ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಯೆರೆಮಿಯ

ಯೆರೆಮಿಯ ಅಧ್ಯಾಯ 30

1 ಯೆರೆವಿಾಯನಿಗೆ ಕರ್ತನಿಂದ ಉಂಟಾದ ವಾಕ್ಯವೇನಂದರೆ, ಇಸ್ರಾಯೇಲಿನ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ-- 2 ನಾನು ನಿನಗೆ ಹೇಳಿದ ವಾಕ್ಯಗಳನ್ನೆಲ್ಲಾ ಒಂದು ಪುಸ್ತಕದಲ್ಲಿ ಬರೆ. 3 ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ನನ್ನ ಜನರಾದ ಇಸ್ರಾಯೇಲ್ ಮತ್ತು ಯೆಹೂದದ ಸೆರೆಯವರನ್ನು ತಿರುಗಿ ಬರ ಮಾಡುತ್ತೇನೆ; ಆಗ ನಾನು ಅವರ ತಂದೆಗಳಿಗೆ ಕೊಟ್ಟ ದೇಶಕ್ಕೆ ಅವರನ್ನು ತಿರುಗಿ ಬರಮಾಡುತ್ತೇನೆ; ಅವರು ಅದನ್ನು ಸ್ವಾಧೀನ ಮಾಡಿಕೊಳ್ಳುವರು. 4 ಕರ್ತನು ಇಸ್ರಾಯೇಲನ್ನೂ ಯೆಹೂದವನ್ನೂ ಕುರಿತು ಹೇಳಿದ ವಾಕ್ಯಗಳು ಇವೇ-- 5 ಕರ್ತನು ಹೀಗೆ ಹೇಳುತ್ತಾನೆ--ನಾವು ನಡುಗುವಿಕೆಯ ಮತ್ತು ಭಯದ ಸ್ವರವನ್ನು ಕೇಳಿದ್ದೇವೆಯೇ ಹೊರತು ಸಮಾಧಾನದ್ದಲ್ಲ. 6 ಈಗ ವಿಚಾರಿಸಿ ನೋಡಿರಿ; ಗಂಡಸು ಪ್ರಸವವೇದನೆ ಪಡುವದುಂಟೇ? ನಾನು ಯಾಕೆ ಪುರುಷರೆಲ್ಲರನು ಪ್ರಸವವೇದನೆ ಪಡುವ ಸ್ತ್ರೀಯ ಹಾಗೆ ನಡುವಿನ ಮೇಲೆ ಕೈ ಇಟ್ಟವರ ಹಾಗೆ ನೋಡುತ್ತೇನೆ; ಯಾಕೆ ಮುಖಗಳೆಲ್ಲಾ ಕಳೆಗುಂದಿದವು? 7 ಅಯ್ಯೋ, ಆ ದಿನವು ಭಯಂಕರವಾದದ್ದು; ಅದರಂಥದ್ದು ಯಾವದೂ ಇಲ್ಲ; ಅದು ಯಾಕೋಬನಿಗೆ ಇಕ್ಕಟ್ಟಿನ ಕಾಲವೇ; ಆದಾಗ್ಯೂ ಅವನು ಅದರಿಂದ ರಕ್ಷಿಸಲ್ಪಡುವನು. 8 ಆ ದಿವಸದಲ್ಲಿ ಆಗುವದೇನಂದರೆ--ನಾನು ಅವನ ನೊಗವನ್ನು ನಿನ್ನ ಕುತ್ತಿಗೆಯ ಮೇಲಿನಿಂದ ಮುರಿದು ಹಾಕುವೆನು; ನಿನ್ನ ಬಂಧನಗಳನ್ನು ಹರಿದುಬಿಡುವೆನು; ಅನ್ಯರು ಇನ್ನು ಅವನಿಂದ ಸೇವೆ ಮಾಡಿಸಿಕೊಳ್ಳುವದಿಲ್ಲವೆಂದು ಸೈನ್ಯ ಗಳ ಕರ್ತನು ಅನ್ನುತ್ತಾನೆ. 9 ಆದರೆ ಅವರು ತಮ್ಮ ದೇವರಾದ ಕರ್ತನಿಗೂ ಅವರಿಗೋಸ್ಕರ ನಾನು ಎಬ್ಬಿ ಸುವ ಅವರ ಅರಸನಾದ ದಾವೀದನಿಗೂ ಸೇವೆ ಮಾಡು ವರು. 10 ಆದದರಿಂದ ನನ್ನ ಸೇವಕನಾದ ಯಾಕೋ ಬನೇ, ಭಯಪಡಬೇಡ ಎಂದು ಕರ್ತನು ಅನ್ನುತ್ತಾನೆ; ಇಸ್ರಾಯೇಲೇ ಹೆದರಬೇಡ; ಇಗೋ, ನಾನು ನಿನ್ನನ್ನು ದೂರದಿಂದಲೂ ನಿನ್ನ ಸಂತಾನವನ್ನು ಸೆರೆ ಒಯ್ದ ದೇಶದಿಂದಲೂ ರಕ್ಷಿಸುತ್ತೇನೆ; ಯಾಕೋಬನು ತಿರುಗಿ ಬಂದು ವಿಶ್ರಾಂತಿಯಲ್ಲಿರುವನು; ಹೆದರಿಸುವವನಿಲ್ಲದೆ ಸೌಖ್ಯವಾಗಿರುವನು. 11 ನಿನ್ನನ್ನು ರಕ್ಷಿಸುವದಕ್ಕೆ ನಾನು ನಿನ್ನ ಸಂಗಡ ಇದ್ದೇನೆಂದು ಕರ್ತನು ಅನ್ನುತ್ತಾನೆ; ನಿನ್ನನ್ನು ಎಲ್ಲಿ ಚದುರಿಸಿದೆನೋ ಆ ಎಲ್ಲಾ ಜನಾಂಗ ಗಳನ್ನು ನಾನು ನಿರ್ಮೂಲ ಮಾಡಿದಾಗ್ಯೂ ನಿನ್ನನ್ನು ನಿರ್ಮೂಲ ಮಾಡುವದಿಲ್ಲ; ಮಿತಿಯಲ್ಲಿ ನಿನ್ನನ್ನು ಶಿಕ್ಷಿಸುವೆನು. ಆದರೆ ನಾನು ಶಿಕ್ಷಿಸದೆ ಬಿಡುವದಿಲ್ಲ. 12 ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಗಾಯವು ಗುಣಹೊಂದದು ನಿನ್ನ ಬಾಸುಂಡೆಯು ಅಘೋರ ವಾದದ್ದು. 13 ಅದನ್ನು ನಿನಗೆ ಕಟ್ಟುವ ಹಾಗೆ ನಿನಗೋ ಸ್ಕರ ವಾದಿಸುವವರು ಯಾರೂ ಇರುವದಿಲ್ಲ. ವಾಸಿ ಮಾಡುವ ಔಷಧಗಳು ನಿನಗೆ ಇಲ್ಲ. 14 ನಿನ್ನನ್ನು ಪ್ರೀತಿ ಮಾಡುವವರೆಲ್ಲರು ನಿನ್ನನ್ನು ಮರೆತುಬಿಟ್ಟಿದ್ದಾರೆ, ನಿನ್ನನ್ನು ಹುಡುಕುವದಿಲ್ಲ; ನಿನ್ನ ಅಕ್ರಮಗಳು ಬಹಳವೂ ನಿನ್ನ ಪಾಪಗಳು ಪ್ರಬಲವೂ ಆಗಿರುವದರಿಂದ ಶತ್ರುವಿನ ಗಾಯದಿಂದಲೂ ಕ್ರೂರನ ಶಿಕ್ಷೆಯಿಂದಲೂ ನಾನು ನಿನ್ನನ್ನು ಗಾಯಪಡಿಸಿದ್ದೇನೆ. 15 ನಿನ್ನ ಗಾಯದ ನೋವಿನ ನಿಮಿತ್ತ ಯಾಕೆ ಕೂಗುತ್ತೀ? ನಿನ್ನ ದುಃಖವು ಗುಣವಾಗ ದಂಥದ್ದೇ; ನಿನ್ನ ಅಕ್ರಮಗಳು ಬಹಳವಾಗಿರುವದ ರಿಂದಲೂ ನಿನ್ನ ಪಾಪಗಳು ಪ್ರಬಲವಾಗಿರುವದ ರಿಂದಲೂ ಇವುಗಳನ್ನು ನಿನಗೆ ಮಾಡಿದ್ದೇನೆ. 16 ಆದರೂ ನಿನ್ನನ್ನು ನುಂಗುವವರೆಲ್ಲರೂ ನುಂಗಲ್ಪಡು ವರು; ನಿನ್ನ ವಿರೋಧಿಗಳಲ್ಲಿ ಪ್ರತಿಯೊಬ್ಬನೂ ಸೆರೆಗೆ ಹೋಗುವನು; ನಿನ್ನನ್ನು ಕೊಳ್ಳೆಮಾಡುವವರು ಕೊಳ್ಳೆ ಯಾಗುವರು; ನಿನಗೆ ಬಲೆ ಬೀಸುವವರೆಲ್ಲರನ್ನು ನಾನು ಬಲೆಗೆ ಒಪ್ಪಿಸುವೆನು. 17 ಚೀಯೋನು ತಳ್ಳಿಬಿಡಲ್ಪ ಟ್ಟದ್ದೂ ಅದನ್ನು ವಿಚಾರಿಸುವವರು ಯಾರೂ ಇಲ್ಲ ವೆಂದೂ ಅವರು ನಿನ್ನ ವಿಷಯ ಹೇಳುವದರಿಂದ ನಿನಗೆ ಕ್ಷೇಮವನ್ನುಂಟು ಮಾಡುವೆನು; ನಿನ್ನ ಗಾಯ ಗಳನ್ನು ಸ್ವಸ್ಥ ಮಾಡುವೆನೆಂದು ಕರ್ತನು ಅನ್ನುತ್ತಾನೆ. 18 ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಯಾಕೋಬನ ಗುಡಾರಗಳ ಸೆರೆಯನ್ನು ತಿರುಗಿ ತರುತ್ತೇನೆ; ಅವನ ನಿವಾಸಗಳನ್ನು ಕರುಣಿಸುತ್ತೇನೆ; ಪಟ್ಟಣವು ಅದರ ದಿಣ್ಣೆಯ ಮೇಲೆ ಕಟ್ಟಲ್ಪಡುವದು; ಅರಮನೆಯು ತಕ್ಕಸ್ಥಳದಲ್ಲಿ ನೆಲೆಯಾಗಿರುವದು. 19 ಅವುಗಳೊಳಗಿಂದ ಕೃತಜ್ಞತಾ ಸ್ತೋತ್ರವೂ ಸಂತೋ ಷಪಡುವವರ ಸ್ವರವೂ ಹೊರಡುವದು; ಅವರನ್ನು ಅಭಿವೃದ್ಧಿಮಾಡುವೆನು; ಅವರು ಕೊಂಚವಾಗಿರರು, ಅವರು ಅಲ್ಪವಾಗದ ಹಾಗೆ ಅವರಿಗೆ ಘನವನ್ನು ಕೊಡುವೆನು. 20 ಅವರ ಮಕ್ಕಳು ಸಹ ಪೂರ್ವ ಕಾಲದ ಹಾಗೆ ಇರುವರು; ಅವರ ಸಭೆಯು ನನ್ನ ಮುಂದೆ ಸ್ಥಾಪಿಸಲ್ಪಡುವದು; ಅವರನ್ನು ಬಾಧಿಸುವವರೆಲ್ಲರನ್ನು ವಿಚಾರಿಸುವೆನು. 21 ಅವರ ಪ್ರಧಾನರು ಅವರೊಳಗೆ ಇರುವರು; ಅವರನ್ನಾಳುವವನು ಅವರ ಮಧ್ಯದಲ್ಲಿಂದ ಹೊರಡುವನು; ನಾನು ಅವನನ್ನು ಹತ್ತಿರ ಬರಮಾಡು ವೆನು; ಅವನು ನನಗೆ ಸವಿಾಪಿಸುವನು; ಆದರೆ ನನಗೆ ಸವಿಾಪಿಸುವದಕ್ಕೆ ತನ್ನ ಹೃದಯ ನಿಶ್ಚಯ ಮಾಡಿಕೊಂಡ ಇವನಾರೆಂದು ಕರ್ತನು ಅನ್ನುತ್ತಾನೆ. 22 ನೀವು ನನಗೆ ಜನರಾಗಿರುವಿರಿ; ನಾನು ನಿಮಗೆ ದೇವರಾಗಿರುವೆನು. 23 ಇಗೋ, ಕರ್ತನ ಬಿರುಗಾಳಿ ರೌದ್ರವಾಗಿ ಹೊರ ಡುತ್ತದೆ. ಅದು ಬಡಕೊಂಡು ಹೋಗುವ ಬಿರುಗಾಳಿ ಯೇ; ಬಾಧೆಯು ದುಷ್ಟರ ತಲೆಯ ಮೇಲೆ ಬೀಳುವದು. 24 ಕರ್ತನ ಕೋಪದ ಉರಿಯು ಅದನ್ನು ಮಾಡುವ ವರೆಗೂ ತನ್ನ ಹೃದಯದ ಆಲೋಚನೆಗಳನ್ನು ನಡಿಸಿ ರುವ ವರೆಗೂ ತಿರುಗುವದಿಲ್ಲ; ನೀವು ಅಂತ್ಯದಿನದಲ್ಲಿ ಅದನ್ನು ಯೋಚಿಸುವಿರಿ.
1 ಯೆರೆವಿಾಯನಿಗೆ ಕರ್ತನಿಂದ ಉಂಟಾದ ವಾಕ್ಯವೇನಂದರೆ, ಇಸ್ರಾಯೇಲಿನ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ-- .::. 2 ನಾನು ನಿನಗೆ ಹೇಳಿದ ವಾಕ್ಯಗಳನ್ನೆಲ್ಲಾ ಒಂದು ಪುಸ್ತಕದಲ್ಲಿ ಬರೆ. .::. 3 ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ನನ್ನ ಜನರಾದ ಇಸ್ರಾಯೇಲ್ ಮತ್ತು ಯೆಹೂದದ ಸೆರೆಯವರನ್ನು ತಿರುಗಿ ಬರ ಮಾಡುತ್ತೇನೆ; ಆಗ ನಾನು ಅವರ ತಂದೆಗಳಿಗೆ ಕೊಟ್ಟ ದೇಶಕ್ಕೆ ಅವರನ್ನು ತಿರುಗಿ ಬರಮಾಡುತ್ತೇನೆ; ಅವರು ಅದನ್ನು ಸ್ವಾಧೀನ ಮಾಡಿಕೊಳ್ಳುವರು. .::. 4 ಕರ್ತನು ಇಸ್ರಾಯೇಲನ್ನೂ ಯೆಹೂದವನ್ನೂ ಕುರಿತು ಹೇಳಿದ ವಾಕ್ಯಗಳು ಇವೇ-- .::. 5 ಕರ್ತನು ಹೀಗೆ ಹೇಳುತ್ತಾನೆ--ನಾವು ನಡುಗುವಿಕೆಯ ಮತ್ತು ಭಯದ ಸ್ವರವನ್ನು ಕೇಳಿದ್ದೇವೆಯೇ ಹೊರತು ಸಮಾಧಾನದ್ದಲ್ಲ. .::. 6 ಈಗ ವಿಚಾರಿಸಿ ನೋಡಿರಿ; ಗಂಡಸು ಪ್ರಸವವೇದನೆ ಪಡುವದುಂಟೇ? ನಾನು ಯಾಕೆ ಪುರುಷರೆಲ್ಲರನು ಪ್ರಸವವೇದನೆ ಪಡುವ ಸ್ತ್ರೀಯ ಹಾಗೆ ನಡುವಿನ ಮೇಲೆ ಕೈ ಇಟ್ಟವರ ಹಾಗೆ ನೋಡುತ್ತೇನೆ; ಯಾಕೆ ಮುಖಗಳೆಲ್ಲಾ ಕಳೆಗುಂದಿದವು? .::. 7 ಅಯ್ಯೋ, ಆ ದಿನವು ಭಯಂಕರವಾದದ್ದು; ಅದರಂಥದ್ದು ಯಾವದೂ ಇಲ್ಲ; ಅದು ಯಾಕೋಬನಿಗೆ ಇಕ್ಕಟ್ಟಿನ ಕಾಲವೇ; ಆದಾಗ್ಯೂ ಅವನು ಅದರಿಂದ ರಕ್ಷಿಸಲ್ಪಡುವನು. .::. 8 ಆ ದಿವಸದಲ್ಲಿ ಆಗುವದೇನಂದರೆ--ನಾನು ಅವನ ನೊಗವನ್ನು ನಿನ್ನ ಕುತ್ತಿಗೆಯ ಮೇಲಿನಿಂದ ಮುರಿದು ಹಾಕುವೆನು; ನಿನ್ನ ಬಂಧನಗಳನ್ನು ಹರಿದುಬಿಡುವೆನು; ಅನ್ಯರು ಇನ್ನು ಅವನಿಂದ ಸೇವೆ ಮಾಡಿಸಿಕೊಳ್ಳುವದಿಲ್ಲವೆಂದು ಸೈನ್ಯ ಗಳ ಕರ್ತನು ಅನ್ನುತ್ತಾನೆ. .::. 9 ಆದರೆ ಅವರು ತಮ್ಮ ದೇವರಾದ ಕರ್ತನಿಗೂ ಅವರಿಗೋಸ್ಕರ ನಾನು ಎಬ್ಬಿ ಸುವ ಅವರ ಅರಸನಾದ ದಾವೀದನಿಗೂ ಸೇವೆ ಮಾಡು ವರು. .::. 10 ಆದದರಿಂದ ನನ್ನ ಸೇವಕನಾದ ಯಾಕೋ ಬನೇ, ಭಯಪಡಬೇಡ ಎಂದು ಕರ್ತನು ಅನ್ನುತ್ತಾನೆ; ಇಸ್ರಾಯೇಲೇ ಹೆದರಬೇಡ; ಇಗೋ, ನಾನು ನಿನ್ನನ್ನು ದೂರದಿಂದಲೂ ನಿನ್ನ ಸಂತಾನವನ್ನು ಸೆರೆ ಒಯ್ದ ದೇಶದಿಂದಲೂ ರಕ್ಷಿಸುತ್ತೇನೆ; ಯಾಕೋಬನು ತಿರುಗಿ ಬಂದು ವಿಶ್ರಾಂತಿಯಲ್ಲಿರುವನು; ಹೆದರಿಸುವವನಿಲ್ಲದೆ ಸೌಖ್ಯವಾಗಿರುವನು. .::. 11 ನಿನ್ನನ್ನು ರಕ್ಷಿಸುವದಕ್ಕೆ ನಾನು ನಿನ್ನ ಸಂಗಡ ಇದ್ದೇನೆಂದು ಕರ್ತನು ಅನ್ನುತ್ತಾನೆ; ನಿನ್ನನ್ನು ಎಲ್ಲಿ ಚದುರಿಸಿದೆನೋ ಆ ಎಲ್ಲಾ ಜನಾಂಗ ಗಳನ್ನು ನಾನು ನಿರ್ಮೂಲ ಮಾಡಿದಾಗ್ಯೂ ನಿನ್ನನ್ನು ನಿರ್ಮೂಲ ಮಾಡುವದಿಲ್ಲ; ಮಿತಿಯಲ್ಲಿ ನಿನ್ನನ್ನು ಶಿಕ್ಷಿಸುವೆನು. ಆದರೆ ನಾನು ಶಿಕ್ಷಿಸದೆ ಬಿಡುವದಿಲ್ಲ. .::. 12 ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಗಾಯವು ಗುಣಹೊಂದದು ನಿನ್ನ ಬಾಸುಂಡೆಯು ಅಘೋರ ವಾದದ್ದು. .::. 13 ಅದನ್ನು ನಿನಗೆ ಕಟ್ಟುವ ಹಾಗೆ ನಿನಗೋ ಸ್ಕರ ವಾದಿಸುವವರು ಯಾರೂ ಇರುವದಿಲ್ಲ. ವಾಸಿ ಮಾಡುವ ಔಷಧಗಳು ನಿನಗೆ ಇಲ್ಲ. .::. 14 ನಿನ್ನನ್ನು ಪ್ರೀತಿ ಮಾಡುವವರೆಲ್ಲರು ನಿನ್ನನ್ನು ಮರೆತುಬಿಟ್ಟಿದ್ದಾರೆ, ನಿನ್ನನ್ನು ಹುಡುಕುವದಿಲ್ಲ; ನಿನ್ನ ಅಕ್ರಮಗಳು ಬಹಳವೂ ನಿನ್ನ ಪಾಪಗಳು ಪ್ರಬಲವೂ ಆಗಿರುವದರಿಂದ ಶತ್ರುವಿನ ಗಾಯದಿಂದಲೂ ಕ್ರೂರನ ಶಿಕ್ಷೆಯಿಂದಲೂ ನಾನು ನಿನ್ನನ್ನು ಗಾಯಪಡಿಸಿದ್ದೇನೆ. .::. 15 ನಿನ್ನ ಗಾಯದ ನೋವಿನ ನಿಮಿತ್ತ ಯಾಕೆ ಕೂಗುತ್ತೀ? ನಿನ್ನ ದುಃಖವು ಗುಣವಾಗ ದಂಥದ್ದೇ; ನಿನ್ನ ಅಕ್ರಮಗಳು ಬಹಳವಾಗಿರುವದ ರಿಂದಲೂ ನಿನ್ನ ಪಾಪಗಳು ಪ್ರಬಲವಾಗಿರುವದ ರಿಂದಲೂ ಇವುಗಳನ್ನು ನಿನಗೆ ಮಾಡಿದ್ದೇನೆ. .::. 16 ಆದರೂ ನಿನ್ನನ್ನು ನುಂಗುವವರೆಲ್ಲರೂ ನುಂಗಲ್ಪಡು ವರು; ನಿನ್ನ ವಿರೋಧಿಗಳಲ್ಲಿ ಪ್ರತಿಯೊಬ್ಬನೂ ಸೆರೆಗೆ ಹೋಗುವನು; ನಿನ್ನನ್ನು ಕೊಳ್ಳೆಮಾಡುವವರು ಕೊಳ್ಳೆ ಯಾಗುವರು; ನಿನಗೆ ಬಲೆ ಬೀಸುವವರೆಲ್ಲರನ್ನು ನಾನು ಬಲೆಗೆ ಒಪ್ಪಿಸುವೆನು. .::. 17 ಚೀಯೋನು ತಳ್ಳಿಬಿಡಲ್ಪ ಟ್ಟದ್ದೂ ಅದನ್ನು ವಿಚಾರಿಸುವವರು ಯಾರೂ ಇಲ್ಲ ವೆಂದೂ ಅವರು ನಿನ್ನ ವಿಷಯ ಹೇಳುವದರಿಂದ ನಿನಗೆ ಕ್ಷೇಮವನ್ನುಂಟು ಮಾಡುವೆನು; ನಿನ್ನ ಗಾಯ ಗಳನ್ನು ಸ್ವಸ್ಥ ಮಾಡುವೆನೆಂದು ಕರ್ತನು ಅನ್ನುತ್ತಾನೆ. .::. 18 ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಯಾಕೋಬನ ಗುಡಾರಗಳ ಸೆರೆಯನ್ನು ತಿರುಗಿ ತರುತ್ತೇನೆ; ಅವನ ನಿವಾಸಗಳನ್ನು ಕರುಣಿಸುತ್ತೇನೆ; ಪಟ್ಟಣವು ಅದರ ದಿಣ್ಣೆಯ ಮೇಲೆ ಕಟ್ಟಲ್ಪಡುವದು; ಅರಮನೆಯು ತಕ್ಕಸ್ಥಳದಲ್ಲಿ ನೆಲೆಯಾಗಿರುವದು. .::. 19 ಅವುಗಳೊಳಗಿಂದ ಕೃತಜ್ಞತಾ ಸ್ತೋತ್ರವೂ ಸಂತೋ ಷಪಡುವವರ ಸ್ವರವೂ ಹೊರಡುವದು; ಅವರನ್ನು ಅಭಿವೃದ್ಧಿಮಾಡುವೆನು; ಅವರು ಕೊಂಚವಾಗಿರರು, ಅವರು ಅಲ್ಪವಾಗದ ಹಾಗೆ ಅವರಿಗೆ ಘನವನ್ನು ಕೊಡುವೆನು. .::. 20 ಅವರ ಮಕ್ಕಳು ಸಹ ಪೂರ್ವ ಕಾಲದ ಹಾಗೆ ಇರುವರು; ಅವರ ಸಭೆಯು ನನ್ನ ಮುಂದೆ ಸ್ಥಾಪಿಸಲ್ಪಡುವದು; ಅವರನ್ನು ಬಾಧಿಸುವವರೆಲ್ಲರನ್ನು ವಿಚಾರಿಸುವೆನು. .::. 21 ಅವರ ಪ್ರಧಾನರು ಅವರೊಳಗೆ ಇರುವರು; ಅವರನ್ನಾಳುವವನು ಅವರ ಮಧ್ಯದಲ್ಲಿಂದ ಹೊರಡುವನು; ನಾನು ಅವನನ್ನು ಹತ್ತಿರ ಬರಮಾಡು ವೆನು; ಅವನು ನನಗೆ ಸವಿಾಪಿಸುವನು; ಆದರೆ ನನಗೆ ಸವಿಾಪಿಸುವದಕ್ಕೆ ತನ್ನ ಹೃದಯ ನಿಶ್ಚಯ ಮಾಡಿಕೊಂಡ ಇವನಾರೆಂದು ಕರ್ತನು ಅನ್ನುತ್ತಾನೆ. .::. 22 ನೀವು ನನಗೆ ಜನರಾಗಿರುವಿರಿ; ನಾನು ನಿಮಗೆ ದೇವರಾಗಿರುವೆನು. .::. 23 ಇಗೋ, ಕರ್ತನ ಬಿರುಗಾಳಿ ರೌದ್ರವಾಗಿ ಹೊರ ಡುತ್ತದೆ. ಅದು ಬಡಕೊಂಡು ಹೋಗುವ ಬಿರುಗಾಳಿ ಯೇ; ಬಾಧೆಯು ದುಷ್ಟರ ತಲೆಯ ಮೇಲೆ ಬೀಳುವದು. .::. 24 ಕರ್ತನ ಕೋಪದ ಉರಿಯು ಅದನ್ನು ಮಾಡುವ ವರೆಗೂ ತನ್ನ ಹೃದಯದ ಆಲೋಚನೆಗಳನ್ನು ನಡಿಸಿ ರುವ ವರೆಗೂ ತಿರುಗುವದಿಲ್ಲ; ನೀವು ಅಂತ್ಯದಿನದಲ್ಲಿ ಅದನ್ನು ಯೋಚಿಸುವಿರಿ.
  • ಯೆರೆಮಿಯ ಅಧ್ಯಾಯ 1  
  • ಯೆರೆಮಿಯ ಅಧ್ಯಾಯ 2  
  • ಯೆರೆಮಿಯ ಅಧ್ಯಾಯ 3  
  • ಯೆರೆಮಿಯ ಅಧ್ಯಾಯ 4  
  • ಯೆರೆಮಿಯ ಅಧ್ಯಾಯ 5  
  • ಯೆರೆಮಿಯ ಅಧ್ಯಾಯ 6  
  • ಯೆರೆಮಿಯ ಅಧ್ಯಾಯ 7  
  • ಯೆರೆಮಿಯ ಅಧ್ಯಾಯ 8  
  • ಯೆರೆಮಿಯ ಅಧ್ಯಾಯ 9  
  • ಯೆರೆಮಿಯ ಅಧ್ಯಾಯ 10  
  • ಯೆರೆಮಿಯ ಅಧ್ಯಾಯ 11  
  • ಯೆರೆಮಿಯ ಅಧ್ಯಾಯ 12  
  • ಯೆರೆಮಿಯ ಅಧ್ಯಾಯ 13  
  • ಯೆರೆಮಿಯ ಅಧ್ಯಾಯ 14  
  • ಯೆರೆಮಿಯ ಅಧ್ಯಾಯ 15  
  • ಯೆರೆಮಿಯ ಅಧ್ಯಾಯ 16  
  • ಯೆರೆಮಿಯ ಅಧ್ಯಾಯ 17  
  • ಯೆರೆಮಿಯ ಅಧ್ಯಾಯ 18  
  • ಯೆರೆಮಿಯ ಅಧ್ಯಾಯ 19  
  • ಯೆರೆಮಿಯ ಅಧ್ಯಾಯ 20  
  • ಯೆರೆಮಿಯ ಅಧ್ಯಾಯ 21  
  • ಯೆರೆಮಿಯ ಅಧ್ಯಾಯ 22  
  • ಯೆರೆಮಿಯ ಅಧ್ಯಾಯ 23  
  • ಯೆರೆಮಿಯ ಅಧ್ಯಾಯ 24  
  • ಯೆರೆಮಿಯ ಅಧ್ಯಾಯ 25  
  • ಯೆರೆಮಿಯ ಅಧ್ಯಾಯ 26  
  • ಯೆರೆಮಿಯ ಅಧ್ಯಾಯ 27  
  • ಯೆರೆಮಿಯ ಅಧ್ಯಾಯ 28  
  • ಯೆರೆಮಿಯ ಅಧ್ಯಾಯ 29  
  • ಯೆರೆಮಿಯ ಅಧ್ಯಾಯ 30  
  • ಯೆರೆಮಿಯ ಅಧ್ಯಾಯ 31  
  • ಯೆರೆಮಿಯ ಅಧ್ಯಾಯ 32  
  • ಯೆರೆಮಿಯ ಅಧ್ಯಾಯ 33  
  • ಯೆರೆಮಿಯ ಅಧ್ಯಾಯ 34  
  • ಯೆರೆಮಿಯ ಅಧ್ಯಾಯ 35  
  • ಯೆರೆಮಿಯ ಅಧ್ಯಾಯ 36  
  • ಯೆರೆಮಿಯ ಅಧ್ಯಾಯ 37  
  • ಯೆರೆಮಿಯ ಅಧ್ಯಾಯ 38  
  • ಯೆರೆಮಿಯ ಅಧ್ಯಾಯ 39  
  • ಯೆರೆಮಿಯ ಅಧ್ಯಾಯ 40  
  • ಯೆರೆಮಿಯ ಅಧ್ಯಾಯ 41  
  • ಯೆರೆಮಿಯ ಅಧ್ಯಾಯ 42  
  • ಯೆರೆಮಿಯ ಅಧ್ಯಾಯ 43  
  • ಯೆರೆಮಿಯ ಅಧ್ಯಾಯ 44  
  • ಯೆರೆಮಿಯ ಅಧ್ಯಾಯ 45  
  • ಯೆರೆಮಿಯ ಅಧ್ಯಾಯ 46  
  • ಯೆರೆಮಿಯ ಅಧ್ಯಾಯ 47  
  • ಯೆರೆಮಿಯ ಅಧ್ಯಾಯ 48  
  • ಯೆರೆಮಿಯ ಅಧ್ಯಾಯ 49  
  • ಯೆರೆಮಿಯ ಅಧ್ಯಾಯ 50  
  • ಯೆರೆಮಿಯ ಅಧ್ಯಾಯ 51  
  • ಯೆರೆಮಿಯ ಅಧ್ಯಾಯ 52  
×

Alert

×

Kannada Letters Keypad References