Kannada ಬೈಬಲ್
1 ಕೊರಿಂಥದವರಿಗೆ ಒಟ್ಟು 16 ಅಧ್ಯಾಯಗಳು
1 ಕೊರಿಂಥದವರಿಗೆ
1 ಕೊರಿಂಥದವರಿಗೆ ಅಧ್ಯಾಯ 2
1 ಕೊರಿಂಥದವರಿಗೆ ಅಧ್ಯಾಯ 2
ಶಿಲುಬೆಗೆರಿಸಲ್ಪಟ್ಟ ಕ್ರಿಸ್ತನ ಕುರಿತಾದ ಸಂದೇಶ 1 ಪ್ರಿಯ ಸಹೋದರ ಸಹೋದರಿಯರೇ, ನಾನು ನಿಮ್ಮ ಬಳಿಗೆ ಬಂದಿದ್ದಾಗ, ನಾನು ನಿಮಗೆ ದೇವರ ಸತ್ಯವನ್ನು ತಿಳಿಸಿದೆನು. ಆದರೆ ನಾನು ನಾಜೂಕಾದ ಪದಗಳನ್ನಾಗಲಿ ಮಹಾ ಜ್ಞಾನವನ್ನಾಗಲಿ ಉಪಯೋಗಿಸಲಿಲ್ಲ.
2 ನಾನು ನಿಮ್ಮೊಂದಿಗಿದ್ದಾಗ ಯೇಸು ಕ್ರಿಸ್ತನ ಮತ್ತು ಆತನ ಶಿಲುಬೆಯ ಮೇಲಿನ ಮರಣವನ್ನೇ ಹೊರತು ಬೇರೆಲ್ಲಾ ವಿಷಯಗಳನ್ನು ಮರೆತುಬಿಡಲು ನಿರ್ಧರಿಸಿದೆನು.
1 ಕೊರಿಂಥದವರಿಗೆ ಅಧ್ಯಾಯ 2
3 ನಾನು ನಿಮ್ಮ ಬಳಿಗೆ ಬಂದಿದ್ದಾಗ ಬಲಹೀನನಾಗಿದ್ದೆನು; ಭಯದಿಂದ ನಡುಗುತ್ತಿದ್ದೆನು.
4 ನನ್ನ ಉಪದೇಶವಾಗಲಿ ಮಾತುಕತೆಯಾಗಲಿ ಜನರನ್ನು ಒತ್ತಾಯಿಸುವಂಥ ಜ್ಞಾನವಾಕ್ಯಗಳನ್ನು ಒಳಗೊಂಡಿರಲಿಲ್ಲ. ಆದರೆ ಪವಿತ್ರಾತ್ಮನು ಕೊಡುವ ಶಕ್ತಿಯೇ ನನ್ನ ಉಪದೇಶಕ್ಕೆ ಆಧಾರವಾಗಿತ್ತು.
5 ನಿಮ್ಮ ನಂಬಿಕೆಯು ಮನುಷ್ಯನ ಜ್ಞಾನದ ಮೇಲೆ ಆಧಾರಗೊಂಡಿರದೆ ದೇವರ ಶಕ್ತಿಯ ಮೇಲೆ ಆಧಾರಗೊಂಡಿರಬೇಕೆಂದು ನಾನು ಹೀಗೆ ಮಾಡಿದೆನು.
1 ಕೊರಿಂಥದವರಿಗೆ ಅಧ್ಯಾಯ 2
ದೇವರ ಜ್ಞಾನ 6 ಪರಿಣತರಾದ ಜನರಿಗೆ ನಾವು ಜ್ಞಾನವನ್ನೇ ಉಪದೇಶಿಸುತ್ತೇವೆ. ಇದು ಇಹಲೋಕದ ಜ್ಞಾನವೂ ಅಲ್ಲ. ಅಧಿಪತಿಗಳ ಜ್ಞಾನವೂ ಅಲ್ಲ. ಈ ಲೋಕದ ಅಧಿಪತಿಗಳು ತಮ್ಮ ಅಧಿಕಾರವನ್ನು ಕಳೆದುಕೊಳ್ಳುವವರಾಗಿದ್ದಾರೆ.
7 ನಾವಾದರೋ ದೇವರ ರಹಸ್ಯವಾದ ಜ್ಞಾನವನ್ನೇ ಹೇಳುತ್ತೇವೆ. ಈ ಜ್ಞಾನವನ್ನು ಜನರಿಗೆ ಮರೆಮಾಡಲಾಗಿದೆ. ದೇವರು ನಮ್ಮ ಮಹಿಮೆಗಾಗಿ ಈ ಜ್ಞಾನವನ್ನು ಲೋಕವು ಆರಂಭವಾಗುವುದಕ್ಕಿಂತ ಮೊದಲೇ ಯೋಜಿಸಿದ್ದನು.
1 ಕೊರಿಂಥದವರಿಗೆ ಅಧ್ಯಾಯ 2
8 ಈ ಲೋಕದ ಯಾವ ಅಧಿಪತಿಗಳೂ ಈ ಜ್ಞಾನವನ್ನು ಅರ್ಥಮಾಡಿಕೊಳ್ಳಲಿಲ್ಲ. ಅವರು ಅರ್ಥಮಾಡಿಕೊಂಡಿದ್ದರೆ, ಮಹಿಮೆಯುಳ್ಳ ಪ್ರಭುವನ್ನು ಶಿಲುಬೆಗೇರಿಸುತ್ತಿರಲಿಲ್ಲ.
9 ಪವಿತ್ರಗ್ರಂಥದಲ್ಲಿ ಬರೆದಿರುವಂತೆಯೇ ಇದಾಯಿತು: “ದೇವರು ತನ್ನನ್ನು ಪ್ರೀತಿಸುವ ಜನರಿಗೆ ಸಿದ್ಧಪಡಿಸಿರುವುದನ್ನು ಯಾವ ಕಣ್ಣೂ ಕಾಣಲಿಲ್ಲ.
ಯಾವ ಕಿವಿಯೂ ಕೇಳಲಿಲ್ಲ. ಯಾವ ವ್ಯಕ್ತಿಯೂ ಊಹಿಸಿಕೊಳ್ಳಲಿಲ್ಲ.” ಯೆಶಾಯ 64:4
1 ಕೊರಿಂಥದವರಿಗೆ ಅಧ್ಯಾಯ 2
10 ಆದರೆ ದೇವರು ತನ್ನ ಪವಿತ್ರಾತ್ಮನ ಮೂಲಕ ನಮಗೆ ಈ ಸಂಗತಿಗಳನ್ನು ಪ್ರಕಟಿಸಿದನು. ಪವಿತ್ರಾತ್ಮನು ಸಕಲವನ್ನೂ ದೇವರ ಅಗಾಧವಾದ ರಹಸ್ಯಗಳನ್ನೂ ತಿಳಿದಿದ್ದಾನೆ.
11 ಇದು ಹೇಗೆಂದರೆ: ಒಬ್ಬನ ಆಲೋಚನೆಗಳು ಅವನ ಆಂತರ್ಯದಲ್ಲಿರುವ ಜೀವಾತ್ಮವೊಂದಕ್ಕೆ ಹೊರತು ಬೇರೆ ಯಾರಿಗೂ ತಿಳಿದಿರುವುದಿಲ್ಲ. ಅಂತೆಯೇ, ದೇವರ ಆಲೋಚನೆಗಳು ದೇವರಾತ್ಮನ ಹೊರತು ಬೇರೆ ಯಾರಿಗೂ ತಿಳಿದಿರುವುದಿಲ್ಲ.
12 ನಾವು ಹೊಂದಿಕೊಂಡದ್ದು ದೇವರಿಂದ ಬಂದ ಪವಿತ್ರಾತ್ಮನನ್ನೇ ಹೊರತು ಪ್ರಾಪಂಚಿಕವಾದ ಆತ್ಮವನ್ನಲ್ಲ. ದೇವರು ನಮಗೆ ಉಚಿತವಾಗಿ ಕೊಟ್ಟಿರುವಂಥವುಗಳನ್ನು ತಿಳಿದುಕೊಳ್ಳುವುದಕ್ಕಾಗಿ ನಾವು ಆತನನ್ನು ಹೊಂದಿಕೊಂಡೆವು.
1 ಕೊರಿಂಥದವರಿಗೆ ಅಧ್ಯಾಯ 2
13 ನಾವು ಈಸಂಗತಿಗಳನ್ನು ಹೇಳುವಾಗ ಮನುಷ್ಯರ ಜ್ಞಾನದಿಂದ ಕಲಿತುಕೊಂಡಿರುವ ವಾಕ್ಯಗಳನ್ನು ಉಪಯೋಗಿಸದೆ ಆತ್ಮನಿಂದ ಕಲಿತುಕೊಂಡ ವಾಕ್ಯಗಳನ್ನೇ ಉಪಯೋಗಿಸುತ್ತೇವೆ. ಆತ್ಮಿಕ ಸಂಗತಿಗಳನ್ನು ವಿವರಿಸಲು ಆತ್ಮಿಕ ಪದಗಳನ್ನೇ ಬಳಸುತ್ತೇವೆ.
14 ಆತ್ಮಿಕನಲ್ಲದ ವ್ಯಕ್ತಿಯು ದೇವಾರಾತ್ಮನ ವಿಷಯಗಳನ್ನು ಸ್ವೀಕರಿಸಿಕೊಳ್ಳವುದಿಲ್ಲ. ಅವನು ಆ ವಿಷಯಗಳನ್ನು ಮೂರ್ಖತನವೆಂದು ಯೋಚಿಸುತ್ತಾನೆ. ಅವನು ಪವಿತ್ರಾತ್ಮನ ವಿಷಯಗಳನ್ನು ಅರ್ಥಮಾಡಿಕೊಳ್ಳಲಾರನು; ಏಕೆಂದರೆ ಆ ವಿಷಯಗಳನ್ನು ಆತ್ಮಿಕವಾಗಿ ವಿಚಾರಣೆ ಮಾಡಲು ಮಾತ್ರ ಸಾಧ್ಯ.
1 ಕೊರಿಂಥದವರಿಗೆ ಅಧ್ಯಾಯ 2
15 ಆದರೆ ಆತ್ಮಿಕ ಮನುಷ್ಯನು ಎಲ್ಲಾ ವಿಷಯಗಳ ಬಗ್ಗೆ ತೀರ್ಪು ಮಾಡಬಲ್ಲನು. ಅವನಿಗೆ ಬೇರೆ ಯಾರೂ ತೀರ್ಪು ನೀಡಲಾಗುವುದಿಲ್ಲ.
16 ಪವಿತ್ರ ಗ್ರಂಥವು ಹೇಳುವಂತೆ: “ಪ್ರಭುವಿನ ಮನಸ್ಸನ್ನು ಯಾರು ಬಲ್ಲರು? ಪ್ರಭುವಿಗೆ ಯಾರು ಉಪದೇಶ ಮಾಡಬಲ್ಲರು?” ಯೆಶಾಯ 40:13 ನಾವಾದರೋ ಕ್ರಿಸ್ತನ ಮನಸ್ಸನ್ನು ಹೊಂದಿದವರಾಗಿದ್ದೇವೆ.