ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
1 ಯೋಹಾನನು

1 ಯೋಹಾನನು ಅಧ್ಯಾಯ 1

1 ಆದಿಯಿಂದ ಇದ್ದದ್ದನ್ನೂ ಆ ಜೀವ ವಾಕ್ಯದ ವಿಷಯವಾಗಿ ಕೇಳಿದ್ದನ್ನೂ ಕಣ್ಣಾರೆ ಕಂಡು ನೋಡಿದ್ದನ್ನೂ ನಾವು ಕೈಯಿಂದ ಮುಟ್ಟಿದ್ದೇವೆ. 2 (ಆ ಜೀವವು ಪ್ರತ್ಯಕ್ಷವಾಯಿತು, ತಂದೆಯ ಬಳಿಯಲ್ಲಿದ್ದು ನಮಗೆ ಪ್ರತ್ಯಕ್ಷವಾದಂಥ ಆ ನಿತ್ಯಜೀವವನ್ನು ನಾವು ಕಂಡು ಅದನ್ನು ಕುರಿತು ಸಾಕ್ಷಿ ಹೇಳಿ ಅದನ್ನು ನಿಮಗೆ ತಿಳಿಯಪಡಿಸುತ್ತೇವೆ). 3 ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಇರ ಬೇಕೆಂದು ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಸಿದ್ಧಿ ಪಡಿಸುತ್ತೇವೆ. ನಿಜವಾಗಿಯೂ ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡಲೂ ಆತನ ಮಗನಾದ ಯೇಸು ಕ್ರಿಸ್ತನ ಸಂಗಡಲೂ ಇರು ವಂಥದ್ದು. 4 ನಿಮ್ಮ ಸಂತೋಷವು ಪರಿಪೂರ್ಣ ವಾಗಬೇಕೆಂದು ನಾವು ಇವುಗಳನ್ನು ಬರೆಯುತ್ತೇವೆ. 5 ನಾವು ಆತನಿಂದ ಕೇಳಿ ನಿಮಗೆ ತಿಳಿಸುವ ವಾರ್ತೆ ಯಾವದಂದರೆ--ದೇವರು ಬೆಳಕಾಗಿದ್ದಾನೆ; ಆತನಲ್ಲಿ ಎಷ್ಟು ಮಾತ್ರವೂ ಕತ್ತಲೆಯಿಲ್ಲ ಎಂಬದೇ. 6 ನಾವು ಆತನ ಸಂಗಡ ಅನ್ಯೋನ್ಯತೆಯುಳ್ಳವರಾಗಿದ್ದೇವೆಂದು ಹೇಳಿ ಕತ್ತಲೆಯಲ್ಲಿ ನಡೆದರೆ ಸುಳ್ಳಾಡುವವರಾಗಿದ್ದೇವೆ, ಸತ್ಯವನ್ನನುಸರಿಸುವವರಲ್ಲ. 7 ಆತನು ಬೆಳಕಿನಲ್ಲಿರು ವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ; ಆತನ ಮಗನಾದ ಯೇಸುಕ್ರಿಸ್ತನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ. 8 ನಮ್ಮಲ್ಲಿ ಪಾಪವಿಲ್ಲ ವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸ ಪಡಿಸಿಕೊಳ್ಳುತ್ತೇವೆ, ಸತ್ಯವು ನಮ್ಮಲ್ಲಿಲ್ಲ. 9 ನಾವು ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷಮಿಸಿಬಿಟ್ಟು ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿ ಮಾಡುವನು. 10 ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ, ಮತ್ತು ಆತನ ವಾಕ್ಯವು ನಮ್ಮಲ್ಲಿಲ್ಲ.
1 ಆದಿಯಿಂದ ಇದ್ದದ್ದನ್ನೂ ಆ ಜೀವ ವಾಕ್ಯದ ವಿಷಯವಾಗಿ ಕೇಳಿದ್ದನ್ನೂ ಕಣ್ಣಾರೆ ಕಂಡು ನೋಡಿದ್ದನ್ನೂ ನಾವು ಕೈಯಿಂದ ಮುಟ್ಟಿದ್ದೇವೆ. .::. 2 (ಆ ಜೀವವು ಪ್ರತ್ಯಕ್ಷವಾಯಿತು, ತಂದೆಯ ಬಳಿಯಲ್ಲಿದ್ದು ನಮಗೆ ಪ್ರತ್ಯಕ್ಷವಾದಂಥ ಆ ನಿತ್ಯಜೀವವನ್ನು ನಾವು ಕಂಡು ಅದನ್ನು ಕುರಿತು ಸಾಕ್ಷಿ ಹೇಳಿ ಅದನ್ನು ನಿಮಗೆ ತಿಳಿಯಪಡಿಸುತ್ತೇವೆ). .::. 3 ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಇರ ಬೇಕೆಂದು ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಸಿದ್ಧಿ ಪಡಿಸುತ್ತೇವೆ. ನಿಜವಾಗಿಯೂ ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡಲೂ ಆತನ ಮಗನಾದ ಯೇಸು ಕ್ರಿಸ್ತನ ಸಂಗಡಲೂ ಇರು ವಂಥದ್ದು. .::. 4 ನಿಮ್ಮ ಸಂತೋಷವು ಪರಿಪೂರ್ಣ ವಾಗಬೇಕೆಂದು ನಾವು ಇವುಗಳನ್ನು ಬರೆಯುತ್ತೇವೆ. .::. 5 ನಾವು ಆತನಿಂದ ಕೇಳಿ ನಿಮಗೆ ತಿಳಿಸುವ ವಾರ್ತೆ ಯಾವದಂದರೆ--ದೇವರು ಬೆಳಕಾಗಿದ್ದಾನೆ; ಆತನಲ್ಲಿ ಎಷ್ಟು ಮಾತ್ರವೂ ಕತ್ತಲೆಯಿಲ್ಲ ಎಂಬದೇ. .::. 6 ನಾವು ಆತನ ಸಂಗಡ ಅನ್ಯೋನ್ಯತೆಯುಳ್ಳವರಾಗಿದ್ದೇವೆಂದು ಹೇಳಿ ಕತ್ತಲೆಯಲ್ಲಿ ನಡೆದರೆ ಸುಳ್ಳಾಡುವವರಾಗಿದ್ದೇವೆ, ಸತ್ಯವನ್ನನುಸರಿಸುವವರಲ್ಲ. .::. 7 ಆತನು ಬೆಳಕಿನಲ್ಲಿರು ವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ; ಆತನ ಮಗನಾದ ಯೇಸುಕ್ರಿಸ್ತನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ. .::. 8 ನಮ್ಮಲ್ಲಿ ಪಾಪವಿಲ್ಲ ವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸ ಪಡಿಸಿಕೊಳ್ಳುತ್ತೇವೆ, ಸತ್ಯವು ನಮ್ಮಲ್ಲಿಲ್ಲ. .::. 9 ನಾವು ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷಮಿಸಿಬಿಟ್ಟು ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿ ಮಾಡುವನು. .::. 10 ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ, ಮತ್ತು ಆತನ ವಾಕ್ಯವು ನಮ್ಮಲ್ಲಿಲ್ಲ.
  • 1 ಯೋಹಾನನು ಅಧ್ಯಾಯ 1  
  • 1 ಯೋಹಾನನು ಅಧ್ಯಾಯ 2  
  • 1 ಯೋಹಾನನು ಅಧ್ಯಾಯ 3  
  • 1 ಯೋಹಾನನು ಅಧ್ಯಾಯ 4  
  • 1 ಯೋಹಾನನು ಅಧ್ಯಾಯ 5  
×

Alert

×

Kannada Letters Keypad References