ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಪ್ರಕಟನೆ

ಪ್ರಕಟನೆ ಅಧ್ಯಾಯ 10

1 ಮೇಘವನ್ನು ಧರಿಸಿಕೊಂಡಿದ್ದ ಬಲಿಷ್ಠ ನಾದ ಮತ್ತೊಬ್ಬ ದೂತನು ಪರಲೋಕ ದಿಂದ ಇಳಿದು ಬರುವದನ್ನು ನಾನು ಕಂಡೆನು. ಅವನ ತಲೆಯ ಮೇಲೆ ಮಳೆ ಬಿಲ್ಲು ಇತ್ತು; ಅವನ ಮುಖವು ಸೂರ್ಯನಂತಿತ್ತು; ಅವನ ಪಾದಗಳು ಬೆಂಕಿಯ ಕಂಬಗಳಂತಿದ್ದವು; 2 ತೆರೆದಿದ್ದ ಒಂದು ಚಿಕ್ಕ ಪುಸ್ತಕವು ಅವನ ಕೈಯಲ್ಲಿ ಇತ್ತು; ಅವನು ತನ್ನ ಬಲಗಾಲನ್ನು ಸಮುದ್ರದ ಮೇಲೆಯೂ ಎಡಗಾಲನ್ನು ಭೂಮಿಯ ಮೇಲೆಯೂ ಇಟ್ಟು 3 ಸಿಂಹವು ಗರ್ಜಿಸುವ ಪ್ರಕಾರ ಮಹಾಶಬ್ದದಿಂದ ಕೂಗಿದನು. ಅವನು ಕೂಗಿದಾಗ ಏಳು ಗುಡುಗುಗಳು ತಮ್ಮ ಧ್ವನಿಕೊಟ್ಟವು. 4 ಆ ಏಳು ಗುಡುಗುಗಳು ತಮ್ಮ ಧ್ವನಿಕೊಟ್ಟಾಗ ನಾನು ಬರೆಯ ಬೇಕೆಂದಿದ್ದೆನು. ಅದಕ್ಕೆ--ಆ ಏಳು ಗುಡುಗುಗಳು ನುಡಿದವುಗಳನ್ನು ನೀನು ಬರೆಯದೆ ಮುದ್ರಿಸು ಎಂದು ಪರಲೋಕದಿಂದ ಬಂದ ಶಬ್ದವು ನನಗೆ ಹೇಳುವದನ್ನು ಕೇಳಿದೆನು. 5 ಅನಂತರ ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ನಿಂತಿದ್ದ ದೂತನನ್ನು ನಾನು ಕಂಡೆನು. ಅವನು ತನ್ನ ಕೈಯನ್ನು ಪರಲೋಕದ ಕಡೆಗೆ ಎತ್ತಿ-- 6 ಪರಲೋಕವನ್ನೂ ಅದರಲ್ಲಿರುವವುಗಳನ್ನೂ ಭೂಮಿಯನ್ನೂ ಅದರಲ್ಲಿರುವವುಗಳನ್ನೂ ಸಮುದ್ರ ವನ್ನೂ ಅದರಲ್ಲಿರುವವುಗಳನ್ನೂ ಸೃಷ್ಟಿಸಿ ಯುಗ ಯುಗಾಂತರಗಳಲ್ಲಿ ಜೀವಿಸುವಾತನ ಮೇಲೆ ಆಣೆ ಯಿಟ್ಟು ಇನ್ನು ಸಮಯವಿರುವದಿಲ್ಲ ಎಂತಲೂ 7 ಏಳನೆಯ ದೂತನು ಶಬ್ದಮಾಡುವ ದಿನಗಳಲ್ಲಿ ಅಂದರೆ ಅವನು ತುತೂರಿಯನ್ನು ಊದುವದಕ್ಕೆ ಪ್ರಾರಂಭಿಸು ವಾಗ ದೇವರ ರಹಸ್ಯವನ್ನು ತನ್ನ ಸೇವಕರಾದ ಪ್ರವಾದಿ ಗಳಿಗೆ ತಿಳಿಸಿದ್ದ ಪ್ರಕಾರ ಸಮಾಪ್ತಿಯಾಗತಕ್ಕದ್ದು ಎಂತಲೂ ಹೇಳಿದನು. 8 ಪರಲೋಕದಿಂದ ನನಗೆ ಕೇಳಿಸಿದ್ದ ಶಬ್ದವು ತಿರಿಗಿ ನನ್ನೊಂದಿಗೆ ಮಾತನಾಡಿ--ನೀನು ಹೋಗಿ ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ನಿಂತುಕೊಂಡಿರುವ ದೂತನ ಕೈಯಲ್ಲಿರುವ ತೆರೆದಿದ್ದ ಆ ಚಿಕ್ಕ ಪುಸ್ತಕವನ್ನು ತೆಗೆದುಕೋ ಎಂದು ಹೇಳಿತು. 9 ನಾನು ಆ ದೂತನ ಬಳಿಗೆ ಹೋಗಿ ಅವನಿಗೆ--ಆ ಚಿಕ್ಕ ಪುಸ್ತಕವನ್ನು ನನಗೆ ಕೊಡು ಎಂದು ಹೇಳಲು ಅವನು ನನಗೆ--ನೀನು ಇದನ್ನು ತೆಗೆದು ಕೊಂಡು ತಿಂದುಬಿಡು, ಇದು ನಿನ್ನ ಹೊಟ್ಟೆಯನ್ನು ಕಹಿಯಾಗುವಂತೆ ಮಾಡುವದು, ಆದರೆ ನಿನ್ನ ಬಾಯಲ್ಲಿ ಅದು ಜೇನಿನಂತೆ ಸಿಹಿಯಾಗಿರುವದು ಎಂದು ಹೇಳಿ ದನು 10 ಆಗ ನಾನು ಆ ಚಿಕ್ಕ ಪುಸ್ತಕವನ್ನು ಆ ದೂತನ ಕೈಯಿಂದ ತೆಗೆದುಕೊಂಡು ತಿಂದುಬಿಟ್ಟೆನು. ಅದು ನನ್ನ ಬಾಯಲ್ಲಿ ಜೇನಿನಂತೆ ಸಿಹಿಯಾಗಿತ್ತು; ಅದನ್ನು ತಿಂದ ಕೂಡಲೆ ನನ್ನ ಹೊಟ್ಟೆಯು ಕಹಿ ಯಾಯಿತು. 11 ಅವನು ನನಗೆ--ನೀನು ಅನೇಕ ಪ್ರಜೆ, ಜನಾಂಗ, ಭಾಷೆ ಮತ್ತು ರಾಜರುಗಳ ಮುಂದೆ ತಿರಿಗಿ ಪ್ರವಾದಿಸತಕ್ಕದ್ದು ಎಂದು ಹೇಳಿದನು.
1 ಮೇಘವನ್ನು ಧರಿಸಿಕೊಂಡಿದ್ದ ಬಲಿಷ್ಠ ನಾದ ಮತ್ತೊಬ್ಬ ದೂತನು ಪರಲೋಕ ದಿಂದ ಇಳಿದು ಬರುವದನ್ನು ನಾನು ಕಂಡೆನು. ಅವನ ತಲೆಯ ಮೇಲೆ ಮಳೆ ಬಿಲ್ಲು ಇತ್ತು; ಅವನ ಮುಖವು ಸೂರ್ಯನಂತಿತ್ತು; ಅವನ ಪಾದಗಳು ಬೆಂಕಿಯ ಕಂಬಗಳಂತಿದ್ದವು; .::. 2 ತೆರೆದಿದ್ದ ಒಂದು ಚಿಕ್ಕ ಪುಸ್ತಕವು ಅವನ ಕೈಯಲ್ಲಿ ಇತ್ತು; ಅವನು ತನ್ನ ಬಲಗಾಲನ್ನು ಸಮುದ್ರದ ಮೇಲೆಯೂ ಎಡಗಾಲನ್ನು ಭೂಮಿಯ ಮೇಲೆಯೂ ಇಟ್ಟು .::. 3 ಸಿಂಹವು ಗರ್ಜಿಸುವ ಪ್ರಕಾರ ಮಹಾಶಬ್ದದಿಂದ ಕೂಗಿದನು. ಅವನು ಕೂಗಿದಾಗ ಏಳು ಗುಡುಗುಗಳು ತಮ್ಮ ಧ್ವನಿಕೊಟ್ಟವು. .::. 4 ಆ ಏಳು ಗುಡುಗುಗಳು ತಮ್ಮ ಧ್ವನಿಕೊಟ್ಟಾಗ ನಾನು ಬರೆಯ ಬೇಕೆಂದಿದ್ದೆನು. ಅದಕ್ಕೆ--ಆ ಏಳು ಗುಡುಗುಗಳು ನುಡಿದವುಗಳನ್ನು ನೀನು ಬರೆಯದೆ ಮುದ್ರಿಸು ಎಂದು ಪರಲೋಕದಿಂದ ಬಂದ ಶಬ್ದವು ನನಗೆ ಹೇಳುವದನ್ನು ಕೇಳಿದೆನು. .::. 5 ಅನಂತರ ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ನಿಂತಿದ್ದ ದೂತನನ್ನು ನಾನು ಕಂಡೆನು. ಅವನು ತನ್ನ ಕೈಯನ್ನು ಪರಲೋಕದ ಕಡೆಗೆ ಎತ್ತಿ-- .::. 6 ಪರಲೋಕವನ್ನೂ ಅದರಲ್ಲಿರುವವುಗಳನ್ನೂ ಭೂಮಿಯನ್ನೂ ಅದರಲ್ಲಿರುವವುಗಳನ್ನೂ ಸಮುದ್ರ ವನ್ನೂ ಅದರಲ್ಲಿರುವವುಗಳನ್ನೂ ಸೃಷ್ಟಿಸಿ ಯುಗ ಯುಗಾಂತರಗಳಲ್ಲಿ ಜೀವಿಸುವಾತನ ಮೇಲೆ ಆಣೆ ಯಿಟ್ಟು ಇನ್ನು ಸಮಯವಿರುವದಿಲ್ಲ ಎಂತಲೂ .::. 7 ಏಳನೆಯ ದೂತನು ಶಬ್ದಮಾಡುವ ದಿನಗಳಲ್ಲಿ ಅಂದರೆ ಅವನು ತುತೂರಿಯನ್ನು ಊದುವದಕ್ಕೆ ಪ್ರಾರಂಭಿಸು ವಾಗ ದೇವರ ರಹಸ್ಯವನ್ನು ತನ್ನ ಸೇವಕರಾದ ಪ್ರವಾದಿ ಗಳಿಗೆ ತಿಳಿಸಿದ್ದ ಪ್ರಕಾರ ಸಮಾಪ್ತಿಯಾಗತಕ್ಕದ್ದು ಎಂತಲೂ ಹೇಳಿದನು. .::. 8 ಪರಲೋಕದಿಂದ ನನಗೆ ಕೇಳಿಸಿದ್ದ ಶಬ್ದವು ತಿರಿಗಿ ನನ್ನೊಂದಿಗೆ ಮಾತನಾಡಿ--ನೀನು ಹೋಗಿ ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ನಿಂತುಕೊಂಡಿರುವ ದೂತನ ಕೈಯಲ್ಲಿರುವ ತೆರೆದಿದ್ದ ಆ ಚಿಕ್ಕ ಪುಸ್ತಕವನ್ನು ತೆಗೆದುಕೋ ಎಂದು ಹೇಳಿತು. .::. 9 ನಾನು ಆ ದೂತನ ಬಳಿಗೆ ಹೋಗಿ ಅವನಿಗೆ--ಆ ಚಿಕ್ಕ ಪುಸ್ತಕವನ್ನು ನನಗೆ ಕೊಡು ಎಂದು ಹೇಳಲು ಅವನು ನನಗೆ--ನೀನು ಇದನ್ನು ತೆಗೆದು ಕೊಂಡು ತಿಂದುಬಿಡು, ಇದು ನಿನ್ನ ಹೊಟ್ಟೆಯನ್ನು ಕಹಿಯಾಗುವಂತೆ ಮಾಡುವದು, ಆದರೆ ನಿನ್ನ ಬಾಯಲ್ಲಿ ಅದು ಜೇನಿನಂತೆ ಸಿಹಿಯಾಗಿರುವದು ಎಂದು ಹೇಳಿ ದನು .::. 10 ಆಗ ನಾನು ಆ ಚಿಕ್ಕ ಪುಸ್ತಕವನ್ನು ಆ ದೂತನ ಕೈಯಿಂದ ತೆಗೆದುಕೊಂಡು ತಿಂದುಬಿಟ್ಟೆನು. ಅದು ನನ್ನ ಬಾಯಲ್ಲಿ ಜೇನಿನಂತೆ ಸಿಹಿಯಾಗಿತ್ತು; ಅದನ್ನು ತಿಂದ ಕೂಡಲೆ ನನ್ನ ಹೊಟ್ಟೆಯು ಕಹಿ ಯಾಯಿತು. .::. 11 ಅವನು ನನಗೆ--ನೀನು ಅನೇಕ ಪ್ರಜೆ, ಜನಾಂಗ, ಭಾಷೆ ಮತ್ತು ರಾಜರುಗಳ ಮುಂದೆ ತಿರಿಗಿ ಪ್ರವಾದಿಸತಕ್ಕದ್ದು ಎಂದು ಹೇಳಿದನು.
  • ಪ್ರಕಟನೆ ಅಧ್ಯಾಯ 1  
  • ಪ್ರಕಟನೆ ಅಧ್ಯಾಯ 2  
  • ಪ್ರಕಟನೆ ಅಧ್ಯಾಯ 3  
  • ಪ್ರಕಟನೆ ಅಧ್ಯಾಯ 4  
  • ಪ್ರಕಟನೆ ಅಧ್ಯಾಯ 5  
  • ಪ್ರಕಟನೆ ಅಧ್ಯಾಯ 6  
  • ಪ್ರಕಟನೆ ಅಧ್ಯಾಯ 7  
  • ಪ್ರಕಟನೆ ಅಧ್ಯಾಯ 8  
  • ಪ್ರಕಟನೆ ಅಧ್ಯಾಯ 9  
  • ಪ್ರಕಟನೆ ಅಧ್ಯಾಯ 10  
  • ಪ್ರಕಟನೆ ಅಧ್ಯಾಯ 11  
  • ಪ್ರಕಟನೆ ಅಧ್ಯಾಯ 12  
  • ಪ್ರಕಟನೆ ಅಧ್ಯಾಯ 13  
  • ಪ್ರಕಟನೆ ಅಧ್ಯಾಯ 14  
  • ಪ್ರಕಟನೆ ಅಧ್ಯಾಯ 15  
  • ಪ್ರಕಟನೆ ಅಧ್ಯಾಯ 16  
  • ಪ್ರಕಟನೆ ಅಧ್ಯಾಯ 17  
  • ಪ್ರಕಟನೆ ಅಧ್ಯಾಯ 18  
  • ಪ್ರಕಟನೆ ಅಧ್ಯಾಯ 19  
  • ಪ್ರಕಟನೆ ಅಧ್ಯಾಯ 20  
  • ಪ್ರಕಟನೆ ಅಧ್ಯಾಯ 21  
  • ಪ್ರಕಟನೆ ಅಧ್ಯಾಯ 22  
×

Alert

×

Kannada Letters Keypad References