ನು ಅವನು ದೇಶದಿಂದ ತೆಗೆದುಹಾಕಿದನು. 47 ಆ ಕಾಲದಲ್ಲಿ ಎದೋಮಿನೊಳಗೆ ಅರಸನಿರಲಿಲ್ಲ, ಅಧಿಪತಿಯು ಆಳುತ್ತಿದ್ದನು. 48 ಯೆಹೋಷಾಫಾಟನು ಬಂಗಾರಕ್ಕೋಸ್ಕರ ಓಫೀರಿಗೆ ಹೋಗುವುದಕ್ಕೆ ತಾರ್ಷೀಷ್ ಹಡಗುಗಳನ್ನು ಮಾಡಿಸಿದನು. ಆದರೆ ಅವು ಹೋಗಲಿಲ್ಲ. ಆ ಹಡಗುಗಳು ಎಚ್ಯೋನ್ ಗೆಬೆರಿನ ಬಳಿಯಲ್ಲಿ ಒಡೆದುಹೋದವು. 49 ಆಗ ಅಹಾಬನ ಮಗ ಅಹಜ್ಯನು ಯೆಹೋಷಾಫಾಟನಿಗೆ, “ನನ್ನ ಸೇವಕರು, ನಿನ್ನ ಸೇವಕರ ಸಂಗಡ ಹಡಗುಗಳಲ್ಲಿ ಹೋಗಲಿ,” ಎಂದನು. ಆದರೆ ಯೆಹೋಷಾಫಾಟನು ಸಮ್ಮತಿಸಲಿಲ್ಲ. 50 51 ಯೆಹೋಷಾಫಾಟನು ಮೃತನಾಗಿ ತನ್ನ ಪಿತೃಗಳ ಜೊತೆ ಸೇರಿದನು. ಅವನ ಶವವನ್ನು ದಾವೀದನ ಪಟ್ಟಣದೊಳಗೆ ಅವನ ಪೂರ್ವಜರ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಆಗ ಅವನಿಗೆ ಬದಲಾಗಿ ಅವನ ಮಗನಾದ ಯೆಹೋರಾಮನು ಅರಸನಾದನು. ಇಸ್ರಾಯೇಲರ ಅರಸನಾದ ಅಹಜ್ಯನು ಅಹಾಬನ ಮಗ ಅಹಜ್ಯನು ಯೆಹೂದದ ಅರಸನಾದ ಯೆಹೋಷಾಫಾಟನ ಹದಿನೇಳನೆಯ ವರ್ಷದಲ್ಲಿ ಸಮಾರ್ಯದಲ್ಲಿ ಇಸ್ರಾಯೇಲಿನ ಮೇಲೆ ಆಳಲಾರಂಭಿಸಿ, ಎರಡು ವರ್ಷ ಇಸ್ರಾಯೇಲನ್ನು ಆಳಿದನು. 52 ಆದರೆ ಅವನು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ, ತನ್ನ ತಂದೆಯ ಮಾರ್ಗದಲ್ಲಿಯೂ, ತನ್ನ ತಾಯಿಯ ಮಾರ್ಗದಲ್ಲಿಯೂ ಇಸ್ರಾಯೇಲರನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗ ಯಾರೊಬ್ಬಾಮನ ಮಾರ್ಗದಲ್ಲಿಯೂ ನಡೆದನು. 53 ಅವನು ಬಾಳನನ್ನು ಸೇವಿಸಿ, ಅದಕ್ಕೆ ಅಡ್ಡಬಿದ್ದು, ತನ್ನ ತಂದೆಯು ಮಾಡಿದ ಎಲ್ಲಾದರ ಪ್ರಕಾರವೇ ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಕೋಪ ಬರುವಂತೆ ಮಾಡಿದನು.
ಮೀಕಾಯನು ಅಹಾಬನ ವಿರುದ್ಧ ಪ್ರವಾದಿಸಿದ್ದು 1 ಅರಾಮ್ಯರಿಗೂ, ಇಸ್ರಾಯೇಲರಿಗೂ ಮೂರು ವರ್ಷ ಯುದ್ಧ ನಡೆಯಲಿಲ್ಲ. .::. 2 ಮೂರನೆಯ ವರ್ಷದಲ್ಲಿ, ಯೆಹೂದದ ಅರಸನಾದ ಯೆಹೋಷಾಫಾಟನು ಇಸ್ರಾಯೇಲಿನ ಅರಸನ ಬಳಿಗೆ ಬಂದನು. .::. 3 ಇಸ್ರಾಯೇಲಿನ ಅರಸನು ತನ್ನ ಸೇವಕರಿಗೆ, “ಗಿಲ್ಯಾದಿನ ರಾಮೋತ್ ನಮ್ಮದೆಂದು ನಿಮಗೆ ಗೊತ್ತುಂಟಲ್ಲಾ? ನಾವು ಅದನ್ನು ಅರಾಮಿನ ಅರಸನ ಕೈಯಿಂದ ತೆಗೆದುಕೊಳ್ಳದೆ ಸುಮ್ಮನೆ ಇದ್ದೇವೆ,” ಎಂದನು. .::. 4 ಆಗ ಅವನು ಯೆಹೋಷಾಫಾಟನಿಗೆ, “ನೀನು ಗಿಲ್ಯಾದಿನ ರಾಮೋತಿನ ಮೇಲೆ ಯುದ್ಧಮಾಡಲು ನನ್ನ ಸಂಗಡ ಬರುತ್ತೀಯಾ?” ಎಂದನು. ಯೆಹೋಷಾಫಾಟನು ಇಸ್ರಾಯೇಲಿನ ಅರಸನಿಗೆ, “ನಾನೂ ನೀನೂ, ನನ್ನ ಜನರೂ ನಿನ್ನ ಜನರೂ, ನನ್ನ ಕುದುರೆಗಳೂ ನಿನ್ನ ಕುದುರೆಗಳೂ ಒಂದೇ ಅಲ್ಲವೇ?” ಎಂದನು. .::. 5 ಆದರೆ ಯೆಹೋಷಾಫಾಟನು ಇಸ್ರಾಯೇಲಿನ ಅರಸನಿಗೆ, “ಈ ಹೊತ್ತು ಮೊದಲು ಯೆಹೋವ ದೇವರ ಆಲೋಚನೆಯನ್ನು ವಿಚಾರಿಸಿರಿ,” ಎಂದನು. .::. 6 .::. 7 ಆಗ ಇಸ್ರಾಯೇಲಿನ ಅರಸನು ಹೆಚ್ಚು ಕಡಿಮೆ ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ, ಅವರಿಗೆ, “ನಾನು ಗಿಲ್ಯಾದಿನ ರಾಮೋತಿನ ಮೇಲೆ ಯುದ್ಧಕ್ಕೆ ಹೋಗಬಹುದೋ, ಬೇಡವೋ?” ಎಂದು ಕೇಳಿದನು. ಅದಕ್ಕವರು, “ಹೋಗು, ಯೆಹೋವ ದೇವರು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವರು,” ಎಂದರು. .::. 8 ಆದರೆ ಯೆಹೋಷಾಫಾಟನು, “ಯೆಹೋವ ದೇವರ ಪ್ರವಾದಿಗಳಲ್ಲಿ ಇವರ ಹೊರತಾಗಿ ನಾವು ವಿಚಾರಿಸುವ ಹಾಗೆ ಬೇರೆ ಪ್ರವಾದಿ ಇಲ್ಲಿ ಇಲ್ಲವೋ?” ಎಂದು ಕೇಳಿದನು. .::. 9 ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ, “ನಾವು ಯೆಹೋವ ದೇವರನ್ನು ವಿಚಾರಿಸುವ ಹಾಗೆ ಇಮ್ಲನ ಮಗ ಮೀಕಾಯನೆಂಬ ಇನ್ನೊಬ್ಬನಿದ್ದಾನೆ. ಆದರೆ ನಾನು ಅವನನ್ನು ದ್ವೇಷ ಮಾಡುತ್ತೇನೆ. ಏಕೆಂದರೆ ಅವನು ನನ್ನನ್ನು ಕುರಿತು ಒಳ್ಳೆಯದನ್ನಲ್ಲ ಯಾವಾಗಲೂ ಕೆಟ್ಟದ್ದನ್ನು ಪ್ರವಾದಿಸುತ್ತಾನೆ,” ಎಂದನು. ಅದಕ್ಕೆ ಯೆಹೋಷಾಫಾಟನು, “ಅರಸನು ಹಾಗೆ ಅನ್ನದಿರಲಿ,” ಎಂದನು. .::. 10 ಆಗ ಇಸ್ರಾಯೇಲಿನ ಅರಸನು ಒಬ್ಬ ಅಧಿಕಾರಿಯನ್ನು ಕರೆದು, “ಇಮ್ಲನ ಮಗನಾದ ಮೀಕಾಯನನ್ನು ಶೀಘ್ರವಾಗಿ ಕರೆದುಕೊಂಡು ಬಾ,” ಎಂದನು. ಇಸ್ರಾಯೇಲಿನ ಅರಸನೂ, ಯೆಹೂದದ ಅರಸನಾದ ಯೆಹೋಷಾಫಾಟನೂ, ರಾಜವಸ್ತ್ರಗಳನ್ನು ಧರಿಸಿಕೊಂಡು ಸಮಾರ್ಯದ ಬಾಗಿಲಿನ ಮುಂದೆ ಬಯಲಿನಲ್ಲಿ ತಮ್ಮ ತಮ್ಮ ಸಿಂಹಾಸನಗಳ ಮೇಲೆ ಕುಳಿತುಕೊಂಡಿದ್ದರು. ಸಕಲ ಪ್ರವಾದಿಗಳೂ ಅವರ ಮುಂದೆ ಪ್ರವಾದಿಸುತ್ತಿದ್ದರು. .::. 11 ಆಗ ಕೆನಾನನ ಮಗನಾದ ಚಿದ್ಕೀಯನು, “ತನಗೆ ಕಬ್ಬಿಣದ ಕೊಂಬುಗಳನ್ನು ಮಾಡಿಕೊಂಡು, ‘ಇವುಗಳಿಂದ ನೀನು ಅರಾಮ್ಯರನ್ನು ನಿರ್ಮೂಲ ಮಾಡುವವರೆಗೂ ಇರಿದು ಹಾಕುವೆ,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು. .::. 12 .::. 13 ಸಮಸ್ತ ಪ್ರವಾದಿಗಳೂ ಹಾಗೆಯೇ ಪ್ರವಾದಿಸಿ, “ಗಿಲ್ಯಾದಿನ ರಾಮೋತಿಗೆ ಹೋಗಿ ಜಯ ಹೊಂದು, ಯೆಹೋವ ದೇವರು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವರು,” ಎಂದರು. .::. 14 ಆದರೆ ಮೀಕಾಯನನ್ನು ಕರೆಯಲು ಹೋದ ದೂತನು ಅವನಿಗೆ, “ನೋಡು, ಎಲ್ಲ ಪ್ರವಾದಿಗಳು ಏಕಮನಸ್ಸಿನಿಂದ ಅರಸನಿಗೆ ಒಳ್ಳೆಯದನ್ನೇ ಪ್ರವಾದಿಸಿದ್ದಾರೆ. ನಿನ್ನ ಮಾತು ಅವರಲ್ಲಿ ಒಬ್ಬನ ಮಾತಿನ ಹಾಗೆಯೇ ಇರಲಿ; ಒಳ್ಳೆಯ ಮಾತು ಆಡು,” ಎಂದನು. .::. 15 ಅದಕ್ಕೆ ಮೀಕಾಯನು, “ಯೆಹೋವ ದೇವರ ಜೀವದಾಣೆ, ಯೆಹೋವ ದೇವರು ನನಗೆ ಏನು ಹೇಳುವರೋ, ಅದನ್ನೇ ಮಾತನಾಡುವೆನು,” ಎಂದನು. .::. 16 ಅವನು ಅರಸನ ಬಳಿಗೆ ಬಂದಾಗ ಅರಸನು ಅವನಿಗೆ, “ಮೀಕಾಯೆಹುವೇ, ನಾವು ಗಿಲ್ಯಾದಿನ ರಾಮೋತ್ ವಿರುದ್ಧವಾಗಿ ಯುದ್ಧಕ್ಕೆ ಹೋಗಬಹುದೋ ಅಥವಾ ಬೇಡವೋ?” ಎಂದನು. ಆಗ ಅವನು, “ಹೋಗಿ ಜಯ ಹೊಂದಿರಿ. ಯೆಹೋವ ದೇವರು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವರು,” ಎಂದನು. .::. 17 ಆಗ ಅರಸನು ಅವನಿಗೆ, “ನೀನು ಯೆಹೋವ ದೇವರ ಹೆಸರಿನಲ್ಲಿ ಸತ್ಯವನ್ನಲ್ಲದೆ ಬೇರೊಂದು ನನಗೆ ಹೇಳಬಾರದೆಂದು ನಾನು ಎಷ್ಟು ಸಾರಿ ನಿನಗೆ ಆಣೆ ಇಡಬೇಕು?” ಎಂದನು. .::. 18 ಅದಕ್ಕೆ ಮೀಕಾಯನು, “ಇಸ್ರಾಯೇಲರೆಲ್ಲರು ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳ ಮೇಲೆ ಚದರಿಹೋದದ್ದನ್ನು ಕಂಡೆನು. ಆಗ ಯೆಹೋವ ದೇವರು, ‘ಇವರಿಗೆ ಯಜಮಾನನು ಇಲ್ಲ, ಪ್ರತಿ ಮನುಷ್ಯನು ತನ್ನ ತನ್ನ ಮನೆಗೆ ಸಮಾಧಾನವಾಗಿ ಹಿಂದಿರುಗಿ ಹೋಗಲಿ,’ ಎಂಬುದಾಗಿ ಹೇಳಿದರು,” ಎಂದನು. .::. 19 ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ, “ಇವನು ನನ್ನನ್ನು ಕುರಿತು ಒಳ್ಳೆಯದನ್ನಲ್ಲ, ಕೆಟ್ಟದ್ದನ್ನೇ ಪ್ರವಾದಿಸುವನೆಂದು ನಾನು ನಿನಗೆ ಹೇಳಲಿಲ್ಲವೇ?” ಎಂದನು. ಆಗ ಮೀಕಾಯನು, “ಆದ್ದರಿಂದ ಯೆಹೋವ ದೇವರ ವಾಕ್ಯವನ್ನು ಕೇಳು: ಯೆಹೋವ ದೇವರು ತಮ್ಮ ಸಿಂಹಾಸನದ ಮೇಲೆ ಕುಳಿತುಕೊಂಡಿರುವುದನ್ನೂ ಆಕಾಶದ ಸಮಸ್ತ ಸೈನ್ಯವು ಅವರ ಬಲಗಡೆ, ಎಡಗಡೆ ಮತ್ತು ಸುತ್ತಲೂ ನಿಂತಿರುವುದನ್ನೂ ನಾನು ಕಂಡೆನು. .::. 20 ಆಗ ಯೆಹೋವ ದೇವರು, ‘ಅಹಾಬನು ಹೋಗಿ ಗಿಲ್ಯಾದಿನ ರಾಮೋತಿನಲ್ಲಿ ಬೀಳುವ ಹಾಗೆ, ಅವನನ್ನು ಮರುಳುಗೊಳಿಸುವವನು ಯಾರು?’ ಎಂದರು. “ಒಬ್ಬನು ಒಂದು ವಿಧವಾಗಿಯೂ ಮತ್ತೊಬ್ಬನು ಇನ್ನೊಂದು ವಿಧವಾಗಿಯೂ ಹೇಳುತ್ತಿದ್ದರು. .::. 21 ಕೊನೆಯಲ್ಲಿ, ಒಂದು ಆತ್ಮವು ಹೊರಟುಬಂದು ಯೆಹೋವ ದೇವರ ಮುಂದೆ ನಿಂತು, ‘ನಾನು ಅವನನ್ನು ಮರುಳುಗೊಳಿಸುತ್ತೇನೆ,’ ಎಂದಿತು. .::. 22 .::. 23 “ಆಗ ಯೆಹೋವ ದೇವರು, ‘ಅದು ಹೇಗೆ?’ ಎಂದರು. “ಅದಕ್ಕದು, ‘ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಲ್ಲಿ ಸುಳ್ಳನ್ನಾಡುವ ಆತ್ಮವಾಗಿರುವೆನು,’ ಎಂದಿತು. “ಅದಕ್ಕೆ ಅವರು, ‘ನೀನು ಅವನನ್ನು ಮರುಳುಗೊಳಿಸುವೆ ಮತ್ತು ಜಯಿಸುವೆ. ಹೊರಟುಹೋಗಿ ಹಾಗೆ ಮಾಡು,’ ಎಂದರು. .::. 24 “ಆದ್ದರಿಂದ ಇಗೋ, ಯೆಹೋವ ದೇವರು ಈ ಎಲ್ಲಾ ನಿನ್ನ ಪ್ರವಾದಿಗಳ ಬಾಯಿಯಲ್ಲಿ ಸುಳ್ಳನ್ನಾಡುವ ಆತ್ಮವನ್ನು ಇಟ್ಟಿದ್ದಾರೆ. ಇದಲ್ಲದೆ ಯೆಹೋವ ದೇವರು ನಿನ್ನನ್ನು ಕುರಿತು ಕೇಡನ್ನು ಹೇಳಿದ್ದಾರೆ,” ಎಂದನು. .::. 25 ಆಗ ಕೆನಾನನ ಮಗನಾದ ಚಿದ್ಕೀಯನು ಸಮೀಪಕ್ಕೆ ಬಂದು, ಮೀಕಾಯನ ಕೆನ್ನೆಯ ಮೇಲೆ ಹೊಡೆದು, “ಯೆಹೋವ ದೇವರ ಆತ್ಮವು ನನ್ನನ್ನು ಬಿಟ್ಟು, ನಿನ್ನ ಸಂಗಡ ಮಾತನಾಡಲು ಯಾವ ಮಾರ್ಗವಾಗಿ ಬಂದಿತು?” ಎಂದನು. .::. 26 ಅದಕ್ಕೆ ಮೀಕಾಯನು, “ಇಗೋ, ನಿನ್ನನ್ನು ಬಚ್ಚಿಟ್ಟುಕೊಳ್ಳಲು ಒಳಕೊಠಡಿಗೆ ನೀನು ಹೋಗುವ ದಿವಸದಲ್ಲಿ ನೋಡುವೆ,” ಎಂದನು. ಆಗ ಇಸ್ರಾಯೇಲಿನ ಅರಸನು ಹೇಳಿದ್ದೇನೆಂದರೆ, “ನೀವು ಮೀಕಾಯನನ್ನು ಹಿಡಿದು ಪಟ್ಟಣದ ಅಧಿಪತಿಯಾದ ಆಮೋನನ ಬಳಿಗೂ, ಅರಸನ ಮಗನಾದ ಯೋವಾಷನ ಬಳಿಗೂ ತೆಗೆದುಕೊಂಡುಹೋಗಿ, .::. 27 ‘ನಾನು ಸಮಾಧಾನವಾಗಿ ತಿರುಗಿ ಬರುವವರೆಗೂ ನೀವು ಇವನನ್ನು ಸೆರೆಮನೆಯಲ್ಲಿಟ್ಟು, ಅವನಿಗೆ ರೊಟ್ಟಿ ಮತ್ತು ನೀರನ್ನು ಬಿಟ್ಟು ಮತ್ತೇನೂ ಕೊಡಬೇಡಿರೆಂದು ಅರಸನು ಹೇಳಿದ್ದಾನೆ,’ ಎಂದು ತಿಳಿಸು,” ಎಂದನು. .::. 28 .::. 29 ಅದಕ್ಕೆ ಮೀಕಾಯನು, “ನೀನು ಸಮಾಧಾನದಿಂದ ನಿಜವಾಗಿ ಬಂದರೆ, ಯೆಹೋವ ದೇವರು ನನ್ನ ಮುಖಾಂತರ ಮಾತನಾಡಿಲ್ಲ, ಎಂದು ಹೇಳಿ; ಜನರೇ ನೀವೆಲ್ಲರೂ ನನ್ನ ಮಾತನ್ನು ಗಮನದಲ್ಲಿಡಿರಿ!” ಎಂದು ಕೂಗಿ ಹೇಳಿದನು. ಅಹಾಬನು ಗಿಲ್ಯಾದಿನ ರಾಮೋತಿನಲ್ಲಿ ಹತನಾದದ್ದು ಹೀಗೆಯೇ ಇಸ್ರಾಯೇಲಿನ ಅರಸನೂ, ಯೆಹೂದದ ಅರಸನಾದ ಯೆಹೋಷಾಫಾಟನೂ ಗಿಲ್ಯಾದಿನ ರಾಮೋತಿಗೆ ಹೋದರು. .::. 30 ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ, “ನಾನು ವೇಷಹಾಕಿಕೊಂಡು ಯುದ್ಧದಲ್ಲಿ ಪ್ರವೇಶಿಸುವೆನು. ಆದರೆ ನೀನು ನಿನ್ನ ರಾಜವಸ್ತ್ರಗಳನ್ನು ಧರಿಸಿಕೊಂಡಿರು,” ಎಂದನು. ಹಾಗೆಯೇ ಇಸ್ರಾಯೇಲಿನ ಅರಸನು ವೇಷಹಾಕಿಕೊಂಡು ಯುದ್ಧಕ್ಕೆ ಹೋದನು. .::. 31 ಅರಾಮಿನ ಅರಸನು ತನ್ನ ರಥಗಳ ಮೇಲೆ ಅಧಿಕಾರವುಳ್ಳ ಮೂವತ್ತೆರಡು ಮಂದಿ ಪ್ರಧಾನರಿಗೆ, “ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ ಅಧಿಪತಿಗಳನ್ನೂ ಬಿಟ್ಟು ಇಸ್ರಾಯೇಲಿನ ಅರಸನನ್ನು ಮಾತ್ರ ಗುರಿಯಾಗಿಸಿಕೊಂಡು ಯುದ್ಧಮಾಡಿರಿ,” ಎಂದು ಆಜ್ಞಾಪಿಸಿದನು. .::. 32 ಆದ್ದರಿಂದ ರಥಗಳ ಅಧಿಪತಿಗಳು ಯೆಹೋಷಾಫಾಟನನ್ನು ಕಂಡಾಗ, “ನಿಶ್ಚಯವಾಗಿ ಇವನೇ ಇಸ್ರಾಯೇಲಿನ ಅರಸನು,” ಎಂದು ಹೇಳಿ, ಅವನ ಸಂಗಡ ಯುದ್ಧಮಾಡುವುದಕ್ಕೆ ತಿರುಗಿಕೊಂಡರು. ಆಗ ಯೆಹೋಷಾಫಾಟನು ಕೂಗಿಕೊಂಡನು. .::. 33 ಅವನು ಇಸ್ರಾಯೇಲಿನ ಅರಸನಲ್ಲವೆಂದು ರಥಗಳ ಅಧಿಪತಿಗಳಿಗೆ ಗೊತ್ತಾದಾಗ, ಅವರು ಅವನನ್ನು ಬಿಟ್ಟುಹೋದರು. .::. 34 ಆದರೆ ಅರಾಮ್ಯರ ಸೈನಿಕನೊಬ್ಬನು ಗುರಿ ಇಡದೆ ಬಿಲ್ಲಿಗೆ ಬಾಣವನ್ನೇರಿಸಿ ಹೊಡೆಯಲು, ಅದು ಇಸ್ರಾಯೇಲಿನ ಅರಸನಿಗೆ, ಅವನ ಕವಚದ ಸಂದಿನಲ್ಲಿ ಬಂದು ತಾಕಿತು. ಆದ್ದರಿಂದ ಅವನು ತನ್ನ ರಥ ನಡೆಸುವವನಿಗೆ, “ನೀನು ರಥವನ್ನು ತಿರುಗಿಸಿ ನನ್ನನ್ನು ಸೈನ್ಯದೊಳಗಿಂದ ಆಚೇಕಡೆಗೆ ತೆಗೆದುಕೊಂಡು ಹೋಗು, ನನಗೆ ದೊಡ್ಡ ಗಾಯವಾಗಿದೆ,” ಎಂದನು. .::. 35 ಆ ದಿವಸವೆಲ್ಲಾ ಯುದ್ಧವು ಬಹು ಘೋರವಾದದ್ದರಿಂದ ಇಸ್ರಾಯೇಲಿನ ಅರಸನು ಅರಾಮ್ಯರಿಗೆ ಎದುರಾಗಿ ರಥದಲ್ಲಿಯೇ ಆತುಕೊಂಡು ನಿಂತಿದ್ದನು. ಅವನ ಗಾಯದ ರಕ್ತವು ರಥದ ಅಡಿಭಾಗದಲ್ಲಿ ಸುರಿದು ನಿಂತಿತ್ತು, ಸಾಯಂಕಾಲದಲ್ಲಿ ಅವನು ಮರಣಹೊಂದಿದನು. .::. 36 ಸಾಯಂಕಾಲವಾದಾಗ, “ಪ್ರತಿ ಮನುಷ್ಯನು ತನ್ನ ತನ್ನ ಪಟ್ಟಣಕ್ಕೂ, ಪ್ರತಿ ಮನುಷ್ಯನು ತನ್ನ ತನ್ನ ದೇಶಕ್ಕೂ ಹೋಗಲಿ,” ಎಂದು ಸೈನ್ಯದಲ್ಲಿ ಪ್ರಕಟಮಾಡಲಾಯಿತು. .::. 37 ಇಸ್ರಾಯೇಲಿನ ಅರಸನ ಶವವನ್ನು ಸಮಾರ್ಯಕ್ಕೆ ತಂದು ಅಲ್ಲಿ ಸಮಾಧಿಮಾಡಿದರು. .::. 38 ಆ ರಥವನ್ನು ವೇಶ್ಯೆಯರು ಸ್ನಾನ ಮಾಡುವ ಸಮಾರ್ಯದ ಕೆರೆಯಲ್ಲಿ ತೊಳೆಯುತ್ತಿದ್ದಾಗ, ಯೆಹೋವ ದೇವರು ಹೇಳಿದ ವಾಕ್ಯದ ಪ್ರಕಾರವೇ ನಾಯಿಗಳು ಅವನ ರಕ್ತವನ್ನು ನೆಕ್ಕಿದವು. .::. 39 ಅಹಾಬನ ಇತರ ಕ್ರಿಯೆಗಳೂ, ಅವನು ಮಾಡಿದ್ದೆಲ್ಲವೂ, ಅವನು ಕಟ್ಟಿಸಿದ ದಂತದ ಮನೆಯೂ, ಅವನು ಕಟ್ಟಿಸಿದ ಎಲ್ಲಾ ಪಟ್ಟಣಗಳೂ ಇಸ್ರಾಯೇಲಿನ ಅರಸುಗಳ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ. .::. 40 ಅಹಾಬನು ಮೃತನಾಗಿ ತನ್ನ ಪಿತೃಗಳ ಜೊತೆ ಸೇರಿದನು. ಅವನ ಮಗ ಅಹಜ್ಯನು ಅವನಿಗೆ ಬದಲಾಗಿ ಅರಸನಾದನು. .::. ಯೆಹೂದ್ಯರ ಅರಸನಾದ ಯೆಹೋಷಾಫಾಟನು 41 ಇಸ್ರಾಯೇಲರ ಅರಸ ಅಹಾಬನ ನಾಲ್ಕನೆಯ ವರ್ಷದಲ್ಲಿ ಆಸನ ಮಗ ಯೆಹೋಷಾಫಾಟನು ಯೆಹೂದ್ಯರ ಅರಸನಾದನು. .::. 42 ಅವನು ಅರಸನಾದಾಗ ಮೂವತ್ತೈದು ವರ್ಷದವನಾಗಿದ್ದನು. ಯೆರೂಸಲೇಮಿನಲ್ಲಿ ಇಪ್ಪತ್ತೈದು ವರ್ಷ ಆಳಿದನು. ಶಿಲ್ಹಿಯ ಮಗಳಾದ ಅಜೂಬಳೆಂಬಾಕೆಯು ಅವನ ತಾಯಿ. .::. 43 ಅವನು ತನ್ನ ತಂದೆ ಆಸನ ಮಾರ್ಗಗಳಲ್ಲಿ ನಡೆದು, ಅದನ್ನು ಬಿಟ್ಟು ತೊಲಗದೇ, ಯೆಹೋವ ದೇವರ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿದನು. ಆದರೂ ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲ ಆದ್ದರಿಂದ ಜನರು ಪೂಜಾಸ್ಥಳಗಳ ಮೇಲೆ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುವುದನ್ನು ಮುಂದುವರೆಸಿದ್ದರು. .::. 44 ಯೆಹೋಷಾಫಾಟನು ಇಸ್ರಾಯೇಲಿನ ಅರಸನ ಸಂಗಡ ಸಮಾಧಾನ ಮಾಡಿಕೊಂಡನು. .::. 45 ಯೆಹೋಷಾಫಾಟನ ಇತರ ಕ್ರಿಯೆಗಳೂ, ಅವನು ತೋರಿಸಿದ ಪರಾಕ್ರಮವೂ, ಅವನು ಯುದ್ಧ ಮಾಡಿದ ವಿಧವೂ, ಯೆಹೂದದ ಅರಸುಗಳ ಇತಿಹಾಸಗಳ ಗ್ರಂಥದಲ್ಲಿ ಬರೆದಿರುತ್ತವೆ. .::. 46 ಅವನ ತಂದೆ ಆಸನ ಕಾಲದಲ್ಲಿ ಉಳಿದಿದ್ದ ಪುರುಷಗಾಮಿಗಳನ್ನು ಅವನು ದೇಶದಿಂದ ತೆಗೆದುಹಾಕಿದನು. .::. 47 ಆ ಕಾಲದಲ್ಲಿ ಎದೋಮಿನೊಳಗೆ ಅರಸನಿರಲಿಲ್ಲ, ಅಧಿಪತಿಯು ಆಳುತ್ತಿದ್ದನು. .::. 48 ಯೆಹೋಷಾಫಾಟನು ಬಂಗಾರಕ್ಕೋಸ್ಕರ ಓಫೀರಿಗೆ ಹೋಗುವುದಕ್ಕೆ ತಾರ್ಷೀಷ್ ಹಡಗುಗಳನ್ನು ಮಾಡಿಸಿದನು. ಆದರೆ ಅವು ಹೋಗಲಿಲ್ಲ. ಆ ಹಡಗುಗಳು ಎಚ್ಯೋನ್ ಗೆಬೆರಿನ ಬಳಿಯಲ್ಲಿ ಒಡೆದುಹೋದವು. .::. 49 ಆಗ ಅಹಾಬನ ಮಗ ಅಹಜ್ಯನು ಯೆಹೋಷಾಫಾಟನಿಗೆ, “ನನ್ನ ಸೇವಕರು, ನಿನ್ನ ಸೇವಕರ ಸಂಗಡ ಹಡಗುಗಳಲ್ಲಿ ಹೋಗಲಿ,” ಎಂದನು. ಆದರೆ ಯೆಹೋಷಾಫಾಟನು ಸಮ್ಮತಿಸಲಿಲ್ಲ. .::. 50 .::. 51 ಯೆಹೋಷಾಫಾಟನು ಮೃತನಾಗಿ ತನ್ನ ಪಿತೃಗಳ ಜೊತೆ ಸೇರಿದನು. ಅವನ ಶವವನ್ನು ದಾವೀದನ ಪಟ್ಟಣದೊಳಗೆ ಅವನ ಪೂರ್ವಜರ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಆಗ ಅವನಿಗೆ ಬದಲಾಗಿ ಅವನ ಮಗನಾದ ಯೆಹೋರಾಮನು ಅರಸನಾದನು. ಇಸ್ರಾಯೇಲರ ಅರಸನಾದ ಅಹಜ್ಯನು ಅಹಾಬನ ಮಗ ಅಹಜ್ಯನು ಯೆಹೂದದ ಅರಸನಾದ ಯೆಹೋಷಾಫಾಟನ ಹದಿನೇಳನೆಯ ವರ್ಷದಲ್ಲಿ ಸಮಾರ್ಯದಲ್ಲಿ ಇಸ್ರಾಯೇಲಿನ ಮೇಲೆ ಆಳಲಾರಂಭಿಸಿ, ಎರಡು ವರ್ಷ ಇಸ್ರಾಯೇಲನ್ನು ಆಳಿದನು. .::. 52 ಆದರೆ ಅವನು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ, ತನ್ನ ತಂದೆಯ ಮಾರ್ಗದಲ್ಲಿಯೂ, ತನ್ನ ತಾಯಿಯ ಮಾರ್ಗದಲ್ಲಿಯೂ ಇಸ್ರಾಯೇಲರನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗ ಯಾರೊಬ್ಬಾಮನ ಮಾರ್ಗದಲ್ಲಿಯೂ ನಡೆದನು. .::. 53 ಅವನು ಬಾಳನನ್ನು ಸೇವಿಸಿ, ಅದಕ್ಕೆ ಅಡ್ಡಬಿದ್ದು, ತನ್ನ ತಂದೆಯು ಮಾಡಿದ ಎಲ್ಲಾದರ ಪ್ರಕಾರವೇ ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಕೋಪ ಬರುವಂತೆ ಮಾಡಿದನು.
  • 1 ಅರಸುಗಳು ಅಧ್ಯಾಯ 1  
  • 1 ಅರಸುಗಳು ಅಧ್ಯಾಯ 2  
  • 1 ಅರಸುಗಳು ಅಧ್ಯಾಯ 3  
  • 1 ಅರಸುಗಳು ಅಧ್ಯಾಯ 4  
  • 1 ಅರಸುಗಳು ಅಧ್ಯಾಯ 5  
  • 1 ಅರಸುಗಳು ಅಧ್ಯಾಯ 6  
  • 1 ಅರಸುಗಳು ಅಧ್ಯಾಯ 7  
  • 1 ಅರಸುಗಳು ಅಧ್ಯಾಯ 8  
  • 1 ಅರಸುಗಳು ಅಧ್ಯಾಯ 9  
  • 1 ಅರಸುಗಳು ಅಧ್ಯಾಯ 10  
  • 1 ಅರಸುಗಳು ಅಧ್ಯಾಯ 11  
  • 1 ಅರಸುಗಳು ಅಧ್ಯಾಯ 12  
  • 1 ಅರಸುಗಳು ಅಧ್ಯಾಯ 13  
  • 1 ಅರಸುಗಳು ಅಧ್ಯಾಯ 14  
  • 1 ಅರಸುಗಳು ಅಧ್ಯಾಯ 15  
  • 1 ಅರಸುಗಳು ಅಧ್ಯಾಯ 16  
  • 1 ಅರಸುಗಳು ಅಧ್ಯಾಯ 17  
  • 1 ಅರಸುಗಳು ಅಧ್ಯಾಯ 18  
  • 1 ಅರಸುಗಳು ಅಧ್ಯಾಯ 19  
  • 1 ಅರಸುಗಳು ಅಧ್ಯಾಯ 20  
  • 1 ಅರಸುಗಳು ಅಧ್ಯಾಯ 21  
  • 1 ಅರಸುಗಳು ಅಧ್ಯಾಯ 22  
×

Alert

×

Kannada Letters Keypad References