Kannada ಬೈಬಲ್
ಹೋಶೇ ಒಟ್ಟು 14 ಅಧ್ಯಾಯಗಳು
ಹೋಶೇ ಅಧ್ಯಾಯ 6
ಯೆಹೋವನ ಬಳಿಗೆ ಹಿಂತಿರುಗಿ ಬರುವಾಗ ದೊರಕುವ ಬಹುಮಾನ 1 “ಬನ್ನಿರಿ, ನಾವು ಯೆಹೋವನ ಬಳಿಗೆ ಹಿಂತಿರುಗೋಣ. ಆತನು ನಮಗೆ ಗಾಯ ಮಾಡಿದರೂ ಗುಣಮಾಡುವನು. ನಮ್ಮ ಗಾಯಗಳಿಗೆ ಬಟ್ಟೆಯನ್ನು ಸುತ್ತುವನು.
2 ಎರಡು ದಿವಸಗಳ ತರುವಾಯ ನಮ್ಮನ್ನು ತಿರುಗಿ ಜೀವಂತ ಮಾಡುವನು. ಮೂರನೇ ದಿವಸದಲ್ಲಿ ನಮ್ಮನ್ನು ಎಬ್ಬಿಸುವನು. ಆಗ ನಾವು ಆತನ ಸಮೀಪದಲ್ಲಿ ವಾಸಿಸಬಹುದು.
ಹೋಶೇ ಅಧ್ಯಾಯ 6
3 ಯೆಹೋವನ ವಿಷಯವಾಗಿ ನಾವು ಕಲಿಯೋಣ. ಆತನನ್ನು ಅರಿತುಕೊಳ್ಳಲು ಅತಿಯಾಗಿ ಪ್ರಯತ್ನಿಸೋಣ.
ಸೂರ್ಯೋದಯ ಆಗುತ್ತದೆಯೆಂಬುದು ನಮಗೆ ಗೊತ್ತಿರುವಂತೆಯೇ ಆತನು ಬರುವುದೂ ನಮಗೆ ಗೊತ್ತಿದೆ. ವಸಂತಕಾಲದ ಮಳೆಯಂತೆ ಯೆಹೋವನು ಬರುವನು.”
ಜನರು ನಿಷ್ಠಾವಂತರಲ್ಲ 4 “ಎಫ್ರಾಯೀಮೇ, ನಿನಗೆ ನಾನು ಏನು ಮಾಡಲಿ? ಯೆಹೂದವೇ, ನಿನಗೆ ನಾನು ಏನು ಮಾಡಬೇಕು?
ನಿನ್ನ ನಂಬಿಗಸ್ತಿಕೆಯು ಮುಂಜಾನೆಯ ಮಂಜಿನಂತಿದೆ. ನಿನ್ನ ನಂಬಿಗಸ್ತಿಕೆಯು ಇಬ್ಬನಿಯಂತಿದೆ. ಅದು ಬೇಗನೆ ಇಲ್ಲದೆಹೋಗುವದು.
ಹೋಶೇ ಅಧ್ಯಾಯ 6
5 ನಾನು ಪ್ರವಾದಿಗಳ ಮೂಲಕ ಜನರಿಗೆ ಕಟ್ಟಳೆಗಳನ್ನು ವಿಧಿಸಿದೆನು. ನನ್ನ ಅಪ್ಪಣೆಯ ಮೇರೆಗೆ ಜನರು ಕೊಲ್ಲಲ್ಪಟ್ಟರು.
6 ಯಾಕೆಂದರೆ ನನಗೆ ವಿಧೇಯತೆಯಿಂದ ಕೂಡಿದ ಪ್ರೀತಿಯು ಬೇಕೇ ಹೊರತು ಯಜ್ಞವಲ್ಲ.
ಜನರು ತರುವ ಸರ್ವಾಂಗಹೋಮಗಳಿಗಿಂತಲೂ ಅವರು ನನ್ನನ್ನು (ದೇವರನ್ನು) ತಿಳಿದುಕೊಳ್ಳಬೇಕೆಂಬುದೇ ನನಗೆ ಇಷ್ಟ.
7 ಆದರೆ ಜನರು ಆದಾಮನಂತೆ ಒಡಂಬಡಿಕೆಯನ್ನು ಮುರಿದುಹಾಕಿದರು. ಅವರ ದೇಶದಲ್ಲಿ ಅವರು ನನಗೆ ದ್ರೋಹಿಗಳಾದರು.
ಹೋಶೇ ಅಧ್ಯಾಯ 6
8 ಗಿಲ್ಯಾದು ಕೆಟ್ಟತನವನ್ನು ನಡಿಸುವ ಜನರಿಂದ ಕೂಡಿದ ನಗರವಾಗಿದೆ. ಜನರು ಇತರರನ್ನು ಮೋಸಗೊಳಿಸಿ ಕೊಲೆಮಾಡಿರುತ್ತಾರೆ.
9 ಕಳ್ಳರು ದಾರಿಯಲ್ಲಿ ಹೊಂಚುಹಾಕುತ್ತಾ ಜನರನ್ನು ಸೂರೆಮಾಡಲು ಕಾಯುತ್ತಿರುತ್ತಾರೆ.
ಅದೇ ರೀತಿಯಲ್ಲಿ ಶೆಕೆಮಿಗೆ ಹೋಗುವ ದಾರಿಯಲ್ಲಿ ಯಾಜಕರು ಕಾಯುತ್ತಾ ಹಾದುಹೋಗುತ್ತಿರುವ ಜನರ ಮೇಲೆ ಬೀಳುವರು. ಅವರು ದುಷ್ಕೃತ್ಯಗಳನ್ನು ಮಾಡಿರುತ್ತಾರೆ.
ಹೋಶೇ ಅಧ್ಯಾಯ 6
10 ಇಸ್ರೇಲ್ ಜನಾಂಗದಲ್ಲಿ ಅತೀ ಭಯಂಕರ ಸಂಗತಿಗಳನ್ನು ನಾನು ನೋಡಿರುತ್ತೇನೆ.
ಎಫ್ರಾಯೀಮು ದೇವರಿಗೆ ದ್ರೋಹಿಯಾದನು. ಇಸ್ರೇಲು ಪಾಪದಿಂದ ಹೊಲಸಾಗಿದೆ.
11 ಯೆಹೂದವೇ, ನಿನಗೆ ಸುಗ್ಗೀಕಾಲವು ನೇಮಕವಾಗಿದೆ, ಸೆರೆವಾಸದಿಂದ ನನ್ನ ಜನರನ್ನು ನಾನು ಹಿಂತಿರುಗಿ ಕರೆತಂದಾಗ ಅದು ಸಂಭವಿಸುವದು.