ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಙ್ಞಾನೋಕ್ತಿಗಳು

ಙ್ಞಾನೋಕ್ತಿಗಳು ಅಧ್ಯಾಯ 9

1 ಜ್ಞಾನವೆಂಬಾಕೆಯು ತನ್ನ ಮನೆಯನ್ನು ಕಟ್ಟಿ ಕೊಂಡಿದ್ದಾಳೆ; ಆಕೆಯು ತನ್ನ ಏಳು ಕಂಬ ಗಳನ್ನು ಕೆತ್ತಿಸಿದ್ದಾಳೆ. 2 ಆಕೆಯು ತನ್ನ ಪಶುಗಳನ್ನು ವಧಿಸಿ, ತನ್ನ ದ್ರಾಕ್ಷಾರಸವನ್ನು ಬೆರಸಿ, ತನ್ನ ಮೇಜನ್ನು ಸಹ ಸಿದ್ಧಪಡಿಸಿದಳು. 3 ಆಕೆಯು ತನ್ನ ಕನ್ನಿಕೆಯರನ್ನು ಕಳುಹಿಸುತ್ತಾಳೆ. ಆಕೆಯು ಪಟ್ಟಣದ ಅತಿ ಉನ್ನತ ಸ್ಥಳಗಳಲ್ಲಿ-- 4 ಮೂರ್ಖನು ಯಾವನೋ ಅವನು ಇಲ್ಲಿಗೆ ತಿರುಗಲಿ ಎಂದು ಕೂಗುತ್ತಾಳೆ. ತಿಳುವಳಿಕೆ ಇಲ್ಲದೆ ಇರುವವನಿಗೆ ಆಕೆಯು-- 5 ಬಾ, ನನ್ನ ರೊಟ್ಟಿಯನ್ನು ತಿಂದು ನಾನು ಬೆರಸಿದ ದ್ರಾಕ್ಷಾ ರಸವನ್ನು ಕುಡಿ ಎಂದೂ 6 ಮೂಢರನ್ನು ಬಿಟ್ಟು ಬಾಳು ಮತ್ತು ವಿವೇಕದ ಮಾರ್ಗದಲ್ಲಿ ಹೋಗು ಎಂದೂ ಕೂಗುತ್ತಾಳೆ. 7 ಪರಿಹಾಸ್ಯಮಾಡುವವನನ್ನು ಗದರಿಸುವವನು ತನಗೆ ತಾನೇ ಅವಮಾನಕ್ಕೆ ಗುರಿಮಾಡಿಕೊಳ್ಳುವನು; ದುಷ್ಟನನ್ನು ಗದರಿಸುವವನು ತನಗೆ ತಾನೇ ಕಳಂಕವನ್ನು ತಂದುಕೊಳ್ಳುವನು. 8 ಪರಿಹಾಸ್ಯಮಾಡುವವನು ನಿನ್ನನ್ನು ಹಗೆಮಾಡದಂತೆ ಅವನನ್ನು ಗದರಿಸಬೇಡ. ಜ್ಞಾನಿಯನ್ನು ಗದರಿಸಿದರೆ ಅವನು ನಿನ್ನನ್ನು ಪ್ರೀತಿ ಮಾಡುವನು. 9 ಜ್ಞಾನಿಗೆ ಶಿಕ್ಷಣ ಮಾಡಿದರೆ ಅವನು ಇನ್ನೂ ಹೆಚ್ಚಾಗಿ ಜ್ಞಾನವಂತನಾಗಿರುವನು; ನೀತಿವಂತ ನಿಗೆ ಬೋಧಿಸಿದರೆ ಅವನು ಜ್ಞಾನವನ್ನು ಹೆಚ್ಚಿಸಿ ಕೊಳ್ಳುವನು. ಕರ್ತನ ಭಯವೇ ಜ್ಞಾನಕ್ಕೆ ಮೂಲವು. 10 ಪರಿಶುದ್ಧರ ತಿಳುವಳಿಕೆಯೇ ವಿವೇಕವು. 11 ನನ್ನ ಮೂಲಕ ನಿನ್ನ ದಿನಗಳು ಹೆಚ್ಚುವವು; ನಿನ್ನ ಜೀವನದ ವರುಷಗಳು ವೃದ್ಧಿಯಾಗುವವು. 12 ನೀನು ಜ್ಞಾನಿಯಾ ಗಿದ್ದರೆ ನಿನ್ನಷ್ಟಕ್ಕೆ ನೀನೇ ಜ್ಞಾನಿಯಾಗಿರುವಿ; ನೀನು ನಿಂದಿಸುವವನಾದರೆ ನೀನೇ ಅದನ್ನು ಅನುಭವಿಸುವಿ. 13 ಬುದ್ಧಿಹೀನಳಾದ ಸ್ತ್ರೀಯು ಕೂಗಾಟದವಳು. ಅವಳು ಅಜ್ಞಾನಿ; ಏನೂ ತಿಳಿಯದವಳು. 14 ತನ್ನ ಮನೆಯ ಬಾಗಲಿನಲ್ಲಿ ಪಟ್ಟಣದ ಎತ್ತರವಾದ ಸ್ಥಳಗಳ ಪೀಠದ ಮೇಲೆ ಕೂತುಕೊಂಡಿರುತ್ತಾಳೆ. 15 ಮಾರ್ಗಕ್ಕನುಸಾರವಾಗಿ ಹೋಗುವ ಪ್ರಯಾಣಿಕ ರನ್ನು ಕರೆಯುತ್ತಾಳೆ. 16 ಯಾವನು ಮೂಢನೋ ಅವನು ಇಲ್ಲಿಗೆ ತಿರುಗಲಿ; ವಿವೇಕವಿಲ್ಲದವನಿಗೆ ಆಕೆಯು-- 17 ಕದಿಯಲ್ಪಟ್ಟ ನೀರುಗಳು ಸಿಹಿಯಾಗಿವೆ ರಹಸ್ಯ ದಲ್ಲಿ ತಿನ್ನುವ ರೊಟ್ಟಿಯು ರುಚಿಯಾಗಿದೆ ಎಂದು ಹೇಳುತ್ತಾಳೆ. 18 ಆದರೆ ಸತ್ತವರು ಅಲ್ಲಿದ್ದಾರೆಂದೂ ಪಾತಾಳದ ಅಗಾಧಗಳಲ್ಲಿ ಅವಳ ಅಥಿತಿಗಳು ಇದ್ದಾ ರೆಂದೂ ಅವನಿಗೆ ತಿಳಿಯದು.
1. ಜ್ಞಾನವೆಂಬಾಕೆಯು ತನ್ನ ಮನೆಯನ್ನು ಕಟ್ಟಿ ಕೊಂಡಿದ್ದಾಳೆ; ಆಕೆಯು ತನ್ನ ಏಳು ಕಂಬ ಗಳನ್ನು ಕೆತ್ತಿಸಿದ್ದಾಳೆ. 2. ಆಕೆಯು ತನ್ನ ಪಶುಗಳನ್ನು ವಧಿಸಿ, ತನ್ನ ದ್ರಾಕ್ಷಾರಸವನ್ನು ಬೆರಸಿ, ತನ್ನ ಮೇಜನ್ನು ಸಹ ಸಿದ್ಧಪಡಿಸಿದಳು. 3. ಆಕೆಯು ತನ್ನ ಕನ್ನಿಕೆಯರನ್ನು ಕಳುಹಿಸುತ್ತಾಳೆ. ಆಕೆಯು ಪಟ್ಟಣದ ಅತಿ ಉನ್ನತ ಸ್ಥಳಗಳಲ್ಲಿ-- 4. ಮೂರ್ಖನು ಯಾವನೋ ಅವನು ಇಲ್ಲಿಗೆ ತಿರುಗಲಿ ಎಂದು ಕೂಗುತ್ತಾಳೆ. ತಿಳುವಳಿಕೆ ಇಲ್ಲದೆ ಇರುವವನಿಗೆ ಆಕೆಯು-- 5. ಬಾ, ನನ್ನ ರೊಟ್ಟಿಯನ್ನು ತಿಂದು ನಾನು ಬೆರಸಿದ ದ್ರಾಕ್ಷಾ ರಸವನ್ನು ಕುಡಿ ಎಂದೂ 6. ಮೂಢರನ್ನು ಬಿಟ್ಟು ಬಾಳು ಮತ್ತು ವಿವೇಕದ ಮಾರ್ಗದಲ್ಲಿ ಹೋಗು ಎಂದೂ ಕೂಗುತ್ತಾಳೆ. 7. ಪರಿಹಾಸ್ಯಮಾಡುವವನನ್ನು ಗದರಿಸುವವನು ತನಗೆ ತಾನೇ ಅವಮಾನಕ್ಕೆ ಗುರಿಮಾಡಿಕೊಳ್ಳುವನು; ದುಷ್ಟನನ್ನು ಗದರಿಸುವವನು ತನಗೆ ತಾನೇ ಕಳಂಕವನ್ನು ತಂದುಕೊಳ್ಳುವನು. 8. ಪರಿಹಾಸ್ಯಮಾಡುವವನು ನಿನ್ನನ್ನು ಹಗೆಮಾಡದಂತೆ ಅವನನ್ನು ಗದರಿಸಬೇಡ. ಜ್ಞಾನಿಯನ್ನು ಗದರಿಸಿದರೆ ಅವನು ನಿನ್ನನ್ನು ಪ್ರೀತಿ ಮಾಡುವನು. 9. ಜ್ಞಾನಿಗೆ ಶಿಕ್ಷಣ ಮಾಡಿದರೆ ಅವನು ಇನ್ನೂ ಹೆಚ್ಚಾಗಿ ಜ್ಞಾನವಂತನಾಗಿರುವನು; ನೀತಿವಂತ ನಿಗೆ ಬೋಧಿಸಿದರೆ ಅವನು ಜ್ಞಾನವನ್ನು ಹೆಚ್ಚಿಸಿ ಕೊಳ್ಳುವನು. ಕರ್ತನ ಭಯವೇ ಜ್ಞಾನಕ್ಕೆ ಮೂಲವು. 10. ಪರಿಶುದ್ಧರ ತಿಳುವಳಿಕೆಯೇ ವಿವೇಕವು. 11. ನನ್ನ ಮೂಲಕ ನಿನ್ನ ದಿನಗಳು ಹೆಚ್ಚುವವು; ನಿನ್ನ ಜೀವನದ ವರುಷಗಳು ವೃದ್ಧಿಯಾಗುವವು. 12. ನೀನು ಜ್ಞಾನಿಯಾ ಗಿದ್ದರೆ ನಿನ್ನಷ್ಟಕ್ಕೆ ನೀನೇ ಜ್ಞಾನಿಯಾಗಿರುವಿ; ನೀನು ನಿಂದಿಸುವವನಾದರೆ ನೀನೇ ಅದನ್ನು ಅನುಭವಿಸುವಿ. 13. ಬುದ್ಧಿಹೀನಳಾದ ಸ್ತ್ರೀಯು ಕೂಗಾಟದವಳು. ಅವಳು ಅಜ್ಞಾನಿ; ಏನೂ ತಿಳಿಯದವಳು. 14. ತನ್ನ ಮನೆಯ ಬಾಗಲಿನಲ್ಲಿ ಪಟ್ಟಣದ ಎತ್ತರವಾದ ಸ್ಥಳಗಳ ಪೀಠದ ಮೇಲೆ ಕೂತುಕೊಂಡಿರುತ್ತಾಳೆ. 15. ಮಾರ್ಗಕ್ಕನುಸಾರವಾಗಿ ಹೋಗುವ ಪ್ರಯಾಣಿಕ ರನ್ನು ಕರೆಯುತ್ತಾಳೆ. 16. ಯಾವನು ಮೂಢನೋ ಅವನು ಇಲ್ಲಿಗೆ ತಿರುಗಲಿ; ವಿವೇಕವಿಲ್ಲದವನಿಗೆ ಆಕೆಯು-- 17. ಕದಿಯಲ್ಪಟ್ಟ ನೀರುಗಳು ಸಿಹಿಯಾಗಿವೆ ರಹಸ್ಯ ದಲ್ಲಿ ತಿನ್ನುವ ರೊಟ್ಟಿಯು ರುಚಿಯಾಗಿದೆ ಎಂದು ಹೇಳುತ್ತಾಳೆ. 18. ಆದರೆ ಸತ್ತವರು ಅಲ್ಲಿದ್ದಾರೆಂದೂ ಪಾತಾಳದ ಅಗಾಧಗಳಲ್ಲಿ ಅವಳ ಅಥಿತಿಗಳು ಇದ್ದಾ ರೆಂದೂ ಅವನಿಗೆ ತಿಳಿಯದು.
  • ಙ್ಞಾನೋಕ್ತಿಗಳು ಅಧ್ಯಾಯ 1  
  • ಙ್ಞಾನೋಕ್ತಿಗಳು ಅಧ್ಯಾಯ 2  
  • ಙ್ಞಾನೋಕ್ತಿಗಳು ಅಧ್ಯಾಯ 3  
  • ಙ್ಞಾನೋಕ್ತಿಗಳು ಅಧ್ಯಾಯ 4  
  • ಙ್ಞಾನೋಕ್ತಿಗಳು ಅಧ್ಯಾಯ 5  
  • ಙ್ಞಾನೋಕ್ತಿಗಳು ಅಧ್ಯಾಯ 6  
  • ಙ್ಞಾನೋಕ್ತಿಗಳು ಅಧ್ಯಾಯ 7  
  • ಙ್ಞಾನೋಕ್ತಿಗಳು ಅಧ್ಯಾಯ 8  
  • ಙ್ಞಾನೋಕ್ತಿಗಳು ಅಧ್ಯಾಯ 9  
  • ಙ್ಞಾನೋಕ್ತಿಗಳು ಅಧ್ಯಾಯ 10  
  • ಙ್ಞಾನೋಕ್ತಿಗಳು ಅಧ್ಯಾಯ 11  
  • ಙ್ಞಾನೋಕ್ತಿಗಳು ಅಧ್ಯಾಯ 12  
  • ಙ್ಞಾನೋಕ್ತಿಗಳು ಅಧ್ಯಾಯ 13  
  • ಙ್ಞಾನೋಕ್ತಿಗಳು ಅಧ್ಯಾಯ 14  
  • ಙ್ಞಾನೋಕ್ತಿಗಳು ಅಧ್ಯಾಯ 15  
  • ಙ್ಞಾನೋಕ್ತಿಗಳು ಅಧ್ಯಾಯ 16  
  • ಙ್ಞಾನೋಕ್ತಿಗಳು ಅಧ್ಯಾಯ 17  
  • ಙ್ಞಾನೋಕ್ತಿಗಳು ಅಧ್ಯಾಯ 18  
  • ಙ್ಞಾನೋಕ್ತಿಗಳು ಅಧ್ಯಾಯ 19  
  • ಙ್ಞಾನೋಕ್ತಿಗಳು ಅಧ್ಯಾಯ 20  
  • ಙ್ಞಾನೋಕ್ತಿಗಳು ಅಧ್ಯಾಯ 21  
  • ಙ್ಞಾನೋಕ್ತಿಗಳು ಅಧ್ಯಾಯ 22  
  • ಙ್ಞಾನೋಕ್ತಿಗಳು ಅಧ್ಯಾಯ 23  
  • ಙ್ಞಾನೋಕ್ತಿಗಳು ಅಧ್ಯಾಯ 24  
  • ಙ್ಞಾನೋಕ್ತಿಗಳು ಅಧ್ಯಾಯ 25  
  • ಙ್ಞಾನೋಕ್ತಿಗಳು ಅಧ್ಯಾಯ 26  
  • ಙ್ಞಾನೋಕ್ತಿಗಳು ಅಧ್ಯಾಯ 27  
  • ಙ್ಞಾನೋಕ್ತಿಗಳು ಅಧ್ಯಾಯ 28  
  • ಙ್ಞಾನೋಕ್ತಿಗಳು ಅಧ್ಯಾಯ 29  
  • ಙ್ಞಾನೋಕ್ತಿಗಳು ಅಧ್ಯಾಯ 30  
  • ಙ್ಞಾನೋಕ್ತಿಗಳು ಅಧ್ಯಾಯ 31  
×

Alert

×

Kannada Letters Keypad References