kannada ಬೈಬಲ್

ಆದಿಕಾಂಡ ಒಟ್ಟು 50 ಅಧ್ಯಾಯಗಳು

ಆದಿಕಾಂಡ

ಆದಿಕಾಂಡ ಅಧ್ಯಾಯ 15
ಆದಿಕಾಂಡ ಅಧ್ಯಾಯ 15

1. ಇವುಗಳಾದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಕರ್ತನ ವಾಕ್ಯವು ಬಂದು--ಅಬ್ರಾಮನೇ, ಭಯಪಡಬೇಡ; ನಾನೇ ನಿನ್ನ ಗುರಾಣಿಯೂ ನಿನ್ನ ಅತ್ಯಧಿಕವಾದ ಬಹುಮಾನವೂ ಆಗಿದ್ದೇನೆ.

2. ಅದಕ್ಕೆ ಅಬ್ರಾಮನು--ಕರ್ತನಾದ ದೇವರೇ, ನನಗೆ ಏನು ಕೊಟ್ಟರೇನು? ನಾನು ಮಕ್ಕಳಿಲ್ಲದವನಾಗಿದ್ದೇನೆ. ಈ ದಮಸ್ಕದವನಾದ ಎಲೀಯೆಜರನು ನನ್ನ ಮನೆಯ ಮನೆವಾರ್ತೆಯವನಾ ಗಿದ್ದಾನಲ್ಲಾ ಅಂದನು.

3. ಅಬ್ರಾಮನು--ಇಗೋ, ನೀನು ನನಗೆ ಸಂತಾನವನ್ನು ಕೊಡಲಿಲ್ಲ; ಇಗೋ, ನನ್ನ ಮನೆಯಲ್ಲಿ ಹುಟ್ಟಿದವನು ನನಗೆ ಬಾಧ್ಯನಾಗಿ ರುವನು ಅಂದಾಗ

4. ಇಗೋ, ಕರ್ತನ ವಾಕ್ಯವು ಅವನಿಗೆ ಉಂಟಾಗಿ--ಇವನು ನಿನಗೆ ಬಾಧ್ಯನಾಗುವ ದಿಲ್ಲ. ನಿನ್ನಿಂದ ಹುಟ್ಟಿದವನೇ ನಿನಗೆ ಬಾಧ್ಯನಾಗುವನು ಅಂದನು.

ಆದಿಕಾಂಡ ಅಧ್ಯಾಯ 15

5. ಕರ್ತನು ಅವನನ್ನು ಹೊರಗೆ ಕರಕೊಂಡು ಬಂದು--ಈಗ ನೀನು ಆಕಾಶವನ್ನು ದೃಷ್ಟಿಸಿ ನಕ್ಷತ್ರ ಗಳನ್ನು ಲೆಕ್ಕಿಸಶಕ್ತನಾದರೆ ಅವುಗಳನ್ನು ಲೆಕ್ಕಿಸು ಅಂದನು. ಆತನು ಅವನಿಗೆ--ಅದರಂತೆಯೇ ನಿನ್ನ ಸಂತತಿಯು ಆಗುವದು ಎಂದು ಅವನಿಗೆ ಹೇಳಿದನು.

6. ಅಬ್ರಾ ಮನು ಕರ್ತನಲ್ಲಿ ನಂಬಿಕೆಯಿಟ್ಟನು. ಆತನು ಅದನ್ನು ಅವನಿಗೆ ನೀತಿ ಎಂದು ಎಣಿಸಿದನು.

7. ಆತನು ಅವನಿಗೆ--ಈ ದೇಶವನ್ನು ಬಾಧ್ಯವಾಗಿ ನಿನಗೆ ಕೊಡುವದಕ್ಕೆ ಕಲ್ದೀಯರ ಊರ್ನಿಂದ ನಿನ್ನನ್ನು ಹೊರಗೆ ತಂದ ಕರ್ತನು ನಾನೇ ಎಂದು ಹೇಳಿದನು.

8. ಅದಕ್ಕೆ ಅವನು--ದೇವರಾದ ಕರ್ತನೇ, ನಾನು ಅದನ್ನು ಬಾಧ್ಯವಾಗಿ ಹೊಂದುವೆನೆಂದು ಯಾವದ ರಿಂದ ತಿಳುಕೊಳ್ಳಲಿ ಅಂದನು.

ಆದಿಕಾಂಡ ಅಧ್ಯಾಯ 15

9. ಅದಕ್ಕೆ ಆತನು ಅಬ್ರಾಮನಿಗೆ--ಮೂರು ಮೂರು ವರುಷದ ಕಡಸು ಆಡು ಟಗರುಗಳನ್ನೂ ಒಂದು ಬೆಳವಕ್ಕಿಯನ್ನೂ ಒಂದು ಪಾರಿವಾಳದ ಮರಿಯನ್ನೂ ನನಗಾಗಿ ತೆಗೆದುಕೋ ಅಂದನು.

10. ಅವನು ಇವುಗಳನ್ನೆಲ್ಲಾ ಆತನಿಗಾಗಿ ತೆಗೆದುಕೊಂಡು ನಡುವೆ ತುಂಡುಮಾಡಿ ಒಂದು ತುಂಡನ್ನು ಇನ್ನೊಂದರ ಎದುರಾಗಿ ಇಟ್ಟನು; ಆದರೆ ಪಕ್ಷಿಗಳನ್ನು ತುಂಡುಮಾಡಲಿಲ್ಲ.

11. ಪಕ್ಷಿಗಳು ಆ ಶವಗಳ ಮೇಲೆ ಇಳಿದು ಬಂದಾಗ ಅಬ್ರಾಮನು ಅವುಗಳನ್ನು ಓಡಿಸಿದನು.

12. ಸೂರ್ಯನು ಅಸ್ತಮಿಸಲಾಗಿ ಅಬ್ರಾಮನಿಗೆ ಗಾಢನಿದ್ರೆ ಹತ್ತಿತು. ಆಗ ಇಗೋ, ಭಯದ ಘೋರಾಂಧಕಾರವು ಅವನ ಮೇಲೆ ಕವಿಯಿತು.

ಆದಿಕಾಂಡ ಅಧ್ಯಾಯ 15

13. ಆಗ ಆತನು ಅಬ್ರಾಮನಿಗೆ--ನಿನ್ನ ಸಂತತಿ ಯವರು ತಮ್ಮದಲ್ಲದ ದೇಶದಲ್ಲಿ ಪರದೇಶಿಗಳಾಗಿದ್ದು ಅವರನ್ನು ಸೇವಿಸುವರು. ಅವರು ನಾನೂರು ವರುಷ ಗಳು ನಿನ್ನ ಸಂತತಿಯವರನ್ನು ಶ್ರಮೆಪಡಿಸುವರು ಎಂದು ನೀನು ಖಂಡಿತವಾಗಿಯೂ ತಿಳಿಯತಕ್ಕದ್ದು.

14. ಅವರು ಸೇವಿಸುವ ಜನಾಂಗಕ್ಕೆ ನಾನೇ ನ್ಯಾಯ ತೀರಿಸುವೆನು; ತರುವಾಯ ಮಹಾ ಸಂಪತ್ತಿನೊಂದಿಗೆ ಅವರು ಹೊರಗೆ ಬರುವರು.

15. ನೀನಾದರೋ ಸಮಾಧಾನದಿಂದ ನಿನ್ನ ತಂದೆಗಳ ಬಳಿಗೆ ಹೋಗುವಿ; ಬಹಳ ಮುದಿಪ್ರಾಯದವನಾಗಿ (ಮೃತಿ ಹೊಂದಿ) ಹೂಣಲ್ಪಡುವಿ.

16. ಆದರೆ ನಾಲ್ಕನೆಯ ಸಂತಾನದಲ್ಲಿ ಅವರು ತಿರಿಗಿ ಬರುವರು; ಅಮೋರಿಯರ ದುಷ್ಟತನವು ಇನ್ನೂ ಪೂರ್ತಿಯಾಗಲಿಲ್ಲ ಎಂದು ಹೇಳಿದನು.

ಆದಿಕಾಂಡ ಅಧ್ಯಾಯ 15

17. ಸೂರ್ಯನು ಮುಳುಗಿದ ಮೇಲೆ ಕತ್ತಲಾದಾಗ ಇಗೋ, ಹೊಗೆಹಾಯುವ ಒಲೆಯೂ ಉರಿಯುವ ದೀಪವೂ ತುಂಡುಗಳ ಮಧ್ಯದಲ್ಲಿ ಹಾದುಹೋದವು.

18. ಅದೇ ದಿನದಲ್ಲಿ ಕರ್ತನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು--ಐಗುಪ್ತದ ನದಿಯಿಂದ ಮಹಾನದಿಯಾದ ಯೂಫ್ರೇಟೀಸ್ ನದಿಯ ವರೆಗೆ ವಾಸಿಸುವ

19. ಕೇನಿಯರೂ ಕೆನಿಜೀಯರೂ ಕದ್ಮೋನಿ ಯರೂ

20. ಹಿತ್ತಿಯರೂ ಪೆರಿಜೀಯರೂ ರೆಫಾಯರೂ

21. ಅಮೋರಿಯರೂ ಕಾನಾನ್ಯರೂ ಗಿರ್ಗಾಷಿಯರೂ ಯೆಬೂಸಿಯರೂ ವಾಸವಾಗಿರುವ ದೇಶವನ್ನು ನಾನು ನಿನ್ನ ಸಂತತಿಗೆ ಕೊಟ್ಟಿದ್ದೇನೆ ಅಂದನು.