ಪವಿತ್ರ ಬೈಬಲ್

ಓಪನ್ ಸಮಕಾಲೀನ ಆವೃತ್ತಿ (OCV)
ಕೀರ್ತನೆಗಳು

ಕೀರ್ತನೆಗಳು ಅಧ್ಯಾಯ 69

1 ದೇವರೇ, ನನ್ನನ್ನು ರಕ್ಷಿಸಿರಿ. ಏಕೆಂದರೆ, ಪ್ರವಾಹ ಕುತ್ತಿಗೆಯ ವರೆಗೆ ಬಂದಿದೆ. 2 ನೆಲವಿಲ್ಲದಿರುವ ಆಳವಾದ ಕೆಸರಿನಲ್ಲಿ ನಾನು ಮುಳುಗುತ್ತಿದ್ದೇನೆ. ಪ್ರವಾಹಗಳು ನನ್ನ ಮೇಲೆ ಹಾದುಹೋಗುವ ನೀರಿನ ಅಗಾಧಕ್ಕೆ ನಾನು ಬಂದಿದ್ದೇನೆ. 3 ನಾನು ಮೊರೆಯಿಟ್ಟು ದಣಿದಿದ್ದೇನೆ. ನನ್ನ ಗಂಟಲು ಒಣಗಿದೆ. ನಾನು ದೇವರನ್ನು ಎದುರು ನೋಡುವುದರಿಂದ ನನ್ನ ಕಣ್ಣು ಕ್ಷೀಣವಾಗಿವೆ. 4 ಕಾರಣವಿಲ್ಲದೆ ನನ್ನನ್ನು ದ್ವೇಷಿಸುವವರು ನನ್ನ ತಲೆಗೂದಲುಗಳಿಗಿಂತ ಹೆಚ್ಚಾಗಿದ್ದಾರೆ. ನನ್ನನ್ನು ನಾಶಮಾಡ ಬಯಸುವವರೂ ಕಾರಣವಿಲ್ಲದೆ ನನಗೆ ಶತ್ರುಗಳಾಗಿದ್ದಾರೆ. ನಾನು ಅಪಹರಿಸದಿದ್ದರೂ ದಂಡ ಕೊಡಬೇಕಾಯಿತು. 5 ದೇವರೇ, ನೀವು ನನ್ನ ಮೂರ್ಖತನವನ್ನು ತಿಳಿದಿದ್ದೀರಿ. ನನ್ನ ಅಪರಾಧಗಳು ನಿಮಗೆ ಮರೆಯಾಗಿಲ್ಲ. 6 ಸೇನಾಧೀಶ್ವರ ಯೆಹೋವ ದೇವರೇ, ನಿಮ್ಮನ್ನು ನಂಬಿದವರಿಗೆ ನನ್ನಿಂದ ನಿರಾಶೆಯಾಗದಿರಲಿ; ಇಸ್ರಾಯೇಲರ ದೇವರೇ, ನಿಮ್ನನ್ನು ಹುಡುಕುವವರು ನನ್ನಿಂದ ಅಪಮಾನಕ್ಕೆ ಗುರಿಯಾಗದಿರಲಿ. 7 ನಾನು ನಿಮ್ಮ ನಿಮಿತ್ತ ನಿಂದೆಗೆ ಒಳಗಾಗಿದ್ದೇನೆ. ಅವಮಾನವು ನನ್ನ ಮುಖವನ್ನು ಮುಚ್ಚಿದೆ. 8 ನನ್ನ ಸಹೋದರರಿಗೆ ಅನ್ಯನಾಗಿದ್ದೇನೆ. ನನ್ನ ಒಡಹುಟ್ಟಿದವರಿಗೇ ಪರಕೀಯನಾಗಿದ್ದೇನೆ. 9 ಏಕೆಂದರೆ ನಿಮ್ಮ ಆಲಯದ ಮೇಲಿನ ಆಸಕ್ತಿಯು ಬೆಂಕಿಯಂತೆ ನನ್ನನ್ನು ದಹಿಸಿಬಿಟ್ಟಿದೆ. ನಿಮ್ಮನ್ನು ನಿಂದಿಸುವವರ ನಿಂದೆಗಳು ನನ್ನ ಮೇಲೆ ಬಿದ್ದಿವೆ. 10 ನಾನು ಅತ್ತು ಉಪವಾಸ ಮಾಡಿದಾಗ ನಿಂದೆಗೆ ಒಳಗಾಗಬೇಕಾಯಿತು. 11 ಗೋಣಿತಟ್ಟನ್ನು ನನ್ನ ಉಡುಪಾಗಿ ಮಾಡಿಕೊಂಡಿದ್ದೇನೆ. ಇದರಿಂದ ನಾನು ಅವರಿಗೆ ಗಾದೆಯ ಮಾತಾದೆನು. 12 ಊರುಬಾಗಿಲಲ್ಲಿ ಕೂತುಕೊಳ್ಳುವವರು ಪರಿಹಾಸ್ಯ ಮಾಡುತ್ತಾರೆ. ನಾನು ಮದ್ಯಪಾನಿಗಳಿಗೆ ಗಾಯನ ವಿಷಯವಾಗಿದ್ದೇನೆ. 13 ಯೆಹೋವ ದೇವರೇ, ನಾನಾದರೋ ನಿಮಗೆ ಮೊರೆಯಿಟ್ಟಿದ್ದೇನೆ. ಇದು ನಿಮ್ಮ ಮೆಚ್ಚಿಕೆಯ ಸಕಾಲ. ಓ ದೇವರೇ, ನಿಮ್ಮ ಮಹಾಪ್ರೀತಿಯಿಂದ ನನಗೆ ನಿಮ್ಮ ನಿಶ್ಚಯ ರಕ್ಷಣೆಯನ್ನು ದಯಪಾಲಿಸಿರಿ. 14 ನನ್ನನ್ನು ಕೆಸರಿನೊಳಗಿಂದ ಬಿಡಿಸಿರಿ. ನಾನು ಮುಳುಗದೆ ಇರಲಿ. ನನ್ನನ್ನು ದ್ವೇಷಿಸಿಸುವವರಿಂದಲೂ ನೀರಿನ ಅಗಾಧದಿಂದಲೂ ನನಗೆ ಬಿಡುಗಡೆ ಆಗಲಿ. 15 ನೀರಿನ ಪ್ರವಾಹವು ನನ್ನ ಮೇಲೆ ಹಾದುಹೋಗದೆ ಇರಲಿ. ಅಗಾಧವು ನನ್ನನ್ನು ನುಂಗದೆ ಇರಲಿ. ಕುಣಿಯು ನನ್ನ ಮೇಲೆ ತನ್ನ ಬಾಯನ್ನು ಮುಚ್ಚದೆ ಇರಲಿ. 16 ಯೆಹೋವ ದೇವರೇ, ನಿಮ್ಮ ಪ್ರೀತಿಯ ಒಳ್ಳೆಯತನದಿಂದ ನನಗೆ ಉತ್ತರಕೊಡಿರಿ. ನಿಮ್ಮ ಮಹಾ ಕರುಣೆಯಿಂದ ನನ್ನ ಕಡೆಗೆ ತಿರುಗಿರಿ. 17 ನಿಮ್ಮ ಮುಖವನ್ನು ನಿಮ್ಮ ಸೇವಕನಿಗೆ ಮರೆಮಾಡಬೇಡಿರಿ. ನಾನು ಇಕ್ಕಟ್ಟಿನಲ್ಲಿದ್ದೇನೆ. ಬೇಗ ನನಗೆ ಉತ್ತರಕೊಡಿರಿ. 18 ನನಗೆ ಸಮೀಪವಾಗಿ ನನ್ನನ್ನು ಕಾಪಾಡಿರಿ. ನನ್ನ ಶತ್ರುಗಳ ನಿಮಿತ್ತ ನನ್ನನ್ನು ಬಿಡಿಸಿರಿ. 19 ನೀವು ನನಗಿರುವ ನಿಂದೆ, ನಾಚಿಕೆ ಹಾಗೂ ನನ್ನ ಅವಮಾನವನ್ನೂ ತಿಳಿದಿದ್ದೀರಿ. ನನ್ನ ವೈರಿಗಳೆಲ್ಲರು ನಿಮ್ಮ ಮುಂದೆ ಇದ್ದಾರೆ. 20 ನಿಂದೆಯು ನನ್ನ ಹೃದಯವನ್ನು ಮುರಿದಿದೆ. ನನ್ನನ್ನು ನಿಸ್ಸಹಾಯಕನನ್ನಾಗಿ ಮಾಡಿದೆ. ಅನುತಾಪಕ್ಕೋಸ್ಕರ ಕೆಲವರನ್ನು ನಿರೀಕ್ಷಿಸಿದೆನು, ಆದರೆ ಒಬ್ಬರೂ ಇರಲಿಲ್ಲ. ಸಂತೈಸುವವರಿಗೋಸ್ಕರ ಸಹ ಎದುರು ನೋಡಿದೆನು, ಆದರೆ ಯಾರೂ ಸಿಕ್ಕಲಿಲ್ಲ. 21 ನನ್ನ ಆಹಾರಕ್ಕಾಗಿ ಕಹಿಯಾದದ್ದನ್ನು ಕೊಟ್ಟರು. ನನ್ನ ದಾಹಕ್ಕಾಗಿ ನನಗೆ ಹುಳಿರಸವನ್ನು ಕುಡಿಯಲು ಕೊಟ್ಟರು. 22 ಅವರ ಊಟವೇ ಅವರಿಗೆ ಉರುಲಾಗಲಿ. ಸುಖವಾಗಿರುವವರಿಗೆ ಅದು ಬೋನಾಗಲಿ. 23 ಅವರ ಕಣ್ಣುಗಳು ಕಾಣದ ಹಾಗೆ ಕತ್ತಲಾಗಲಿ. ಮತ್ತು ಅವರ ಬೆನ್ನು ಎಂದೆಂದಿಗೂ ಬಗ್ಗಿ ಹೋಗಲಿ 24 ಅವರು ಕೋಪಕ್ಕೆ ಗುರಿಯಾಗಲಿ. ಅವರು ಬೇಸರಕ್ಕೆ ತುತ್ತಾಗಲಿ. 25 ಅವರ ವಾಸಸ್ಥಾನವು ಹಾಳಾಗಲಿ; ಅವರ ಗುಡಾರಗಳಲ್ಲಿ ನಿವಾಸಿಯು ಇಲ್ಲದೆ ಹೋಗಲಿ. 26 ನೀವು ಗಾಯಮಾಡಿದ ನನ್ನನ್ನು ಹಿಂಸಿಸುತ್ತಾರೆ. ನೀವು ನೋಯಿಸಿದ ನನ್ನನ್ನು ಕುರಿತು ಚುಚ್ಚಿಮಾತನಾಡಿಕೊಳ್ಳುತ್ತಾರೆ. 27 ಅಪರಾಧದ ಮೇಲೆ ಅಪರಾಧವು ಅವರ ಮೇಲೆ ಬರಲಿ. ಅವರು ನಿಮ್ಮ ರಕ್ಷಣೆಯಲ್ಲಿ ಸೇರದೆ ಇರಲಿ. 28 ಜೀವಪುಸ್ತಕದೊಳಗಿಂದ ಅವರ ಹೆಸರು ಅಳಿದು ಹೋಗಲಿ. ನೀತಿವಂತರ ಸಂಗಡ ಅವರ ಹೆಸರು ಬರೆಯದೆ ಇರಲಿ. 29 ದೇವರೇ, ನಾನು ನೊಂದು ವ್ಯಥೆಗೊಂಡಿದ್ದೇನೆ. ನಿಮ್ಮ ರಕ್ಷಣೆಯು ನನ್ನನ್ನು ಕಾಪಾಡಲಿ. 30 ನಾನು ದೇವರ ಹೆಸರನ್ನು ಹಾಡಿ ಸ್ತುತಿಸುವೆನು. ಸ್ತೋತ್ರದಿಂದ ದೇವರನ್ನು ಸ್ತುತಿಸುವೆನು. 31 ಅದು ಯೆಹೋವ ದೇವರಿಗೆ ಎಳೆಯ ಎತ್ತು ಯಜ್ಞಗಳಿಗಿಂತ, ಕೊಂಬೂ ಗೊರಸುಗಳುಳ್ಳ ಹೋರಿಗಳಿಗಿಂತ ಮೆಚ್ಚಿಕೆಯಾಗಿರುವುದು. 32 ಇದನ್ನು ದೀನರು ಕಂಡು ಸಂತೋಷಪಡುವರು. ದೇವರನ್ನು ಹುಡುಕುವವರೇ, ನಿಮ್ಮ ಹೃದಯವು ಚೈತನ್ಯಗೊಳ್ಳಲಿ. 33 ಯೆಹೋವ ದೇವರು ಬಡವರ ಮೊರೆಗೆ ಕಿವಿಗೊಡುತ್ತಾರೆ. ಸೆರೆಯಲ್ಲಿರುವ ತಮ್ಮ ಜನರನ್ನು ತಿರಸ್ಕರಿಸುವುದಿಲ್ಲ. 34 ಆಕಾಶವೂ ಭೂಮಿಯೂ ಸಮುದ್ರಗಳೂ, ಅವುಗಳಲ್ಲಿ ಸಂಚರಿಸುವುದೆಲ್ಲವೂ ದೇವರನ್ನು ಸ್ತುತಿಸಲಿ. 35 ದೇವರು ಚೀಯೋನನ್ನು ರಕ್ಷಿಸುವರು. ದೇವರು ಯೆಹೂದದ ಪಟ್ಟಣಗಳನ್ನು ಕಟ್ಟುವರು. ಜನರು ಅಲ್ಲಿ ವಾಸಮಾಡಿ, ಅದನ್ನು ಸ್ವಾಧೀನಮಾಡಿಕೊಳ್ಳುವರು. 2 ದೇವರ ಸೇವಕರ ಸಂತತಿಯು ಅದನ್ನು ಬಾಧ್ಯವಾಗಿ ಹೊಂದುವುದು. ದೇವರ ಹೆಸರನ್ನು ಪ್ರೀತಿಸುವವರು ಅದರಲ್ಲಿ ವಾಸಮಾಡುವರು.
1. ದೇವರೇ, ನನ್ನನ್ನು ರಕ್ಷಿಸಿರಿ. ಏಕೆಂದರೆ, ಪ್ರವಾಹ ಕುತ್ತಿಗೆಯ ವರೆಗೆ ಬಂದಿದೆ. 2. ನೆಲವಿಲ್ಲದಿರುವ ಆಳವಾದ ಕೆಸರಿನಲ್ಲಿ ನಾನು ಮುಳುಗುತ್ತಿದ್ದೇನೆ. ಪ್ರವಾಹಗಳು ನನ್ನ ಮೇಲೆ ಹಾದುಹೋಗುವ ನೀರಿನ ಅಗಾಧಕ್ಕೆ ನಾನು ಬಂದಿದ್ದೇನೆ. 3. ನಾನು ಮೊರೆಯಿಟ್ಟು ದಣಿದಿದ್ದೇನೆ. ನನ್ನ ಗಂಟಲು ಒಣಗಿದೆ. ನಾನು ದೇವರನ್ನು ಎದುರು ನೋಡುವುದರಿಂದ ನನ್ನ ಕಣ್ಣು ಕ್ಷೀಣವಾಗಿವೆ. 4. ಕಾರಣವಿಲ್ಲದೆ ನನ್ನನ್ನು ದ್ವೇಷಿಸುವವರು ನನ್ನ ತಲೆಗೂದಲುಗಳಿಗಿಂತ ಹೆಚ್ಚಾಗಿದ್ದಾರೆ. ನನ್ನನ್ನು ನಾಶಮಾಡ ಬಯಸುವವರೂ ಕಾರಣವಿಲ್ಲದೆ ನನಗೆ ಶತ್ರುಗಳಾಗಿದ್ದಾರೆ. ನಾನು ಅಪಹರಿಸದಿದ್ದರೂ ದಂಡ ಕೊಡಬೇಕಾಯಿತು. 5. ದೇವರೇ, ನೀವು ನನ್ನ ಮೂರ್ಖತನವನ್ನು ತಿಳಿದಿದ್ದೀರಿ. ನನ್ನ ಅಪರಾಧಗಳು ನಿಮಗೆ ಮರೆಯಾಗಿಲ್ಲ. 6. ಸೇನಾಧೀಶ್ವರ ಯೆಹೋವ ದೇವರೇ, ನಿಮ್ಮನ್ನು ನಂಬಿದವರಿಗೆ ನನ್ನಿಂದ ನಿರಾಶೆಯಾಗದಿರಲಿ; ಇಸ್ರಾಯೇಲರ ದೇವರೇ, ನಿಮ್ನನ್ನು ಹುಡುಕುವವರು ನನ್ನಿಂದ ಅಪಮಾನಕ್ಕೆ ಗುರಿಯಾಗದಿರಲಿ. 7. ನಾನು ನಿಮ್ಮ ನಿಮಿತ್ತ ನಿಂದೆಗೆ ಒಳಗಾಗಿದ್ದೇನೆ. ಅವಮಾನವು ನನ್ನ ಮುಖವನ್ನು ಮುಚ್ಚಿದೆ. 8. ನನ್ನ ಸಹೋದರರಿಗೆ ಅನ್ಯನಾಗಿದ್ದೇನೆ. ನನ್ನ ಒಡಹುಟ್ಟಿದವರಿಗೇ ಪರಕೀಯನಾಗಿದ್ದೇನೆ. 9. ಏಕೆಂದರೆ ನಿಮ್ಮ ಆಲಯದ ಮೇಲಿನ ಆಸಕ್ತಿಯು ಬೆಂಕಿಯಂತೆ ನನ್ನನ್ನು ದಹಿಸಿಬಿಟ್ಟಿದೆ. ನಿಮ್ಮನ್ನು ನಿಂದಿಸುವವರ ನಿಂದೆಗಳು ನನ್ನ ಮೇಲೆ ಬಿದ್ದಿವೆ. 10. ನಾನು ಅತ್ತು ಉಪವಾಸ ಮಾಡಿದಾಗ ನಿಂದೆಗೆ ಒಳಗಾಗಬೇಕಾಯಿತು. 11. ಗೋಣಿತಟ್ಟನ್ನು ನನ್ನ ಉಡುಪಾಗಿ ಮಾಡಿಕೊಂಡಿದ್ದೇನೆ. ಇದರಿಂದ ನಾನು ಅವರಿಗೆ ಗಾದೆಯ ಮಾತಾದೆನು. 12. ಊರುಬಾಗಿಲಲ್ಲಿ ಕೂತುಕೊಳ್ಳುವವರು ಪರಿಹಾಸ್ಯ ಮಾಡುತ್ತಾರೆ. ನಾನು ಮದ್ಯಪಾನಿಗಳಿಗೆ ಗಾಯನ ವಿಷಯವಾಗಿದ್ದೇನೆ. 13. ಯೆಹೋವ ದೇವರೇ, ನಾನಾದರೋ ನಿಮಗೆ ಮೊರೆಯಿಟ್ಟಿದ್ದೇನೆ. ಇದು ನಿಮ್ಮ ಮೆಚ್ಚಿಕೆಯ ಸಕಾಲ. ಓ ದೇವರೇ, ನಿಮ್ಮ ಮಹಾಪ್ರೀತಿಯಿಂದ ನನಗೆ ನಿಮ್ಮ ನಿಶ್ಚಯ ರಕ್ಷಣೆಯನ್ನು ದಯಪಾಲಿಸಿರಿ. 14. ನನ್ನನ್ನು ಕೆಸರಿನೊಳಗಿಂದ ಬಿಡಿಸಿರಿ. ನಾನು ಮುಳುಗದೆ ಇರಲಿ. ನನ್ನನ್ನು ದ್ವೇಷಿಸಿಸುವವರಿಂದಲೂ ನೀರಿನ ಅಗಾಧದಿಂದಲೂ ನನಗೆ ಬಿಡುಗಡೆ ಆಗಲಿ. 15. ನೀರಿನ ಪ್ರವಾಹವು ನನ್ನ ಮೇಲೆ ಹಾದುಹೋಗದೆ ಇರಲಿ. ಅಗಾಧವು ನನ್ನನ್ನು ನುಂಗದೆ ಇರಲಿ. ಕುಣಿಯು ನನ್ನ ಮೇಲೆ ತನ್ನ ಬಾಯನ್ನು ಮುಚ್ಚದೆ ಇರಲಿ. 16. ಯೆಹೋವ ದೇವರೇ, ನಿಮ್ಮ ಪ್ರೀತಿಯ ಒಳ್ಳೆಯತನದಿಂದ ನನಗೆ ಉತ್ತರಕೊಡಿರಿ. ನಿಮ್ಮ ಮಹಾ ಕರುಣೆಯಿಂದ ನನ್ನ ಕಡೆಗೆ ತಿರುಗಿರಿ. 17. ನಿಮ್ಮ ಮುಖವನ್ನು ನಿಮ್ಮ ಸೇವಕನಿಗೆ ಮರೆಮಾಡಬೇಡಿರಿ. ನಾನು ಇಕ್ಕಟ್ಟಿನಲ್ಲಿದ್ದೇನೆ. ಬೇಗ ನನಗೆ ಉತ್ತರಕೊಡಿರಿ. 18. ನನಗೆ ಸಮೀಪವಾಗಿ ನನ್ನನ್ನು ಕಾಪಾಡಿರಿ. ನನ್ನ ಶತ್ರುಗಳ ನಿಮಿತ್ತ ನನ್ನನ್ನು ಬಿಡಿಸಿರಿ. 19. ನೀವು ನನಗಿರುವ ನಿಂದೆ, ನಾಚಿಕೆ ಹಾಗೂ ನನ್ನ ಅವಮಾನವನ್ನೂ ತಿಳಿದಿದ್ದೀರಿ. ನನ್ನ ವೈರಿಗಳೆಲ್ಲರು ನಿಮ್ಮ ಮುಂದೆ ಇದ್ದಾರೆ. 20. ನಿಂದೆಯು ನನ್ನ ಹೃದಯವನ್ನು ಮುರಿದಿದೆ. ನನ್ನನ್ನು ನಿಸ್ಸಹಾಯಕನನ್ನಾಗಿ ಮಾಡಿದೆ. ಅನುತಾಪಕ್ಕೋಸ್ಕರ ಕೆಲವರನ್ನು ನಿರೀಕ್ಷಿಸಿದೆನು, ಆದರೆ ಒಬ್ಬರೂ ಇರಲಿಲ್ಲ. ಸಂತೈಸುವವರಿಗೋಸ್ಕರ ಸಹ ಎದುರು ನೋಡಿದೆನು, ಆದರೆ ಯಾರೂ ಸಿಕ್ಕಲಿಲ್ಲ. 21. ನನ್ನ ಆಹಾರಕ್ಕಾಗಿ ಕಹಿಯಾದದ್ದನ್ನು ಕೊಟ್ಟರು. ನನ್ನ ದಾಹಕ್ಕಾಗಿ ನನಗೆ ಹುಳಿರಸವನ್ನು ಕುಡಿಯಲು ಕೊಟ್ಟರು. 22. ಅವರ ಊಟವೇ ಅವರಿಗೆ ಉರುಲಾಗಲಿ. ಸುಖವಾಗಿರುವವರಿಗೆ ಅದು ಬೋನಾಗಲಿ. 23. ಅವರ ಕಣ್ಣುಗಳು ಕಾಣದ ಹಾಗೆ ಕತ್ತಲಾಗಲಿ. ಮತ್ತು ಅವರ ಬೆನ್ನು ಎಂದೆಂದಿಗೂ ಬಗ್ಗಿ ಹೋಗಲಿ 24. ಅವರು ಕೋಪಕ್ಕೆ ಗುರಿಯಾಗಲಿ. ಅವರು ಬೇಸರಕ್ಕೆ ತುತ್ತಾಗಲಿ. 25. ಅವರ ವಾಸಸ್ಥಾನವು ಹಾಳಾಗಲಿ; ಅವರ ಗುಡಾರಗಳಲ್ಲಿ ನಿವಾಸಿಯು ಇಲ್ಲದೆ ಹೋಗಲಿ. 26. ನೀವು ಗಾಯಮಾಡಿದ ನನ್ನನ್ನು ಹಿಂಸಿಸುತ್ತಾರೆ. ನೀವು ನೋಯಿಸಿದ ನನ್ನನ್ನು ಕುರಿತು ಚುಚ್ಚಿಮಾತನಾಡಿಕೊಳ್ಳುತ್ತಾರೆ. 27. ಅಪರಾಧದ ಮೇಲೆ ಅಪರಾಧವು ಅವರ ಮೇಲೆ ಬರಲಿ. ಅವರು ನಿಮ್ಮ ರಕ್ಷಣೆಯಲ್ಲಿ ಸೇರದೆ ಇರಲಿ. 28. ಜೀವಪುಸ್ತಕದೊಳಗಿಂದ ಅವರ ಹೆಸರು ಅಳಿದು ಹೋಗಲಿ. ನೀತಿವಂತರ ಸಂಗಡ ಅವರ ಹೆಸರು ಬರೆಯದೆ ಇರಲಿ. 29. ದೇವರೇ, ನಾನು ನೊಂದು ವ್ಯಥೆಗೊಂಡಿದ್ದೇನೆ. ನಿಮ್ಮ ರಕ್ಷಣೆಯು ನನ್ನನ್ನು ಕಾಪಾಡಲಿ. 30. ನಾನು ದೇವರ ಹೆಸರನ್ನು ಹಾಡಿ ಸ್ತುತಿಸುವೆನು. ಸ್ತೋತ್ರದಿಂದ ದೇವರನ್ನು ಸ್ತುತಿಸುವೆನು. 31. ಅದು ಯೆಹೋವ ದೇವರಿಗೆ ಎಳೆಯ ಎತ್ತು ಯಜ್ಞಗಳಿಗಿಂತ, ಕೊಂಬೂ ಗೊರಸುಗಳುಳ್ಳ ಹೋರಿಗಳಿಗಿಂತ ಮೆಚ್ಚಿಕೆಯಾಗಿರುವುದು. 32. ಇದನ್ನು ದೀನರು ಕಂಡು ಸಂತೋಷಪಡುವರು. ದೇವರನ್ನು ಹುಡುಕುವವರೇ, ನಿಮ್ಮ ಹೃದಯವು ಚೈತನ್ಯಗೊಳ್ಳಲಿ. 33. ಯೆಹೋವ ದೇವರು ಬಡವರ ಮೊರೆಗೆ ಕಿವಿಗೊಡುತ್ತಾರೆ. ಸೆರೆಯಲ್ಲಿರುವ ತಮ್ಮ ಜನರನ್ನು ತಿರಸ್ಕರಿಸುವುದಿಲ್ಲ. 34. ಆಕಾಶವೂ ಭೂಮಿಯೂ ಸಮುದ್ರಗಳೂ, ಅವುಗಳಲ್ಲಿ ಸಂಚರಿಸುವುದೆಲ್ಲವೂ ದೇವರನ್ನು ಸ್ತುತಿಸಲಿ. 35. ದೇವರು ಚೀಯೋನನ್ನು ರಕ್ಷಿಸುವರು. ದೇವರು ಯೆಹೂದದ ಪಟ್ಟಣಗಳನ್ನು ಕಟ್ಟುವರು. ಜನರು ಅಲ್ಲಿ ವಾಸಮಾಡಿ, ಅದನ್ನು ಸ್ವಾಧೀನಮಾಡಿಕೊಳ್ಳುವರು. 2. ದೇವರ ಸೇವಕರ ಸಂತತಿಯು ಅದನ್ನು ಬಾಧ್ಯವಾಗಿ ಹೊಂದುವುದು. ದೇವರ ಹೆಸರನ್ನು ಪ್ರೀತಿಸುವವರು ಅದರಲ್ಲಿ ವಾಸಮಾಡುವರು.
  • ಕೀರ್ತನೆಗಳು ಅಧ್ಯಾಯ 1  
  • ಕೀರ್ತನೆಗಳು ಅಧ್ಯಾಯ 2  
  • ಕೀರ್ತನೆಗಳು ಅಧ್ಯಾಯ 3  
  • ಕೀರ್ತನೆಗಳು ಅಧ್ಯಾಯ 4  
  • ಕೀರ್ತನೆಗಳು ಅಧ್ಯಾಯ 5  
  • ಕೀರ್ತನೆಗಳು ಅಧ್ಯಾಯ 6  
  • ಕೀರ್ತನೆಗಳು ಅಧ್ಯಾಯ 7  
  • ಕೀರ್ತನೆಗಳು ಅಧ್ಯಾಯ 8  
  • ಕೀರ್ತನೆಗಳು ಅಧ್ಯಾಯ 9  
  • ಕೀರ್ತನೆಗಳು ಅಧ್ಯಾಯ 10  
  • ಕೀರ್ತನೆಗಳು ಅಧ್ಯಾಯ 11  
  • ಕೀರ್ತನೆಗಳು ಅಧ್ಯಾಯ 12  
  • ಕೀರ್ತನೆಗಳು ಅಧ್ಯಾಯ 13  
  • ಕೀರ್ತನೆಗಳು ಅಧ್ಯಾಯ 14  
  • ಕೀರ್ತನೆಗಳು ಅಧ್ಯಾಯ 15  
  • ಕೀರ್ತನೆಗಳು ಅಧ್ಯಾಯ 16  
  • ಕೀರ್ತನೆಗಳು ಅಧ್ಯಾಯ 17  
  • ಕೀರ್ತನೆಗಳು ಅಧ್ಯಾಯ 18  
  • ಕೀರ್ತನೆಗಳು ಅಧ್ಯಾಯ 19  
  • ಕೀರ್ತನೆಗಳು ಅಧ್ಯಾಯ 20  
  • ಕೀರ್ತನೆಗಳು ಅಧ್ಯಾಯ 21  
  • ಕೀರ್ತನೆಗಳು ಅಧ್ಯಾಯ 22  
  • ಕೀರ್ತನೆಗಳು ಅಧ್ಯಾಯ 23  
  • ಕೀರ್ತನೆಗಳು ಅಧ್ಯಾಯ 24  
  • ಕೀರ್ತನೆಗಳು ಅಧ್ಯಾಯ 25  
  • ಕೀರ್ತನೆಗಳು ಅಧ್ಯಾಯ 26  
  • ಕೀರ್ತನೆಗಳು ಅಧ್ಯಾಯ 27  
  • ಕೀರ್ತನೆಗಳು ಅಧ್ಯಾಯ 28  
  • ಕೀರ್ತನೆಗಳು ಅಧ್ಯಾಯ 29  
  • ಕೀರ್ತನೆಗಳು ಅಧ್ಯಾಯ 30  
  • ಕೀರ್ತನೆಗಳು ಅಧ್ಯಾಯ 31  
  • ಕೀರ್ತನೆಗಳು ಅಧ್ಯಾಯ 32  
  • ಕೀರ್ತನೆಗಳು ಅಧ್ಯಾಯ 33  
  • ಕೀರ್ತನೆಗಳು ಅಧ್ಯಾಯ 34  
  • ಕೀರ್ತನೆಗಳು ಅಧ್ಯಾಯ 35  
  • ಕೀರ್ತನೆಗಳು ಅಧ್ಯಾಯ 36  
  • ಕೀರ್ತನೆಗಳು ಅಧ್ಯಾಯ 37  
  • ಕೀರ್ತನೆಗಳು ಅಧ್ಯಾಯ 38  
  • ಕೀರ್ತನೆಗಳು ಅಧ್ಯಾಯ 39  
  • ಕೀರ್ತನೆಗಳು ಅಧ್ಯಾಯ 40  
  • ಕೀರ್ತನೆಗಳು ಅಧ್ಯಾಯ 41  
  • ಕೀರ್ತನೆಗಳು ಅಧ್ಯಾಯ 42  
  • ಕೀರ್ತನೆಗಳು ಅಧ್ಯಾಯ 43  
  • ಕೀರ್ತನೆಗಳು ಅಧ್ಯಾಯ 44  
  • ಕೀರ್ತನೆಗಳು ಅಧ್ಯಾಯ 45  
  • ಕೀರ್ತನೆಗಳು ಅಧ್ಯಾಯ 46  
  • ಕೀರ್ತನೆಗಳು ಅಧ್ಯಾಯ 47  
  • ಕೀರ್ತನೆಗಳು ಅಧ್ಯಾಯ 48  
  • ಕೀರ್ತನೆಗಳು ಅಧ್ಯಾಯ 49  
  • ಕೀರ್ತನೆಗಳು ಅಧ್ಯಾಯ 50  
  • ಕೀರ್ತನೆಗಳು ಅಧ್ಯಾಯ 51  
  • ಕೀರ್ತನೆಗಳು ಅಧ್ಯಾಯ 52  
  • ಕೀರ್ತನೆಗಳು ಅಧ್ಯಾಯ 53  
  • ಕೀರ್ತನೆಗಳು ಅಧ್ಯಾಯ 54  
  • ಕೀರ್ತನೆಗಳು ಅಧ್ಯಾಯ 55  
  • ಕೀರ್ತನೆಗಳು ಅಧ್ಯಾಯ 56  
  • ಕೀರ್ತನೆಗಳು ಅಧ್ಯಾಯ 57  
  • ಕೀರ್ತನೆಗಳು ಅಧ್ಯಾಯ 58  
  • ಕೀರ್ತನೆಗಳು ಅಧ್ಯಾಯ 59  
  • ಕೀರ್ತನೆಗಳು ಅಧ್ಯಾಯ 60  
  • ಕೀರ್ತನೆಗಳು ಅಧ್ಯಾಯ 61  
  • ಕೀರ್ತನೆಗಳು ಅಧ್ಯಾಯ 62  
  • ಕೀರ್ತನೆಗಳು ಅಧ್ಯಾಯ 63  
  • ಕೀರ್ತನೆಗಳು ಅಧ್ಯಾಯ 64  
  • ಕೀರ್ತನೆಗಳು ಅಧ್ಯಾಯ 65  
  • ಕೀರ್ತನೆಗಳು ಅಧ್ಯಾಯ 66  
  • ಕೀರ್ತನೆಗಳು ಅಧ್ಯಾಯ 67  
  • ಕೀರ್ತನೆಗಳು ಅಧ್ಯಾಯ 68  
  • ಕೀರ್ತನೆಗಳು ಅಧ್ಯಾಯ 69  
  • ಕೀರ್ತನೆಗಳು ಅಧ್ಯಾಯ 70  
  • ಕೀರ್ತನೆಗಳು ಅಧ್ಯಾಯ 71  
  • ಕೀರ್ತನೆಗಳು ಅಧ್ಯಾಯ 72  
  • ಕೀರ್ತನೆಗಳು ಅಧ್ಯಾಯ 73  
  • ಕೀರ್ತನೆಗಳು ಅಧ್ಯಾಯ 74  
  • ಕೀರ್ತನೆಗಳು ಅಧ್ಯಾಯ 75  
  • ಕೀರ್ತನೆಗಳು ಅಧ್ಯಾಯ 76  
  • ಕೀರ್ತನೆಗಳು ಅಧ್ಯಾಯ 77  
  • ಕೀರ್ತನೆಗಳು ಅಧ್ಯಾಯ 78  
  • ಕೀರ್ತನೆಗಳು ಅಧ್ಯಾಯ 79  
  • ಕೀರ್ತನೆಗಳು ಅಧ್ಯಾಯ 80  
  • ಕೀರ್ತನೆಗಳು ಅಧ್ಯಾಯ 81  
  • ಕೀರ್ತನೆಗಳು ಅಧ್ಯಾಯ 82  
  • ಕೀರ್ತನೆಗಳು ಅಧ್ಯಾಯ 83  
  • ಕೀರ್ತನೆಗಳು ಅಧ್ಯಾಯ 84  
  • ಕೀರ್ತನೆಗಳು ಅಧ್ಯಾಯ 85  
  • ಕೀರ್ತನೆಗಳು ಅಧ್ಯಾಯ 86  
  • ಕೀರ್ತನೆಗಳು ಅಧ್ಯಾಯ 87  
  • ಕೀರ್ತನೆಗಳು ಅಧ್ಯಾಯ 88  
  • ಕೀರ್ತನೆಗಳು ಅಧ್ಯಾಯ 89  
  • ಕೀರ್ತನೆಗಳು ಅಧ್ಯಾಯ 90  
  • ಕೀರ್ತನೆಗಳು ಅಧ್ಯಾಯ 91  
  • ಕೀರ್ತನೆಗಳು ಅಧ್ಯಾಯ 92  
  • ಕೀರ್ತನೆಗಳು ಅಧ್ಯಾಯ 93  
  • ಕೀರ್ತನೆಗಳು ಅಧ್ಯಾಯ 94  
  • ಕೀರ್ತನೆಗಳು ಅಧ್ಯಾಯ 95  
  • ಕೀರ್ತನೆಗಳು ಅಧ್ಯಾಯ 96  
  • ಕೀರ್ತನೆಗಳು ಅಧ್ಯಾಯ 97  
  • ಕೀರ್ತನೆಗಳು ಅಧ್ಯಾಯ 98  
  • ಕೀರ್ತನೆಗಳು ಅಧ್ಯಾಯ 99  
  • ಕೀರ್ತನೆಗಳು ಅಧ್ಯಾಯ 100  
  • ಕೀರ್ತನೆಗಳು ಅಧ್ಯಾಯ 101  
  • ಕೀರ್ತನೆಗಳು ಅಧ್ಯಾಯ 102  
  • ಕೀರ್ತನೆಗಳು ಅಧ್ಯಾಯ 103  
  • ಕೀರ್ತನೆಗಳು ಅಧ್ಯಾಯ 104  
  • ಕೀರ್ತನೆಗಳು ಅಧ್ಯಾಯ 105  
  • ಕೀರ್ತನೆಗಳು ಅಧ್ಯಾಯ 106  
  • ಕೀರ್ತನೆಗಳು ಅಧ್ಯಾಯ 107  
  • ಕೀರ್ತನೆಗಳು ಅಧ್ಯಾಯ 108  
  • ಕೀರ್ತನೆಗಳು ಅಧ್ಯಾಯ 109  
  • ಕೀರ್ತನೆಗಳು ಅಧ್ಯಾಯ 110  
  • ಕೀರ್ತನೆಗಳು ಅಧ್ಯಾಯ 111  
  • ಕೀರ್ತನೆಗಳು ಅಧ್ಯಾಯ 112  
  • ಕೀರ್ತನೆಗಳು ಅಧ್ಯಾಯ 113  
  • ಕೀರ್ತನೆಗಳು ಅಧ್ಯಾಯ 114  
  • ಕೀರ್ತನೆಗಳು ಅಧ್ಯಾಯ 115  
  • ಕೀರ್ತನೆಗಳು ಅಧ್ಯಾಯ 116  
  • ಕೀರ್ತನೆಗಳು ಅಧ್ಯಾಯ 117  
  • ಕೀರ್ತನೆಗಳು ಅಧ್ಯಾಯ 118  
  • ಕೀರ್ತನೆಗಳು ಅಧ್ಯಾಯ 119  
  • ಕೀರ್ತನೆಗಳು ಅಧ್ಯಾಯ 120  
  • ಕೀರ್ತನೆಗಳು ಅಧ್ಯಾಯ 121  
  • ಕೀರ್ತನೆಗಳು ಅಧ್ಯಾಯ 122  
  • ಕೀರ್ತನೆಗಳು ಅಧ್ಯಾಯ 123  
  • ಕೀರ್ತನೆಗಳು ಅಧ್ಯಾಯ 124  
  • ಕೀರ್ತನೆಗಳು ಅಧ್ಯಾಯ 125  
  • ಕೀರ್ತನೆಗಳು ಅಧ್ಯಾಯ 126  
  • ಕೀರ್ತನೆಗಳು ಅಧ್ಯಾಯ 127  
  • ಕೀರ್ತನೆಗಳು ಅಧ್ಯಾಯ 128  
  • ಕೀರ್ತನೆಗಳು ಅಧ್ಯಾಯ 129  
  • ಕೀರ್ತನೆಗಳು ಅಧ್ಯಾಯ 130  
  • ಕೀರ್ತನೆಗಳು ಅಧ್ಯಾಯ 131  
  • ಕೀರ್ತನೆಗಳು ಅಧ್ಯಾಯ 132  
  • ಕೀರ್ತನೆಗಳು ಅಧ್ಯಾಯ 133  
  • ಕೀರ್ತನೆಗಳು ಅಧ್ಯಾಯ 134  
  • ಕೀರ್ತನೆಗಳು ಅಧ್ಯಾಯ 135  
  • ಕೀರ್ತನೆಗಳು ಅಧ್ಯಾಯ 136  
  • ಕೀರ್ತನೆಗಳು ಅಧ್ಯಾಯ 137  
  • ಕೀರ್ತನೆಗಳು ಅಧ್ಯಾಯ 138  
  • ಕೀರ್ತನೆಗಳು ಅಧ್ಯಾಯ 139  
  • ಕೀರ್ತನೆಗಳು ಅಧ್ಯಾಯ 140  
  • ಕೀರ್ತನೆಗಳು ಅಧ್ಯಾಯ 141  
  • ಕೀರ್ತನೆಗಳು ಅಧ್ಯಾಯ 142  
  • ಕೀರ್ತನೆಗಳು ಅಧ್ಯಾಯ 143  
  • ಕೀರ್ತನೆಗಳು ಅಧ್ಯಾಯ 144  
  • ಕೀರ್ತನೆಗಳು ಅಧ್ಯಾಯ 145  
  • ಕೀರ್ತನೆಗಳು ಅಧ್ಯಾಯ 146  
  • ಕೀರ್ತನೆಗಳು ಅಧ್ಯಾಯ 147  
  • ಕೀರ್ತನೆಗಳು ಅಧ್ಯಾಯ 148  
  • ಕೀರ್ತನೆಗಳು ಅಧ್ಯಾಯ 149  
  • ಕೀರ್ತನೆಗಳು ಅಧ್ಯಾಯ 150  
×

Alert

×

Kannada Letters Keypad References