ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಎಫೆಸದವರಿಗೆ

ಎಫೆಸದವರಿಗೆ ಅಧ್ಯಾಯ 3

1 ಈ ಕಾರಣದಿಂದ ಅನ್ಯಜನರಾಗಿರುವ ನಿಮ್ಮ ನಿಮಿತ್ತ ಯೇಸು ಕ್ರಿಸ್ತನ ಸೆರೆಯವನಾದ ಪೌಲನೆಂಬ ನಾನು 2 ನಿಮಗೋಸ್ಕರ ವಾಗಿ ನನಗೆ ಕೊಡಲ್ಪಟ್ಟ ದೇವರ ಕೃಪಾಯುಗದ ವಿಷಯದಲ್ಲಿ ನೀವು ಕೇಳಿರುವದಾದರೆ 3 ಇದುವರೆಗೆ ಗುಪ್ತವಾಗಿದ್ದದನ್ನು ಆತನು ಪ್ರಕಟನೆಯಿಂದ ನನಗೆ ಹೇಗೆ ತಿಳಿಸಿದನೆಂಬದನ್ನು ಮೊದಲು ನಾನು ನಿಮಗೆ ಸಂಕ್ಷೇಪವಾಗಿ ಬರೆದೆನು; 4 (ಬರೆದದ್ದನ್ನು ನೀವು ಓದಿ ನೋಡಿದರೆ ಕ್ರಿಸ್ತನ ವಿಷಯವಾದ ಮರ್ಮವನ್ನು ಕುರಿತು ನನಗಿರುವ ಗ್ರಹಿಕೆಯನ್ನು ನೀವು ತಿಳುಕೊಳ್ಳ ಬಹುದು.) 5 ಆ ಮರ್ಮವು ಈ ಕಾಲದಲ್ಲಿ ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ಆತ್ಮನಿಂದ ತಿಳಿಸಲ್ಪಟ್ಟಂತೆ ಬೇರೆ ಕಾಲಗಳಲ್ಲಿ ಮನುಷ್ಯ ಪುತ್ರರಿಗೆ ತಿಳಿಸಲ್ಪಡಲಿಲ್ಲ. 6 ಅದೇನಂದರೆ, ಅನ್ಯಜನರು (ಯೆಹೂದ್ಯರೊಂದಿಗೆ) ಸಹ ಬಾಧ್ಯರೂ ಒಂದೇ ದೇಹದವರೂ ಸುವಾರ್ತೆಯಿಂದ ಕ್ರಿಸ್ತನ ಮೂಲಕ ಆತನ ವಾಗ್ದಾನದಲ್ಲಿ ಪಾಲುಗಾರರೂ ಆಗಿರಬೇಕೆಂ ಬದೇ. 7 ದೇವರು ತನ್ನ ಶಕ್ತಿಯ ಪ್ರಯೋಗದಲ್ಲಿ ನನಗೆ ಅನುಗ್ರಹಿಸಿದ ಕೃಪಾದಾನಕ್ಕನುಸಾರವಾಗಿ ನಾನು ಈ ಸುವಾರ್ತೆಗೆ ಸೇವಕನಾದೆನು. 8 ಕ್ರಿಸ್ತನ ಶೋಧಿಸಲ ಶಕ್ಯವಾದ ಐಶ್ವರ್ಯದ ವಿಷಯವಾಗಿ ಅನ್ಯಜನರಿಗೆ ನಾನು ಸಾರುವ ಹಾಗೆ ಪರಿಶುದ್ಧರೊಳಗೆ ಅತ್ಯಲ್ಪ ನಾದ ನನಗೆ ಅನುಗ್ರಹಿಸೋಣವಾಯಿತು. 9 ಸಮಸ್ತ ವನ್ನು ಯೇಸು ಕ್ರಿಸ್ತನಿಂದ ಸೃಷ್ಟಿಸಿದ ದೇವರಲ್ಲಿ ಲೋಕಾದಿ ಯಿಂದ ಮರೆಯಾಗಿದ್ದ ಮರ್ಮದ ಅನ್ಯೋನ್ಯತೆಯು ಎಲ್ಲರಿಗೂ ತೋರುವಂತೆ ಮಾಡುವ ಹಾಗೆಯೂ 10 ನಾನಾ ವಿಧವಾದ ದೇವರ ಜ್ಞಾನವು ಪರಲೋಕದಲ್ಲಿ ಈಗ ರಾಜತ್ವಗಳಿಗೂ ಅಧಿಕಾರಗಳಿಗೂ ಸಭೆಯ ಮೂಲಕ ಗೊತ್ತಾಗಬೇಕೆಂಬದಾಗಿಯೂ ಆತನು ಉದ್ದೇಶಿಸಿದ್ದನು. 11 ನಮ್ಮ ಕರ್ತನಾದ ಕ್ರಿಸ್ತ ಯೇಸು ವಿನಲ್ಲಿ ಆತನು ಸಂಕಲ್ಪಿಸಿದ ಶಾಶ್ವತವಾದ ಸಂಕಲ್ಪದಂತೆ ಇದಾಯಿತು. 12 ಆತನಿಂದಾದ ನಂಬಿಕೆಯ ಮೂಲಕ ನಮಗೆ ಧೈರ್ಯವೂ ಭರವಸವುಳ್ಳ ಪ್ರವೇಶವೂ ಉಂಟಾಯಿತು. 13 ಆದದರಿಂದ ನಿಮ್ಮ ನಿಮಿತ್ತ ನನ ಗುಂಟಾದ ಕಷ್ಟಗಳಿಗಾಗಿ ನೀವು ಧೈರ್ಯಗೆಡಬಾರ ದೆಂದು ನಾನು ಅಪೇಕ್ಷಿಸುತ್ತೇನೆ. ಅವು ನಿಮ್ಮ ಗೌರವವಾಗಿವೆ. 14 ಈ ಕಾರಣದಿಂದ ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯ ಮುಂದೆ ನನ್ನ ಮೊಣ ಕಾಲೂರಿ 15 ಯಾವ ತಂದೆಯ ಹೆಸರನ್ನು ಪರಲೋಕ ಭೂಲೋಕಗಳಲ್ಲಿರುವ ಕುಟುಂಬವೆಲ್ಲಾ ತೆಗೆದುಕೊಳ್ಳು ತ್ತದೋ, ಆ ತಂದೆಯು 16 ನಿಮಗೆ ತನ್ನ ಮಹಿಮೆಯ ಐಶ್ವರ್ಯಕ್ಕನುಸಾರವಾಗಿ ಆತನ ಆತ್ಮನ ಮೂಲಕ ಆಂತರ್ಯದಲ್ಲಿ ವಿಶೇಷ ಬಲವನ್ನು ಅನುಗ್ರಹಿಸುವ ಹಾಗೆಯೂ 17 ಕ್ರಿಸ್ತನು ನಿಮ್ಮ ಹೃದಯಗಳಲ್ಲಿ ನಂಬಿಕೆಯ ಮೂಲಕ ವಾಸಿಸುವಂತೆಯೂ ನೀವು ಪ್ರೀತಿಯಲಿ ಬೇರೂರಿ ನೆಲೆಗೊಂಡು ನಿಂತು 18 ಪರಿಶುದ್ಧರೆಲ್ಲ ರೊಂದಿಗೆ ಅದರ ಅಗಲ ಉದ್ದ ಆಳ ಮತ್ತು ಎತ್ತರವನ್ನು ಗ್ರಹಿಸುವಂತೆಯೂ 19 ಜ್ಞಾನಕ್ಕೆ ವಿಾರುವ ಕ್ರಿಸ್ತನ ಪ್ರೀತಿ ಯನ್ನು ತಿಳಿದುಕೊಂಡು ದೇವರ ಸಂಪೂರ್ಣತೆಯ ಮಟ್ಟಿಗೂ ಪರಿಪೂರ್ಣರಾಗುವ ಹಾಗೆಯೂ ನಿಮಗೆ ದಯ ಪಾಲಿಸಲಿ ಎಂದು ಆತನನ್ನು ಬೇಡಿಕೊಳ್ಳುತ್ತೇನೆ. 20 ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಶಕ್ತಿಯ ಪ್ರಕಾರ ನಾವು ಬೇಡುವದಕ್ಕಿಂತಲೂ ಯೋಚಿಸುವದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದಾತನಿಗೆ 21 ಸಭೆಯಲ್ಲಿ ಕ್ರಿಸ್ತ ಯೇಸುವಿನ ಮೂಲಕ ತಲತಲಾಂತ ರಕ್ಕೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ. ಆಮೆನ್.
1. ಈ ಕಾರಣದಿಂದ ಅನ್ಯಜನರಾಗಿರುವ ನಿಮ್ಮ ನಿಮಿತ್ತ ಯೇಸು ಕ್ರಿಸ್ತನ ಸೆರೆಯವನಾದ ಪೌಲನೆಂಬ ನಾನು 2. ನಿಮಗೋಸ್ಕರ ವಾಗಿ ನನಗೆ ಕೊಡಲ್ಪಟ್ಟ ದೇವರ ಕೃಪಾಯುಗದ ವಿಷಯದಲ್ಲಿ ನೀವು ಕೇಳಿರುವದಾದರೆ 3. ಇದುವರೆಗೆ ಗುಪ್ತವಾಗಿದ್ದದನ್ನು ಆತನು ಪ್ರಕಟನೆಯಿಂದ ನನಗೆ ಹೇಗೆ ತಿಳಿಸಿದನೆಂಬದನ್ನು ಮೊದಲು ನಾನು ನಿಮಗೆ ಸಂಕ್ಷೇಪವಾಗಿ ಬರೆದೆನು; 4. (ಬರೆದದ್ದನ್ನು ನೀವು ಓದಿ ನೋಡಿದರೆ ಕ್ರಿಸ್ತನ ವಿಷಯವಾದ ಮರ್ಮವನ್ನು ಕುರಿತು ನನಗಿರುವ ಗ್ರಹಿಕೆಯನ್ನು ನೀವು ತಿಳುಕೊಳ್ಳ ಬಹುದು.) 5. ಆ ಮರ್ಮವು ಈ ಕಾಲದಲ್ಲಿ ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ಆತ್ಮನಿಂದ ತಿಳಿಸಲ್ಪಟ್ಟಂತೆ ಬೇರೆ ಕಾಲಗಳಲ್ಲಿ ಮನುಷ್ಯ ಪುತ್ರರಿಗೆ ತಿಳಿಸಲ್ಪಡಲಿಲ್ಲ. 6. ಅದೇನಂದರೆ, ಅನ್ಯಜನರು (ಯೆಹೂದ್ಯರೊಂದಿಗೆ) ಸಹ ಬಾಧ್ಯರೂ ಒಂದೇ ದೇಹದವರೂ ಸುವಾರ್ತೆಯಿಂದ ಕ್ರಿಸ್ತನ ಮೂಲಕ ಆತನ ವಾಗ್ದಾನದಲ್ಲಿ ಪಾಲುಗಾರರೂ ಆಗಿರಬೇಕೆಂ ಬದೇ. 7. ದೇವರು ತನ್ನ ಶಕ್ತಿಯ ಪ್ರಯೋಗದಲ್ಲಿ ನನಗೆ ಅನುಗ್ರಹಿಸಿದ ಕೃಪಾದಾನಕ್ಕನುಸಾರವಾಗಿ ನಾನು ಈ ಸುವಾರ್ತೆಗೆ ಸೇವಕನಾದೆನು. 8. ಕ್ರಿಸ್ತನ ಶೋಧಿಸಲ ಶಕ್ಯವಾದ ಐಶ್ವರ್ಯದ ವಿಷಯವಾಗಿ ಅನ್ಯಜನರಿಗೆ ನಾನು ಸಾರುವ ಹಾಗೆ ಪರಿಶುದ್ಧರೊಳಗೆ ಅತ್ಯಲ್ಪ ನಾದ ನನಗೆ ಅನುಗ್ರಹಿಸೋಣವಾಯಿತು. 9. ಸಮಸ್ತ ವನ್ನು ಯೇಸು ಕ್ರಿಸ್ತನಿಂದ ಸೃಷ್ಟಿಸಿದ ದೇವರಲ್ಲಿ ಲೋಕಾದಿ ಯಿಂದ ಮರೆಯಾಗಿದ್ದ ಮರ್ಮದ ಅನ್ಯೋನ್ಯತೆಯು ಎಲ್ಲರಿಗೂ ತೋರುವಂತೆ ಮಾಡುವ ಹಾಗೆಯೂ 10. ನಾನಾ ವಿಧವಾದ ದೇವರ ಜ್ಞಾನವು ಪರಲೋಕದಲ್ಲಿ ಈಗ ರಾಜತ್ವಗಳಿಗೂ ಅಧಿಕಾರಗಳಿಗೂ ಸಭೆಯ ಮೂಲಕ ಗೊತ್ತಾಗಬೇಕೆಂಬದಾಗಿಯೂ ಆತನು ಉದ್ದೇಶಿಸಿದ್ದನು. 11. ನಮ್ಮ ಕರ್ತನಾದ ಕ್ರಿಸ್ತ ಯೇಸು ವಿನಲ್ಲಿ ಆತನು ಸಂಕಲ್ಪಿಸಿದ ಶಾಶ್ವತವಾದ ಸಂಕಲ್ಪದಂತೆ ಇದಾಯಿತು. 12. ಆತನಿಂದಾದ ನಂಬಿಕೆಯ ಮೂಲಕ ನಮಗೆ ಧೈರ್ಯವೂ ಭರವಸವುಳ್ಳ ಪ್ರವೇಶವೂ ಉಂಟಾಯಿತು. 13. ಆದದರಿಂದ ನಿಮ್ಮ ನಿಮಿತ್ತ ನನ ಗುಂಟಾದ ಕಷ್ಟಗಳಿಗಾಗಿ ನೀವು ಧೈರ್ಯಗೆಡಬಾರ ದೆಂದು ನಾನು ಅಪೇಕ್ಷಿಸುತ್ತೇನೆ. ಅವು ನಿಮ್ಮ ಗೌರವವಾಗಿವೆ. 14. ಈ ಕಾರಣದಿಂದ ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯ ಮುಂದೆ ನನ್ನ ಮೊಣ ಕಾಲೂರಿ 15. ಯಾವ ತಂದೆಯ ಹೆಸರನ್ನು ಪರಲೋಕ ಭೂಲೋಕಗಳಲ್ಲಿರುವ ಕುಟುಂಬವೆಲ್ಲಾ ತೆಗೆದುಕೊಳ್ಳು ತ್ತದೋ, ಆ ತಂದೆಯು 16. ನಿಮಗೆ ತನ್ನ ಮಹಿಮೆಯ ಐಶ್ವರ್ಯಕ್ಕನುಸಾರವಾಗಿ ಆತನ ಆತ್ಮನ ಮೂಲಕ ಆಂತರ್ಯದಲ್ಲಿ ವಿಶೇಷ ಬಲವನ್ನು ಅನುಗ್ರಹಿಸುವ ಹಾಗೆಯೂ 17. ಕ್ರಿಸ್ತನು ನಿಮ್ಮ ಹೃದಯಗಳಲ್ಲಿ ನಂಬಿಕೆಯ ಮೂಲಕ ವಾಸಿಸುವಂತೆಯೂ ನೀವು ಪ್ರೀತಿಯಲಿ ಬೇರೂರಿ ನೆಲೆಗೊಂಡು ನಿಂತು 18. ಪರಿಶುದ್ಧರೆಲ್ಲ ರೊಂದಿಗೆ ಅದರ ಅಗಲ ಉದ್ದ ಆಳ ಮತ್ತು ಎತ್ತರವನ್ನು ಗ್ರಹಿಸುವಂತೆಯೂ 19. ಜ್ಞಾನಕ್ಕೆ ವಿಾರುವ ಕ್ರಿಸ್ತನ ಪ್ರೀತಿ ಯನ್ನು ತಿಳಿದುಕೊಂಡು ದೇವರ ಸಂಪೂರ್ಣತೆಯ ಮಟ್ಟಿಗೂ ಪರಿಪೂರ್ಣರಾಗುವ ಹಾಗೆಯೂ ನಿಮಗೆ ದಯ ಪಾಲಿಸಲಿ ಎಂದು ಆತನನ್ನು ಬೇಡಿಕೊಳ್ಳುತ್ತೇನೆ. 20. ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಶಕ್ತಿಯ ಪ್ರಕಾರ ನಾವು ಬೇಡುವದಕ್ಕಿಂತಲೂ ಯೋಚಿಸುವದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದಾತನಿಗೆ 21. ಸಭೆಯಲ್ಲಿ ಕ್ರಿಸ್ತ ಯೇಸುವಿನ ಮೂಲಕ ತಲತಲಾಂತ ರಕ್ಕೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ. ಆಮೆನ್.
  • ಎಫೆಸದವರಿಗೆ ಅಧ್ಯಾಯ 1  
  • ಎಫೆಸದವರಿಗೆ ಅಧ್ಯಾಯ 2  
  • ಎಫೆಸದವರಿಗೆ ಅಧ್ಯಾಯ 3  
  • ಎಫೆಸದವರಿಗೆ ಅಧ್ಯಾಯ 4  
  • ಎಫೆಸದವರಿಗೆ ಅಧ್ಯಾಯ 5  
  • ಎಫೆಸದವರಿಗೆ ಅಧ್ಯಾಯ 6  
×

Alert

×

Kannada Letters Keypad References