ಯೋಬನು ಅಧ್ಯಾಯ 2
ಯೋಬನಿಗೆ ಎರಡನೆ ಪರೀಕ್ಷೆ 1 ಮತ್ತೊಂದು ದಿನ ಯೆಹೋವನನ್ನು ಭೇಟಿಯಾಗಲು ದೇವದೂತರು ಬಂದರು. ಸೈತಾನನು ಸಹ ಯೆಹೋವನನ್ನು ಭೇಟಿಯಾಗಲು ಅವರೊಂದಿಗೆ ಬಂದನು.
2 ಯೆಹೋವನು ಸೈತಾನನಿಗೆ, “ನೀನು ಎಲ್ಲಿಂದ ಬರುತ್ತಿರುವೆ?” ಎಂದು ಕೇಳಿದನು. ಸೈತಾನನು ಯೆಹೋವನಿಗೆ, “ನಾನು ಭೂಮಿಯ ಮೇಲೆಲ್ಲಾ ಅಲೆದಾಡುತ್ತಾ ಬಂದೆನು” ಎಂದು ಉತ್ತರಕೊಟ್ಟನು.
3 ಅದಕ್ಕೆ ಯೆಹೋವನು, “ನನ್ನ ಸೇವಕನಾದ ಯೋಬನನ್ನು ಗಮನಿಸಿದೆಯಾ? ಭೂಮಿಯ ಮೇಲೆ ಅವನಂತೆ ಯಾರೂ ಇಲ್ಲ. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿದ್ದಾನೆ; ಕೆಟ್ಟಕಾರ್ಯಗಳನ್ನು ಮಾಡದೆ ನಿರ್ದೋಷಿಯೂ ಯಥಾರ್ಥವಂತನೂ ಆಗಿದ್ದಾನೆ. ನಿಷ್ಕಾರಣವಾಗಿ ಅವನನ್ನು ನಾಶಪಡಿಸುವಂತೆ ನೀನು ನನ್ನನ್ನು ಒತ್ತಾಯಪಡಿಸಿದೆ. ಆದರೆ ಅವನು ನನಗೆ ಇನ್ನೂ ನಂಬಿಗಸ್ತನಾಗಿದ್ದಾನೆ” ಎಂದು ಹೇಳಿದನು.
4