ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಹೋಶೇ

ಹೋಶೇ ಅಧ್ಯಾಯ 6

1 ಬನ್ನಿರಿ ನಾವು ಕರ್ತನ ಕಡೆಗೆ ತಿರುಗಿ ಕೊಳ್ಳೋಣ ಯಾಕಂದರೆ ಆತನು ಸೀಳಿ ಬಿಟ್ಟಿದ್ದಾನೆ, ನಮ್ಮನ್ನು ಸ್ವಸ್ಥ ಮಾಡುತ್ತಾನೆ; ಆತನು ಹೊಡೆದಿದ್ದಾನೆ; ಆತನು ನಮ್ಮನ್ನು ಕಟ್ಟುತ್ತಾನೆ. 2 ಆತನು ಎರಡು ದಿನಗಳಾದ ಮೇಲೆ ನಮ್ಮನ್ನು ಪುನರ್ಜೀವಿಸ ಮಾಡುವನು; ಮೂರನೆಯ ದಿನದಲ್ಲಿ ಆತನೇ ನಮ್ಮನ್ನು ಎಬ್ಬಿಸುವನು; ನಾವು ಆತನ ದೃಷ್ಟಿಯಲ್ಲಿ ಜೀವಿಸುವೆವು. 3 ನಾವು ಕರ್ತನನ್ನು ತಿಳಿದುಕೊಳ್ಳಲು ಆತನನ್ನು ಹಿಂಬಾ ಲಿಸಿದರೆ ನಾವು ತಿಳಿದುಕೊಳ್ಳುವೆವು; ಅರುಣೋದ ಯದ ಹಾಗೆ ಆತನ ಹೊರಡೋಣವು ಸಿದ್ಧವಾಗಿದೆ; ಆತನು ಮಳೆಯಂತೆಯೂ ಮುಂಗಾರಿನಂತೆಯೂ ಭೂಮಿಗೆ ತಂಪುಮಾಡುವ ಹಿಂಗಾರಿನಂತೆಯೂ ನಮ್ಮ ಬಳಿಗೆ ಬರುವನು. 4 ಓ ಎಫ್ರಾಯಾಮೇ, ನಿನಗೆ ನಾನು ಏನು ಮಾಡಲಿ? ಓ ಯೆಹೂದವೇ, ನಿನಗೆ ನಾನು ಏನು ಮಾಡಲಿ? ನಿಮ್ಮ ಒಳ್ಳೇತನವು ಹೊತ್ತಾ ರೆಯ ಮೇಘದ ಹಾಗೆಯೂ ಮುಂಜಾನೆಯ ಮಂಜಿ ನಂತೆಯೂ ಹೋಗಿಬಿಡುತ್ತದೆ. 5 ಆದದರಿಂದ ನಾನು ಪ್ರವಾದಿಗಳ ಮುಖಾಂತರ ಕಡಿದುಬಿಟ್ಟು ನನ್ನ ಬಾಯಿ ಮಾತುಗಳಿಂದ ಅವರನ್ನು ಕೊಂದುಹಾಕಿದ್ದೇನೆ; ನಿನ್ನ ನ್ಯಾಯತೀರ್ಪುಗಳು ಬೆಳಕಿನ ಹಾಗೆ ಹೊರಟವು. 6 ನಾನು ಬಲಿಯನ್ನಲ್ಲ ಕರುಣೆಯನ್ನೇ ಮತ್ತು ದಹನ ಬಲಿಗಳಿಗಿಂತ ದೇವರ ತಿಳುವಳಿಕೆಯನ್ನೇ ಹೆಚ್ಚಾಗಿ ಅಪೇಕ್ಷಿಸಿದ್ದೇನೆ. 7 ಆದರೆ ಅವರು ಒಡಂಬಡಿಕೆಯನ್ನು ವಿಾರಿದ ಮನುಷ್ಯರ ಹಾಗೆ ಇದ್ದಾರೆ; ಅಲ್ಲಿ ಅವರು ನನಗೆ ವಿರುದ್ಧವಾಗಿ ದ್ರೋಹದಿಂದ ನಡೆದುಕೊಂಡಿದ್ದಾರೆ. 8 ಗಿಲ್ಯಾದು ಕೆಟ್ಟ ಕೆಲಸ ಮಾಡುವವರ ಮತ್ತು ರಕ್ತದಿಂದ ಅಪವಿತ್ರಮಾಡಿದ ಪಟ್ಟಣವಾಗಿದೆ. 9 ಕಳ್ಳರ ಗುಂಪು ಮನುಷ್ಯನಿಗೋಸ್ಕರ ಕಾಯುವ ಪ್ರಕಾರ ಯಾಜಕರ ಗುಂಪು ಒಪ್ಪಿಗೆಯಿಂದ ದಾರಿಯಲ್ಲಿ ಕೊಲೆಮಾಡುತ್ತಾರೆ. ಅವರು ನೀಚತನವನ್ನು ಮಾಡುವವರಾಗಿದ್ದಾರೆ. 10 ಇಸ್ರಾಯೇಲಿನ ಮನೆತನದವರಲ್ಲಿ ಅತಿ ಭಯಂಕರ ವಾದ ಸಂಗತಿಯನ್ನು ನೋಡಿದೆನು. ಅಲ್ಲಿ ಎಫ್ರಾಯಾ ಮಿನ ವ್ಯಭಿಚಾರವು ನಡೆಯುತ್ತದೆ; ಇಸ್ರಾಯೇಲು ಹೊಲೆಯಾಗಿದೆ. 11 ಹಾಗೂ ಓ ಯೆಹೂದವೇ, ನಾನು ನನ್ನ ಜನರನ್ನು ಅವರ ಸೆರೆಯಿಂದ ಬರಮಾಡಿದಾಗ ಆತನು ಸುಗ್ಗಿಯನ್ನು ನಿನಗೆ ನೇಮಿಸಿದ್ದಾನೆ.
1 ಬನ್ನಿರಿ ನಾವು ಕರ್ತನ ಕಡೆಗೆ ತಿರುಗಿ ಕೊಳ್ಳೋಣ ಯಾಕಂದರೆ ಆತನು ಸೀಳಿ ಬಿಟ್ಟಿದ್ದಾನೆ, ನಮ್ಮನ್ನು ಸ್ವಸ್ಥ ಮಾಡುತ್ತಾನೆ; ಆತನು ಹೊಡೆದಿದ್ದಾನೆ; ಆತನು ನಮ್ಮನ್ನು ಕಟ್ಟುತ್ತಾನೆ. .::. 2 ಆತನು ಎರಡು ದಿನಗಳಾದ ಮೇಲೆ ನಮ್ಮನ್ನು ಪುನರ್ಜೀವಿಸ ಮಾಡುವನು; ಮೂರನೆಯ ದಿನದಲ್ಲಿ ಆತನೇ ನಮ್ಮನ್ನು ಎಬ್ಬಿಸುವನು; ನಾವು ಆತನ ದೃಷ್ಟಿಯಲ್ಲಿ ಜೀವಿಸುವೆವು. .::. 3 ನಾವು ಕರ್ತನನ್ನು ತಿಳಿದುಕೊಳ್ಳಲು ಆತನನ್ನು ಹಿಂಬಾ ಲಿಸಿದರೆ ನಾವು ತಿಳಿದುಕೊಳ್ಳುವೆವು; ಅರುಣೋದ ಯದ ಹಾಗೆ ಆತನ ಹೊರಡೋಣವು ಸಿದ್ಧವಾಗಿದೆ; ಆತನು ಮಳೆಯಂತೆಯೂ ಮುಂಗಾರಿನಂತೆಯೂ ಭೂಮಿಗೆ ತಂಪುಮಾಡುವ ಹಿಂಗಾರಿನಂತೆಯೂ ನಮ್ಮ ಬಳಿಗೆ ಬರುವನು. .::. 4 ಓ ಎಫ್ರಾಯಾಮೇ, ನಿನಗೆ ನಾನು ಏನು ಮಾಡಲಿ? ಓ ಯೆಹೂದವೇ, ನಿನಗೆ ನಾನು ಏನು ಮಾಡಲಿ? ನಿಮ್ಮ ಒಳ್ಳೇತನವು ಹೊತ್ತಾ ರೆಯ ಮೇಘದ ಹಾಗೆಯೂ ಮುಂಜಾನೆಯ ಮಂಜಿ ನಂತೆಯೂ ಹೋಗಿಬಿಡುತ್ತದೆ. .::. 5 ಆದದರಿಂದ ನಾನು ಪ್ರವಾದಿಗಳ ಮುಖಾಂತರ ಕಡಿದುಬಿಟ್ಟು ನನ್ನ ಬಾಯಿ ಮಾತುಗಳಿಂದ ಅವರನ್ನು ಕೊಂದುಹಾಕಿದ್ದೇನೆ; ನಿನ್ನ ನ್ಯಾಯತೀರ್ಪುಗಳು ಬೆಳಕಿನ ಹಾಗೆ ಹೊರಟವು. .::. 6 ನಾನು ಬಲಿಯನ್ನಲ್ಲ ಕರುಣೆಯನ್ನೇ ಮತ್ತು ದಹನ ಬಲಿಗಳಿಗಿಂತ ದೇವರ ತಿಳುವಳಿಕೆಯನ್ನೇ ಹೆಚ್ಚಾಗಿ ಅಪೇಕ್ಷಿಸಿದ್ದೇನೆ. .::. 7 ಆದರೆ ಅವರು ಒಡಂಬಡಿಕೆಯನ್ನು ವಿಾರಿದ ಮನುಷ್ಯರ ಹಾಗೆ ಇದ್ದಾರೆ; ಅಲ್ಲಿ ಅವರು ನನಗೆ ವಿರುದ್ಧವಾಗಿ ದ್ರೋಹದಿಂದ ನಡೆದುಕೊಂಡಿದ್ದಾರೆ. .::. 8 ಗಿಲ್ಯಾದು ಕೆಟ್ಟ ಕೆಲಸ ಮಾಡುವವರ ಮತ್ತು ರಕ್ತದಿಂದ ಅಪವಿತ್ರಮಾಡಿದ ಪಟ್ಟಣವಾಗಿದೆ. .::. 9 ಕಳ್ಳರ ಗುಂಪು ಮನುಷ್ಯನಿಗೋಸ್ಕರ ಕಾಯುವ ಪ್ರಕಾರ ಯಾಜಕರ ಗುಂಪು ಒಪ್ಪಿಗೆಯಿಂದ ದಾರಿಯಲ್ಲಿ ಕೊಲೆಮಾಡುತ್ತಾರೆ. ಅವರು ನೀಚತನವನ್ನು ಮಾಡುವವರಾಗಿದ್ದಾರೆ. .::. 10 ಇಸ್ರಾಯೇಲಿನ ಮನೆತನದವರಲ್ಲಿ ಅತಿ ಭಯಂಕರ ವಾದ ಸಂಗತಿಯನ್ನು ನೋಡಿದೆನು. ಅಲ್ಲಿ ಎಫ್ರಾಯಾ ಮಿನ ವ್ಯಭಿಚಾರವು ನಡೆಯುತ್ತದೆ; ಇಸ್ರಾಯೇಲು ಹೊಲೆಯಾಗಿದೆ. .::. 11 ಹಾಗೂ ಓ ಯೆಹೂದವೇ, ನಾನು ನನ್ನ ಜನರನ್ನು ಅವರ ಸೆರೆಯಿಂದ ಬರಮಾಡಿದಾಗ ಆತನು ಸುಗ್ಗಿಯನ್ನು ನಿನಗೆ ನೇಮಿಸಿದ್ದಾನೆ.
  • ಹೋಶೇ ಅಧ್ಯಾಯ 1  
  • ಹೋಶೇ ಅಧ್ಯಾಯ 2  
  • ಹೋಶೇ ಅಧ್ಯಾಯ 3  
  • ಹೋಶೇ ಅಧ್ಯಾಯ 4  
  • ಹೋಶೇ ಅಧ್ಯಾಯ 5  
  • ಹೋಶೇ ಅಧ್ಯಾಯ 6  
  • ಹೋಶೇ ಅಧ್ಯಾಯ 7  
  • ಹೋಶೇ ಅಧ್ಯಾಯ 8  
  • ಹೋಶೇ ಅಧ್ಯಾಯ 9  
  • ಹೋಶೇ ಅಧ್ಯಾಯ 10  
  • ಹೋಶೇ ಅಧ್ಯಾಯ 11  
  • ಹೋಶೇ ಅಧ್ಯಾಯ 12  
  • ಹೋಶೇ ಅಧ್ಯಾಯ 13  
  • ಹೋಶೇ ಅಧ್ಯಾಯ 14  
×

Alert

×

Kannada Letters Keypad References