ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
1 ಕೊರಿಂಥದವರಿಗೆ

1 ಕೊರಿಂಥದವರಿಗೆ ಅಧ್ಯಾಯ 3

1 ಸಹೋದರರೇ, ನಾನಂತೂ ಆತ್ಮನಿಂದ ನಡಿಸಿಕೊಳ್ಳುವವರಿಗೆ ತಕ್ಕಂತೆ ನಿಮ್ಮ ಸಂಗಡ ಮಾತನಾಡಲಾರದೆ ಪ್ರಾಪಂಚಿಕರೂ ಕ್ರಿಸ್ತ ನಲ್ಲಿ ಎಳೆಕೂಸುಗಳೂ ಆಗಿರುವಂಥವರಿಗೆ ತಕ್ಕಂತೆ ನಿಮ್ಮ ಸಂಗಡ ಮಾತನಾಡಬೇಕಾಯಿತು. 2 ನಿಮಗೆ ಹಾಲು ಕುಡಿಸಿದೆನು, ಅನ್ನ ಕೊಡಲಿಲ್ಲ; ಅನ್ನ ತಿನು ್ನವದಕ್ಕೆ ನಿಮಗೆ ಶಕ್ತಿ ಇರಲಿಲ್ಲ, ಇಲ್ಲವೆ ಈಗಲಾದರೂ ಶಕ್ತಿಯಿಲ್ಲ; 3 ನೀವು ಇನ್ನೂ ಪ್ರಾಪಂಚಿಕರಾಗಿದ್ದೀರಿ. ನಿಮ್ಮೊಳಗೆ ಹೊಟ್ಟೇಕಿಚ್ಚು, ಜಗಳ, ಭೇದಗಳು ಇರುವಲ್ಲಿ ನೀವು ಪ್ರಾಪಂಚಿಕರಾಗಿದ್ದು ಮನುಷ್ಯರಂತೆ ನಡೆಯುತ್ತೀರಲ್ಲವೇ? 4 ಒಬ್ಬನು--ನಾನು ಪೌಲನ ವನೆಂದೂ ಮತ್ತೊಬ್ಬನು--ನಾನು ಅಪೊಲ್ಲೋಸನ ವನೆಂದೂ ಹೇಳುತ್ತಿರುವಾಗ ನೀವು ಪ್ರಾಪಂಚಿಕ ರಲ್ಲವೇ? 5 ಹಾಗಾದರೆ ಪೌಲನು ಯಾರು? ಅಪೊಲ್ಲೋಸನು ಯಾರು? ಅವರು ಸೇವಕರು, ಅವರ ಮುಖಾಂತರ ನೀವು ನಂಬುವವರಾದಿರಿ; ಕರ್ತನು ಒಬ್ಬೊಬ್ಬನಿಗೆ ದಯಪಾಲಿಸಿದ ಪ್ರಕಾರ ಅವರು ಸೇವೆ ಮಾಡುವವ ರಾಗಿದ್ದಾರೆ. 6 ನಾನು ಸಸಿಯನ್ನು ನೆಟ್ಟೆನು, ಅಪೊಲ್ಲೋ ಸನು ನೀರು ಹೊಯಿದನು. ಆದರೆ ಬೆಳೆಸುತ್ತಾ ಬಂದಾತನು ದೇವರು. 7 ಹೀಗಿರಲಾಗಿ ನೆಡುವವ ನಾಗಲಿ ನೀರು ಹೊಯ್ಯುವವನಾಗಲಿ ವಿಶೇಷವಾ ದವನಲ್ಲ, ಬೆಳೆಸುವ ದೇವರೇ ವಿಶೇಷವಾದವನು. 8 ನೆಡುವವನೂ ನೀರು ಹೊಯ್ಯುವವನೂ ಒಂದೇ ಆಗಿದ್ದಾರೆ; ಆದರೂ ಪ್ರತಿಯೊಬ್ಬನಿಗೆ ಅವನವನ ಕಷ್ಟಕ್ಕೆ ತಕ್ಕಹಾಗೆ ಕೂಲಿಯು ದೊರೆಯುವದು. 9 ನಾವು ದೇವರ ಜೊತೆ ಕೆಲಸದವರು; ನೀವು ದೇವರ ಹೊಲವೂ ದೇವರ ಕಟ್ಟಡವೂ ಆಗಿದ್ದೀರಿ. 10 ದೇವರು ನನಗೆ ಕೃಪೆಯನ್ನು ಕೊಟ್ಟ ಪ್ರಕಾರ ನಾನು ಪ್ರವೀಣಶಿಲ್ಪಿಯಂತೆ ಆಸ್ತಿವಾರ ಹಾಕಿದೆನು. ಮತ್ತೊಬ್ಬನು ಅದರ ಮೇಲೆ ಕಟ್ಟುತ್ತಾನೆ; ಪ್ರತಿಯೊಬ್ಬನು ತಾನು ಅದರ ಮೇಲೆ ಹೇಗೆ ಕಟ್ಟುತ್ತಾನೋ ಎಚ್ಚರಿಕೆಯಾಗಿರಬೇಕು. 11 ಹಾಕಿರುವ ಅಸ್ತಿವಾರವು ಯೇಸು ಕ್ರಿಸ್ತನೇ; ಆ ಅಸ್ತಿವಾರವನ್ನಲ್ಲದೆ ಮತ್ತೊಂದು ಅಸ್ತಿವಾರವನ್ನು ಯಾರೂ ಹಾಕಲಾರರಷ್ಟೆ. 12 ಈ ಅಸ್ತಿವಾರದ ಮೇಲೆ ಚಿನ್ನ ಬೆಳ್ಳಿ ಅಮೂಲ್ಯವಾದ ಕಲ್ಲುಗಳು ಕಟ್ಟಿಗೆ ಹುಲ್ಲು ಆಪು ಇವುಗಳಲಿ 13 ಯಾವದರಿಂದ ಕಟ್ಟಿದರೂ ಅವನವನ ಕೆಲಸವು ವ್ಯಕ್ತವಾಗುವದು; ಯಾಕಂದರೆ ಆ ದಿನವು ಬೆಂಕಿ ಯೊಡನೆ ಪ್ರತ್ಯಕ್ಷವಾಗಿ ಆ ಕೆಲಸವನ್ನು ಸ್ಪಷ್ಟವಾಗಿ ತೋರಿಸುವದು; ಅವನವನ ಕೆಲಸವೆಂಥದೋ ಆ ಬೆಂಕಿ ಶೋಧಿಸುವದು. 14 ಒಬ್ಬನು ಆ ಅಸ್ತಿವಾರದ ಮೇಲೆ ಕಟ್ಟಿದ್ದು ಉಳಿದರೆ ಅವನಿಗೆ ಪ್ರತಿಫಲ ದೊರೆಯುವದು; 15 ಒಬ್ಬನು ಕಟ್ಟಿದ್ದು ಸುಟ್ಟು ಹೋದರೆ ಅವನಿಗೆ ನಷ್ಟವಾಗುವದು; ತಾನಾದರೋ ರಕ್ಷಣೆ ಹೊಂದುವನು. ಆದರೂ ಬೆಂಕಿಯೊಳಗಿಂದ ತಪ್ಪಿಸಿ ಕೊಂಡವನ ಹಾಗಿರುವನು. 16 ನೀವು ದೇವರ ಆಲಯವಾಗಿದ್ದೀರೆಂದೂ ದೇವರ ಆತ್ಮನು ನಿಮ್ಮಲ್ಲಿ ವಾಸಮಾಡುತ್ತಾನೆಂದೂ ನಿಮಗೆ ಗೊತ್ತಿಲ್ಲವೋ? 17 ಯಾವನಾದರೂ ದೇವರ ಆಲಯವನ್ನು ಹೊಲೆಮಾಡಿದರೆ ದೇವರು ಅವನನ್ನು ನಾಶಮಾಡುವನು; ಯಾಕಂದರೆ ದೇವರ ಆಲಯವು ಪವಿತ್ರವಾದದ್ದು, ಆ ಆಲಯವು ನೀವೇ. 18 ಯಾವನೂ ತನ್ನನ್ನು ತಾನೇ ಮೋಸಗೊಳಿಸ ದಿರಲಿ; ನಿಮ್ಮಲ್ಲಿ ಯಾವನಾದರೂ ಈ ಲೋಕ ಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿ ಕೊಂಡರೆ ಜ್ಞಾನಿಯಾಗುವಂತೆ ಹುಚ್ಚನಾಗಲಿ. 19 ಇಹಲೋಕಜ್ಞಾನವು ದೇವರ ಮುಂದೆ ಹುಚ್ಚುತನವಾಗಿದೆ. ಯಾಕಂದರೆ--ಆತನು ಜ್ಞಾನಿ ಗಳನ್ನು ಅವರ ಸ್ವಂತತಂತ್ರದಲ್ಲಿಯೇ ಹಿಡು ಕೊಳ್ಳುತ್ತಾನೆಂತಲೂ 20 ಜ್ಞಾನಿಗಳ ಯೋಚನೆಗಳು ನಿಷ್ಪಲವಾದವುಗಳೆಂದೂ ಕರ್ತನು ತಿಳುಕೊಳ್ಳುತ್ತಾನೆ ಬರೆದದೆಯಲ್ಲಾ; 21 ಆದಕಾರಣ ಮನುಷ್ಯ ಮಾತ್ರದವರ ವಿಷಯದಲ್ಲಿ ಯಾರೂ ಹಿಗ್ಗದಿರಲಿ. ಯಾಕಂದರೆ ಸಮಸ್ತವೂ ನಿಮ್ಮದು; 22 ಪೌಲನಾಗಲಿ ಅಪೊಲ್ಲೋಸನಾಗಲಿ ಕೇಫನಾಗಲಿ ಲೋಕವಾಗಲಿ ಜೀವವಾಗಲಿ ಮರಣವಾಗಲಿ ಈಗಿನ ಸಂಗತಿ ಗಳಾಗಲಿ ಮುಂದಣ ಸಂಗತಿಗಳಾಗಲೀ ಸಮಸ್ತವೂ ನಿಮ್ಮವೇ; 23 ನೀವಂತೂ ಕ್ರಿಸ್ತನವರು, ಕ್ರಿಸ್ತನು ದೇವರವನು.
1 ಸಹೋದರರೇ, ನಾನಂತೂ ಆತ್ಮನಿಂದ ನಡಿಸಿಕೊಳ್ಳುವವರಿಗೆ ತಕ್ಕಂತೆ ನಿಮ್ಮ ಸಂಗಡ ಮಾತನಾಡಲಾರದೆ ಪ್ರಾಪಂಚಿಕರೂ ಕ್ರಿಸ್ತ ನಲ್ಲಿ ಎಳೆಕೂಸುಗಳೂ ಆಗಿರುವಂಥವರಿಗೆ ತಕ್ಕಂತೆ ನಿಮ್ಮ ಸಂಗಡ ಮಾತನಾಡಬೇಕಾಯಿತು. .::. 2 ನಿಮಗೆ ಹಾಲು ಕುಡಿಸಿದೆನು, ಅನ್ನ ಕೊಡಲಿಲ್ಲ; ಅನ್ನ ತಿನು ್ನವದಕ್ಕೆ ನಿಮಗೆ ಶಕ್ತಿ ಇರಲಿಲ್ಲ, ಇಲ್ಲವೆ ಈಗಲಾದರೂ ಶಕ್ತಿಯಿಲ್ಲ; .::. 3 ನೀವು ಇನ್ನೂ ಪ್ರಾಪಂಚಿಕರಾಗಿದ್ದೀರಿ. ನಿಮ್ಮೊಳಗೆ ಹೊಟ್ಟೇಕಿಚ್ಚು, ಜಗಳ, ಭೇದಗಳು ಇರುವಲ್ಲಿ ನೀವು ಪ್ರಾಪಂಚಿಕರಾಗಿದ್ದು ಮನುಷ್ಯರಂತೆ ನಡೆಯುತ್ತೀರಲ್ಲವೇ? .::. 4 ಒಬ್ಬನು--ನಾನು ಪೌಲನ ವನೆಂದೂ ಮತ್ತೊಬ್ಬನು--ನಾನು ಅಪೊಲ್ಲೋಸನ ವನೆಂದೂ ಹೇಳುತ್ತಿರುವಾಗ ನೀವು ಪ್ರಾಪಂಚಿಕ ರಲ್ಲವೇ? .::. 5 ಹಾಗಾದರೆ ಪೌಲನು ಯಾರು? ಅಪೊಲ್ಲೋಸನು ಯಾರು? ಅವರು ಸೇವಕರು, ಅವರ ಮುಖಾಂತರ ನೀವು ನಂಬುವವರಾದಿರಿ; ಕರ್ತನು ಒಬ್ಬೊಬ್ಬನಿಗೆ ದಯಪಾಲಿಸಿದ ಪ್ರಕಾರ ಅವರು ಸೇವೆ ಮಾಡುವವ ರಾಗಿದ್ದಾರೆ. .::. 6 ನಾನು ಸಸಿಯನ್ನು ನೆಟ್ಟೆನು, ಅಪೊಲ್ಲೋ ಸನು ನೀರು ಹೊಯಿದನು. ಆದರೆ ಬೆಳೆಸುತ್ತಾ ಬಂದಾತನು ದೇವರು. .::. 7 ಹೀಗಿರಲಾಗಿ ನೆಡುವವ ನಾಗಲಿ ನೀರು ಹೊಯ್ಯುವವನಾಗಲಿ ವಿಶೇಷವಾ ದವನಲ್ಲ, ಬೆಳೆಸುವ ದೇವರೇ ವಿಶೇಷವಾದವನು. .::. 8 ನೆಡುವವನೂ ನೀರು ಹೊಯ್ಯುವವನೂ ಒಂದೇ ಆಗಿದ್ದಾರೆ; ಆದರೂ ಪ್ರತಿಯೊಬ್ಬನಿಗೆ ಅವನವನ ಕಷ್ಟಕ್ಕೆ ತಕ್ಕಹಾಗೆ ಕೂಲಿಯು ದೊರೆಯುವದು. .::. 9 ನಾವು ದೇವರ ಜೊತೆ ಕೆಲಸದವರು; ನೀವು ದೇವರ ಹೊಲವೂ ದೇವರ ಕಟ್ಟಡವೂ ಆಗಿದ್ದೀರಿ. .::. 10 ದೇವರು ನನಗೆ ಕೃಪೆಯನ್ನು ಕೊಟ್ಟ ಪ್ರಕಾರ ನಾನು ಪ್ರವೀಣಶಿಲ್ಪಿಯಂತೆ ಆಸ್ತಿವಾರ ಹಾಕಿದೆನು. ಮತ್ತೊಬ್ಬನು ಅದರ ಮೇಲೆ ಕಟ್ಟುತ್ತಾನೆ; ಪ್ರತಿಯೊಬ್ಬನು ತಾನು ಅದರ ಮೇಲೆ ಹೇಗೆ ಕಟ್ಟುತ್ತಾನೋ ಎಚ್ಚರಿಕೆಯಾಗಿರಬೇಕು. .::. 11 ಹಾಕಿರುವ ಅಸ್ತಿವಾರವು ಯೇಸು ಕ್ರಿಸ್ತನೇ; ಆ ಅಸ್ತಿವಾರವನ್ನಲ್ಲದೆ ಮತ್ತೊಂದು ಅಸ್ತಿವಾರವನ್ನು ಯಾರೂ ಹಾಕಲಾರರಷ್ಟೆ. .::. 12 ಈ ಅಸ್ತಿವಾರದ ಮೇಲೆ ಚಿನ್ನ ಬೆಳ್ಳಿ ಅಮೂಲ್ಯವಾದ ಕಲ್ಲುಗಳು ಕಟ್ಟಿಗೆ ಹುಲ್ಲು ಆಪು ಇವುಗಳಲಿ .::. 13 ಯಾವದರಿಂದ ಕಟ್ಟಿದರೂ ಅವನವನ ಕೆಲಸವು ವ್ಯಕ್ತವಾಗುವದು; ಯಾಕಂದರೆ ಆ ದಿನವು ಬೆಂಕಿ ಯೊಡನೆ ಪ್ರತ್ಯಕ್ಷವಾಗಿ ಆ ಕೆಲಸವನ್ನು ಸ್ಪಷ್ಟವಾಗಿ ತೋರಿಸುವದು; ಅವನವನ ಕೆಲಸವೆಂಥದೋ ಆ ಬೆಂಕಿ ಶೋಧಿಸುವದು. .::. 14 ಒಬ್ಬನು ಆ ಅಸ್ತಿವಾರದ ಮೇಲೆ ಕಟ್ಟಿದ್ದು ಉಳಿದರೆ ಅವನಿಗೆ ಪ್ರತಿಫಲ ದೊರೆಯುವದು; .::. 15 ಒಬ್ಬನು ಕಟ್ಟಿದ್ದು ಸುಟ್ಟು ಹೋದರೆ ಅವನಿಗೆ ನಷ್ಟವಾಗುವದು; ತಾನಾದರೋ ರಕ್ಷಣೆ ಹೊಂದುವನು. ಆದರೂ ಬೆಂಕಿಯೊಳಗಿಂದ ತಪ್ಪಿಸಿ ಕೊಂಡವನ ಹಾಗಿರುವನು. .::. 16 ನೀವು ದೇವರ ಆಲಯವಾಗಿದ್ದೀರೆಂದೂ ದೇವರ ಆತ್ಮನು ನಿಮ್ಮಲ್ಲಿ ವಾಸಮಾಡುತ್ತಾನೆಂದೂ ನಿಮಗೆ ಗೊತ್ತಿಲ್ಲವೋ? .::. 17 ಯಾವನಾದರೂ ದೇವರ ಆಲಯವನ್ನು ಹೊಲೆಮಾಡಿದರೆ ದೇವರು ಅವನನ್ನು ನಾಶಮಾಡುವನು; ಯಾಕಂದರೆ ದೇವರ ಆಲಯವು ಪವಿತ್ರವಾದದ್ದು, ಆ ಆಲಯವು ನೀವೇ. .::. 18 ಯಾವನೂ ತನ್ನನ್ನು ತಾನೇ ಮೋಸಗೊಳಿಸ ದಿರಲಿ; ನಿಮ್ಮಲ್ಲಿ ಯಾವನಾದರೂ ಈ ಲೋಕ ಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿ ಕೊಂಡರೆ ಜ್ಞಾನಿಯಾಗುವಂತೆ ಹುಚ್ಚನಾಗಲಿ. .::. 19 ಇಹಲೋಕಜ್ಞಾನವು ದೇವರ ಮುಂದೆ ಹುಚ್ಚುತನವಾಗಿದೆ. ಯಾಕಂದರೆ--ಆತನು ಜ್ಞಾನಿ ಗಳನ್ನು ಅವರ ಸ್ವಂತತಂತ್ರದಲ್ಲಿಯೇ ಹಿಡು ಕೊಳ್ಳುತ್ತಾನೆಂತಲೂ .::. 20 ಜ್ಞಾನಿಗಳ ಯೋಚನೆಗಳು ನಿಷ್ಪಲವಾದವುಗಳೆಂದೂ ಕರ್ತನು ತಿಳುಕೊಳ್ಳುತ್ತಾನೆ ಬರೆದದೆಯಲ್ಲಾ; .::. 21 ಆದಕಾರಣ ಮನುಷ್ಯ ಮಾತ್ರದವರ ವಿಷಯದಲ್ಲಿ ಯಾರೂ ಹಿಗ್ಗದಿರಲಿ. ಯಾಕಂದರೆ ಸಮಸ್ತವೂ ನಿಮ್ಮದು; .::. 22 ಪೌಲನಾಗಲಿ ಅಪೊಲ್ಲೋಸನಾಗಲಿ ಕೇಫನಾಗಲಿ ಲೋಕವಾಗಲಿ ಜೀವವಾಗಲಿ ಮರಣವಾಗಲಿ ಈಗಿನ ಸಂಗತಿ ಗಳಾಗಲಿ ಮುಂದಣ ಸಂಗತಿಗಳಾಗಲೀ ಸಮಸ್ತವೂ ನಿಮ್ಮವೇ; .::. 23 ನೀವಂತೂ ಕ್ರಿಸ್ತನವರು, ಕ್ರಿಸ್ತನು ದೇವರವನು.
  • 1 ಕೊರಿಂಥದವರಿಗೆ ಅಧ್ಯಾಯ 1  
  • 1 ಕೊರಿಂಥದವರಿಗೆ ಅಧ್ಯಾಯ 2  
  • 1 ಕೊರಿಂಥದವರಿಗೆ ಅಧ್ಯಾಯ 3  
  • 1 ಕೊರಿಂಥದವರಿಗೆ ಅಧ್ಯಾಯ 4  
  • 1 ಕೊರಿಂಥದವರಿಗೆ ಅಧ್ಯಾಯ 5  
  • 1 ಕೊರಿಂಥದವರಿಗೆ ಅಧ್ಯಾಯ 6  
  • 1 ಕೊರಿಂಥದವರಿಗೆ ಅಧ್ಯಾಯ 7  
  • 1 ಕೊರಿಂಥದವರಿಗೆ ಅಧ್ಯಾಯ 8  
  • 1 ಕೊರಿಂಥದವರಿಗೆ ಅಧ್ಯಾಯ 9  
  • 1 ಕೊರಿಂಥದವರಿಗೆ ಅಧ್ಯಾಯ 10  
  • 1 ಕೊರಿಂಥದವರಿಗೆ ಅಧ್ಯಾಯ 11  
  • 1 ಕೊರಿಂಥದವರಿಗೆ ಅಧ್ಯಾಯ 12  
  • 1 ಕೊರಿಂಥದವರಿಗೆ ಅಧ್ಯಾಯ 13  
  • 1 ಕೊರಿಂಥದವರಿಗೆ ಅಧ್ಯಾಯ 14  
  • 1 ಕೊರಿಂಥದವರಿಗೆ ಅಧ್ಯಾಯ 15  
  • 1 ಕೊರಿಂಥದವರಿಗೆ ಅಧ್ಯಾಯ 16  
×

Alert

×

Kannada Letters Keypad References