ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆಹೆಜ್ಕೇಲನು

ಯೆಹೆಜ್ಕೇಲನು ಅಧ್ಯಾಯ 2

ಪ್ರವಾದಿಯಾಗಲು ಯೆಹೆಜ್ಕೇಲನಿಗೆ ಕರೆ 1 ಯೆಹೋವ ದೇವರು ನನಗೆ, “ಮನುಷ್ಯಪುತ್ರನೇ, ಎದ್ದು ನಿಲ್ಲು, ನಿನ್ನ ಸಂಗಡ ಮಾತನಾಡಬೇಕು.” 2 ಹೀಗೆ ಅವರು ನನ್ನ ಸಂಗಡ ಮಾತನಾಡುವಾಗ, ದೇವರಾತ್ಮರು ನನ್ನೊಳಗೆ ಪ್ರವೇಶಿಸಿ, ನನ್ನನ್ನು ನಿಂತುಕೊಳ್ಳುವಂತೆ ಮಾಡಿದರು. ಆಗ ಅವರು ನನ್ನೊಂದಿಗೆ ಮಾತನಾಡುವುದನ್ನು ಚೆನ್ನಾಗಿ ಕೇಳಿದೆನು. 3 ಅವರು, “ಮನುಷ್ಯಪುತ್ರನೇ, ನನಗೆ ವಿರೋಧವಾಗಿ ತಿರುಗಿ ಬಿದ್ದಿರುವ ಮತ್ತು ದ್ರೋಹಮಾಡಿದ ಜನಾಂಗದವರಾದ ಇಸ್ರಾಯೇಲರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ. ಅವರೂ, ಅವರ ಪಿತೃಗಳೂ ಇಂದಿನವರೆಗೂ ನನಗೆ ವಿರೋಧವಾಗಿ ದ್ರೋಹ ಮಾಡಿದ್ದಾರೆ. 4 ಅವರು ಕಠಿಣ ಹೃದಯದವರು ಮತ್ತು ಹಠಮಾರಿ ಆಗಿದ್ದಾರೆ. ನಾನು ನಿನ್ನನ್ನು ಅವರ ಬಳಿಗೆ ಕಳುಹಿಸುತ್ತೇನೆ. ನೀನು ಅವರಿಗೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ,’ ಎಂದು ಹೇಳಬೇಕು. 5 ಅವರು ಕೇಳಲಿ ಅಥವಾ ಕೇಳದೇ ಇರಲಿ, ಏಕೆಂದರೆ ಅವರು ತಿರುಗಿಬೀಳುವ ಜನರು, ಆದರೆ ತಮ್ಮೊಳಗೆ ಪ್ರವಾದಿ ಇರುವನೆಂದು ತಿಳಿದುಕೊಂಡರೆ ಸಾಕು. 6 ಮನುಷ್ಯಪುತ್ರನೇ, ನೀನು ಮುಳ್ಳುಪೊದೆಗಳಲ್ಲಿ ಸಿಕ್ಕಿಕೊಂಡು, ಚೇಳುಗಳ ನಡುವೆ ವಾಸಿಸುವಂತೆ ಅವರ ಮಧ್ಯೆ ಇದ್ದರೂ, ಅವರಿಗೆ ಭಯಪಡಬೇಡ. ಅವರ ಗದರಿಕೆಗೆ ಹೆದರದಿರು. ಅವರು ದ್ರೋಹಿ ವಂಶದವರು. ಅವರ ಬಿರುನುಡಿಗೆ ದಿಗಿಲು ಪಡಬೇಡ. 7 ನೀನು ನನ್ನ ಮಾತುಗಳನ್ನು ಅವರಿಗೆ ಹೇಳಬೇಕು. ಅವರು ಕೇಳಿದರೂ ಸರಿ, ಕೇಳದಿದ್ದರೂ ಸರಿ, ಏಕೆಂದರೆ ಅವರು ತಿರುಗಿಬೀಳುವ ಜನರು. 8 ಆದರೆ ಮನುಷ್ಯಪುತ್ರನೇ, ನೀನಾದರೋ ನಾನು ಹೇಳುವುದನ್ನು ಕೇಳು: ಆ ತಿರುಗಿಬೀಳುವ ಜನರ ಹಾಗೆ ನೀನೂ ತಿರುಗಿಬೀಳಬೇಡ. ನಿನ್ನ ಬಾಯನ್ನು ತೆರೆದು ನಾನು ನಿನಗೆ ಕೊಡುವುದನ್ನು ತಿನ್ನು,” ಎಂದರು. 9 ಇಗೋ, ನಾನು ನೋಡುತ್ತಿದ್ದಂತೆ ಒಂದು ಕೈ ನನ್ನ ಕಡೆಗೆ ಚಾಚಿತ್ತು. ಅದರಲ್ಲಿ ಗ್ರಂಥದ ಸುರುಳಿಯೊಂದು ಕಾಣಿಸಿತು. 10 ಆ ಸುರುಳಿಯನ್ನು ನನ್ನೆದುರಿನಲ್ಲೇ ಬಿಚ್ಚಿದರು. ಅದರ ಎರಡು ಬದಿಗಳಲ್ಲಿಯೂ ಪ್ರಲಾಪ, ಶೋಕ ಮತ್ತು ಶಾಪದ ಪದಗಳನ್ನು ಬರೆಯಲಾಗಿತ್ತು.
ಪ್ರವಾದಿಯಾಗಲು ಯೆಹೆಜ್ಕೇಲನಿಗೆ ಕರೆ 1 ಯೆಹೋವ ದೇವರು ನನಗೆ, “ಮನುಷ್ಯಪುತ್ರನೇ, ಎದ್ದು ನಿಲ್ಲು, ನಿನ್ನ ಸಂಗಡ ಮಾತನಾಡಬೇಕು.” .::. 2 ಹೀಗೆ ಅವರು ನನ್ನ ಸಂಗಡ ಮಾತನಾಡುವಾಗ, ದೇವರಾತ್ಮರು ನನ್ನೊಳಗೆ ಪ್ರವೇಶಿಸಿ, ನನ್ನನ್ನು ನಿಂತುಕೊಳ್ಳುವಂತೆ ಮಾಡಿದರು. ಆಗ ಅವರು ನನ್ನೊಂದಿಗೆ ಮಾತನಾಡುವುದನ್ನು ಚೆನ್ನಾಗಿ ಕೇಳಿದೆನು. .::. 3 ಅವರು, “ಮನುಷ್ಯಪುತ್ರನೇ, ನನಗೆ ವಿರೋಧವಾಗಿ ತಿರುಗಿ ಬಿದ್ದಿರುವ ಮತ್ತು ದ್ರೋಹಮಾಡಿದ ಜನಾಂಗದವರಾದ ಇಸ್ರಾಯೇಲರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ. ಅವರೂ, ಅವರ ಪಿತೃಗಳೂ ಇಂದಿನವರೆಗೂ ನನಗೆ ವಿರೋಧವಾಗಿ ದ್ರೋಹ ಮಾಡಿದ್ದಾರೆ. .::. 4 ಅವರು ಕಠಿಣ ಹೃದಯದವರು ಮತ್ತು ಹಠಮಾರಿ ಆಗಿದ್ದಾರೆ. ನಾನು ನಿನ್ನನ್ನು ಅವರ ಬಳಿಗೆ ಕಳುಹಿಸುತ್ತೇನೆ. ನೀನು ಅವರಿಗೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ,’ ಎಂದು ಹೇಳಬೇಕು. .::. 5 ಅವರು ಕೇಳಲಿ ಅಥವಾ ಕೇಳದೇ ಇರಲಿ, ಏಕೆಂದರೆ ಅವರು ತಿರುಗಿಬೀಳುವ ಜನರು, ಆದರೆ ತಮ್ಮೊಳಗೆ ಪ್ರವಾದಿ ಇರುವನೆಂದು ತಿಳಿದುಕೊಂಡರೆ ಸಾಕು. .::. 6 ಮನುಷ್ಯಪುತ್ರನೇ, ನೀನು ಮುಳ್ಳುಪೊದೆಗಳಲ್ಲಿ ಸಿಕ್ಕಿಕೊಂಡು, ಚೇಳುಗಳ ನಡುವೆ ವಾಸಿಸುವಂತೆ ಅವರ ಮಧ್ಯೆ ಇದ್ದರೂ, ಅವರಿಗೆ ಭಯಪಡಬೇಡ. ಅವರ ಗದರಿಕೆಗೆ ಹೆದರದಿರು. ಅವರು ದ್ರೋಹಿ ವಂಶದವರು. ಅವರ ಬಿರುನುಡಿಗೆ ದಿಗಿಲು ಪಡಬೇಡ. .::. 7 ನೀನು ನನ್ನ ಮಾತುಗಳನ್ನು ಅವರಿಗೆ ಹೇಳಬೇಕು. ಅವರು ಕೇಳಿದರೂ ಸರಿ, ಕೇಳದಿದ್ದರೂ ಸರಿ, ಏಕೆಂದರೆ ಅವರು ತಿರುಗಿಬೀಳುವ ಜನರು. .::. 8 ಆದರೆ ಮನುಷ್ಯಪುತ್ರನೇ, ನೀನಾದರೋ ನಾನು ಹೇಳುವುದನ್ನು ಕೇಳು: ಆ ತಿರುಗಿಬೀಳುವ ಜನರ ಹಾಗೆ ನೀನೂ ತಿರುಗಿಬೀಳಬೇಡ. ನಿನ್ನ ಬಾಯನ್ನು ತೆರೆದು ನಾನು ನಿನಗೆ ಕೊಡುವುದನ್ನು ತಿನ್ನು,” ಎಂದರು. .::. 9 ಇಗೋ, ನಾನು ನೋಡುತ್ತಿದ್ದಂತೆ ಒಂದು ಕೈ ನನ್ನ ಕಡೆಗೆ ಚಾಚಿತ್ತು. ಅದರಲ್ಲಿ ಗ್ರಂಥದ ಸುರುಳಿಯೊಂದು ಕಾಣಿಸಿತು. .::. 10 ಆ ಸುರುಳಿಯನ್ನು ನನ್ನೆದುರಿನಲ್ಲೇ ಬಿಚ್ಚಿದರು. ಅದರ ಎರಡು ಬದಿಗಳಲ್ಲಿಯೂ ಪ್ರಲಾಪ, ಶೋಕ ಮತ್ತು ಶಾಪದ ಪದಗಳನ್ನು ಬರೆಯಲಾಗಿತ್ತು.
  • ಯೆಹೆಜ್ಕೇಲನು ಅಧ್ಯಾಯ 1  
  • ಯೆಹೆಜ್ಕೇಲನು ಅಧ್ಯಾಯ 2  
  • ಯೆಹೆಜ್ಕೇಲನು ಅಧ್ಯಾಯ 3  
  • ಯೆಹೆಜ್ಕೇಲನು ಅಧ್ಯಾಯ 4  
  • ಯೆಹೆಜ್ಕೇಲನು ಅಧ್ಯಾಯ 5  
  • ಯೆಹೆಜ್ಕೇಲನು ಅಧ್ಯಾಯ 6  
  • ಯೆಹೆಜ್ಕೇಲನು ಅಧ್ಯಾಯ 7  
  • ಯೆಹೆಜ್ಕೇಲನು ಅಧ್ಯಾಯ 8  
  • ಯೆಹೆಜ್ಕೇಲನು ಅಧ್ಯಾಯ 9  
  • ಯೆಹೆಜ್ಕೇಲನು ಅಧ್ಯಾಯ 10  
  • ಯೆಹೆಜ್ಕೇಲನು ಅಧ್ಯಾಯ 11  
  • ಯೆಹೆಜ್ಕೇಲನು ಅಧ್ಯಾಯ 12  
  • ಯೆಹೆಜ್ಕೇಲನು ಅಧ್ಯಾಯ 13  
  • ಯೆಹೆಜ್ಕೇಲನು ಅಧ್ಯಾಯ 14  
  • ಯೆಹೆಜ್ಕೇಲನು ಅಧ್ಯಾಯ 15  
  • ಯೆಹೆಜ್ಕೇಲನು ಅಧ್ಯಾಯ 16  
  • ಯೆಹೆಜ್ಕೇಲನು ಅಧ್ಯಾಯ 17  
  • ಯೆಹೆಜ್ಕೇಲನು ಅಧ್ಯಾಯ 18  
  • ಯೆಹೆಜ್ಕೇಲನು ಅಧ್ಯಾಯ 19  
  • ಯೆಹೆಜ್ಕೇಲನು ಅಧ್ಯಾಯ 20  
  • ಯೆಹೆಜ್ಕೇಲನು ಅಧ್ಯಾಯ 21  
  • ಯೆಹೆಜ್ಕೇಲನು ಅಧ್ಯಾಯ 22  
  • ಯೆಹೆಜ್ಕೇಲನು ಅಧ್ಯಾಯ 23  
  • ಯೆಹೆಜ್ಕೇಲನು ಅಧ್ಯಾಯ 24  
  • ಯೆಹೆಜ್ಕೇಲನು ಅಧ್ಯಾಯ 25  
  • ಯೆಹೆಜ್ಕೇಲನು ಅಧ್ಯಾಯ 26  
  • ಯೆಹೆಜ್ಕೇಲನು ಅಧ್ಯಾಯ 27  
  • ಯೆಹೆಜ್ಕೇಲನು ಅಧ್ಯಾಯ 28  
  • ಯೆಹೆಜ್ಕೇಲನು ಅಧ್ಯಾಯ 29  
  • ಯೆಹೆಜ್ಕೇಲನು ಅಧ್ಯಾಯ 30  
  • ಯೆಹೆಜ್ಕೇಲನು ಅಧ್ಯಾಯ 31  
  • ಯೆಹೆಜ್ಕೇಲನು ಅಧ್ಯಾಯ 32  
  • ಯೆಹೆಜ್ಕೇಲನು ಅಧ್ಯಾಯ 33  
  • ಯೆಹೆಜ್ಕೇಲನು ಅಧ್ಯಾಯ 34  
  • ಯೆಹೆಜ್ಕೇಲನು ಅಧ್ಯಾಯ 35  
  • ಯೆಹೆಜ್ಕೇಲನು ಅಧ್ಯಾಯ 36  
  • ಯೆಹೆಜ್ಕೇಲನು ಅಧ್ಯಾಯ 37  
  • ಯೆಹೆಜ್ಕೇಲನು ಅಧ್ಯಾಯ 38  
  • ಯೆಹೆಜ್ಕೇಲನು ಅಧ್ಯಾಯ 39  
  • ಯೆಹೆಜ್ಕೇಲನು ಅಧ್ಯಾಯ 40  
  • ಯೆಹೆಜ್ಕೇಲನು ಅಧ್ಯಾಯ 41  
  • ಯೆಹೆಜ್ಕೇಲನು ಅಧ್ಯಾಯ 42  
  • ಯೆಹೆಜ್ಕೇಲನು ಅಧ್ಯಾಯ 43  
  • ಯೆಹೆಜ್ಕೇಲನು ಅಧ್ಯಾಯ 44  
  • ಯೆಹೆಜ್ಕೇಲನು ಅಧ್ಯಾಯ 45  
  • ಯೆಹೆಜ್ಕೇಲನು ಅಧ್ಯಾಯ 46  
  • ಯೆಹೆಜ್ಕೇಲನು ಅಧ್ಯಾಯ 47  
  • ಯೆಹೆಜ್ಕೇಲನು ಅಧ್ಯಾಯ 48  
×

Alert

×

Kannada Letters Keypad References