ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಯೋವೇಲ

ಯೋವೇಲ ಅಧ್ಯಾಯ 1

1 ಪೆತೂವೇಲನ ಮಗನಾದ ಯೋವೇಲನಿಗೆ ಬಂದ ಕರ್ತನ ವಾಕ್ಯವು. 2 ವೃದ್ಧರೇ, ಕೇಳಿರಿ! ದೇಶನಿವಾಸಿಗಳೇ, ನೀವೆಲ್ಲರೂ ಕಿವಿಗೊಡಿರಿ; ಇದು ನಿಮ್ಮ ದಿವಸಗಳಲ್ಲಾದರೂ ನಿಮ್ಮ ತಂದೆಗಳ ದಿವಸಗಳಲ್ಲಾದರೂ ಉಂಟಾಯಿತೋ? 3 ಇದರ ವಿಷಯವನ್ನು ನಿಮ್ಮ ಮಕ್ಕಳಿಗೆ ತಿಳಿಸಿರಿ, ನಿಮ್ಮ ಮಕ್ಕಳು ತಮ್ಮ ಮಕ್ಕಳಿಗೂ ಅವರ ಮಕ್ಕಳು ಮತ್ತೊಂದು ತಲಾಂತರಕ್ಕೂ ತಿಳಿಸಲಿ. 4 ಹುಳವು ಉಳಿಸಿದ್ದನ್ನು ಮಿಡತೆ ತಿಂದುಬಿಟ್ಟಿದೆ; ಮಿಡತೆ ಉಳಿಸಿದ್ದನ್ನು ಒಳಗೆ ನಾಶ ಮಾಡುವ ಹುಳವು ತಿಂದುಬಿಟ್ಟಿದೆ; ಅದು ಉಳಿಸಿದ್ದನ್ನು ಕಂಬಳಿ ಹುಳವು ತಿಂದುಬಿಟ್ಟಿದೆ. 5 ಅಮಲೇರಿದವರೇ, ನೀವು ಎಚ್ಚತ್ತು ಅಳಿರಿ; ದ್ರಾಕ್ಷಾರಸ ಕುಡಿಯುವವರೆಲ್ಲರೇ, ಹೊಸ ದ್ರಾಕ್ಷಾ ರಸದ ನಿಮಿತ್ತ ಗೋಳಾಡಿರಿ; ಅದು ನಿಮ್ಮ ಬಾಯಿ ಯೊಳಗಿಂದ ತೆಗೆಯಲ್ಪಟ್ಟಿದೆ. 6 ನನ್ನ ದೇಶದ ಮೇಲೆ ಒಂದು ಜನಾಂಗವು ಏರಿ ಬಂತು; ಅದು ಬಲವಾದದ್ದೂ ಲೆಕ್ಕವಿಲ್ಲದ್ದೂ; ಅದರ ಹಲ್ಲುಗಳು ಸಿಂಹದ ಹಲ್ಲುಗಳು, ದೊಡ್ಡ ಸಿಂಹದ ದವಡೆ ಹಲ್ಲುಗಳು ಅದಕ್ಕೆ ಉಂಟು. 7 ಅದು ನನ್ನ ದ್ರಾಕ್ಷೇ ಬಳ್ಳಿಯನ್ನು ಹಾಳುಮಾಡಿ ನನ್ನ ಅಂಜೂರದ ಗಿಡವನ್ನು ಮುರಿದು ಹಾಕಿದೆ; ಅದನ್ನು ಸಂಪೂರ್ಣ ಸುಲಿದು ಬಿಸಾಡಿಬಿಟ್ಟಿದೆ; ಅದರ ಕೊಂಬೆ ಗಳು ಬಿಳುಪಾದವು. 8 ಯೌವನದ ಗಂಡನಿಗೋಸ್ಕರ ಗೋಣೀತಟ್ಟು ಧರಿಸಿದ ಕನ್ಯೆಯ ಹಾಗೆ ಪ್ರಲಾಪಿಸು. 9 ಆಹಾರ ದರ್ಪಣೆಯೂ ಪಾನಾರ್ಪಣೆಯೂ ಕರ್ತನ ಆಲಯದೊಳಗಿಂದ ತೆಗೆಯಲ್ಪಟ್ಟಿವೆ; ಕರ್ತನ ಸೇವಕ ರಾದ ಯಾಜಕರು ಗೋಳಾಡುತ್ತಾರೆ. 10 ಹೊಲವು ಹಾಳಾಗಿದೆ; ಭೂಮಿಯು ಗೋಳಾಡುತ್ತದೆ; ಧಾನ್ಯವು ಹಾಳಾಗಿದೆ; ಹೊಸ ದ್ರಾಕ್ಷಾರಸವು ಒಣಗಿದೆ; ಎಣ್ಣೆ ಬಾಡಿಹೋಗಿದೆ. 11 ಓ ಒಕ್ಕಲಿಗರೇ, ನಾಚಿಕೆಪಡಿರಿ; ಗೋಧಿ, ಜವೆ ಗೋಧಿಗಳ ನಿಮಿತ್ತ ದ್ರಾಕ್ಷೇ ತೋಟದವರೇ, ಗೋಳಾ ಡಿರಿ; ಹೊಲದ ಪೈರು ನಾಶವಾಯಿತು. 12 ದ್ರಾಕ್ಷೇ ಬಳ್ಳಿ ಒಣಗಿಹೋಗಿದೆ; ಅಂಜೂರದಮರ ಬಾಡಿ ಹೋಗಿದೆ; ದಾಳಿಂಬರದಗಿಡವೂ ಖರ್ಜೂರದ ಗಿಡವೂ ಸೇಬು ಗಿಡವೂ ಹೊಲದ ಮರಗಳೆಲ್ಲವೂ ಒಣಗಿಹೋಗಿವೆ; ಸಂತೋಷವು ಮನುಷ್ಯರ ಪುತ್ರರನ್ನು ಬಿಟ್ಟು ಒಣಗಿಹೋಗಿದೆ. 13 ಯಾಜಕರೇ, ನಿಮ್ಮ ನಡುಕಟ್ಟಿಕೊಂಡು ಗೋಳಾ ಡಿರಿ; ಬಲಿಪೀಠದ ಸೇವಕರೇ, ಗೋಳಾಡಿರಿ; ನನ್ನ ದೇವರ ಸೇವಕರೇ, ಬಂದು ಗೋಣೀತಟ್ಟಿನಲ್ಲಿ ರಾತ್ರಿ ಯೆಲ್ಲಾ ಮಲಗಿರಿ, ಯಾಕಂದರೆ ಆಹಾರದರ್ಪಣೆಯೂ ಪಾನ ದರ್ಪಣೆಯೂ ನಿಮ್ಮ ದೇವರ ಆಲಯದಿಂದ ಹಿಂತೆಗೆಯಲ್ಪಟ್ಟಿವೆ. 14 ಉಪವಾಸವನ್ನು ಪರಿಶುದ್ಧ ಮಾಡಿರಿ; ಪವಿತ್ರ ಸಂಘವನ್ನು ಕರೆಯಿರಿ; ಹಿರಿಯ ರನ್ನೂ ದೇಶದ ನಿವಾಸಿಗಳೆಲ್ಲರನ್ನೂ ನಿಮ್ಮ ದೇವರಾದ ಕರ್ತನ ಆಲಯದಲ್ಲಿ ಕೂಡಿಸಿ ಕರ್ತನಿಗೆ ಮೊರೆಯಿ ಡಿರಿ. 15 ಆ ದಿನಕ್ಕಾಗಿ ಅಯ್ಯೋ, ಯಾಕಂದರೆ ಕರ್ತನ ದಿನವು ಸವಿಾಪವಾಗಿದೆ; ಸರ್ವಶಕ್ತನ ಕಡೆಯಿಂದ ನಾಶದಂತೆ ಬರುತ್ತದೆ. 16 ನಮ್ಮ ಕಣ್ಣುಗಳ ಮುಂದೆ ಆಹಾರವೂ ನಮ್ಮ ದೇವರ ಆಲಯದಿಂದ ಸಂತೋ ಷವೂ ಉಲ್ಲಾಸವೂ ತೆಗೆಯಲ್ಪಟ್ಟಿವೆಯಲ್ಲವೋ? 17 ಬೀಜವು ಅವರ ಹೆಂಟೆಗಳ ಕೆಳಗೆ ಕೆಟ್ಟುಹೋಗಿದೆ; ಉಗ್ರಾಣಗಳು ನಾಶವಾಗಿವೆ; ಕಣಜಗಳು ಕೆಡವಲ್ಪ ಟ್ಟಿವೆ; ಧಾನ್ಯವು ಒಣಗಿದೆ. 18 ಪಶುಗಳು ಎಷ್ಟೋ ಮುಲುಗುತ್ತವೆ; ದನದ ಹಿಂಡುಗಳು ಕಳವಳಗೊಂಡಿವೆ; ಅವಕ್ಕೆ ಮೇವು ಇಲ್ಲ; ಕುರಿಮಂದೆಗಳು ಸಹ ನಾಶ ವಾಗುತ್ತವೆ. 19 ಓ ಕರ್ತನೇ, ನಿನಗೆ ನಾನು ಮೊರೆಯಿಡುತ್ತೇನೆ; ಬೆಂಕಿಯು ಅಡವಿಯ ಮೇವಿನ ಸ್ಥಳಗಳನ್ನು ನುಂಗಿಬಿಟ್ಟಿದೆ; ಜ್ವಾಲೆಯು ಅಡವಿಯ ಮರಗಳನ್ನೆಲ್ಲಾ ಸುಟ್ಟುಬಿಟ್ಟಿದೆ. 20 ಅಡವಿಯ ಮೃಗಗಳು ಸಹ ನಿನ್ನ ಕಡೆಗೆ ಹೂಂಕರಿಸುತ್ತವೆ; ನೀರಿನ ಹೊಳೆಗಳು ಬತ್ತಿ ಹೋಗಿವೆ; ಬೆಂಕಿಯು ಅಡವಿಯ ಮೇವಿನ ಸ್ಥಳಗಳನ್ನು ದಹಿಸಿಬಿಟ್ಟಿದೆ.
1. ಪೆತೂವೇಲನ ಮಗನಾದ ಯೋವೇಲನಿಗೆ ಬಂದ ಕರ್ತನ ವಾಕ್ಯವು. 2. ವೃದ್ಧರೇ, ಕೇಳಿರಿ! ದೇಶನಿವಾಸಿಗಳೇ, ನೀವೆಲ್ಲರೂ ಕಿವಿಗೊಡಿರಿ; ಇದು ನಿಮ್ಮ ದಿವಸಗಳಲ್ಲಾದರೂ ನಿಮ್ಮ ತಂದೆಗಳ ದಿವಸಗಳಲ್ಲಾದರೂ ಉಂಟಾಯಿತೋ? 3. ಇದರ ವಿಷಯವನ್ನು ನಿಮ್ಮ ಮಕ್ಕಳಿಗೆ ತಿಳಿಸಿರಿ, ನಿಮ್ಮ ಮಕ್ಕಳು ತಮ್ಮ ಮಕ್ಕಳಿಗೂ ಅವರ ಮಕ್ಕಳು ಮತ್ತೊಂದು ತಲಾಂತರಕ್ಕೂ ತಿಳಿಸಲಿ. 4. ಹುಳವು ಉಳಿಸಿದ್ದನ್ನು ಮಿಡತೆ ತಿಂದುಬಿಟ್ಟಿದೆ; ಮಿಡತೆ ಉಳಿಸಿದ್ದನ್ನು ಒಳಗೆ ನಾಶ ಮಾಡುವ ಹುಳವು ತಿಂದುಬಿಟ್ಟಿದೆ; ಅದು ಉಳಿಸಿದ್ದನ್ನು ಕಂಬಳಿ ಹುಳವು ತಿಂದುಬಿಟ್ಟಿದೆ. 5. ಅಮಲೇರಿದವರೇ, ನೀವು ಎಚ್ಚತ್ತು ಅಳಿರಿ; ದ್ರಾಕ್ಷಾರಸ ಕುಡಿಯುವವರೆಲ್ಲರೇ, ಹೊಸ ದ್ರಾಕ್ಷಾ ರಸದ ನಿಮಿತ್ತ ಗೋಳಾಡಿರಿ; ಅದು ನಿಮ್ಮ ಬಾಯಿ ಯೊಳಗಿಂದ ತೆಗೆಯಲ್ಪಟ್ಟಿದೆ. 6. ನನ್ನ ದೇಶದ ಮೇಲೆ ಒಂದು ಜನಾಂಗವು ಏರಿ ಬಂತು; ಅದು ಬಲವಾದದ್ದೂ ಲೆಕ್ಕವಿಲ್ಲದ್ದೂ; ಅದರ ಹಲ್ಲುಗಳು ಸಿಂಹದ ಹಲ್ಲುಗಳು, ದೊಡ್ಡ ಸಿಂಹದ ದವಡೆ ಹಲ್ಲುಗಳು ಅದಕ್ಕೆ ಉಂಟು. 7. ಅದು ನನ್ನ ದ್ರಾಕ್ಷೇ ಬಳ್ಳಿಯನ್ನು ಹಾಳುಮಾಡಿ ನನ್ನ ಅಂಜೂರದ ಗಿಡವನ್ನು ಮುರಿದು ಹಾಕಿದೆ; ಅದನ್ನು ಸಂಪೂರ್ಣ ಸುಲಿದು ಬಿಸಾಡಿಬಿಟ್ಟಿದೆ; ಅದರ ಕೊಂಬೆ ಗಳು ಬಿಳುಪಾದವು. 8. ಯೌವನದ ಗಂಡನಿಗೋಸ್ಕರ ಗೋಣೀತಟ್ಟು ಧರಿಸಿದ ಕನ್ಯೆಯ ಹಾಗೆ ಪ್ರಲಾಪಿಸು. 9. ಆಹಾರ ದರ್ಪಣೆಯೂ ಪಾನಾರ್ಪಣೆಯೂ ಕರ್ತನ ಆಲಯದೊಳಗಿಂದ ತೆಗೆಯಲ್ಪಟ್ಟಿವೆ; ಕರ್ತನ ಸೇವಕ ರಾದ ಯಾಜಕರು ಗೋಳಾಡುತ್ತಾರೆ. 10. ಹೊಲವು ಹಾಳಾಗಿದೆ; ಭೂಮಿಯು ಗೋಳಾಡುತ್ತದೆ; ಧಾನ್ಯವು ಹಾಳಾಗಿದೆ; ಹೊಸ ದ್ರಾಕ್ಷಾರಸವು ಒಣಗಿದೆ; ಎಣ್ಣೆ ಬಾಡಿಹೋಗಿದೆ. 11. ಓ ಒಕ್ಕಲಿಗರೇ, ನಾಚಿಕೆಪಡಿರಿ; ಗೋಧಿ, ಜವೆ ಗೋಧಿಗಳ ನಿಮಿತ್ತ ದ್ರಾಕ್ಷೇ ತೋಟದವರೇ, ಗೋಳಾ ಡಿರಿ; ಹೊಲದ ಪೈರು ನಾಶವಾಯಿತು. 12. ದ್ರಾಕ್ಷೇ ಬಳ್ಳಿ ಒಣಗಿಹೋಗಿದೆ; ಅಂಜೂರದಮರ ಬಾಡಿ ಹೋಗಿದೆ; ದಾಳಿಂಬರದಗಿಡವೂ ಖರ್ಜೂರದ ಗಿಡವೂ ಸೇಬು ಗಿಡವೂ ಹೊಲದ ಮರಗಳೆಲ್ಲವೂ ಒಣಗಿಹೋಗಿವೆ; ಸಂತೋಷವು ಮನುಷ್ಯರ ಪುತ್ರರನ್ನು ಬಿಟ್ಟು ಒಣಗಿಹೋಗಿದೆ. 13. ಯಾಜಕರೇ, ನಿಮ್ಮ ನಡುಕಟ್ಟಿಕೊಂಡು ಗೋಳಾ ಡಿರಿ; ಬಲಿಪೀಠದ ಸೇವಕರೇ, ಗೋಳಾಡಿರಿ; ನನ್ನ ದೇವರ ಸೇವಕರೇ, ಬಂದು ಗೋಣೀತಟ್ಟಿನಲ್ಲಿ ರಾತ್ರಿ ಯೆಲ್ಲಾ ಮಲಗಿರಿ, ಯಾಕಂದರೆ ಆಹಾರದರ್ಪಣೆಯೂ ಪಾನ ದರ್ಪಣೆಯೂ ನಿಮ್ಮ ದೇವರ ಆಲಯದಿಂದ ಹಿಂತೆಗೆಯಲ್ಪಟ್ಟಿವೆ. 14. ಉಪವಾಸವನ್ನು ಪರಿಶುದ್ಧ ಮಾಡಿರಿ; ಪವಿತ್ರ ಸಂಘವನ್ನು ಕರೆಯಿರಿ; ಹಿರಿಯ ರನ್ನೂ ದೇಶದ ನಿವಾಸಿಗಳೆಲ್ಲರನ್ನೂ ನಿಮ್ಮ ದೇವರಾದ ಕರ್ತನ ಆಲಯದಲ್ಲಿ ಕೂಡಿಸಿ ಕರ್ತನಿಗೆ ಮೊರೆಯಿ ಡಿರಿ. 15. ಆ ದಿನಕ್ಕಾಗಿ ಅಯ್ಯೋ, ಯಾಕಂದರೆ ಕರ್ತನ ದಿನವು ಸವಿಾಪವಾಗಿದೆ; ಸರ್ವಶಕ್ತನ ಕಡೆಯಿಂದ ನಾಶದಂತೆ ಬರುತ್ತದೆ. 16. ನಮ್ಮ ಕಣ್ಣುಗಳ ಮುಂದೆ ಆಹಾರವೂ ನಮ್ಮ ದೇವರ ಆಲಯದಿಂದ ಸಂತೋ ಷವೂ ಉಲ್ಲಾಸವೂ ತೆಗೆಯಲ್ಪಟ್ಟಿವೆಯಲ್ಲವೋ? 17. ಬೀಜವು ಅವರ ಹೆಂಟೆಗಳ ಕೆಳಗೆ ಕೆಟ್ಟುಹೋಗಿದೆ; ಉಗ್ರಾಣಗಳು ನಾಶವಾಗಿವೆ; ಕಣಜಗಳು ಕೆಡವಲ್ಪ ಟ್ಟಿವೆ; ಧಾನ್ಯವು ಒಣಗಿದೆ. 18. ಪಶುಗಳು ಎಷ್ಟೋ ಮುಲುಗುತ್ತವೆ; ದನದ ಹಿಂಡುಗಳು ಕಳವಳಗೊಂಡಿವೆ; ಅವಕ್ಕೆ ಮೇವು ಇಲ್ಲ; ಕುರಿಮಂದೆಗಳು ಸಹ ನಾಶ ವಾಗುತ್ತವೆ. 19. ಓ ಕರ್ತನೇ, ನಿನಗೆ ನಾನು ಮೊರೆಯಿಡುತ್ತೇನೆ; ಬೆಂಕಿಯು ಅಡವಿಯ ಮೇವಿನ ಸ್ಥಳಗಳನ್ನು ನುಂಗಿಬಿಟ್ಟಿದೆ; ಜ್ವಾಲೆಯು ಅಡವಿಯ ಮರಗಳನ್ನೆಲ್ಲಾ ಸುಟ್ಟುಬಿಟ್ಟಿದೆ. 20. ಅಡವಿಯ ಮೃಗಗಳು ಸಹ ನಿನ್ನ ಕಡೆಗೆ ಹೂಂಕರಿಸುತ್ತವೆ; ನೀರಿನ ಹೊಳೆಗಳು ಬತ್ತಿ ಹೋಗಿವೆ; ಬೆಂಕಿಯು ಅಡವಿಯ ಮೇವಿನ ಸ್ಥಳಗಳನ್ನು ದಹಿಸಿಬಿಟ್ಟಿದೆ.
  • ಯೋವೇಲ ಅಧ್ಯಾಯ 1  
  • ಯೋವೇಲ ಅಧ್ಯಾಯ 2  
  • ಯೋವೇಲ ಅಧ್ಯಾಯ 3  
×

Alert

×

Kannada Letters Keypad References