Kannada ಬೈಬಲ್

1 ಥೆಸಲೊನೀಕದವರಿಗೆ ಒಟ್ಟು 5 ಅಧ್ಯಾಯಗಳು

1 ಥೆಸಲೊನೀಕದವರಿಗೆ

1 ಥೆಸಲೊನೀಕದವರಿಗೆ ಅಧ್ಯಾಯ 4
1 ಥೆಸಲೊನೀಕದವರಿಗೆ ಅಧ್ಯಾಯ 4

ದೇವರನ್ನು ಹರ್ಷಗೊಳಿಸುವ ಜೀವನ 1 ಸಹೋದರ ಸಹೋದರಿಯರೇ, ಈಗ ನಿಮಗೆ ಇತರ ಕೆಲವು ವಿಚಾರಗಳನ್ನು ತಿಳಿಸುತ್ತೇನೆ. ದೇವರನ್ನು ಮೆಚ್ಚಿಸಲು ಹೇಗೆ ಜೀವಿಸಬೇಕೆಂದು ನಿಮಗೆ ಕಲಿಸಿದ್ದೇವೆ. ನೀವು ಅದೇ ರೀತಿಯಲ್ಲಿ ಜೀವಿಸುತ್ತಿರುವಿರಿ. ಅದೇ ರೀತಿಯಲ್ಲಿ ಇನ್ನೂ ಹೆಚ್ಚು ಸಮರ್ಪಕವಾಗಿ ಜೀವಿಸಬೇಕೆಂದು ನಾವು ನಿಮ್ಮನ್ನು ಕ್ರಿಸ್ತನಲ್ಲಿ ಕೇಳಿಕೊಳ್ಳುತ್ತೇವೆ ಮತ್ತು ಪ್ರೋತ್ಸಾಹಿಸುತ್ತೇವೆ.

2 ನೀವು ಯಾವ ಕಾರ್ಯಗಳನ್ನು ಮಾಡಬೇಕೆಂದು ನಾವು ನಿಮಗೆ ಹೇಳಿದೆವೋ ಅವುಗಳೆಲ್ಲಾ ನಿಮಗೆ ತಿಳಿದೇ ಇವೆ. ಪ್ರಭು ಯೇಸುವಿನ ಅಧಿಕಾರದಿಂದ ನಾವು ಆ ಸಂಗತಿಗಳನ್ನು ನಿಮಗೆ ಹೇಳಿದೆವು.

1 ಥೆಸಲೊನೀಕದವರಿಗೆ ಅಧ್ಯಾಯ 4

3 ನೀವು ಪವಿತ್ರರಾಗಿರಬೇಕೆಂಬುದು ದೇವರ ಚಿತ್ತವಾಗಿದೆ. ಆದುದರಿಂದ ನೀವು ಲೈಂಗಿಕ ಪಾಪಗಳಿಂದ ದೂರವಿರಿ.

4 ನಿಮ್ಮಲ್ಲಿ ಪ್ರತಿಯೊಬ್ಬರೂ ನಿಮ್ಮ ಸ್ವಂತ ದೇಹಗಳನ್ನು ಹತೋಟಿಯಲ್ಲಿ ಇಟ್ಟುಕೊಳ್ಳಬೇಕೆಂಬುದು ದೇವರ ಅಪೇಕ್ಷೆ. ನಿಮ್ಮ ದೇಹವನ್ನು ಪವಿತ್ರವಾದ ಮಾರ್ಗದಲ್ಲಿ ಬಳಸಿದರೆ, ದೇವರಿಗೆ ಗೌರವವನ್ನು ನೀಡಿದಂತಾಗುವುದು. *ಅಥವಾ “ನಮ್ಮಲ್ಲಿ ಪ್ರತಿಯೊಬ್ಬರಿಗೂ ಪರಿಶುದ್ಧವಾದ ಮತ್ತು ಗೌರವಾನ್ವಿತವಾದ ರೀತಿಯಲ್ಲಿ ತನ್ನ ಸ್ವಂತ ಹೆಂಡತಿಯನ್ನು ಪಡೆದುಕೊಳ್ಳಲು ಗೊತ್ತಿದೆ.”

1 ಥೆಸಲೊನೀಕದವರಿಗೆ ಅಧ್ಯಾಯ 4

5 ನಿಮ್ಮ ದೇಹವನ್ನು ಲೈಂಗಿಕ ಪಾಪಗಳಿಗಾಗಿ ಬಳಸಬೇಡಿ. ದೇವರನ್ನು ತಿಳಿಯದ ಜನರು ತಮ್ಮ ದೇಹಗಳನ್ನು ಅದಕ್ಕೆ ಬಳಸುತ್ತಾರೆ.

6 ಈ ವಿಷಯದಲ್ಲಿ ನಿಮ್ಮಲ್ಲಿ ಯಾರೂ ಕ್ರಿಸ್ತನಲ್ಲಿ ಸಹೋದರನಾದವನನ್ನು ವಂಚಿಸಿ ಕೇಡುಮಾಡಬಾರದು. ನಾವು ಈಗಾಗಲೇ ನಿಮಗೆ ಹೇಳಿದಂತೆ ಮತ್ತು ಎಚ್ಚರಿಕೆ ನೀಡಿದಂತೆ ಇವೆಲ್ಲವುಗಳ ವಿಷಯದಲ್ಲಿ ದೇವರು ದಂಡಿಸುತ್ತಾನೆ.

7 ದೇವರು ನಮ್ಮನ್ನು ಪರಿಶುದ್ಧರಾಗಿ ಜೀವಿಸುವುದಕ್ಕೆ ಕರೆದಿದ್ದಾನೆ. ನಾವು ಪಾಪದಲ್ಲಿ ಜೀವಿಸಲು ಆತನು ಇಷ್ಟಪಡುವುದಿಲ್ಲ.

1 ಥೆಸಲೊನೀಕದವರಿಗೆ ಅಧ್ಯಾಯ 4

8 ಆದುದರಿಂದ ಈ ಉಪದೇಶವನ್ನು ಅನುಸರಿಸದವನು ಅವಿಧೇಯನಾಗಿರುವುದು ದೇವರಿಗೇ ಹೊರತು ಮಾನವನಿಗಲ್ಲ. ನಮಗೆ ತನ್ನ ಪವಿತ್ರಾತ್ಮನನ್ನು ನೀಡಿದಾತನು ದೇವರೇ.

9 ಕ್ರಿಸ್ತನಲ್ಲಿ ಸಹೋದರ ಸಹೋದರಿಯರನ್ನು ಹೇಗೆ ಪ್ರೀತಿಸಬೇಕೆಂಬುದರ ಬಗ್ಗೆ ನಾವು ನಿಮಗೆ ಬರೆಯುವ ಅವಶ್ಯಕತೆಯಿಲ್ಲ. ಒಬ್ಬರನ್ನೊಬ್ಬರು ಹೇಗೆ ಪ್ರೀತಿಸಬೇಕೆಂಬುದನ್ನು ಈಗಾಗಲೇ ದೇವರು ನಿಮಗೆ ಕಲಿಸಿದ್ದಾನೆ.

10 ಮಕೆದೋನಿಯದಲ್ಲಿರುವ ಸಹೋದರ ಸಹೋದರಿಯರನ್ನೆಲ್ಲ ನೀವು ನಿಜವಾಗಿಯೂ ಪ್ರೀತಿಸುತ್ತಿದ್ದೀರಿ. ಅವರನ್ನು ಇನ್ನೂ ಹೆಚ್ಚೆಚ್ಚಾಗಿ ನೀವು ಪ್ರೀತಿಸಬೇಕೆಂದು ನಾವು ನಿಮ್ಮನ್ನು ಪ್ರೋತ್ಸಾಹಿಸುತ್ತೇವೆ.

1 ಥೆಸಲೊನೀಕದವರಿಗೆ ಅಧ್ಯಾಯ 4

11 ಶಾಂತಿಯಿಂದ ಜೀವಿಸಲು ನಿಮ್ಮಿಂದಾದಷ್ಟು ಪ್ರಯತ್ನಿಸಿರಿ. ನಿಮ್ಮ ಸ್ವಂತ ವ್ಯವಹಾರದ ಮೇಲ್ವಿಚಾರಣೆಯನ್ನು ನೋಡಿಕೊಳ್ಳಿ. ನಿಮ್ಮ ಕೈಯಾರೆ ಕೆಲಸ ಮಾಡಬೇಕೆಂದು ನಾವು ಈಗಾಗಲೇ ನಿಮಗೆ ಹೇಳಿದ್ದೇವೆ.

12 ನೀವು ಹೀಗೆ ಮಾಡಿದರೆ, ವಿಶ್ವಾಸಿಗಳಲ್ಲದವರು ನಿಮ್ಮ ಜೀವತದ ರೀತಿಯನ್ನು ಕಂಡು ನಿಮ್ಮನ್ನು ಗೌರವಿಸುತ್ತಾರೆ. ಅಲ್ಲದೆ ನಿಮ್ಮ ಅಗತ್ಯತೆಗಳ ಪೂರೈಕೆಗಾಗಿ ನೀವು ಬೇರೆಯವರನ್ನು ಅವಲಂಬಿಸಿಕೊಳ್ಳುವ ಅವಶ್ಯಕತೆಯೂ ಇರುವುದಿಲ್ಲ.

1 ಥೆಸಲೊನೀಕದವರಿಗೆ ಅಧ್ಯಾಯ 4

ಪ್ರಭುವಿನ ಬರುವಿಕೆ 13 ಸಹೋದರ ಸಹೋದರಿಯರೇ, ಸತ್ತುಹೋದ ಜನರ ಬಗ್ಗೆ ನೀವು ತಿಳಿದುಕೊಳ್ಳಬೇಕೆಂಬುದು ನಮ್ಮ ಅಪೇಕ್ಷೆ. ನಿರೀಕ್ಷೆಯಿಲ್ಲದ ಜನರಂತೆ ನೀವು ದುಃಖದಿಂದಿರುವುದು ನಮಗೆ ಇಷ್ಟವಿಲ್ಲ.

14 ಯೇಸು ಸತ್ತುಹೋದನೆಂದು ನಾವು ನಂಬುತ್ತೇವೆ. ಆದರೆ ಯೇಸು ಮತ್ತೆ ಜೀವಂತವಾಗಿ ಎದ್ದುಬಂದನೆಂಬುದನ್ನೂ ನಾವು ನಂಬುತ್ತೇವೆ. ಹಾಗೆಯೇ ಯೇಸುವಿನಲ್ಲಿ ವಿಶ್ವಾಸವಿಟ್ಟು ಸತ್ತುಹೋದವರನ್ನು ದೇವರು ಆತನ ಜೊತೆಯಲ್ಲಿ ಕರೆದುಕೊಂಡು ಬರುವನು.

1 ಥೆಸಲೊನೀಕದವರಿಗೆ ಅಧ್ಯಾಯ 4

15 ಈಗ ನಾವು ನಿಮಗೆ ಹೇಳುತ್ತಿರುವುದು ಪ್ರಭುವಿನ ಸ್ವಂತ ಸಂದೇಶವನ್ನೇ. ಪ್ರಭುವು ಮತ್ತೆ ಬಂದಾಗ ಈಗ ಜೀವಿಸುತ್ತಿರುವ ನಾವು ಇನ್ನೂ ಜೀವದಿಂದ ಇದ್ದರೆ ನಾವು ಪ್ರಭುವಿನ ಜೊತೆಯಲ್ಲಿರುತ್ತೇವೆ. ಆದರೂ ಸತ್ತುಹೋದ ಇತರರಿಗಿಂತಲೂ ನಾವು ಮುಂದಿನವರಾಗುವುದಿಲ್ಲ.

16 ಪ್ರಭುವು ತಾನೇ ಪರಲೋಕದಿಂದ ಇಳಿದುಬರುವನು. ಆಗ ಪ್ರಧಾನ ದೇವದೂತನು ದೇವರ ತುತೂರಿ ಧ್ವನಿಯೊಡನೆ ಆಜ್ಞಾಘೋಷ ಮಾಡುವನು. ಕೂಡಲೇ ಕ್ರಿಸ್ತನಲ್ಲಿರುವ ಸತ್ತವರು ಮೊದಲು ಎದ್ದುಬರುವರು.

1 ಥೆಸಲೊನೀಕದವರಿಗೆ ಅಧ್ಯಾಯ 4

17 ಅನಂತರ, ಇನ್ನೂ ಜೀವದಿಂದುಳಿದಿರುವ ನಾವು ಸತ್ತವರೊಡನೆ ಒಂದುಗೂಡುವೆವು. ಪ್ರಭುವನ್ನು ಅಂತರಿಕ್ಷದಲ್ಲಿ ಎದುರುಗೊಳ್ಳಲು ನಾವು ಮೇಘಗಳ ನಡುವೆ ಎತ್ತಲ್ಪಡುವೆವು. ಹೀಗೆ ನಾವು ಯಾವಾಗಲೂ ಪ್ರಭುವಿನೊಂದಿಗೆ ಇರುವೆವು.

18 ಆದಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿರಿ.