ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಪ್ರಸಂಗಿ

ಟಿಪ್ಪಣಿಗಳು

No Verse Added

ಪ್ರಸಂಗಿ ಅಧ್ಯಾಯ 1

1. ದಾವೀದನ ಮಗನೂ ಯೆರೂಸಲೇಮಿನಲ್ಲಿ ಅರಸನೂ ಆಗಿದ್ದ ಪ್ರಸಂಗಿಯ ಮಾತುಗಳು. 2. ವ್ಯರ್ಥಗಳಲ್ಲಿ ವ್ಯರ್ಥ, ವ್ಯರ್ಥಗಳಲ್ಲಿ ವ್ಯರ್ಥ ಎಂದು ಪ್ರಸಂಗಿ ಹೇಳುತ್ತಾನೆ; ಎಲ್ಲವೂ ವ್ಯರ್ಥ. 3. ಸೂರ್ಯನ ಕೆಳಗೆ ಮನುಷ್ಯನು ಪಡುವ ಎಲ್ಲಾ ಪ್ರಯಾಸದಲ್ಲಿ ಅವನಿಗೆ ಲಾಭವೇನು? 4. ಒಂದು ಸಂತಾನವು ಗತಿಸುತ್ತದೆ, ಮತ್ತೊಂದು ಸಂತಾನವು ಬರುತ್ತದೆ; ಆದರೆ ಭೂಮಿಯು ಎಂದಿಗೂ ನಿಲ್ಲುತ್ತದೆ. 5. ಸೂರ್ಯನು ಏರುತ್ತಾನೆ, ಸೂರ್ಯನು ಇಳಿಯುತ್ತಾನೆ; ತಾನು ಏರಿದ ಸ್ಥಳಕ್ಕೆ ಆತುರಪಡುತ್ತಾನೆ. 6. ಗಾಳಿಯು ದಕ್ಷಿಣದ ಕಡೆಗೆ ಬೀಸುತ್ತದೆ, ಉತ್ತರದ ಕಡೆಗೆ ತಿರುಗುತ್ತದೆ; ಅದು ಬಿಡದೆ ಗುಂಡಾಗಿ ಸುತ್ತುತ್ತದೆ; ಆ ಗಾಳಿಯು ತನ್ನ ಸುತ್ತಳತೆಗಳ ಪ್ರಕಾರ ಹಿಂದಿರು ಗುತ್ತದೆ. 7. ನದಿಗಳೆಲ್ಲಾ ಹರಿದು ಸಮುದ್ರಕ್ಕೆ ಹೋಗುತ್ತವೆ, ಆದರೂ ಸಮುದ್ರವು ತುಂಬುವದಿಲ್ಲ; ನದಿ ಗಳು ಎಲ್ಲಿಂದ ಬಂದಿವೆಯೋ ಆ ಸ್ಥಳಕ್ಕೆ ಅವು ಹಿಂತಿರು ಗುತ್ತವೆ. 8. ಎಲ್ಲಾ ಕಾರ್ಯಗಳು ಪ್ರಯಾಸದಿಂದ ತುಂಬಿ ಯವೆ; ಅದನ್ನು ಮನುಷ್ಯನು ವಿವರಿಸಲಾರನು; ನೋಡುವದರಿಂದ ಕಣ್ಣು ತೃಪ್ತಿಗೊಳ್ಳದು. ಇಲ್ಲವೆ ಕೇಳು ವದರಿಂದ ಕಿವಿಯು ದಣಿಯದು. 9. ಇದ್ದದ್ದೇ ಇರು ವದು, ನಡೆದದ್ದೇ ನಡೆಯುವದು; ಸೂರ್ಯನ ಕೆಳಗೆ ಹೊಸದಾದದ್ದು ಯಾವದೂ ಇಲ್ಲ. 10. ನೋಡು, ಇದು ಹೊಸದು ಎಂದು ಯಾವ ವಿಷಯವಾಗಿ ಹೇಳ ಬಹುದೋ ಅದು ನಮಗಿಂತ ಮುಂಚೆ ಪುರಾತನ ಕಾಲದಿಂದ ಇದ್ದದ್ದೇ. 11. ಮೊದಲಿನ ಸಂಗತಿಗಳ ಜ್ಞಾಪ ಕವು ಇಲ್ಲ; ಮುಂದಿನ ಸಂಗತಿಗಳ ಜ್ಞಾಪಕವು ಅವುಗಳ ಮುಂದಿನವರಿಗೆ ಇರುವದಿಲ್ಲ. 12. ಪ್ರಸಂಗಿಯಾದ ನಾನು ಯೆರೂಸಲೇಮಿನಲ್ಲಿ ಇಸ್ರಾಯೇಲ್ಯರ ಮೇಲೆ ಅರಸನಾಗಿದ್ದೆನು. 13. ಆಕಾಶದ ಕೆಳಗೆ ನಡೆಯುವ ಎಲ್ಲವುಗಳ ವಿಷಯವಾಗಿ ಜ್ಞಾನ ದಿಂದ ವಿಚಾರಿಸಿ ವಿಮರ್ಶಿಸುವದಕ್ಕೆ ನಾನು ನನ್ನ ಮನಸ್ಸು ಇಟ್ಟೆನು; ಇದರ ವಿಷಯವಾದ ಪ್ರಯಾಸವು ಮನಸ್ಸಿನಲ್ಲಿ ಯೋಚಿಸುವಂತೆ ದೇವರು ಮನುಷ್ಯ ಮಕ್ಕಳಿಗೆ ಈ ಕಷ್ಟಕರವಾದ ಪ್ರಯಾಸವನ್ನು ಕೊಟ್ಟಿ ದ್ದಾನೆ. 14. ಸೂರ್ಯನ ಕೆಳಗೆ ನಡೆಯುವ ಎಲ್ಲಾ ಕೆಲಸಗಳನ್ನು ನಾನು ನೋಡಿದ್ದೇನೆ; ಇಗೋ, ಎಲ್ಲವು ವ್ಯರ್ಥವೂ ಮನಸ್ಸಿಗೆ ಆಯಾಸವೂ ಆಗಿವೆ. 15. ವಕ್ರ ವಾದದ್ದು ಸರಿಮಾಡುವದಕ್ಕೆ ಆಗುವದಿಲ್ಲ; ಇಲ್ಲದ್ದನ್ನು ಲೆಕ್ಕಿಸುವದು ಅಸಾಧ್ಯ. 16. ನಾನು ನನ್ನ ಮನಸ್ಸಿನಲ್ಲಿ ಯೋಚಿಸುತ್ತಾ--ಇಗೋ, ನಾನು ದೊಡ್ಡ ಸ್ಥಾನಕ್ಕೆ ಬಂದಿದ್ದೇನೆ ಯೆರೂಸಲೇಮಿನಲ್ಲಿ ನನಗಿಂತ ಮುಂಚೆ ಇದ್ದವರೆಲ್ಲರಿಗಿಂತ ನಾನು ಜ್ಞಾನವನ್ನು ಸಂಪಾದಿಸಿದ್ದೇನೆ. ಹೌದು, ಜ್ಞಾನದ ತಿಳುವಳಿಕೆಯ ದೊಡ್ಡ ಅನುಭವವು ನನ್ನ ಹೃದಯಕ್ಕೆ ಆಯಿತು ಎಂದು ಹೇಳಿದೆನು. 17. ಜ್ಞಾನ ವನ್ನೂ ಹುಚ್ಚುತನವನ್ನೂ ಬುದ್ಧಿಹೀನತೆಯನ್ನೂ ತಿಳು ಕೊಳ್ಳುವಂತೆ ನಾನು ಮನಸ್ಸಿಟ್ಟೆನು; ಇದು ಸಹ ಮನಸ್ಸಿಗೆ ಆಯಾಸವೆಂದು ನಾನು ಅರಿತುಕೊಂಡೆನು. 18. ಬಹು ಜ್ಞಾನವಿದ್ದಲ್ಲಿ ದುಃಖ; ತಿಳುವಳಿಕೆಯನ್ನು ಹೆಚ್ಚಿಸಿಕೊಳ್ಳು ವವನು ತನ್ನ ವ್ಯಥೆಯನ್ನು ಹೆಚ್ಚಿಸಿಕೊಳ್ಳುತ್ತಾನೆ.
1. ದಾವೀದನ ಮಗನೂ ಯೆರೂಸಲೇಮಿನಲ್ಲಿ ಅರಸನೂ ಆಗಿದ್ದ ಪ್ರಸಂಗಿಯ ಮಾತುಗಳು. .::. 2. ವ್ಯರ್ಥಗಳಲ್ಲಿ ವ್ಯರ್ಥ, ವ್ಯರ್ಥಗಳಲ್ಲಿ ವ್ಯರ್ಥ ಎಂದು ಪ್ರಸಂಗಿ ಹೇಳುತ್ತಾನೆ; ಎಲ್ಲವೂ ವ್ಯರ್ಥ. .::. 3. ಸೂರ್ಯನ ಕೆಳಗೆ ಮನುಷ್ಯನು ಪಡುವ ಎಲ್ಲಾ ಪ್ರಯಾಸದಲ್ಲಿ ಅವನಿಗೆ ಲಾಭವೇನು? .::. 4. ಒಂದು ಸಂತಾನವು ಗತಿಸುತ್ತದೆ, ಮತ್ತೊಂದು ಸಂತಾನವು ಬರುತ್ತದೆ; ಆದರೆ ಭೂಮಿಯು ಎಂದಿಗೂ ನಿಲ್ಲುತ್ತದೆ. .::. 5. ಸೂರ್ಯನು ಏರುತ್ತಾನೆ, ಸೂರ್ಯನು ಇಳಿಯುತ್ತಾನೆ; ತಾನು ಏರಿದ ಸ್ಥಳಕ್ಕೆ ಆತುರಪಡುತ್ತಾನೆ. .::. 6. ಗಾಳಿಯು ದಕ್ಷಿಣದ ಕಡೆಗೆ ಬೀಸುತ್ತದೆ, ಉತ್ತರದ ಕಡೆಗೆ ತಿರುಗುತ್ತದೆ; ಅದು ಬಿಡದೆ ಗುಂಡಾಗಿ ಸುತ್ತುತ್ತದೆ; ಆ ಗಾಳಿಯು ತನ್ನ ಸುತ್ತಳತೆಗಳ ಪ್ರಕಾರ ಹಿಂದಿರು ಗುತ್ತದೆ. .::. 7. ನದಿಗಳೆಲ್ಲಾ ಹರಿದು ಸಮುದ್ರಕ್ಕೆ ಹೋಗುತ್ತವೆ, ಆದರೂ ಸಮುದ್ರವು ತುಂಬುವದಿಲ್ಲ; ನದಿ ಗಳು ಎಲ್ಲಿಂದ ಬಂದಿವೆಯೋ ಆ ಸ್ಥಳಕ್ಕೆ ಅವು ಹಿಂತಿರು ಗುತ್ತವೆ. .::. 8. ಎಲ್ಲಾ ಕಾರ್ಯಗಳು ಪ್ರಯಾಸದಿಂದ ತುಂಬಿ ಯವೆ; ಅದನ್ನು ಮನುಷ್ಯನು ವಿವರಿಸಲಾರನು; ನೋಡುವದರಿಂದ ಕಣ್ಣು ತೃಪ್ತಿಗೊಳ್ಳದು. ಇಲ್ಲವೆ ಕೇಳು ವದರಿಂದ ಕಿವಿಯು ದಣಿಯದು. .::. 9. ಇದ್ದದ್ದೇ ಇರು ವದು, ನಡೆದದ್ದೇ ನಡೆಯುವದು; ಸೂರ್ಯನ ಕೆಳಗೆ ಹೊಸದಾದದ್ದು ಯಾವದೂ ಇಲ್ಲ. .::. 10. ನೋಡು, ಇದು ಹೊಸದು ಎಂದು ಯಾವ ವಿಷಯವಾಗಿ ಹೇಳ ಬಹುದೋ ಅದು ನಮಗಿಂತ ಮುಂಚೆ ಪುರಾತನ ಕಾಲದಿಂದ ಇದ್ದದ್ದೇ. .::. 11. ಮೊದಲಿನ ಸಂಗತಿಗಳ ಜ್ಞಾಪ ಕವು ಇಲ್ಲ; ಮುಂದಿನ ಸಂಗತಿಗಳ ಜ್ಞಾಪಕವು ಅವುಗಳ ಮುಂದಿನವರಿಗೆ ಇರುವದಿಲ್ಲ. .::. 12. ಪ್ರಸಂಗಿಯಾದ ನಾನು ಯೆರೂಸಲೇಮಿನಲ್ಲಿ ಇಸ್ರಾಯೇಲ್ಯರ ಮೇಲೆ ಅರಸನಾಗಿದ್ದೆನು. .::. 13. ಆಕಾಶದ ಕೆಳಗೆ ನಡೆಯುವ ಎಲ್ಲವುಗಳ ವಿಷಯವಾಗಿ ಜ್ಞಾನ ದಿಂದ ವಿಚಾರಿಸಿ ವಿಮರ್ಶಿಸುವದಕ್ಕೆ ನಾನು ನನ್ನ ಮನಸ್ಸು ಇಟ್ಟೆನು; ಇದರ ವಿಷಯವಾದ ಪ್ರಯಾಸವು ಮನಸ್ಸಿನಲ್ಲಿ ಯೋಚಿಸುವಂತೆ ದೇವರು ಮನುಷ್ಯ ಮಕ್ಕಳಿಗೆ ಈ ಕಷ್ಟಕರವಾದ ಪ್ರಯಾಸವನ್ನು ಕೊಟ್ಟಿ ದ್ದಾನೆ. .::. 14. ಸೂರ್ಯನ ಕೆಳಗೆ ನಡೆಯುವ ಎಲ್ಲಾ ಕೆಲಸಗಳನ್ನು ನಾನು ನೋಡಿದ್ದೇನೆ; ಇಗೋ, ಎಲ್ಲವು ವ್ಯರ್ಥವೂ ಮನಸ್ಸಿಗೆ ಆಯಾಸವೂ ಆಗಿವೆ. .::. 15. ವಕ್ರ ವಾದದ್ದು ಸರಿಮಾಡುವದಕ್ಕೆ ಆಗುವದಿಲ್ಲ; ಇಲ್ಲದ್ದನ್ನು ಲೆಕ್ಕಿಸುವದು ಅಸಾಧ್ಯ. .::. 16. ನಾನು ನನ್ನ ಮನಸ್ಸಿನಲ್ಲಿ ಯೋಚಿಸುತ್ತಾ--ಇಗೋ, ನಾನು ದೊಡ್ಡ ಸ್ಥಾನಕ್ಕೆ ಬಂದಿದ್ದೇನೆ ಯೆರೂಸಲೇಮಿನಲ್ಲಿ ನನಗಿಂತ ಮುಂಚೆ ಇದ್ದವರೆಲ್ಲರಿಗಿಂತ ನಾನು ಜ್ಞಾನವನ್ನು ಸಂಪಾದಿಸಿದ್ದೇನೆ. ಹೌದು, ಜ್ಞಾನದ ತಿಳುವಳಿಕೆಯ ದೊಡ್ಡ ಅನುಭವವು ನನ್ನ ಹೃದಯಕ್ಕೆ ಆಯಿತು ಎಂದು ಹೇಳಿದೆನು. .::. 17. ಜ್ಞಾನ ವನ್ನೂ ಹುಚ್ಚುತನವನ್ನೂ ಬುದ್ಧಿಹೀನತೆಯನ್ನೂ ತಿಳು ಕೊಳ್ಳುವಂತೆ ನಾನು ಮನಸ್ಸಿಟ್ಟೆನು; ಇದು ಸಹ ಮನಸ್ಸಿಗೆ ಆಯಾಸವೆಂದು ನಾನು ಅರಿತುಕೊಂಡೆನು. .::. 18. ಬಹು ಜ್ಞಾನವಿದ್ದಲ್ಲಿ ದುಃಖ; ತಿಳುವಳಿಕೆಯನ್ನು ಹೆಚ್ಚಿಸಿಕೊಳ್ಳು ವವನು ತನ್ನ ವ್ಯಥೆಯನ್ನು ಹೆಚ್ಚಿಸಿಕೊಳ್ಳುತ್ತಾನೆ.
  • ಪ್ರಸಂಗಿ ಅಧ್ಯಾಯ 1  
  • ಪ್ರಸಂಗಿ ಅಧ್ಯಾಯ 2  
  • ಪ್ರಸಂಗಿ ಅಧ್ಯಾಯ 3  
  • ಪ್ರಸಂಗಿ ಅಧ್ಯಾಯ 4  
  • ಪ್ರಸಂಗಿ ಅಧ್ಯಾಯ 5  
  • ಪ್ರಸಂಗಿ ಅಧ್ಯಾಯ 6  
  • ಪ್ರಸಂಗಿ ಅಧ್ಯಾಯ 7  
  • ಪ್ರಸಂಗಿ ಅಧ್ಯಾಯ 8  
  • ಪ್ರಸಂಗಿ ಅಧ್ಯಾಯ 9  
  • ಪ್ರಸಂಗಿ ಅಧ್ಯಾಯ 10  
  • ಪ್ರಸಂಗಿ ಅಧ್ಯಾಯ 11  
  • ಪ್ರಸಂಗಿ ಅಧ್ಯಾಯ 12  
Common Bible Languages
West Indian Languages
×

Alert

×

kannada Letters Keypad References