ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ

ಯೆರೆಮಿಯ ಅಧ್ಯಾಯ 10

ದೇವರು ಮತ್ತು ದೇವತೆಗಳು 1 ಇಸ್ರಾಯೇಲಿನ ವಂಶದವರೇ, ಯೆಹೋವ ದೇವರು ನಿಮಗೆ ಹೇಳುವ ವಾಕ್ಯವನ್ನು ಕೇಳಿರಿ. 2 ಯೆಹೋವ ದೇವರು ಹೀಗೆ ಹೇಳುತ್ತಾರೆ: ಬೇರೆ ಜನಾಂಗಗಳ ಆಚರಣೆಗಳನ್ನು ಅನುಸರಿಸಬೇಡಿರಿ. ಅವರು ಆಕಾಶದ ಗುರುತುಗಳಿಗೆ ಹೆದರುತ್ತಾರೆ. ನೀವು ಅವುಗಳಿಗೆ ಹೆದರಬೇಡಿರಿ. 3 ಜನಾಂಗಗಳ ಪದ್ಧತಿಗಳು ವ್ಯರ್ಥವಾಗಿವೆ. ಹೇಗೆಂದರೆ, ಅಡವಿಯಲ್ಲಿ ಒಬ್ಬನು ಮರವನ್ನು ಕಡಿಯುತ್ತಾನೆ. ಅದು ಕೊಡಲಿಯಿಂದ ಕಡಿದ ಬಡಿಗೆಯವನ ಕೈಕೆಲಸವೇ. 4 ಬೆಳ್ಳಿಯಿಂದಲೂ ಬಂಗಾರದಿಂದಲೂ ಅದನ್ನು ಅಲಂಕರಿಸುತ್ತಾರೆ. ಮೊಳೆಗಳಿಂದಲೂ ಸುತ್ತಿಗೆಗಳಿಂದಲೂ ಚಲಿಸದ ಹಾಗೆ ಅದನ್ನು ಬಿಗಿಸುತ್ತಾರೆ. 5 ಇಂಥಾ ಬೊಂಬೆಗಳು ಸೌತೆಕಾಯಿ ತೋಟದ ಬೆದರುಗಂಬದಂತಿವೆ, ಅವರ ವಿಗ್ರಹಗಳು ಮಾತನಾಡುವುದಿಲ್ಲ. ಅವುಗಳನ್ನು ಹೊತ್ತುಕೊಳ್ಳತಕ್ಕದ್ದು, ಏಕೆಂದರೆ ಅವು ನಡೆಯಲಾರವು. ಅವುಗಳಿಗೆ ಭಯಪಡಬೇಡಿರಿ. ಏಕೆಂದರೆ, ಅವು ಕೆಟ್ಟದ್ದನ್ನು ಮಾಡಲಾರವು. ಒಳ್ಳೆಯದನ್ನು ಮಾಡುವುದೂ ಸಹ ಅವುಗಳಲ್ಲಿ ಇಲ್ಲ. 6 ಓ ಯೆಹೋವ ದೇವರೇ, ನಿಮ್ಮ ಹಾಗೆ ಯಾರೂ ಇಲ್ಲ. ನೀವು ಮಹೋತ್ತಮರು, ನಿಮ್ಮ ಹೆಸರು ಪರಾಕ್ರಮದಲ್ಲಿ ಮಹತ್ತರವಾದದ್ದು. 7 ಓ ಜನಾಂಗಗಳ ಅರಸರಾದವರೇ, ನಿಮಗೆ ಭಯಪಡದವನ್ಯಾರು? ಏಕೆಂದರೆ, ನಿಮಗೆ ಅದು ಸಲ್ಲತಕ್ಕದ್ದು. ಏಕೆಂದರೆ, ಜನಾಂಗಗಳ ಎಲ್ಲಾ ಜ್ಞಾನಿಗಳಲ್ಲಿಯೂ, ಅವುಗಳ ಎಲ್ಲಾ ರಾಜ್ಯಗಳಲ್ಲಿಯೂ ನಿಮ್ಮ ಹಾಗೆ ಯಾರೂ ಇಲ್ಲ. 8 ಆದರೆ ಅವರು ಮಂದರೂ ಮೂರ್ಖರೂ ಆಗಿದ್ದಾರೆ. ಅವರಿಗೆ ವ್ಯರ್ಥವಾದ ಮರ, ಬೊಂಬೆಗಳಿಂದ ಬೋಧನೆಯಾಗಿವೆ. 9 ಬೆಳ್ಳಿಯ ತಗಡುಗಳನ್ನು ತಾರ್ಷೀಷಿನಿಂದಲೂ, ಬಂಗಾರವನ್ನು ಊಫಜಿನಿಂದ ತರುತ್ತಾರೆ. ಅದು ಕೆತ್ತನೆಯವನ ಕೆಲಸವು ಮತ್ತು ಎರಕ ಹೊಯ್ಯುವವನ ಕೈಯಿಂದ ಉಂಟಾದವುಗಳೂ ಆಗಿವೆ. ನೀಲಿಯೂ ಧೂಮ್ರ ವರ್ಣವೂ ಅವುಗಳ ವಸ್ತ್ರವಾಗಿದೆ. ಅವುಗಳೆಲ್ಲಾ ಕೌಶಲ್ಯಗಾರರ ಕೈಕೆಲಸವೇ. 10 ಆದರೆ ಯೆಹೋವ ದೇವರು ನಿಜವಾದ ದೇವರಾಗಿದ್ದಾರೆ. ಅವರು ಜೀವಸ್ವರೂಪರಾದ ದೇವರೂ, ನಿತ್ಯನಾದ ಅರಸರೂ ಆಗಿದ್ದಾರೆ. ಅವರ ರೌದ್ರದಿಂದ ಭೂಮಿ ಕಂಪಿಸುವುದು. ಅವರ ಉಗ್ರತೆಯನ್ನು ಜನಾಂಗಗಳು ತಾಳಲಾರವು. 11 12 “ನೀವು ಅವರಿಗೆ ಹೀಗೆ ಹೇಳಬೇಕು: ‘ಆಕಾಶಗಳನ್ನೂ ಭೂಮಿಯನ್ನೂ ಉಂಟು ಮಾಡದ ದೇವರುಗಳು, ಭೂಮಿಯ ಮೇಲಿನಿಂದಲೂ ಈ ಆಕಾಶದ ಕೆಳಗಿನಿಂದಲೂ ನಾಶವಾಗುವುವು.’ ” ಆದರೆ ದೇವರು ತಮ್ಮ ಶಕ್ತಿಯಿಂದ ಭೂಮಿಯನ್ನು ಸೃಷ್ಟಿಸಿ, ತಮ್ಮ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ, ತಮ್ಮ ವಿವೇಕದಿಂದ ಆಕಾಶವನ್ನು ವಿಸ್ತರಿಸಿದ್ದಾರೆ. 13 ಅವರ ಗರ್ಜನೆಗೆ ಆಕಾಶದಲ್ಲಿನ ನೀರು ಭೋರ್ಗರೆಯುತ್ತದೆ, ಅವರು ಭೂಮಿಯ ಕಟ್ಟಕಡೆಗಳಿಂದ ಮೋಡಗಳನ್ನು ಏಳುವಂತೆ ಮಾಡುತ್ತಾರೆ. ಮಳೆಗೋಸ್ಕರ ಮಿಂಚನ್ನು ಉಂಟುಮಾಡುತ್ತಾರೆ. ತಮ್ಮ ಭಂಡಾರದಿಂದ ಗಾಳಿಯನ್ನು ಬೀಸಮಾಡುತ್ತಾರೆ. 14 ಪ್ರತಿ ಮನುಷ್ಯನು ತಿಳುವಳಿಕೆ ಇಲ್ಲದವನೂ ಬುದ್ಧಿಹೀನನೂ ಆಗಿದ್ದಾನೆ. ತಾನು ಕೆತ್ತಿದ ವಿಗ್ರಹಕ್ಕೋಸ್ಕರ ಪ್ರತಿಯೊಬ್ಬ ಅಕ್ಕಸಾಲಿಗನೂ ನಾಚಿಕೆಪಡುತ್ತಾನೆ. ಏಕೆಂದರೆ ಅವರ ಎರಕದ ವಿಗ್ರಹಗಳು ಸುಳ್ಳೇ, ಅವುಗಳಲ್ಲಿ ಉಸಿರೇ ಇಲ್ಲ. 15 ಅವು ವ್ಯರ್ಥ, ಹಾಸ್ಯಾಸ್ಪದದ ಕೆಲಸ. ಅವುಗಳ ದಂಡನೆಯ ಕಾಲದಲ್ಲಿ ಅವು ನಾಶವಾಗುವುವು. 16 ಯಾಕೋಬ್ಯರ ಪಾಲಾಗಿರುವವರು ಇವುಗಳ ಹಾಗಲ್ಲ. ಏಕೆಂದರೆ ಅವರು ಎಲ್ಲವನ್ನು ರೂಪಿಸಿದವರೇ, ಇಸ್ರಾಯೇಲ್ ಅವರ ಸ್ವಾಸ್ತ್ಯವಾದ ವಂಶ. ಅವರ ಹೆಸರು ಸೇನಾಧೀಶ್ವರ ಯೆಹೋವ ದೇವರೇ. ಸಮೀಪಿಸುವ ಶತ್ರು ಬಾಧೆ 17 ಮುತ್ತಿಗೆಗೆ ಒಳಗಾದವರೇ, ನಿಮ್ಮ ದೇಶ ಬಿಡಲು ನಿಮ್ಮ ಸೊತ್ತುಗಳನ್ನು ಕೂಡಿಸಿರಿ. 18 ಏಕೆಂದರೆ, ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ಈ ಒಂದೇ ಸಾರಿ ದೇಶದ ನಿವಾಸಿಗಳನ್ನು ಕವಣೆಯಿಂದ ಎಸೆದುಬಿಡುತ್ತೇನೆ. ಅವರಿಗೆ ತಗಲುವ ಹಾಗೆ ಅವರನ್ನು ಸಂಕಟಪಡಿಸುತ್ತೇನೆ.” 19 ನನ್ನ ನೋವಿನ ನಿಮಿತ್ತ ನನಗೆ ಅಯ್ಯೋ, ನನ್ನ ಗಾಯವು ವಾಸಿಪಡಿಸಲಾಗದು. ಆದರೆ ನಾನು ನಿಶ್ಚಯವಾಗಿ, “ಇದು ನನ್ನ ರೋಗ, ಇದನ್ನು ನಾನು ಸಹಿಸಲೇಬೇಕಾಗಿದೆ,” ಎಂದೆನು. 20 ನನ್ನ ಗುಡಾರವು ಸೂರೆಯಾಯಿತು; ನನ್ನ ಹಗ್ಗಗಳೆಲ್ಲಾ ಹರಿದಿವೆ. ನನ್ನ ಮಕ್ಕಳು ನನ್ನನ್ನು ಬಿಟ್ಟು ಹೋಗಿದ್ದಾರೆ; ಅವರು ಇಲ್ಲ. ಇನ್ನು ಮೇಲೆ ನನ್ನ ಡೇರೆಯನ್ನು ಹರಡುವುದಕ್ಕೂ, ನನ್ನ ಪರದೆಗಳನ್ನು ನಿಲ್ಲಿಸುವುದಕ್ಕೂ ಒಬ್ಬನೂ ಇಲ್ಲ. 21 ಏಕೆಂದರೆ, ಕುರುಬರು ಪಶುಗಳಂತಾದರು. ಅವರು ಯೆಹೋವ ದೇವರನ್ನು ಹುಡುಕಲಿಲ್ಲ. ಆದ್ದರಿಂದ ಅವರು ಸಫಲವಾಗುವುದಿಲ್ಲ. ಅವರ ಮಂದೆಗಳೆಲ್ಲಾ ಚದರಿಸಲಾಗುವುವು. 22 ಇಗೋ, ಯೆಹೂದದ ಪಟ್ಟಣಗಳನ್ನು ಹಾಳು ಮಾಡುವುದಕ್ಕೂ, ನರಿಗಳ ಹಕ್ಕೆಯನ್ನಾಗಿ ಮಾಡುವುದಕ್ಕೂ, ಸುದ್ದಿಯ ಶಬ್ದವೂ, ಉತ್ತರ ದೇಶದಿಂದ ಮಹಾ ಗಲಭೆಯೂ ಬರುತ್ತದೆ. ಯೆರೆಮೀಯನ ಪ್ರಾರ್ಥನೆ 23 ಓ ಯೆಹೋವ ದೇವರೇ, ಮನುಷ್ಯನ ಮಾರ್ಗವು ತನ್ನಲ್ಲಿಲ್ಲವೆಂದೂ, ತನ್ನ ಹೆಜ್ಜೆ ನೆಟ್ಟಗೆ ಮಾಡುವುದು ನಡೆಯುವ ಮನುಷ್ಯನದ್ದಲ್ಲವೆಂದೂ ಬಲ್ಲೆನು. 24 ಓ ಯೆಹೋವ ದೇವರೇ, ನನ್ನನ್ನು ಶಿಸ್ತುಪಡಿಸಿರಿ. ಆದರೆ ಮಿತಿಮೀರಿ ದಂಡಿಸಬೇಡಿರಿ, ನಿಮ್ಮ ಕೋಪದಲ್ಲಿ ಅಲ್ಲ. ಇಲ್ಲವಾದರೆ ನಾನು ಇಲ್ಲದೆಹೋಗುವೆನು. 25 ನಿಮ್ಮನ್ನು ತಿಳಿಯದವರ ಮೇಲೆಯೂ, ನಿಮ್ಮ ಹೆಸರನ್ನು ಅರಿಯದ ದೇಶಗಳ ಮೇಲೆಯೂ, ನಿಮ್ಮ ಕೋಪವನ್ನು ಸುರಿದುಬಿಡಿರಿ. ಏಕೆಂದರೆ, ಅವರು ಯಾಕೋಬ್ಯರನ್ನು ನುಂಗಿಬಿಟ್ಟಿದ್ದಾರೆ. ಹೌದು, ಅವರನ್ನು ನುಂಗಿದ್ದಲ್ಲದೆ, ಅವರ ಸ್ವದೇಶವನ್ನು ಸಹ ನಾಶಮಾಡಿದ್ದಾರೆ.
ದೇವರು ಮತ್ತು ದೇವತೆಗಳು 1 ಇಸ್ರಾಯೇಲಿನ ವಂಶದವರೇ, ಯೆಹೋವ ದೇವರು ನಿಮಗೆ ಹೇಳುವ ವಾಕ್ಯವನ್ನು ಕೇಳಿರಿ. .::. 2 ಯೆಹೋವ ದೇವರು ಹೀಗೆ ಹೇಳುತ್ತಾರೆ: ಬೇರೆ ಜನಾಂಗಗಳ ಆಚರಣೆಗಳನ್ನು ಅನುಸರಿಸಬೇಡಿರಿ. ಅವರು ಆಕಾಶದ ಗುರುತುಗಳಿಗೆ ಹೆದರುತ್ತಾರೆ. ನೀವು ಅವುಗಳಿಗೆ ಹೆದರಬೇಡಿರಿ. .::. 3 ಜನಾಂಗಗಳ ಪದ್ಧತಿಗಳು ವ್ಯರ್ಥವಾಗಿವೆ. ಹೇಗೆಂದರೆ, ಅಡವಿಯಲ್ಲಿ ಒಬ್ಬನು ಮರವನ್ನು ಕಡಿಯುತ್ತಾನೆ. ಅದು ಕೊಡಲಿಯಿಂದ ಕಡಿದ ಬಡಿಗೆಯವನ ಕೈಕೆಲಸವೇ. .::. 4 ಬೆಳ್ಳಿಯಿಂದಲೂ ಬಂಗಾರದಿಂದಲೂ ಅದನ್ನು ಅಲಂಕರಿಸುತ್ತಾರೆ. ಮೊಳೆಗಳಿಂದಲೂ ಸುತ್ತಿಗೆಗಳಿಂದಲೂ ಚಲಿಸದ ಹಾಗೆ ಅದನ್ನು ಬಿಗಿಸುತ್ತಾರೆ. .::. 5 ಇಂಥಾ ಬೊಂಬೆಗಳು ಸೌತೆಕಾಯಿ ತೋಟದ ಬೆದರುಗಂಬದಂತಿವೆ, ಅವರ ವಿಗ್ರಹಗಳು ಮಾತನಾಡುವುದಿಲ್ಲ. ಅವುಗಳನ್ನು ಹೊತ್ತುಕೊಳ್ಳತಕ್ಕದ್ದು, ಏಕೆಂದರೆ ಅವು ನಡೆಯಲಾರವು. ಅವುಗಳಿಗೆ ಭಯಪಡಬೇಡಿರಿ. ಏಕೆಂದರೆ, ಅವು ಕೆಟ್ಟದ್ದನ್ನು ಮಾಡಲಾರವು. ಒಳ್ಳೆಯದನ್ನು ಮಾಡುವುದೂ ಸಹ ಅವುಗಳಲ್ಲಿ ಇಲ್ಲ. .::. 6 ಓ ಯೆಹೋವ ದೇವರೇ, ನಿಮ್ಮ ಹಾಗೆ ಯಾರೂ ಇಲ್ಲ. ನೀವು ಮಹೋತ್ತಮರು, ನಿಮ್ಮ ಹೆಸರು ಪರಾಕ್ರಮದಲ್ಲಿ ಮಹತ್ತರವಾದದ್ದು. .::. 7 ಓ ಜನಾಂಗಗಳ ಅರಸರಾದವರೇ, ನಿಮಗೆ ಭಯಪಡದವನ್ಯಾರು? ಏಕೆಂದರೆ, ನಿಮಗೆ ಅದು ಸಲ್ಲತಕ್ಕದ್ದು. ಏಕೆಂದರೆ, ಜನಾಂಗಗಳ ಎಲ್ಲಾ ಜ್ಞಾನಿಗಳಲ್ಲಿಯೂ, ಅವುಗಳ ಎಲ್ಲಾ ರಾಜ್ಯಗಳಲ್ಲಿಯೂ ನಿಮ್ಮ ಹಾಗೆ ಯಾರೂ ಇಲ್ಲ. .::. 8 ಆದರೆ ಅವರು ಮಂದರೂ ಮೂರ್ಖರೂ ಆಗಿದ್ದಾರೆ. ಅವರಿಗೆ ವ್ಯರ್ಥವಾದ ಮರ, ಬೊಂಬೆಗಳಿಂದ ಬೋಧನೆಯಾಗಿವೆ. .::. 9 ಬೆಳ್ಳಿಯ ತಗಡುಗಳನ್ನು ತಾರ್ಷೀಷಿನಿಂದಲೂ, ಬಂಗಾರವನ್ನು ಊಫಜಿನಿಂದ ತರುತ್ತಾರೆ. ಅದು ಕೆತ್ತನೆಯವನ ಕೆಲಸವು ಮತ್ತು ಎರಕ ಹೊಯ್ಯುವವನ ಕೈಯಿಂದ ಉಂಟಾದವುಗಳೂ ಆಗಿವೆ. ನೀಲಿಯೂ ಧೂಮ್ರ ವರ್ಣವೂ ಅವುಗಳ ವಸ್ತ್ರವಾಗಿದೆ. ಅವುಗಳೆಲ್ಲಾ ಕೌಶಲ್ಯಗಾರರ ಕೈಕೆಲಸವೇ. .::. 10 ಆದರೆ ಯೆಹೋವ ದೇವರು ನಿಜವಾದ ದೇವರಾಗಿದ್ದಾರೆ. ಅವರು ಜೀವಸ್ವರೂಪರಾದ ದೇವರೂ, ನಿತ್ಯನಾದ ಅರಸರೂ ಆಗಿದ್ದಾರೆ. ಅವರ ರೌದ್ರದಿಂದ ಭೂಮಿ ಕಂಪಿಸುವುದು. ಅವರ ಉಗ್ರತೆಯನ್ನು ಜನಾಂಗಗಳು ತಾಳಲಾರವು. .::. 11 .::. 12 “ನೀವು ಅವರಿಗೆ ಹೀಗೆ ಹೇಳಬೇಕು: ‘ಆಕಾಶಗಳನ್ನೂ ಭೂಮಿಯನ್ನೂ ಉಂಟು ಮಾಡದ ದೇವರುಗಳು, ಭೂಮಿಯ ಮೇಲಿನಿಂದಲೂ ಈ ಆಕಾಶದ ಕೆಳಗಿನಿಂದಲೂ ನಾಶವಾಗುವುವು.’ ” ಆದರೆ ದೇವರು ತಮ್ಮ ಶಕ್ತಿಯಿಂದ ಭೂಮಿಯನ್ನು ಸೃಷ್ಟಿಸಿ, ತಮ್ಮ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ, ತಮ್ಮ ವಿವೇಕದಿಂದ ಆಕಾಶವನ್ನು ವಿಸ್ತರಿಸಿದ್ದಾರೆ. .::. 13 ಅವರ ಗರ್ಜನೆಗೆ ಆಕಾಶದಲ್ಲಿನ ನೀರು ಭೋರ್ಗರೆಯುತ್ತದೆ, ಅವರು ಭೂಮಿಯ ಕಟ್ಟಕಡೆಗಳಿಂದ ಮೋಡಗಳನ್ನು ಏಳುವಂತೆ ಮಾಡುತ್ತಾರೆ. ಮಳೆಗೋಸ್ಕರ ಮಿಂಚನ್ನು ಉಂಟುಮಾಡುತ್ತಾರೆ. ತಮ್ಮ ಭಂಡಾರದಿಂದ ಗಾಳಿಯನ್ನು ಬೀಸಮಾಡುತ್ತಾರೆ. .::. 14 ಪ್ರತಿ ಮನುಷ್ಯನು ತಿಳುವಳಿಕೆ ಇಲ್ಲದವನೂ ಬುದ್ಧಿಹೀನನೂ ಆಗಿದ್ದಾನೆ. ತಾನು ಕೆತ್ತಿದ ವಿಗ್ರಹಕ್ಕೋಸ್ಕರ ಪ್ರತಿಯೊಬ್ಬ ಅಕ್ಕಸಾಲಿಗನೂ ನಾಚಿಕೆಪಡುತ್ತಾನೆ. ಏಕೆಂದರೆ ಅವರ ಎರಕದ ವಿಗ್ರಹಗಳು ಸುಳ್ಳೇ, ಅವುಗಳಲ್ಲಿ ಉಸಿರೇ ಇಲ್ಲ. .::. 15 ಅವು ವ್ಯರ್ಥ, ಹಾಸ್ಯಾಸ್ಪದದ ಕೆಲಸ. ಅವುಗಳ ದಂಡನೆಯ ಕಾಲದಲ್ಲಿ ಅವು ನಾಶವಾಗುವುವು. .::. 16 ಯಾಕೋಬ್ಯರ ಪಾಲಾಗಿರುವವರು ಇವುಗಳ ಹಾಗಲ್ಲ. ಏಕೆಂದರೆ ಅವರು ಎಲ್ಲವನ್ನು ರೂಪಿಸಿದವರೇ, ಇಸ್ರಾಯೇಲ್ ಅವರ ಸ್ವಾಸ್ತ್ಯವಾದ ವಂಶ. ಅವರ ಹೆಸರು ಸೇನಾಧೀಶ್ವರ ಯೆಹೋವ ದೇವರೇ. .::. ಸಮೀಪಿಸುವ ಶತ್ರು ಬಾಧೆ 17 ಮುತ್ತಿಗೆಗೆ ಒಳಗಾದವರೇ, ನಿಮ್ಮ ದೇಶ ಬಿಡಲು ನಿಮ್ಮ ಸೊತ್ತುಗಳನ್ನು ಕೂಡಿಸಿರಿ. .::. 18 ಏಕೆಂದರೆ, ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ಈ ಒಂದೇ ಸಾರಿ ದೇಶದ ನಿವಾಸಿಗಳನ್ನು ಕವಣೆಯಿಂದ ಎಸೆದುಬಿಡುತ್ತೇನೆ. ಅವರಿಗೆ ತಗಲುವ ಹಾಗೆ ಅವರನ್ನು ಸಂಕಟಪಡಿಸುತ್ತೇನೆ.” .::. 19 ನನ್ನ ನೋವಿನ ನಿಮಿತ್ತ ನನಗೆ ಅಯ್ಯೋ, ನನ್ನ ಗಾಯವು ವಾಸಿಪಡಿಸಲಾಗದು. ಆದರೆ ನಾನು ನಿಶ್ಚಯವಾಗಿ, “ಇದು ನನ್ನ ರೋಗ, ಇದನ್ನು ನಾನು ಸಹಿಸಲೇಬೇಕಾಗಿದೆ,” ಎಂದೆನು. .::. 20 ನನ್ನ ಗುಡಾರವು ಸೂರೆಯಾಯಿತು; ನನ್ನ ಹಗ್ಗಗಳೆಲ್ಲಾ ಹರಿದಿವೆ. ನನ್ನ ಮಕ್ಕಳು ನನ್ನನ್ನು ಬಿಟ್ಟು ಹೋಗಿದ್ದಾರೆ; ಅವರು ಇಲ್ಲ. ಇನ್ನು ಮೇಲೆ ನನ್ನ ಡೇರೆಯನ್ನು ಹರಡುವುದಕ್ಕೂ, ನನ್ನ ಪರದೆಗಳನ್ನು ನಿಲ್ಲಿಸುವುದಕ್ಕೂ ಒಬ್ಬನೂ ಇಲ್ಲ. .::. 21 ಏಕೆಂದರೆ, ಕುರುಬರು ಪಶುಗಳಂತಾದರು. ಅವರು ಯೆಹೋವ ದೇವರನ್ನು ಹುಡುಕಲಿಲ್ಲ. ಆದ್ದರಿಂದ ಅವರು ಸಫಲವಾಗುವುದಿಲ್ಲ. ಅವರ ಮಂದೆಗಳೆಲ್ಲಾ ಚದರಿಸಲಾಗುವುವು. .::. 22 ಇಗೋ, ಯೆಹೂದದ ಪಟ್ಟಣಗಳನ್ನು ಹಾಳು ಮಾಡುವುದಕ್ಕೂ, ನರಿಗಳ ಹಕ್ಕೆಯನ್ನಾಗಿ ಮಾಡುವುದಕ್ಕೂ, ಸುದ್ದಿಯ ಶಬ್ದವೂ, ಉತ್ತರ ದೇಶದಿಂದ ಮಹಾ ಗಲಭೆಯೂ ಬರುತ್ತದೆ. .::. ಯೆರೆಮೀಯನ ಪ್ರಾರ್ಥನೆ 23 ಓ ಯೆಹೋವ ದೇವರೇ, ಮನುಷ್ಯನ ಮಾರ್ಗವು ತನ್ನಲ್ಲಿಲ್ಲವೆಂದೂ, ತನ್ನ ಹೆಜ್ಜೆ ನೆಟ್ಟಗೆ ಮಾಡುವುದು ನಡೆಯುವ ಮನುಷ್ಯನದ್ದಲ್ಲವೆಂದೂ ಬಲ್ಲೆನು. .::. 24 ಓ ಯೆಹೋವ ದೇವರೇ, ನನ್ನನ್ನು ಶಿಸ್ತುಪಡಿಸಿರಿ. ಆದರೆ ಮಿತಿಮೀರಿ ದಂಡಿಸಬೇಡಿರಿ, ನಿಮ್ಮ ಕೋಪದಲ್ಲಿ ಅಲ್ಲ. ಇಲ್ಲವಾದರೆ ನಾನು ಇಲ್ಲದೆಹೋಗುವೆನು. .::. 25 ನಿಮ್ಮನ್ನು ತಿಳಿಯದವರ ಮೇಲೆಯೂ, ನಿಮ್ಮ ಹೆಸರನ್ನು ಅರಿಯದ ದೇಶಗಳ ಮೇಲೆಯೂ, ನಿಮ್ಮ ಕೋಪವನ್ನು ಸುರಿದುಬಿಡಿರಿ. ಏಕೆಂದರೆ, ಅವರು ಯಾಕೋಬ್ಯರನ್ನು ನುಂಗಿಬಿಟ್ಟಿದ್ದಾರೆ. ಹೌದು, ಅವರನ್ನು ನುಂಗಿದ್ದಲ್ಲದೆ, ಅವರ ಸ್ವದೇಶವನ್ನು ಸಹ ನಾಶಮಾಡಿದ್ದಾರೆ.
  • ಯೆರೆಮಿಯ ಅಧ್ಯಾಯ 1  
  • ಯೆರೆಮಿಯ ಅಧ್ಯಾಯ 2  
  • ಯೆರೆಮಿಯ ಅಧ್ಯಾಯ 3  
  • ಯೆರೆಮಿಯ ಅಧ್ಯಾಯ 4  
  • ಯೆರೆಮಿಯ ಅಧ್ಯಾಯ 5  
  • ಯೆರೆಮಿಯ ಅಧ್ಯಾಯ 6  
  • ಯೆರೆಮಿಯ ಅಧ್ಯಾಯ 7  
  • ಯೆರೆಮಿಯ ಅಧ್ಯಾಯ 8  
  • ಯೆರೆಮಿಯ ಅಧ್ಯಾಯ 9  
  • ಯೆರೆಮಿಯ ಅಧ್ಯಾಯ 10  
  • ಯೆರೆಮಿಯ ಅಧ್ಯಾಯ 11  
  • ಯೆರೆಮಿಯ ಅಧ್ಯಾಯ 12  
  • ಯೆರೆಮಿಯ ಅಧ್ಯಾಯ 13  
  • ಯೆರೆಮಿಯ ಅಧ್ಯಾಯ 14  
  • ಯೆರೆಮಿಯ ಅಧ್ಯಾಯ 15  
  • ಯೆರೆಮಿಯ ಅಧ್ಯಾಯ 16  
  • ಯೆರೆಮಿಯ ಅಧ್ಯಾಯ 17  
  • ಯೆರೆಮಿಯ ಅಧ್ಯಾಯ 18  
  • ಯೆರೆಮಿಯ ಅಧ್ಯಾಯ 19  
  • ಯೆರೆಮಿಯ ಅಧ್ಯಾಯ 20  
  • ಯೆರೆಮಿಯ ಅಧ್ಯಾಯ 21  
  • ಯೆರೆಮಿಯ ಅಧ್ಯಾಯ 22  
  • ಯೆರೆಮಿಯ ಅಧ್ಯಾಯ 23  
  • ಯೆರೆಮಿಯ ಅಧ್ಯಾಯ 24  
  • ಯೆರೆಮಿಯ ಅಧ್ಯಾಯ 25  
  • ಯೆರೆಮಿಯ ಅಧ್ಯಾಯ 26  
  • ಯೆರೆಮಿಯ ಅಧ್ಯಾಯ 27  
  • ಯೆರೆಮಿಯ ಅಧ್ಯಾಯ 28  
  • ಯೆರೆಮಿಯ ಅಧ್ಯಾಯ 29  
  • ಯೆರೆಮಿಯ ಅಧ್ಯಾಯ 30  
  • ಯೆರೆಮಿಯ ಅಧ್ಯಾಯ 31  
  • ಯೆರೆಮಿಯ ಅಧ್ಯಾಯ 32  
  • ಯೆರೆಮಿಯ ಅಧ್ಯಾಯ 33  
  • ಯೆರೆಮಿಯ ಅಧ್ಯಾಯ 34  
  • ಯೆರೆಮಿಯ ಅಧ್ಯಾಯ 35  
  • ಯೆರೆಮಿಯ ಅಧ್ಯಾಯ 36  
  • ಯೆರೆಮಿಯ ಅಧ್ಯಾಯ 37  
  • ಯೆರೆಮಿಯ ಅಧ್ಯಾಯ 38  
  • ಯೆರೆಮಿಯ ಅಧ್ಯಾಯ 39  
  • ಯೆರೆಮಿಯ ಅಧ್ಯಾಯ 40  
  • ಯೆರೆಮಿಯ ಅಧ್ಯಾಯ 41  
  • ಯೆರೆಮಿಯ ಅಧ್ಯಾಯ 42  
  • ಯೆರೆಮಿಯ ಅಧ್ಯಾಯ 43  
  • ಯೆರೆಮಿಯ ಅಧ್ಯಾಯ 44  
  • ಯೆರೆಮಿಯ ಅಧ್ಯಾಯ 45  
  • ಯೆರೆಮಿಯ ಅಧ್ಯಾಯ 46  
  • ಯೆರೆಮಿಯ ಅಧ್ಯಾಯ 47  
  • ಯೆರೆಮಿಯ ಅಧ್ಯಾಯ 48  
  • ಯೆರೆಮಿಯ ಅಧ್ಯಾಯ 49  
  • ಯೆರೆಮಿಯ ಅಧ್ಯಾಯ 50  
  • ಯೆರೆಮಿಯ ಅಧ್ಯಾಯ 51  
  • ಯೆರೆಮಿಯ ಅಧ್ಯಾಯ 52  
×

Alert

×

Kannada Letters Keypad References