ಪವಿತ್ರ ಬೈಬಲ್

ಓಪನ್ ಸಮಕಾಲೀನ ಆವೃತ್ತಿ (OCV)
ಯೆಶಾಯ

ಯೆಶಾಯ ಅಧ್ಯಾಯ 11

ಇಷಯನ ಕೊಂಬೆ 1 ಇಷಯನ ಬುಡದಿಂದ ಒಂದು ಚಿಗುರು ಒಡೆಯುವುದು ಮತ್ತು ಅದರ ಬೇರಿನಿಂದ ಕೊಂಬೆಯು ಫಲಕೊಡುವುದು. 2 ಅವನ ಮೇಲೆ ಯೆಹೋವ ದೇವರ ಆತ್ಮ, ಜ್ಞಾನ ಮತ್ತು ವಿವೇಕದಾಯಕ ಆತ್ಮ, ಸಮಾಲೋಚನೆ ಮತ್ತು ಪರಾಕ್ರಮಗಳನ್ನು ಹುಟ್ಟಿಸುವ ಆತ್ಮ, ತಿಳುವಳಿಕೆ ಮತ್ತು ಯೆಹೋವ ದೇವರ ಭಯದ ಆತ್ಮ, 3 ಅವರು ಯೆಹೋವ ದೇವರ ಭಯದಲ್ಲಿ ಆನಂದಿಸುವರು. ಅವರು ಕಣ್ಣಿಗೆ ಕಂಡಂತೆ ತೀರ್ಪು ಮಾಡುವುದಿಲ್ಲ, ತಮ್ಮ ಕಿವಿಗಳ ಕೇಳ್ವಿಕೆಯ ಪ್ರಕಾರವೂ ತೀರ್ಪು ಮಾಡುವುದಿಲ್ಲ. 4 ಆದರೆ ಭೂಮಿಯ ಬಡವರಿಗೆ ನೀತಿಯಿಂದ ನ್ಯಾಯತೀರಿಸುವರು. ಭೂಲೋಕದ ದೀನರಿಗೆ ನ್ಯಾಯವಾಗಿ ತೀರ್ಪುಮಾಡುವರು, ಭೂಮಿಯನ್ನು ತಮ್ಮ ಬಾಯಿಯ ಕೋಲಿನಿಂದ ಹೊಡೆಯುವರು. ತಮ್ಮ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವರು. 5 ನೀತಿಯೇ ಅವರಿಗೆ ನಡುಕಟ್ಟು, ನಂಬಿಗಸ್ತಿಕೆಯೇ ಅವರ ಸೊಂಟದ ಪಟ್ಟಿ. 6 ತೋಳವು ಕುರಿಯ ಸಂಗಡ ವಾಸಿಸುವುದು; ಚಿರತೆಯು ಮೇಕೆ ಮರಿಯೊಂದಿಗೆ ಮಲಗುವುದು; ಕರುವೂ, ಪ್ರಾಯದ ಸಿಂಹವೂ, ಪುಷ್ಟಪಶುವೂ ಒಟ್ಟಿಗಿರುವುವು; ಇವುಗಳನ್ನು ಒಂದು ಪುಟ್ಟ ಮಗುವು ನಡೆಸುವುದು. 7 ಹಸುವು ಕರಡಿಯ ಸಂಗಡ ಮೇಯುವುವು; ಅವುಗಳ ಮರಿಗಳು ಜೊತೆಯಾಗಿ ಮಲಗುವುವು; ಸಿಂಹವು ಎತ್ತಿನಂತೆ ಹುಲ್ಲನ್ನು ಮೇಯುವುದು. 8 ಹಸುಳೆಯು ನಾಗರ ಹಾವಿನ ಹುತ್ತದ ಮೇಲೆ ಆಡುವುದು ಮತ್ತು ಪುಟ್ಟ ಮಗುವು ಹಾವಿನ ಬಿಲದ ಒಳಗೆ ಕೈ ಹಾಕುವುದು. 9 ನನ್ನ ಪರಿಶುದ್ಧ ಪರ್ವತದಲ್ಲಿ ಯಾರೂ ಕೇಡುಮಾಡುವುದಿಲ್ಲ, ಯಾರೂ ಹಾಳುಮಾಡುವುದಿಲ್ಲ. ಏಕೆಂದರೆ ಸಮುದ್ರವು ನೀರಿನಿಂದ ತುಂಬಿಕೊಂಡಿರುವಂತೆ, ಯೆಹೋವ ದೇವರ ತಿಳುವಳಿಕೆಯು ಭೂಮಿಯಲ್ಲಿ ತುಂಬಿಕೊಂಡಿರುವುದು. 10 ಆ ದಿನದಲ್ಲಿ ಇಷಯನ ವಂಶದಿಂದ ಜನರಿಗೆ ಒಂದು ಬೇರು ಗುರುತಿನ ಧ್ವಜವಾಗಿ ನಿಲ್ಲುವುದು. ಅವರ ವಿಶ್ರಾಂತಿ ಸ್ಥಳವು ಮಹಿಮೆಯುಳ್ಳದ್ದಾಗಿರುವುದು. 11 ಆ ದಿನದಲ್ಲಿ ಯೆಹೋವ ದೇವರು ಉಳಿದ ತಮ್ಮ ಜನರನ್ನು ಬಿಡಿಸಿಕೊಳ್ಳುವುದಕ್ಕೆ ಎರಡನೇ ಸಾರಿ ಕೈಹಾಕಿ ಅಸ್ಸೀರಿಯ, ಈಜಿಪ್ಟ್, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾತ್ ಮತ್ತು ಮೆಡಿಟರೇನಿಯನ್ ಸಮುದ್ರದ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವರು. 12 ಜನಾಂಗಗಳಿಗೆ ಗುರುತಾಗಿ ಧ್ವಜವನ್ನೆತ್ತಿ ಇಸ್ರಾಯೇಲಿನಿಂದ ತಳ್ಳಿಬಿಟ್ಟವರನ್ನು ಕೂಡಿಸುವನು. ಯೆಹೂದದಿಂದ ಚದರಿದವರನ್ನು ಭೂಮಿಯ ನಾಲ್ಕು ಕಡೆಗಳಿಂದ ಒಟ್ಟುಗೂಡಿಸುವನು. 13 ಎಫ್ರಾಯೀಮಿನ ಹೊಟ್ಟೆಕಿಚ್ಚು ತೊಲಗಿ, ಯೆಹೂದದ ವಿರೋಧಿಗಳು ಇಲ್ಲದಂತಾಗುವರು. ಹೀಗೆ ಎಫ್ರಾಯೀಮು ಯೆಹೂದದ ಮೇಲೆ ಹೊಟ್ಟೆಕಿಚ್ಚು ಪಡುವುದಿಲ್ಲ; ಯೆಹೂದವು ಎಫ್ರಾಯೀಮಿಗೆ ವಿರೋಧವಾಗಿರುವುದಿಲ್ಲ. 14 ಆದರೆ ಅವರು ಪಶ್ಚಿಮ ದಿಕ್ಕಿಗೆ ಫಿಲಿಷ್ಟಿಯರ ಇಳಿಜಾರು ಪ್ರದೇಶದ ಮೇಲೆ ಎರಗುವರು. ಅವರು ಜೊತೆಯಾಗಿ ಪೂರ್ವದವರನ್ನು ಸೂರೆ ಮಾಡುವರು, ಅವರು ಎದೋಮಿನ ಮತ್ತು ಮೋವಾಬಿನ ಮೇಲೆ ತಮ್ಮ ಕೈಯನ್ನು ದಾಳಿಮಾಡುವರು ಮತ್ತು ಅಮ್ಮೋನಿಯರು ಅವರಿಗೆ ಅಧೀನರಾಗುವರು. 15 ಯೆಹೋವ ದೇವರು ಈಜಿಪ್ಟಿನ ಸಮುದ್ರದ ಕೊಲ್ಲಿಯನ್ನು ಸಂಪೂರ್ಣವಾಗಿ ತೆಗೆದುಹಾಕುವರು, ಅವರು ತಮ್ಮ ಉಷ್ಣಗಾಳಿಯಿಂದ ಯೂಫ್ರೇಟೀಸ್ ನದಿಯ ಮೇಲೆ ಕೈಯನ್ನು ಝಾಡಿಸಿ, ಅದನ್ನು ಏಳು ಹೊಳೆಗಳಾಗಿ ಒಡೆದು, ಮನುಷ್ಯರ ಕೆರಗಳು ನೆನೆಯದಂತೆ ದಾಟಿಸುವರು. 16 ಇದಲ್ಲದೆ ಇಸ್ರಾಯೇಲರು ಈಜಿಪ್ಟ್ ದೇಶದಿಂದ ಹೊರಟು ಬಂದ ಕಾಲದಲ್ಲಿ ಅವರಿಗೆ ಹೇಗೆ ಮಾರ್ಗವು ಇತ್ತೋ ಹಾಗೆಯೇ ಅಸ್ಸೀರಿಯದಿಂದ ತಪ್ಪಿಸಿಕೊಂಡು ಬರುವ ತಮ್ಮ ಉಳಿದ ಜನರಿಗೆ ವಿಶಾಲವಾದ ಮಾರ್ಗವು ಇರುವುದು.
1. {#1ಇಷಯನ ಕೊಂಬೆ } ಇಷಯನ ಬುಡದಿಂದ ಒಂದು ಚಿಗುರು ಒಡೆಯುವುದು ಮತ್ತು ಅದರ ಬೇರಿನಿಂದ ಕೊಂಬೆಯು ಫಲಕೊಡುವುದು. 2. ಅವನ ಮೇಲೆ ಯೆಹೋವ ದೇವರ ಆತ್ಮ, ಜ್ಞಾನ ಮತ್ತು ವಿವೇಕದಾಯಕ ಆತ್ಮ, ಸಮಾಲೋಚನೆ ಮತ್ತು ಪರಾಕ್ರಮಗಳನ್ನು ಹುಟ್ಟಿಸುವ ಆತ್ಮ, ತಿಳುವಳಿಕೆ ಮತ್ತು ಯೆಹೋವ ದೇವರ ಭಯದ ಆತ್ಮ, 3. ಅವರು ಯೆಹೋವ ದೇವರ ಭಯದಲ್ಲಿ ಆನಂದಿಸುವರು. ಅವರು ಕಣ್ಣಿಗೆ ಕಂಡಂತೆ ತೀರ್ಪು ಮಾಡುವುದಿಲ್ಲ, ತಮ್ಮ ಕಿವಿಗಳ ಕೇಳ್ವಿಕೆಯ ಪ್ರಕಾರವೂ ತೀರ್ಪು ಮಾಡುವುದಿಲ್ಲ. 4. ಆದರೆ ಭೂಮಿಯ ಬಡವರಿಗೆ ನೀತಿಯಿಂದ ನ್ಯಾಯತೀರಿಸುವರು. ಭೂಲೋಕದ ದೀನರಿಗೆ ನ್ಯಾಯವಾಗಿ ತೀರ್ಪುಮಾಡುವರು, ಭೂಮಿಯನ್ನು ತಮ್ಮ ಬಾಯಿಯ ಕೋಲಿನಿಂದ ಹೊಡೆಯುವರು. ತಮ್ಮ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವರು. 5. ನೀತಿಯೇ ಅವರಿಗೆ ನಡುಕಟ್ಟು, ನಂಬಿಗಸ್ತಿಕೆಯೇ ಅವರ ಸೊಂಟದ ಪಟ್ಟಿ. 6. ತೋಳವು ಕುರಿಯ ಸಂಗಡ ವಾಸಿಸುವುದು; ಚಿರತೆಯು ಮೇಕೆ ಮರಿಯೊಂದಿಗೆ ಮಲಗುವುದು; ಕರುವೂ, ಪ್ರಾಯದ ಸಿಂಹವೂ, ಪುಷ್ಟಪಶುವೂ ಒಟ್ಟಿಗಿರುವುವು; ಇವುಗಳನ್ನು ಒಂದು ಪುಟ್ಟ ಮಗುವು ನಡೆಸುವುದು. 7. ಹಸುವು ಕರಡಿಯ ಸಂಗಡ ಮೇಯುವುವು; ಅವುಗಳ ಮರಿಗಳು ಜೊತೆಯಾಗಿ ಮಲಗುವುವು; ಸಿಂಹವು ಎತ್ತಿನಂತೆ ಹುಲ್ಲನ್ನು ಮೇಯುವುದು. 8. ಹಸುಳೆಯು ನಾಗರ ಹಾವಿನ ಹುತ್ತದ ಮೇಲೆ ಆಡುವುದು ಮತ್ತು ಪುಟ್ಟ ಮಗುವು ಹಾವಿನ ಬಿಲದ ಒಳಗೆ ಕೈ ಹಾಕುವುದು. 9. ನನ್ನ ಪರಿಶುದ್ಧ ಪರ್ವತದಲ್ಲಿ ಯಾರೂ ಕೇಡುಮಾಡುವುದಿಲ್ಲ, ಯಾರೂ ಹಾಳುಮಾಡುವುದಿಲ್ಲ. ಏಕೆಂದರೆ ಸಮುದ್ರವು ನೀರಿನಿಂದ ತುಂಬಿಕೊಂಡಿರುವಂತೆ, ಯೆಹೋವ ದೇವರ ತಿಳುವಳಿಕೆಯು ಭೂಮಿಯಲ್ಲಿ ತುಂಬಿಕೊಂಡಿರುವುದು. 10. ಆ ದಿನದಲ್ಲಿ ಇಷಯನ ವಂಶದಿಂದ ಜನರಿಗೆ ಒಂದು ಬೇರು ಗುರುತಿನ ಧ್ವಜವಾಗಿ ನಿಲ್ಲುವುದು. ಅವರ ವಿಶ್ರಾಂತಿ ಸ್ಥಳವು ಮಹಿಮೆಯುಳ್ಳದ್ದಾಗಿರುವುದು. 11. ಆ ದಿನದಲ್ಲಿ ಯೆಹೋವ ದೇವರು ಉಳಿದ ತಮ್ಮ ಜನರನ್ನು ಬಿಡಿಸಿಕೊಳ್ಳುವುದಕ್ಕೆ ಎರಡನೇ ಸಾರಿ ಕೈಹಾಕಿ ಅಸ್ಸೀರಿಯ, ಈಜಿಪ್ಟ್, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾತ್ ಮತ್ತು ಮೆಡಿಟರೇನಿಯನ್ ಸಮುದ್ರದ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವರು. 12. ಜನಾಂಗಗಳಿಗೆ ಗುರುತಾಗಿ ಧ್ವಜವನ್ನೆತ್ತಿ ಇಸ್ರಾಯೇಲಿನಿಂದ ತಳ್ಳಿಬಿಟ್ಟವರನ್ನು ಕೂಡಿಸುವನು. ಯೆಹೂದದಿಂದ ಚದರಿದವರನ್ನು ಭೂಮಿಯ ನಾಲ್ಕು ಕಡೆಗಳಿಂದ ಒಟ್ಟುಗೂಡಿಸುವನು. 13. ಎಫ್ರಾಯೀಮಿನ ಹೊಟ್ಟೆಕಿಚ್ಚು ತೊಲಗಿ, ಯೆಹೂದದ ವಿರೋಧಿಗಳು ಇಲ್ಲದಂತಾಗುವರು. ಹೀಗೆ ಎಫ್ರಾಯೀಮು ಯೆಹೂದದ ಮೇಲೆ ಹೊಟ್ಟೆಕಿಚ್ಚು ಪಡುವುದಿಲ್ಲ; ಯೆಹೂದವು ಎಫ್ರಾಯೀಮಿಗೆ ವಿರೋಧವಾಗಿರುವುದಿಲ್ಲ. 14. ಆದರೆ ಅವರು ಪಶ್ಚಿಮ ದಿಕ್ಕಿಗೆ ಫಿಲಿಷ್ಟಿಯರ ಇಳಿಜಾರು ಪ್ರದೇಶದ ಮೇಲೆ ಎರಗುವರು. ಅವರು ಜೊತೆಯಾಗಿ ಪೂರ್ವದವರನ್ನು ಸೂರೆ ಮಾಡುವರು, ಅವರು ಎದೋಮಿನ ಮತ್ತು ಮೋವಾಬಿನ ಮೇಲೆ ತಮ್ಮ ಕೈಯನ್ನು ದಾಳಿಮಾಡುವರು ಮತ್ತು ಅಮ್ಮೋನಿಯರು ಅವರಿಗೆ ಅಧೀನರಾಗುವರು. 15. ಯೆಹೋವ ದೇವರು ಈಜಿಪ್ಟಿನ ಸಮುದ್ರದ ಕೊಲ್ಲಿಯನ್ನು ಸಂಪೂರ್ಣವಾಗಿ ತೆಗೆದುಹಾಕುವರು, ಅವರು ತಮ್ಮ ಉಷ್ಣಗಾಳಿಯಿಂದ ಯೂಫ್ರೇಟೀಸ್ ನದಿಯ ಮೇಲೆ ಕೈಯನ್ನು ಝಾಡಿಸಿ, ಅದನ್ನು ಏಳು ಹೊಳೆಗಳಾಗಿ ಒಡೆದು, ಮನುಷ್ಯರ ಕೆರಗಳು ನೆನೆಯದಂತೆ ದಾಟಿಸುವರು. 16. ಇದಲ್ಲದೆ ಇಸ್ರಾಯೇಲರು ಈಜಿಪ್ಟ್ ದೇಶದಿಂದ ಹೊರಟು ಬಂದ ಕಾಲದಲ್ಲಿ ಅವರಿಗೆ ಹೇಗೆ ಮಾರ್ಗವು ಇತ್ತೋ ಹಾಗೆಯೇ ಅಸ್ಸೀರಿಯದಿಂದ ತಪ್ಪಿಸಿಕೊಂಡು ಬರುವ ತಮ್ಮ ಉಳಿದ ಜನರಿಗೆ ವಿಶಾಲವಾದ ಮಾರ್ಗವು ಇರುವುದು.
  • ಯೆಶಾಯ ಅಧ್ಯಾಯ 1  
  • ಯೆಶಾಯ ಅಧ್ಯಾಯ 2  
  • ಯೆಶಾಯ ಅಧ್ಯಾಯ 3  
  • ಯೆಶಾಯ ಅಧ್ಯಾಯ 4  
  • ಯೆಶಾಯ ಅಧ್ಯಾಯ 5  
  • ಯೆಶಾಯ ಅಧ್ಯಾಯ 6  
  • ಯೆಶಾಯ ಅಧ್ಯಾಯ 7  
  • ಯೆಶಾಯ ಅಧ್ಯಾಯ 8  
  • ಯೆಶಾಯ ಅಧ್ಯಾಯ 9  
  • ಯೆಶಾಯ ಅಧ್ಯಾಯ 10  
  • ಯೆಶಾಯ ಅಧ್ಯಾಯ 11  
  • ಯೆಶಾಯ ಅಧ್ಯಾಯ 12  
  • ಯೆಶಾಯ ಅಧ್ಯಾಯ 13  
  • ಯೆಶಾಯ ಅಧ್ಯಾಯ 14  
  • ಯೆಶಾಯ ಅಧ್ಯಾಯ 15  
  • ಯೆಶಾಯ ಅಧ್ಯಾಯ 16  
  • ಯೆಶಾಯ ಅಧ್ಯಾಯ 17  
  • ಯೆಶಾಯ ಅಧ್ಯಾಯ 18  
  • ಯೆಶಾಯ ಅಧ್ಯಾಯ 19  
  • ಯೆಶಾಯ ಅಧ್ಯಾಯ 20  
  • ಯೆಶಾಯ ಅಧ್ಯಾಯ 21  
  • ಯೆಶಾಯ ಅಧ್ಯಾಯ 22  
  • ಯೆಶಾಯ ಅಧ್ಯಾಯ 23  
  • ಯೆಶಾಯ ಅಧ್ಯಾಯ 24  
  • ಯೆಶಾಯ ಅಧ್ಯಾಯ 25  
  • ಯೆಶಾಯ ಅಧ್ಯಾಯ 26  
  • ಯೆಶಾಯ ಅಧ್ಯಾಯ 27  
  • ಯೆಶಾಯ ಅಧ್ಯಾಯ 28  
  • ಯೆಶಾಯ ಅಧ್ಯಾಯ 29  
  • ಯೆಶಾಯ ಅಧ್ಯಾಯ 30  
  • ಯೆಶಾಯ ಅಧ್ಯಾಯ 31  
  • ಯೆಶಾಯ ಅಧ್ಯಾಯ 32  
  • ಯೆಶಾಯ ಅಧ್ಯಾಯ 33  
  • ಯೆಶಾಯ ಅಧ್ಯಾಯ 34  
  • ಯೆಶಾಯ ಅಧ್ಯಾಯ 35  
  • ಯೆಶಾಯ ಅಧ್ಯಾಯ 36  
  • ಯೆಶಾಯ ಅಧ್ಯಾಯ 37  
  • ಯೆಶಾಯ ಅಧ್ಯಾಯ 38  
  • ಯೆಶಾಯ ಅಧ್ಯಾಯ 39  
  • ಯೆಶಾಯ ಅಧ್ಯಾಯ 40  
  • ಯೆಶಾಯ ಅಧ್ಯಾಯ 41  
  • ಯೆಶಾಯ ಅಧ್ಯಾಯ 42  
  • ಯೆಶಾಯ ಅಧ್ಯಾಯ 43  
  • ಯೆಶಾಯ ಅಧ್ಯಾಯ 44  
  • ಯೆಶಾಯ ಅಧ್ಯಾಯ 45  
  • ಯೆಶಾಯ ಅಧ್ಯಾಯ 46  
  • ಯೆಶಾಯ ಅಧ್ಯಾಯ 47  
  • ಯೆಶಾಯ ಅಧ್ಯಾಯ 48  
  • ಯೆಶಾಯ ಅಧ್ಯಾಯ 49  
  • ಯೆಶಾಯ ಅಧ್ಯಾಯ 50  
  • ಯೆಶಾಯ ಅಧ್ಯಾಯ 51  
  • ಯೆಶಾಯ ಅಧ್ಯಾಯ 52  
  • ಯೆಶಾಯ ಅಧ್ಯಾಯ 53  
  • ಯೆಶಾಯ ಅಧ್ಯಾಯ 54  
  • ಯೆಶಾಯ ಅಧ್ಯಾಯ 55  
  • ಯೆಶಾಯ ಅಧ್ಯಾಯ 56  
  • ಯೆಶಾಯ ಅಧ್ಯಾಯ 57  
  • ಯೆಶಾಯ ಅಧ್ಯಾಯ 58  
  • ಯೆಶಾಯ ಅಧ್ಯಾಯ 59  
  • ಯೆಶಾಯ ಅಧ್ಯಾಯ 60  
  • ಯೆಶಾಯ ಅಧ್ಯಾಯ 61  
  • ಯೆಶಾಯ ಅಧ್ಯಾಯ 62  
  • ಯೆಶಾಯ ಅಧ್ಯಾಯ 63  
  • ಯೆಶಾಯ ಅಧ್ಯಾಯ 64  
  • ಯೆಶಾಯ ಅಧ್ಯಾಯ 65  
  • ಯೆಶಾಯ ಅಧ್ಯಾಯ 66  
×

Alert

×

Kannada Letters Keypad References