Kannada ಬೈಬಲ್
ಯೋಬನು ಒಟ್ಟು 42 ಅಧ್ಯಾಯಗಳು
ಯೋಬನು ಅಧ್ಯಾಯ 8
ಬಿಲ್ದದನ ವಾದ 1 ಬಳಿಕ ಶೂಹ ದೇಶದ ಬಿಲ್ದದನು ಉತ್ತರಿಸಿದನು:
2 “ಇನ್ನೆಷ್ಟುಕಾಲ ಹೀಗೆ ಮಾತಾಡುವೆ? ನಿನ್ನ ಮಾತುಗಳು ಬೀಸುವ ಬಿರುಗಾಳಿಯಂತಿವೆ.
3 ದೇವರು ಅನ್ಯಾಯ ಮಾಡುವನೇ? ಸರ್ವಶಕ್ತನಾದ ದೇವರು ನೀತಿಯನ್ನು ಡೊಂಕು ಮಾಡುವನೇ?
4 ನಿನ್ನ ಮಕ್ಕಳು ದೇವರಿಗೆ ವಿರೋಧವಾಗಿ ಪಾಪ ಮಾಡಿದ್ದರಿಂದ ಆತನು ಅವರನ್ನು ಶಿಕ್ಷಿಸಿದ್ದಾನೆ. ಅವರ ಪಾಪಗಳಿಗಾಗಿ ಪ್ರತಿಫಲ ದೊರೆಯಿತು.
ಯೋಬನು ಅಧ್ಯಾಯ 8
5 ಯೋಬನೇ, ಈಗಲಾದರೋ ದೇವರ ಕಡೆಗೆ ನೋಡು, ಕರುಣೆತೋರುವಂತೆ ಸರ್ವಶಕ್ತನಾದ ದೇವರಿಗೆ ಪ್ರಾರ್ಥಿಸು.
6 ನೀನು ಶುದ್ಧನೂ ಒಳ್ಳೆಯವನೂ ಆಗಿದ್ದರೆ ಆತನು ಬಂದು ನಿನಗೆ ಸಹಾಯ ಮಾಡುತ್ತಾನೆ; ನಿನ್ನ ಕುಟುಂಬವನ್ನು ನಿನಗೆ ಮತ್ತೆ ದಯಪಾಲಿಸುತ್ತಾನೆ.
7 ಆಗ, ನೀನು ಮೊದಲು ಹೊಂದಿದ್ದೆಲ್ಲ ಅಲ್ಪವಾಗಿ ತೋರುವುದು; ನಿನ್ನ ಭವಿಷ್ಯವು ಬಹು ಯಶಸ್ವಿಯಾಗುವುದು.
ಯೋಬನು ಅಧ್ಯಾಯ 8
8 “ಪೂರ್ವಿಕರನ್ನು ವಿಚಾರಿಸಿ ಅವರ ಪಿತೃಗಳು ಕಲಿತುಕೊಂಡದ್ದನ್ನು ತಿಳಿದುಕೊ.
9 ಯಾಕೆಂದರೆ, ನಾವು ಕೇವಲ ನಿನ್ನೆ ಹುಟ್ಟಿದವರಂತಿದ್ದೇವೆ. ನಮಗೇನೂ ಗೊತ್ತಿಲ್ಲ. ಭೂಮಿಯ ಮೇಲಿನ ನಮ್ಮ ದಿನಗಳು ನೆರಳಿನಂತೆ ಕ್ಷಣಿಕವಷ್ಟೇ.
10 ಅವರು ನಿನಗೆ ಉಪದೇಶಮಾಡಿ ಬುದ್ಧಿ ಹೇಳುವರು; ತಾವು ಕಲಿತುಕೊಂಡದ್ದನ್ನು ನಿನಗೆ ಹೇಳಿಕೊಡುವರು.
ಯೋಬನು ಅಧ್ಯಾಯ 8
11 “ಜಂಬುಗಿಡವು ಜವುಗುಮಣ್ಣಿಲ್ಲದೆ ಎತ್ತರವಾಗಿ ಬೆಳೆಯಬಲ್ಲದೇ? ಜವುಗುಸಸ್ಯವು ನೀರಿಲ್ಲದೆ ಬೆಳೆಯಬಲ್ಲದೇ?
12 ನೀರು ಬತ್ತಿಹೋದರೆ ಅವು ಸಹ ಒಣಗಿಹೋಗುತ್ತವೆ. ಅವು ತುಂಬ ಎಳೆಯದಾಗಿರುವುದರಿಂದ ಕತ್ತರಿಸಿ ಉಪಯೋಗಿಸಲಾಗದು.
13 ದೇವರನ್ನು ಮರೆಯುವವನು ಆ ಜವುಗು ಸಸ್ಯಗಳಂತೆಯೇ ಇರುವನು. ದೇವರನ್ನು ಮರೆಯುವವನಿಗೆ ನಿರೀಕ್ಷೆಯೇ ಇಲ್ಲ.
ಯೋಬನು ಅಧ್ಯಾಯ 8
14 ಅವನ ಭರವಸೆಯು ಬಹು ಬಲಹೀನವಾಗಿರುವುದು. ಅವನು ಜೇಡರಬಲೆಯ ಮೇಲೆ ಭರವಸವಿಡುವನು.
15 ಅವನು ಜೇಡರಬಲೆಯನ್ನು ಒರಗಿಕೊಳ್ಳುವನು, ಆದರೆ ಬಲೆಯು ಕಿತ್ತುಹೋಗುವುದು.
ಅವನು ಜೇಡರಬಲೆಯನ್ನು ಹಿಡಿದುಕೊಳ್ಳುವನು, ಆದರೆ ಅದು ಅವನಿಗೆ ಆಧಾರ ನೀಡುವುದಿಲ್ಲ.
16 ಅವನು ಬೇಕಾದಷ್ಟು ನೀರನ್ನೂ ಬಿಸಿಲನ್ನೂ ಹೊಂದಿರುವ ಬಳ್ಳಿಯಂತಿರುವನು. ಆ ಬಳ್ಳಿಯ ಕವಲುಗಳು ತೋಟದಲ್ಲೆಲ್ಲಾ ಹರಡಿಕೊಳ್ಳುತ್ತವೆ.
ಯೋಬನು ಅಧ್ಯಾಯ 8
17 ಅದು ಕಲ್ಲುಕುಪ್ಪೆಯ ಸುತ್ತಲೂ ತನ್ನ ಬೇರುಗಳನ್ನು ಹೆಣೆದುಕೊಂಡು ಕಲ್ಲುಗಳಲ್ಲಿ ಬೆಳೆಯಲು ಒಂದು ಸ್ಥಳಕ್ಕಾಗಿ ನೋಡುವುದು.
18 ಆದರೆ ಆ ತೋಟವು, ‘ನಾನು ನಿನ್ನನ್ನು ಮೊದಲು ನೋಡಿಯೇ ಇಲ್ಲ’ ಎಂದು ಹೇಳುತ್ತದೆ.
19 ಆದ್ದರಿಂದ ಆ ಬಳ್ಳಿ ಹೊಂದಿರುವ ಸಂತೋಷವೆಲ್ಲಾ ಅಷ್ಟೇ. ಬಳಿಕ ಆ ಮಣ್ಣಿನಿಂದ ಇತರ ಸಸಿಗಳು ಬೆಳೆಯುತ್ತವೆ.
ಯೋಬನು ಅಧ್ಯಾಯ 8
20 ಆದರೆ ದೇವರು ಒಬ್ಬ ನಿರಪರಾಧಿಯನ್ನೂ ಕೈಬಿಡುವುದಿಲ್ಲ. ಆತನು ದುಷ್ಟರಿಗೆ ಸಹಾಯ ಮಾಡುವುದಿಲ್ಲ.
21 ದೇವರು ಇನ್ನು ಮೇಲೆ ನಿನ್ನ ಬಾಯನ್ನು ನಗೆಯಿಂದಲೂ ನಿನ್ನ ತುಟಿಗಳನ್ನು ಉತ್ಸಾಹಧ್ವನಿಯಿಂದಲೂ ತುಂಬಿಸುವನು.
22 ಆದರೆ ನಿನ್ನನ್ನು ದ್ವೇಷಿಸುವವರಿಗೆ ದೇವರು ಅವಮಾನ ಮಾಡುವನು; ದುಷ್ಟರ ಮನೆಗಳನ್ನು ನಾಶಮಾಡುವನು.”