ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ

ಪ್ರಕಟನೆ ಅಧ್ಯಾಯ 15

ಏಳುಮಂದಿ ದೂತರು, ಏಳು ಉಪದ್ರವಗಳು 1 ನಾನು ಪರಲೋಕದಲ್ಲಿ ಆಶ್ಚರ್ಯಕರವಾದ ಮತ್ತೊಂದು ಮಹಾ ಚಿಹ್ನೆಯನ್ನು ಕಂಡೆನು. ಏಳುಮಂದಿ ದೂತರಲ್ಲಿ ಕಡೆಯ ಏಳು ಉಪದ್ರವಗಳಿದ್ದವು. ಏಕೆಂದರೆ, ಅವುಗಳಲ್ಲಿ ದೇವರ ಕೋಪವು ಸಂಪೂರ್ಣವಾಗುವುದು. 2 ನನಗೆ ಬೆಂಕಿ ಬೆರೆತ ಗಾಜಿನ ಸಮುದ್ರವೋ ಎಂಬಂತೆ ಒಂದು ಕಾಣಿಸಿತು. ಆಗ ಮೃಗದ ಮೇಲೆಯೂ ಅದರ ವಿಗ್ರಹದ ಮೇಲೆಯೂ ಅದರ ಹೆಸರಿನ ಸಂಖ್ಯೆಯ ಮೇಲೆಯೂ ಜಯಹೊಂದಿದವರು ದೇವರ ಕಿನ್ನರಿಗಳನ್ನು ಕೈಯಲ್ಲಿ ಹಿಡಿದುಕೊಂಡು, ಗಾಜಿನ ಸಮುದ್ರದ ಮೇಲೆ ನಿಂತುಕೊಂಡು, 3 ದೇವರ ದಾಸನಾದ ಮೋಶೆಯ ಮತ್ತು ಕುರಿಮರಿ ಆಗಿರುವವರ ಹಾಡನ್ನೂ ಹಾಡುತ್ತಾ: “ಕರ್ತ ಆಗಿರುವ ಸರ್ವಶಕ್ತ ದೇವರೇ, ನಿಮ್ಮ ಕೃತ್ಯಗಳು ಮಹತ್ತಾದವುಗಳೂ ಆಶ್ಚರ್ಯವಾದವುಗಳೂ ಆಗಿವೆ. ರಾಷ್ಟ್ರಗಳ ಅರಸರಾಗಿರುವ ನಿಮ್ಮ ಮಾರ್ಗಗಳು ನೀತಿಯುಳ್ಳವೂ ಸತ್ಯವೂ ಆಗಿವೆ. 4 ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರು? ಏಕೆಂದರೆ ನೀನೊಬ್ಬನೇ ಪರಿಶುದ್ಧನು. ನಿನ್ನ ನೀತಿಯುಳ್ಳ ಕೃತ್ಯಗಳು ಪ್ರಕಟವಾದ್ದರಿಂದ ಎಲ್ಲಾ ರಾಷ್ಟ್ರಗಳವರು ಬಂದು, ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು,”* ಕೀರ್ತನೆ 111:2,3; ಧರ್ಮೋ 32:4; ಯೆರೆ 10:7; ಕೀರ್ತನೆ 86:9; 98:2 ಎಂದು ಹೇಳಿದರು. 5 ಇದಾದ ಮೇಲೆ ನಾನು ನೋಡಿದಾಗ, ಪರಲೋಕದಲ್ಲಿರುವ ಸಾಕ್ಷಿಯ ಗುಡಾರದ ದೇವಾಲಯವು ತೆರೆದಿರುವುದನ್ನು ಕಂಡೆನು. 6 ಆ ದೇವಾಲಯದೊಳಗಿಂದ ಏಳು ಉಪದ್ರವಗಳನ್ನು ಹಿಡಿದು, ಆ ಏಳು ದೇವದೂತರು ಬಂದರು. ಅವರು ಪ್ರಕಾಶಮಯವಾದ ಶುಭ್ರವಾದ ನಾರುಮಡಿಯನ್ನು ಧರಿಸಿಕೊಂಡಿದ್ದರು. ತಮ್ಮ ಎದೆಗಳಿಗೆ ಚಿನ್ನದ ಪಟ್ಟಿಯನ್ನು ಕಟ್ಟಿಕೊಂಡಿದ್ದರು. 7 ನಾಲ್ಕು ಜೀವಿಗಳಲ್ಲಿ ಒಂದು, ಆ ಏಳು ದೂತರಿಗೆ, ಯುಗಯುಗಾಂತರಗಳಲ್ಲಿಯೂ ಜೀವಿಸುವವರಾದ ದೇವರ ಕೋಪದಿಂದ ತುಂಬಿದ್ದ ಏಳು ಚಿನ್ನದ ಬೋಗುಣಿಗಳನ್ನು ಕೊಟ್ಟಿತು. 8 ದೇವರ ಮಹಿಮೆಯಿಂದಲೂ ಅವರ ಶಕ್ತಿಯಿಂದಲೂ ಉಂಟಾದ ಹೊಗೆಯಿಂದ ದೇವಾಲಯವು ಆವರಿಸಿದ ಕಾರಣ, ಆ ಏಳುಮಂದಿ ದೇವದೂತರ ಏಳು ಉಪದ್ರವಗಳು ತೀರುವ ತನಕ, ಆ ದೇವಾಲಯದೊಳಗೆ ಪ್ರವೇಶಿಸುವುದಕ್ಕೆ ಯಾರಿಗೂ ಆಗಲಿಲ್ಲ.
ಏಳುಮಂದಿ ದೂತರು, ಏಳು ಉಪದ್ರವಗಳು 1 ನಾನು ಪರಲೋಕದಲ್ಲಿ ಆಶ್ಚರ್ಯಕರವಾದ ಮತ್ತೊಂದು ಮಹಾ ಚಿಹ್ನೆಯನ್ನು ಕಂಡೆನು. ಏಳುಮಂದಿ ದೂತರಲ್ಲಿ ಕಡೆಯ ಏಳು ಉಪದ್ರವಗಳಿದ್ದವು. ಏಕೆಂದರೆ, ಅವುಗಳಲ್ಲಿ ದೇವರ ಕೋಪವು ಸಂಪೂರ್ಣವಾಗುವುದು. .::. 2 ನನಗೆ ಬೆಂಕಿ ಬೆರೆತ ಗಾಜಿನ ಸಮುದ್ರವೋ ಎಂಬಂತೆ ಒಂದು ಕಾಣಿಸಿತು. ಆಗ ಮೃಗದ ಮೇಲೆಯೂ ಅದರ ವಿಗ್ರಹದ ಮೇಲೆಯೂ ಅದರ ಹೆಸರಿನ ಸಂಖ್ಯೆಯ ಮೇಲೆಯೂ ಜಯಹೊಂದಿದವರು ದೇವರ ಕಿನ್ನರಿಗಳನ್ನು ಕೈಯಲ್ಲಿ ಹಿಡಿದುಕೊಂಡು, ಗಾಜಿನ ಸಮುದ್ರದ ಮೇಲೆ ನಿಂತುಕೊಂಡು, .::. 3 ದೇವರ ದಾಸನಾದ ಮೋಶೆಯ ಮತ್ತು ಕುರಿಮರಿ ಆಗಿರುವವರ ಹಾಡನ್ನೂ ಹಾಡುತ್ತಾ: “ಕರ್ತ ಆಗಿರುವ ಸರ್ವಶಕ್ತ ದೇವರೇ, ನಿಮ್ಮ ಕೃತ್ಯಗಳು ಮಹತ್ತಾದವುಗಳೂ ಆಶ್ಚರ್ಯವಾದವುಗಳೂ ಆಗಿವೆ. ರಾಷ್ಟ್ರಗಳ ಅರಸರಾಗಿರುವ ನಿಮ್ಮ ಮಾರ್ಗಗಳು ನೀತಿಯುಳ್ಳವೂ ಸತ್ಯವೂ ಆಗಿವೆ. .::. 4 ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರು? ಏಕೆಂದರೆ ನೀನೊಬ್ಬನೇ ಪರಿಶುದ್ಧನು. ನಿನ್ನ ನೀತಿಯುಳ್ಳ ಕೃತ್ಯಗಳು ಪ್ರಕಟವಾದ್ದರಿಂದ ಎಲ್ಲಾ ರಾಷ್ಟ್ರಗಳವರು ಬಂದು, ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು,”* ಕೀರ್ತನೆ 111:2,3; ಧರ್ಮೋ 32:4; ಯೆರೆ 10:7; ಕೀರ್ತನೆ 86:9; 98:2 ಎಂದು ಹೇಳಿದರು. .::. 5 ಇದಾದ ಮೇಲೆ ನಾನು ನೋಡಿದಾಗ, ಪರಲೋಕದಲ್ಲಿರುವ ಸಾಕ್ಷಿಯ ಗುಡಾರದ ದೇವಾಲಯವು ತೆರೆದಿರುವುದನ್ನು ಕಂಡೆನು. .::. 6 ಆ ದೇವಾಲಯದೊಳಗಿಂದ ಏಳು ಉಪದ್ರವಗಳನ್ನು ಹಿಡಿದು, ಆ ಏಳು ದೇವದೂತರು ಬಂದರು. ಅವರು ಪ್ರಕಾಶಮಯವಾದ ಶುಭ್ರವಾದ ನಾರುಮಡಿಯನ್ನು ಧರಿಸಿಕೊಂಡಿದ್ದರು. ತಮ್ಮ ಎದೆಗಳಿಗೆ ಚಿನ್ನದ ಪಟ್ಟಿಯನ್ನು ಕಟ್ಟಿಕೊಂಡಿದ್ದರು. .::. 7 ನಾಲ್ಕು ಜೀವಿಗಳಲ್ಲಿ ಒಂದು, ಆ ಏಳು ದೂತರಿಗೆ, ಯುಗಯುಗಾಂತರಗಳಲ್ಲಿಯೂ ಜೀವಿಸುವವರಾದ ದೇವರ ಕೋಪದಿಂದ ತುಂಬಿದ್ದ ಏಳು ಚಿನ್ನದ ಬೋಗುಣಿಗಳನ್ನು ಕೊಟ್ಟಿತು. .::. 8 ದೇವರ ಮಹಿಮೆಯಿಂದಲೂ ಅವರ ಶಕ್ತಿಯಿಂದಲೂ ಉಂಟಾದ ಹೊಗೆಯಿಂದ ದೇವಾಲಯವು ಆವರಿಸಿದ ಕಾರಣ, ಆ ಏಳುಮಂದಿ ದೇವದೂತರ ಏಳು ಉಪದ್ರವಗಳು ತೀರುವ ತನಕ, ಆ ದೇವಾಲಯದೊಳಗೆ ಪ್ರವೇಶಿಸುವುದಕ್ಕೆ ಯಾರಿಗೂ ಆಗಲಿಲ್ಲ.
  • ಪ್ರಕಟನೆ ಅಧ್ಯಾಯ 1  
  • ಪ್ರಕಟನೆ ಅಧ್ಯಾಯ 2  
  • ಪ್ರಕಟನೆ ಅಧ್ಯಾಯ 3  
  • ಪ್ರಕಟನೆ ಅಧ್ಯಾಯ 4  
  • ಪ್ರಕಟನೆ ಅಧ್ಯಾಯ 5  
  • ಪ್ರಕಟನೆ ಅಧ್ಯಾಯ 6  
  • ಪ್ರಕಟನೆ ಅಧ್ಯಾಯ 7  
  • ಪ್ರಕಟನೆ ಅಧ್ಯಾಯ 8  
  • ಪ್ರಕಟನೆ ಅಧ್ಯಾಯ 9  
  • ಪ್ರಕಟನೆ ಅಧ್ಯಾಯ 10  
  • ಪ್ರಕಟನೆ ಅಧ್ಯಾಯ 11  
  • ಪ್ರಕಟನೆ ಅಧ್ಯಾಯ 12  
  • ಪ್ರಕಟನೆ ಅಧ್ಯಾಯ 13  
  • ಪ್ರಕಟನೆ ಅಧ್ಯಾಯ 14  
  • ಪ್ರಕಟನೆ ಅಧ್ಯಾಯ 15  
  • ಪ್ರಕಟನೆ ಅಧ್ಯಾಯ 16  
  • ಪ್ರಕಟನೆ ಅಧ್ಯಾಯ 17  
  • ಪ್ರಕಟನೆ ಅಧ್ಯಾಯ 18  
  • ಪ್ರಕಟನೆ ಅಧ್ಯಾಯ 19  
  • ಪ್ರಕಟನೆ ಅಧ್ಯಾಯ 20  
  • ಪ್ರಕಟನೆ ಅಧ್ಯಾಯ 21  
  • ಪ್ರಕಟನೆ ಅಧ್ಯಾಯ 22  
×

Alert

×

Kannada Letters Keypad References