ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಯೆಶಾಯ

ಯೆಶಾಯ ಅಧ್ಯಾಯ 34

1 ಜನಾಂಗಗಳೇ, ಕೇಳುವದಕ್ಕೆ ಹತ್ತಿರ ಬನ್ನಿರಿ; ಜನಗಳೇ ಕಿವಿಗೊಡಿರಿ, ಭೂಮಿ ಯೂ ಅದರಲ್ಲಿನ ಸಮಸ್ತವೂ ಲೋಕವೂ ಅದರ ಎಲ್ಲಾ ಹುಟ್ಟುವಳಿಯೂ ಕೇಳಲಿ. 2 ಕರ್ತನು ಸಕಲ ಜನಾಂಗಗಳ ಮೇಲೆ ಕೋಪಮಾಡಿ ಅವುಗಳ ಎಲ್ಲಾ ಸೈನ್ಯಗಳ ಮೇಲೆ ರೋಷಗೊಂಡು ಅವರನ್ನು ಕೊಲೆಗೆ ಈಡುಮಾಡಿ ಸಂಪೂರ್ಣವಾಗಿ ನಾಶಮಾಡಿದ್ದಾನೆ. 3 ಅವರಲ್ಲಿ ಕೊಂದುಹಾಕಲ್ಪಟ್ಟವರು ಬಿಸಾಡಲ್ಪಡು ವರು. ಅವರ ಹೆಣಗಳ ದುರ್ವಾಸನೆಯು ಮೇಲಕ್ಕೆ ಏರುವದು. ಅವರ ರಕ್ತಪ್ರವಾಹದಿಂದ ಪರ್ವತಗಳು ಕರಗಿಹೋಗುವವು. 4 ಆಕಾಶದ ಸೈನ್ಯವೆಲ್ಲಾ ಗತಿಸಿ ಹೋಗುವದು. ಆಕಾಶಮಂಡಲವು ಸುರುಳಿಯಂತೆ ಸುತ್ತಿಕೊಳ್ಳುವದು, ದ್ರಾಕ್ಷೆಯ ಎಲೆ ಒಣಗಿ ಗಿಡದಿಂದ ಬೀಳುವಂತೆಯೂ ಅಂಜೂರ ಮರದಿಂದ ತರಗು ಉದುರುವ ಹಾಗೂ ಅವುಗಳ ಸೈನ್ಯವೆಲ್ಲಾ ಬಾಡಿ ಕೆಳಗೆ ಬೀಳುವದು. 5 ನನ್ನ ಖಡ್ಗವು ಪರಲೋಕದಲ್ಲಿ ರೋಷ ಪಾನಮಾಡುವದು; ಇಗೋ, ಅದು ಎದೋ ಮಿನ ಮತ್ತು ನಾನು ಶಪಿಸಿದ ಜನರ ಮೇಲೆ ನ್ಯಾಯ ತೀರಿಸುವದಕ್ಕಾಗಿ ಕೆಳಗೆ ಇಳಿದು ಬರುವದು. 6 ಕರ್ತನ ಖಡ್ಗವು ರಕ್ತದಿಂದ ತುಂಬಿದೆ; ಅದು ಕುರಿಹೋತಗಳ ರಕ್ತದಿಂದಲೂ ಟಗರುಗಳ ಮೂತ್ರಪಿಂಡದ ಕೊಬ್ಬಿ ನಿಂದಲೂ ಪುಷ್ಟಿಯಾಯಿತು; ಯಾಕಂದರೆ ಕರ್ತನು ಬೊಚ್ರದಲ್ಲಿ ಬಲಿಯನ್ನೂ ಎದೋಮಿನ ದೇಶದಲ್ಲಿ ದೊಡ್ಡ ಕೊಲೆಯನ್ನೂ ಉಂಟು ಮಾಡಿದ್ದಾನೆ. 7 ಕಾಡು ಕೋಣಗಳು ಅವುಗಳ ಸಂಗಡಲೂ ಎತ್ತುಗಳು ಹೋರಿ ಗಳ ಸಂಗಡಲೂ ಬೀಳುವವು; ಅವರ ದೇಶವು ರಕ್ತ ದಿಂದ ನೆನೆಯುವದು, ಅವರ ಧೂಳು ಕೊಬ್ಬಿನಿಂದ ಪುಷ್ಟಿಯಾಗುವದು-- 8 ಏಕಂದರೆ ಅದು ಕರ್ತನು ಮುಯ್ಯಿ ತೀರಿಸುವ ದಿನವಾಗಿದೆ; ಚೀಯೋನಿನ ವ್ಯಾಜ್ಯದಲ್ಲಿ ದಂಡನೆ ವಿಧಿಸತಕ್ಕ ವರುಷವು ಒದಗಿದೆ. 9 ಪ್ರವಾಹಗಳು ಇಳಿಜಾರಾಗಿ ಮಾರ್ಪಡುವದೂ; ಅದರ ದೂಳು ಗಂಧಕವಾಗುವದು; ದೇಶವು ಉರಿ ಯುವ ಇಳಿಜಾರು ಪ್ರದೇಶವಾಗುವದು. 10 ಅದು ರಾತ್ರಿಯಲ್ಲಾದರೂ ಇಲ್ಲವೆ ಹಗಲಿನಲ್ಲಾದರೂ ಆರು ವದಿಲ್ಲ; ಅದರ ಹೊಗೆಯು ನಿರಂತರವಾಗಿ ಏಳುತ್ತಿರು ವದು; ಅದು ತಲತಲಾಂತರಕ್ಕೂ ಹಾಳಾಗಿ ಬಿದ್ದಿರು ವದು; ಅದನ್ನು ಎಂದೆಂದಿಗೂ ಯಾರೂ ಹಾದು ಹೋಗರು. 11 ಆದರೆ ಬಕ ಪಕ್ಷಿಯು ಮತ್ತು ಮುಳ್ಳು ಹಂದಿಯು ಅದನ್ನು ಆವರಿಸಿಕೊಳ್ಳುವವು; ಗೂಬೆ ಮತ್ತು ಕಾಗೆಗಳು ಸಹ ಅಲ್ಲಿ ವಾಸಿಸುವವು; ಗಲಿಬಿಲಿ ಯೆಂಬ ನೂಲನ್ನು ಶೂನ್ಯವೆಂಬ ಗಟ್ಟಿ ತೂಕವನ್ನು ಆತನು ಅದರ ಮೇಲೆ ಎಳೆಯುವನು. 12 ಅವರ ರಾಜ್ಯಕ್ಕೆ ಪ್ರಮುಖರನ್ನು ಕರೆಯುವರು; ಆದರೆ ಅಲ್ಲಿ ಯಾರೂ ಇರುವದಿಲ್ಲ; (ಅದರ) ಅವಳ ಪ್ರಭುಗಳು ಇಲ್ಲದಂತಾಗುವರು. 13 ಅವಳ ಅರಮನೆಗಳಲ್ಲಿ ಮುಳ್ಳುಗಳು ಬೆಳೆಯುವವು; ಅವಳ ಕೋಟೆಗಳಲ್ಲಿ ತುರುಚಿಯೂ ದತ್ತೂರಿಯೂ ಇರುವವು; ಅದು (ಉಷ್ಟ್ರ ಪಕ್ಷಿಗಳ) ಸರ್ಪಗಳ ನಿವಾಸವೂ ಗೂಬೆಗಳಿಗೆ ಸ್ಥಾನವೂ ಆಗುವದು. 14 ಮರುಭೂಮಿಯ ಕಾಡು ಮೃಗಗಳು ಸಹ ದ್ವೀಪದ ಕಾಡುಮೃಗಗಳೊಂದಿಗೆ ಸಂಧಿಸುವವು; ದೆವ್ವವು ತನ್ನ ಜೊತೆಯನ್ನು ಕೂಗು ವದು; ಅಲ್ಲಿ ಚೀರುಗೂಬೆಯು ಸಹ ವಿಶ್ರಮಿಸಿಕೊಂಡು ಉಪಶಮನ ಸ್ಥಳವನ್ನು ಕಂಡುಕೊಳ್ಳುವದು. 15 ದೊಡ್ಡ ಗೂಬೆಯು ಅಲ್ಲಿ ಗೂಡನ್ನು ಮಾಡಿಕೊಂಡು ಮೊಟ್ಟೆ ಯಿಟ್ಟು ಮರಿ ಮಾಡಿ ಅವುಗಳನ್ನು ತನ್ನ ನೆರಳಿನಲ್ಲಿ ಕೂಡಿಸುವದು; ಅಲ್ಲಿ ಹದ್ದುಗಳಲ್ಲಿ ಪ್ರತಿಯೊಂದು ತಮ್ಮ ಜೊತೆಜೊತೆಯಾಗಿ ಕೂಡಿಕೊಳ್ಳುವವು. 16 ಕರ್ತನ ಪುಸ್ತಕದಲ್ಲಿ ನೀವು ಹುಡುಕಿ ಓದಿರಿ; ಇವು ಗಳಲ್ಲಿ ಒಂದಾದರೂ ತಪ್ಪದು, ಜೊತೆಯಿಲ್ಲದೆ ಒಂದೂ ಇಲ್ಲ; ನನ್ನ ಬಾಯಿಯೇ ಅದನ್ನು ಆಜ್ಞಾಪಿ ಸಿತು; ಆತನ ಆತ್ಮವೇ ಅವುಗಳನ್ನು ಒಟ್ಟುಗೂಡಿಸಿತು 17 ಆತನೇ ಅವುಗಳಿಗೋಸ್ಕರ ಚೀಟು ಹಾಕಿದ್ದಾನೆ, ಆತನ ಕೈಯೇ ಅದನ್ನು ಗೆರೆ ಎಳೆದು ಅವರಿಗೆ ಹಂಚಿ ಕೊಟ್ಟಿದೆ. ಅವು ಅದನ್ನು ನಿರಂತರಕ್ಕೂ ವಶಮಾಡಿ ಕೊಳ್ಳುವವು. ಅವು ತಲತಲಾಂತರಕ್ಕೂ ಅದರಲ್ಲಿ ವಾಸವಾಗಿರುವವು.
1 ಜನಾಂಗಗಳೇ, ಕೇಳುವದಕ್ಕೆ ಹತ್ತಿರ ಬನ್ನಿರಿ; ಜನಗಳೇ ಕಿವಿಗೊಡಿರಿ, ಭೂಮಿ ಯೂ ಅದರಲ್ಲಿನ ಸಮಸ್ತವೂ ಲೋಕವೂ ಅದರ ಎಲ್ಲಾ ಹುಟ್ಟುವಳಿಯೂ ಕೇಳಲಿ. .::. 2 ಕರ್ತನು ಸಕಲ ಜನಾಂಗಗಳ ಮೇಲೆ ಕೋಪಮಾಡಿ ಅವುಗಳ ಎಲ್ಲಾ ಸೈನ್ಯಗಳ ಮೇಲೆ ರೋಷಗೊಂಡು ಅವರನ್ನು ಕೊಲೆಗೆ ಈಡುಮಾಡಿ ಸಂಪೂರ್ಣವಾಗಿ ನಾಶಮಾಡಿದ್ದಾನೆ. .::. 3 ಅವರಲ್ಲಿ ಕೊಂದುಹಾಕಲ್ಪಟ್ಟವರು ಬಿಸಾಡಲ್ಪಡು ವರು. ಅವರ ಹೆಣಗಳ ದುರ್ವಾಸನೆಯು ಮೇಲಕ್ಕೆ ಏರುವದು. ಅವರ ರಕ್ತಪ್ರವಾಹದಿಂದ ಪರ್ವತಗಳು ಕರಗಿಹೋಗುವವು. .::. 4 ಆಕಾಶದ ಸೈನ್ಯವೆಲ್ಲಾ ಗತಿಸಿ ಹೋಗುವದು. ಆಕಾಶಮಂಡಲವು ಸುರುಳಿಯಂತೆ ಸುತ್ತಿಕೊಳ್ಳುವದು, ದ್ರಾಕ್ಷೆಯ ಎಲೆ ಒಣಗಿ ಗಿಡದಿಂದ ಬೀಳುವಂತೆಯೂ ಅಂಜೂರ ಮರದಿಂದ ತರಗು ಉದುರುವ ಹಾಗೂ ಅವುಗಳ ಸೈನ್ಯವೆಲ್ಲಾ ಬಾಡಿ ಕೆಳಗೆ ಬೀಳುವದು. .::. 5 ನನ್ನ ಖಡ್ಗವು ಪರಲೋಕದಲ್ಲಿ ರೋಷ ಪಾನಮಾಡುವದು; ಇಗೋ, ಅದು ಎದೋ ಮಿನ ಮತ್ತು ನಾನು ಶಪಿಸಿದ ಜನರ ಮೇಲೆ ನ್ಯಾಯ ತೀರಿಸುವದಕ್ಕಾಗಿ ಕೆಳಗೆ ಇಳಿದು ಬರುವದು. .::. 6 ಕರ್ತನ ಖಡ್ಗವು ರಕ್ತದಿಂದ ತುಂಬಿದೆ; ಅದು ಕುರಿಹೋತಗಳ ರಕ್ತದಿಂದಲೂ ಟಗರುಗಳ ಮೂತ್ರಪಿಂಡದ ಕೊಬ್ಬಿ ನಿಂದಲೂ ಪುಷ್ಟಿಯಾಯಿತು; ಯಾಕಂದರೆ ಕರ್ತನು ಬೊಚ್ರದಲ್ಲಿ ಬಲಿಯನ್ನೂ ಎದೋಮಿನ ದೇಶದಲ್ಲಿ ದೊಡ್ಡ ಕೊಲೆಯನ್ನೂ ಉಂಟು ಮಾಡಿದ್ದಾನೆ. .::. 7 ಕಾಡು ಕೋಣಗಳು ಅವುಗಳ ಸಂಗಡಲೂ ಎತ್ತುಗಳು ಹೋರಿ ಗಳ ಸಂಗಡಲೂ ಬೀಳುವವು; ಅವರ ದೇಶವು ರಕ್ತ ದಿಂದ ನೆನೆಯುವದು, ಅವರ ಧೂಳು ಕೊಬ್ಬಿನಿಂದ ಪುಷ್ಟಿಯಾಗುವದು-- .::. 8 ಏಕಂದರೆ ಅದು ಕರ್ತನು ಮುಯ್ಯಿ ತೀರಿಸುವ ದಿನವಾಗಿದೆ; ಚೀಯೋನಿನ ವ್ಯಾಜ್ಯದಲ್ಲಿ ದಂಡನೆ ವಿಧಿಸತಕ್ಕ ವರುಷವು ಒದಗಿದೆ. .::. 9 ಪ್ರವಾಹಗಳು ಇಳಿಜಾರಾಗಿ ಮಾರ್ಪಡುವದೂ; ಅದರ ದೂಳು ಗಂಧಕವಾಗುವದು; ದೇಶವು ಉರಿ ಯುವ ಇಳಿಜಾರು ಪ್ರದೇಶವಾಗುವದು. .::. 10 ಅದು ರಾತ್ರಿಯಲ್ಲಾದರೂ ಇಲ್ಲವೆ ಹಗಲಿನಲ್ಲಾದರೂ ಆರು ವದಿಲ್ಲ; ಅದರ ಹೊಗೆಯು ನಿರಂತರವಾಗಿ ಏಳುತ್ತಿರು ವದು; ಅದು ತಲತಲಾಂತರಕ್ಕೂ ಹಾಳಾಗಿ ಬಿದ್ದಿರು ವದು; ಅದನ್ನು ಎಂದೆಂದಿಗೂ ಯಾರೂ ಹಾದು ಹೋಗರು. .::. 11 ಆದರೆ ಬಕ ಪಕ್ಷಿಯು ಮತ್ತು ಮುಳ್ಳು ಹಂದಿಯು ಅದನ್ನು ಆವರಿಸಿಕೊಳ್ಳುವವು; ಗೂಬೆ ಮತ್ತು ಕಾಗೆಗಳು ಸಹ ಅಲ್ಲಿ ವಾಸಿಸುವವು; ಗಲಿಬಿಲಿ ಯೆಂಬ ನೂಲನ್ನು ಶೂನ್ಯವೆಂಬ ಗಟ್ಟಿ ತೂಕವನ್ನು ಆತನು ಅದರ ಮೇಲೆ ಎಳೆಯುವನು. .::. 12 ಅವರ ರಾಜ್ಯಕ್ಕೆ ಪ್ರಮುಖರನ್ನು ಕರೆಯುವರು; ಆದರೆ ಅಲ್ಲಿ ಯಾರೂ ಇರುವದಿಲ್ಲ; (ಅದರ) ಅವಳ ಪ್ರಭುಗಳು ಇಲ್ಲದಂತಾಗುವರು. .::. 13 ಅವಳ ಅರಮನೆಗಳಲ್ಲಿ ಮುಳ್ಳುಗಳು ಬೆಳೆಯುವವು; ಅವಳ ಕೋಟೆಗಳಲ್ಲಿ ತುರುಚಿಯೂ ದತ್ತೂರಿಯೂ ಇರುವವು; ಅದು (ಉಷ್ಟ್ರ ಪಕ್ಷಿಗಳ) ಸರ್ಪಗಳ ನಿವಾಸವೂ ಗೂಬೆಗಳಿಗೆ ಸ್ಥಾನವೂ ಆಗುವದು. .::. 14 ಮರುಭೂಮಿಯ ಕಾಡು ಮೃಗಗಳು ಸಹ ದ್ವೀಪದ ಕಾಡುಮೃಗಗಳೊಂದಿಗೆ ಸಂಧಿಸುವವು; ದೆವ್ವವು ತನ್ನ ಜೊತೆಯನ್ನು ಕೂಗು ವದು; ಅಲ್ಲಿ ಚೀರುಗೂಬೆಯು ಸಹ ವಿಶ್ರಮಿಸಿಕೊಂಡು ಉಪಶಮನ ಸ್ಥಳವನ್ನು ಕಂಡುಕೊಳ್ಳುವದು. .::. 15 ದೊಡ್ಡ ಗೂಬೆಯು ಅಲ್ಲಿ ಗೂಡನ್ನು ಮಾಡಿಕೊಂಡು ಮೊಟ್ಟೆ ಯಿಟ್ಟು ಮರಿ ಮಾಡಿ ಅವುಗಳನ್ನು ತನ್ನ ನೆರಳಿನಲ್ಲಿ ಕೂಡಿಸುವದು; ಅಲ್ಲಿ ಹದ್ದುಗಳಲ್ಲಿ ಪ್ರತಿಯೊಂದು ತಮ್ಮ ಜೊತೆಜೊತೆಯಾಗಿ ಕೂಡಿಕೊಳ್ಳುವವು. .::. 16 ಕರ್ತನ ಪುಸ್ತಕದಲ್ಲಿ ನೀವು ಹುಡುಕಿ ಓದಿರಿ; ಇವು ಗಳಲ್ಲಿ ಒಂದಾದರೂ ತಪ್ಪದು, ಜೊತೆಯಿಲ್ಲದೆ ಒಂದೂ ಇಲ್ಲ; ನನ್ನ ಬಾಯಿಯೇ ಅದನ್ನು ಆಜ್ಞಾಪಿ ಸಿತು; ಆತನ ಆತ್ಮವೇ ಅವುಗಳನ್ನು ಒಟ್ಟುಗೂಡಿಸಿತು .::. 17 ಆತನೇ ಅವುಗಳಿಗೋಸ್ಕರ ಚೀಟು ಹಾಕಿದ್ದಾನೆ, ಆತನ ಕೈಯೇ ಅದನ್ನು ಗೆರೆ ಎಳೆದು ಅವರಿಗೆ ಹಂಚಿ ಕೊಟ್ಟಿದೆ. ಅವು ಅದನ್ನು ನಿರಂತರಕ್ಕೂ ವಶಮಾಡಿ ಕೊಳ್ಳುವವು. ಅವು ತಲತಲಾಂತರಕ್ಕೂ ಅದರಲ್ಲಿ ವಾಸವಾಗಿರುವವು.
  • ಯೆಶಾಯ ಅಧ್ಯಾಯ 1  
  • ಯೆಶಾಯ ಅಧ್ಯಾಯ 2  
  • ಯೆಶಾಯ ಅಧ್ಯಾಯ 3  
  • ಯೆಶಾಯ ಅಧ್ಯಾಯ 4  
  • ಯೆಶಾಯ ಅಧ್ಯಾಯ 5  
  • ಯೆಶಾಯ ಅಧ್ಯಾಯ 6  
  • ಯೆಶಾಯ ಅಧ್ಯಾಯ 7  
  • ಯೆಶಾಯ ಅಧ್ಯಾಯ 8  
  • ಯೆಶಾಯ ಅಧ್ಯಾಯ 9  
  • ಯೆಶಾಯ ಅಧ್ಯಾಯ 10  
  • ಯೆಶಾಯ ಅಧ್ಯಾಯ 11  
  • ಯೆಶಾಯ ಅಧ್ಯಾಯ 12  
  • ಯೆಶಾಯ ಅಧ್ಯಾಯ 13  
  • ಯೆಶಾಯ ಅಧ್ಯಾಯ 14  
  • ಯೆಶಾಯ ಅಧ್ಯಾಯ 15  
  • ಯೆಶಾಯ ಅಧ್ಯಾಯ 16  
  • ಯೆಶಾಯ ಅಧ್ಯಾಯ 17  
  • ಯೆಶಾಯ ಅಧ್ಯಾಯ 18  
  • ಯೆಶಾಯ ಅಧ್ಯಾಯ 19  
  • ಯೆಶಾಯ ಅಧ್ಯಾಯ 20  
  • ಯೆಶಾಯ ಅಧ್ಯಾಯ 21  
  • ಯೆಶಾಯ ಅಧ್ಯಾಯ 22  
  • ಯೆಶಾಯ ಅಧ್ಯಾಯ 23  
  • ಯೆಶಾಯ ಅಧ್ಯಾಯ 24  
  • ಯೆಶಾಯ ಅಧ್ಯಾಯ 25  
  • ಯೆಶಾಯ ಅಧ್ಯಾಯ 26  
  • ಯೆಶಾಯ ಅಧ್ಯಾಯ 27  
  • ಯೆಶಾಯ ಅಧ್ಯಾಯ 28  
  • ಯೆಶಾಯ ಅಧ್ಯಾಯ 29  
  • ಯೆಶಾಯ ಅಧ್ಯಾಯ 30  
  • ಯೆಶಾಯ ಅಧ್ಯಾಯ 31  
  • ಯೆಶಾಯ ಅಧ್ಯಾಯ 32  
  • ಯೆಶಾಯ ಅಧ್ಯಾಯ 33  
  • ಯೆಶಾಯ ಅಧ್ಯಾಯ 34  
  • ಯೆಶಾಯ ಅಧ್ಯಾಯ 35  
  • ಯೆಶಾಯ ಅಧ್ಯಾಯ 36  
  • ಯೆಶಾಯ ಅಧ್ಯಾಯ 37  
  • ಯೆಶಾಯ ಅಧ್ಯಾಯ 38  
  • ಯೆಶಾಯ ಅಧ್ಯಾಯ 39  
  • ಯೆಶಾಯ ಅಧ್ಯಾಯ 40  
  • ಯೆಶಾಯ ಅಧ್ಯಾಯ 41  
  • ಯೆಶಾಯ ಅಧ್ಯಾಯ 42  
  • ಯೆಶಾಯ ಅಧ್ಯಾಯ 43  
  • ಯೆಶಾಯ ಅಧ್ಯಾಯ 44  
  • ಯೆಶಾಯ ಅಧ್ಯಾಯ 45  
  • ಯೆಶಾಯ ಅಧ್ಯಾಯ 46  
  • ಯೆಶಾಯ ಅಧ್ಯಾಯ 47  
  • ಯೆಶಾಯ ಅಧ್ಯಾಯ 48  
  • ಯೆಶಾಯ ಅಧ್ಯಾಯ 49  
  • ಯೆಶಾಯ ಅಧ್ಯಾಯ 50  
  • ಯೆಶಾಯ ಅಧ್ಯಾಯ 51  
  • ಯೆಶಾಯ ಅಧ್ಯಾಯ 52  
  • ಯೆಶಾಯ ಅಧ್ಯಾಯ 53  
  • ಯೆಶಾಯ ಅಧ್ಯಾಯ 54  
  • ಯೆಶಾಯ ಅಧ್ಯಾಯ 55  
  • ಯೆಶಾಯ ಅಧ್ಯಾಯ 56  
  • ಯೆಶಾಯ ಅಧ್ಯಾಯ 57  
  • ಯೆಶಾಯ ಅಧ್ಯಾಯ 58  
  • ಯೆಶಾಯ ಅಧ್ಯಾಯ 59  
  • ಯೆಶಾಯ ಅಧ್ಯಾಯ 60  
  • ಯೆಶಾಯ ಅಧ್ಯಾಯ 61  
  • ಯೆಶಾಯ ಅಧ್ಯಾಯ 62  
  • ಯೆಶಾಯ ಅಧ್ಯಾಯ 63  
  • ಯೆಶಾಯ ಅಧ್ಯಾಯ 64  
  • ಯೆಶಾಯ ಅಧ್ಯಾಯ 65  
  • ಯೆಶಾಯ ಅಧ್ಯಾಯ 66  
×

Alert

×

Kannada Letters Keypad References