Kannada ಬೈಬಲ್
ಅರಣ್ಯಕಾಂಡ ಒಟ್ಟು 36 ಅಧ್ಯಾಯಗಳು
ಅರಣ್ಯಕಾಂಡ
ಅರಣ್ಯಕಾಂಡ ಅಧ್ಯಾಯ 3
ಅರಣ್ಯಕಾಂಡ ಅಧ್ಯಾಯ 3
ಯಾಜಕರಾದ ಆರೋನನ ಕುಟುಂಬ 1 ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಯೊಡನೆ ಮಾತಾಡಿದ ಸಮಯದಲ್ಲಿದ್ದ ಆರೋನ ಮತ್ತು ಮೋಶೆಯ ವಂಶದವರು ಇವರೇ.
2 ಆರೋನನಿಗೆ ನಾಲ್ಕು ಮಂದಿ ಗಂಡುಮಕ್ಕಳಿದ್ದರು. ನಾದ್ವಾನು ಚೊಚ್ಚಲ ಮಗ. ಅನಂತರ ಹುಟ್ಟಿದವರು ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್.
3 ಈ ಗಂಡುಮಕ್ಕಳು ಯಾಜಕರಾಗಿ ಸೇವೆಮಾಡಲು ಅಭಿಷೇಕಿಸಲ್ಪಟ್ಟವರಾಗಿದ್ದರು ಮತ್ತು ಪ್ರತಿಷ್ಠೀತರಾದವರಾಗಿದ್ದರು.
ಅರಣ್ಯಕಾಂಡ ಅಧ್ಯಾಯ 3
4 ಆದರೆ ನಾದ್ವಾ್ ಮತ್ತು ಅಬೀಹೂ ಎಂಬಿಬ್ಬರು ಸೀನಾಯಿ ಮರುಭೂಮಿಯಲ್ಲಿ ಯೆಹೋವನಿಗೆ ಧೂಪವನ್ನು ಸಮರ್ಪಿಸುವಾಗ ಯೆಹೋವನು ಅಪ್ಪಣೆ ಕೊಡದೆ ಇದ್ದ ಬೆಂಕಿಯನ್ನು ಉಪಯೋಗಿಸಿದರು. ಆದ್ದರಿಂದ ನಾದ್ವಾ್ ಮತ್ತು ಅಬೀಹೂ ಅಲ್ಲಿ ಸತ್ತರು. ಅವರಿಗೆ ಗಂಡುಮಕ್ಕಳಿಲ್ಲದ್ದರಿಂದ ಎಲ್ಲಾಜಾರನು ಮತ್ತು ಈತಾಮಾರನು ಅವರ ತಂದೆಯಾದ ಆರೋನನ ಕೈಕೆಳಗೆ ಯೆಹೋವನ ಸೇವೆ ಮಾಡಿದರು.
ಯಾಜಕರ ಸಹಾಯಕರಾದ ಲೇವಿಯರು 5 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:
ಅರಣ್ಯಕಾಂಡ ಅಧ್ಯಾಯ 3
6 “ಲೇವಿ ಕುಲದವರನ್ನು ಯಾಜಕನಾದ ಆರೋನನ ಬಳಿಗೆ ಕರೆದುಕೊಂಡು ಬಾ. ಅವರು ಆರೋನನಿಗೆ ಸಹಾಯಕರಾಗಿರುವರು.
7 ಲೇವಿಯರು ಅವನಿಗಾಗಿ ಮತ್ತು ಇಡೀ ಸಮೂಹಕ್ಕಾಗಿ ದೇವದರ್ಶನಗುಡಾರದ ಮುಂದೆ ಕಾವಲುಗಾರರಾಗಿರುವರು ಮತ್ತು ದೇವದರ್ಶನಗುಡಾರಕ್ಕೆ ಸಂಬಂಧಿಸಿದ ಭಾರವಾದ ಕೆಲಸಗಳನ್ನು ಮಾಡುವರು.
8 ದೇವದರ್ಶನಗುಡಾರವು ಚಲಿಸುತ್ತಿರುವಾಗ ಲೇವಿಯರು ದೇವದರ್ಶನಗುಡಾರಕ್ಕೆ ಸಂಬಂಧಿಸಿದ ಭಾರವಾದ ಕೆಲಸಗಳನ್ನು ಮಾಡುವುದಲ್ಲದೆ, ದೇವದರ್ಶನ ಗುಡಾರದ ಎಲ್ಲಾ ಉಪಕರಣಗಳನ್ನು ಇಸ್ರೇಲರಿಗೋಸ್ಕರ ಕಾಯಬೇಕು.
ಅರಣ್ಯಕಾಂಡ ಅಧ್ಯಾಯ 3
9 “ಲೇವಿಯರನ್ನು ಆರೋನನಿಗೂ ಅವನ ಪುತ್ರರಿಗೂ ಒಪ್ಪಿಸಿಕೊಡು. ಅವರು ಇಸ್ರೇಲರ ಮಧ್ಯದಿಂದ ಆರೋನನಿಗೋಸ್ಕರವಾಗಿ ಪ್ರತಿಷ್ಠಿತರಾಗಿದ್ದಾರೆ.
10 “ಆರೋನನನ್ನೂ ಅವನ ಪುತ್ರರನ್ನೂ ಯಾಜಕರನ್ನಾಗಿ ನೇಮಿಸು. ಅವರು ತಮ್ಮತಮ್ಮ ಯಾಜಕ ಉದ್ಯೋಗವನ್ನು ಕಾಪಾಡಿಕೊಳ್ಳಬೇಕು. ಯಾಜಕರ ಕರ್ತವ್ಯಗಳನ್ನು ಮಾಡಲು ಪವಿತ್ರ ವಸ್ತುಗಳ ಬಳಿಗೆ ಬರಲು ಬೇರೆ ಯಾವನಾದರೂ ಪ್ರಯತ್ನಿಸಿದರೆ ಅವನು ಕೊಲ್ಲಲ್ಪಡಬೇಕು.”
ಅರಣ್ಯಕಾಂಡ ಅಧ್ಯಾಯ 3
11 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:
12 “ಇಸ್ರೇಲಿನ ಪ್ರತಿ ಕುಟುಂಬವು ತನ್ನ ಚೊಚ್ಚಲ ಮಗನನ್ನು ನನಗೆ ಕೊಡಬೇಕೆಂದು ನಿನಗೆ ಹೇಳಿದ್ದೆ. ಆದರೆ ನನ್ನ ಸೇವೆಮಾಡುವುದಕ್ಕೆ ಈಗ ನಾನು ಲೇವಿಯರನ್ನು ಆರಿಸಿಕೊಂಡಿದ್ದೇನೆ. ಅವರು ನನ್ನವರಾಗಿರುವರು. ಆದ್ದರಿಂದ ಬೇರೆ ಎಲ್ಲಾ ಇಸ್ರೇಲರು ತಮ್ಮ ಚೊಚ್ಚಲು ಗಂಡುಮಕ್ಕಳನ್ನು ನನಗೆ ಕೊಡಬೇಕಾಗಿಲ್ಲ.
13 ನೀವು ಈಜಿಪ್ಟಿನಲ್ಲಿದ್ದಾಗ ನಾನು ಈಜಿಪ್ಟಿನವರ ಎಲ್ಲಾ ಚೊಚ್ಚಲು ಮಕ್ಕಳನ್ನು ಕೊಂದೆನು. ಆ ಕಾಲದಲ್ಲಿ ನಾನು ಇಸ್ರೇಲರ ಎಲ್ಲಾ ಚೊಚ್ಚಲು ಮಕ್ಕಳನ್ನು ನನ್ನವರನ್ನಾಗಿ ತೆಗೆದುಕೊಂಡೆನು. ಎಲ್ಲಾ ಚೊಚ್ಚಲು ಗಂಡುಮಕ್ಕಳು ಮತ್ತು ಚೊಚ್ಚಲು ಪಶುಗಳು ನನ್ನದಾಗಿದ್ದವು. ಆದರೆ ಈಗ ನಿಮ್ಮ ಎಲ್ಲಾ ಚೊಚ್ಚಲು ಗಂಡುಮಕ್ಕಳನ್ನು ನಿಮಗೇ ಹಿಂದಕ್ಕೆ ಕೊಡುತ್ತಿದ್ದೇನೆ ಮತ್ತು ಲೇವಿಯರನ್ನು ನನ್ನವರನ್ನಾಗಿ ಮಾಡುತ್ತಿದ್ದೇನೆ. ನಾನೇ ಯೆಹೋವನು!”
ಅರಣ್ಯಕಾಂಡ ಅಧ್ಯಾಯ 3
14 ಯೆಹೋವನು ತಿರುಗಿ ಸೀನಾಯಿ ಮರುಭೂಮಿಯಲ್ಲಿ ಮೋಶೆಯೊಡನೆ ಮಾತಾಡಿದನು. ಯೆಹೋವನು ಹೇಳಿದ್ದೇನೆಂದರೆ:
15 “ಲೇವಿಯರನ್ನು ಅವರ ಕುಟುಂಬಗಳಿಗನುಗುಣವಾಗಿಯೂ ಗೋತ್ರಗಳಿಗನುಸಾರವಾಗಿಯೂ ಲೆಕ್ಕಿಸು. ಪ್ರತಿಯೊಬ್ಬ ಗಂಡಸನ್ನೂ ಒಂದು ತಿಂಗಳು ಮೇಲ್ಪಟ್ಟ ಪ್ರತಿಯೊಬ್ಬ ಗಂಡುಮಗುವನ್ನೂ ಲೆಕ್ಕಿಸು.”
16 ಮೋಶೆ ಯೆಹೋವನಿಗೆ ವಿಧೇಯನಾಗಿ ಅವರೆಲ್ಲರನ್ನೂ ಲೆಕ್ಕಿಸಿದನು.
ಅರಣ್ಯಕಾಂಡ ಅಧ್ಯಾಯ 3
17 ಲೇವಿಗೆ ಮೂರು ಗಂಡುಮಕ್ಕಳಿದ್ದರು. ಅವರ ಹೆಸರುಗಳು: ಗೇರ್ಷೋನ್, ಕೆಹಾತ್ ಮತ್ತು ಮೆರಾರೀ.
18 ಪ್ರತಿಯೊಬ್ಬ ಮಗನು ಅನೇಕ ಗೋತ್ರಗಳ ನಾಯಕನಾಗಿದ್ದನು. ಗೇರ್ಷೋನನ ಗೋತ್ರಗಳು: ಲಿಬ್ನೀ ಮತ್ತು ಶಿಮ್ಮೀ.
19 ಕೆಹಾತನ ಗೋತ್ರಗಳು: ಅಮ್ರಾಮ್, ಇಚ್ಹಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್.
20 ಮೆರಾರೀಯ ಗೋತ್ರಗಳು: ಮಹ್ಲೀ ಮತ್ತು ಮೂಷೀ. ಅವು ಲೇವಿ ಕುಲದ ಗೋತ್ರಗಳಾಗಿವೆ.
ಅರಣ್ಯಕಾಂಡ ಅಧ್ಯಾಯ 3
21 ಲಿಬ್ನೀ ಮತ್ತು ಶಿಮ್ಮೀಯ ಕುಟುಂಬಗಳು ಗೇರ್ಷೋನನ ಕುಟುಂಬಕ್ಕೆ ಸೇರಿದವುಗಳಾಗಿದ್ದವು.
22 ಈ ಎರಡು ಕುಲಗಳಲ್ಲಿ ಒಂದು ತಿಂಗಳು ಮತ್ತು ಅದಕ್ಕಿಂತ ಹೆಚ್ಚು ವಯಸ್ಸಾದ 7,500 ಮಂದಿ ಗಂಡಸರು ಮತ್ತು ಗಂಡುಮಕ್ಕಳು ಇದ್ದರು.
23 ಗೇರ್ಷೋನನ ಕುಲದವರು ಪಶ್ಚಿಮ ದಿಕ್ಕಿನಲ್ಲಿ ದೇವದರ್ಶನಗುಡಾರದ ಹಿಂಭಾಗದಲ್ಲಿ ಪಾಳೆಯ ಮಾಡಿಕೊಂಡರು.
24 ಗೇರ್ಷೋನನ ಗೋತ್ರಗಳ ನಾಯಕನು ಲಾಯೇಲನ ಮಗನಾದ ಎಲ್ಯಾಸಾಫ್.
ಅರಣ್ಯಕಾಂಡ ಅಧ್ಯಾಯ 3
25 ದೇವದರ್ಶನಗುಡಾರದಲ್ಲಿ ಪವಿತ್ರ ಗುಡಾರವನ್ನು, ಹೊರಡೇರೆಯನ್ನು ಮತ್ತು ಅದರ ಮೇಲ್ಹೊದಿಕೆಯನ್ನು ನೋಡಿಕೊಳ್ಳವುದು ಗೇರ್ಷೋನ ವಂಶದವರ ಕೆಲಸವಾಗಿತ್ತು. ಇದಲ್ಲದೆ ಅವರು ಅಂಗಳದ ಪರದೆಯನ್ನೂ ನೋಡಿಕೊಳ್ಳುತ್ತಿದ್ದರು.
26 ಅವರು ಅಂಗಳದ ಪರದೆಗಳನ್ನೂ ಅಂಗಳದ ಪ್ರವೇಶದ್ವಾರದ ಪರದೆಯನ್ನೂ ನೋಡಿಕೊಳ್ಳಬೇಕು. ಈ ಅಂಗಳವು ಪವಿತ್ರ ಗುಡಾರದ ಮತ್ತು ವೇದಿಕೆಯ ಸುತ್ತಲೂ ಇತ್ತು. ಅವರು ಹಗ್ಗಗಳನ್ನೂ ಪರದೆಗಳೊಂದಿಗೆ ಉಪಯೋಗಿಸುವ ಪ್ರತಿಯೊಂದನ್ನೂ ನೋಡಿಕೊಂಡರು.
ಅರಣ್ಯಕಾಂಡ ಅಧ್ಯಾಯ 3
27 ಅಮ್ರಾಮ್, ಇಚ್ಹಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್ ಗೋತ್ರಗಳವರು ಕೆಹಾತನ ಕುಲದವರಾಗಿದ್ದರು.
28 ಈ ಕುಲದಲ್ಲಿ ಒಂದು ತಿಂಗಳು ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳ 8,300* 8,300 ಪುರಾತನ ಗ್ರೀಕ್ ಭಾಷಾಂತರದ ಕೆಲವು ಗ್ರೀಕ್ ಪ್ರತಿಗಳಲ್ಲಿ “8,300” ಎಂದು ಬರೆದಿದೆ. ಆದರೆ ಹೀಬ್ರೂ ಪ್ರತಿಗಳಲ್ಲಿ “8,600” ಎಂದು ಬರೆದಿದೆ. ಗಂಡಸರು ಮತ್ತು ಗಂಡುಮಕ್ಕಳು ಇದ್ದರು. ಕೆಹಾತ್ಯರಿಗೆ ಪವಿತ್ರಸ್ಥಳದ ವಸ್ತುಗಳನ್ನು ನೋಡಿಕೊಳ್ಳುವ ಕೆಲಸ ಕೊಡಲ್ಪಟ್ಟಿತು.
ಅರಣ್ಯಕಾಂಡ ಅಧ್ಯಾಯ 3
29 ಕೆಹಾತ್ಯರ ಗೋತ್ರಗಳವರು ಪವಿತ್ರ ಗುಡಾರದ ದಕ್ಷಿಣ ದಿಕ್ಕಿನ ಉದ್ದಕ್ಕೂ ಪಾಳೆಯ ಹಾಕಿಕೊಂಡರು.
30 ಕೆಹಾತ್ಯರ ನಾಯಕ ಉಜ್ಜೀಯೇಲನ ಮಗನಾದ ಎಲೀಚಾಫಾನ್.
31 ಅವರು ಪವಿತ್ರಪೆಟ್ಟಿಗೆ, ಮೇಜು, ದೀಪಸ್ತಂಭ, ವೇದಿಕೆಗಳನ್ನು ಮತ್ತು ಪವಿತ್ರಸ್ಥಳದ ಸಾಮಗ್ರಿಗಳನ್ನು, ಪರದೆಯನ್ನು ಮತ್ತು ಅವುಗಳಿಗೆ ಸಂಬಂಧಪಟ್ಟ ಎಲ್ಲಾ ಕಷ್ಟಕರವಾದ ಕೆಲಸಗಳನ್ನು ನೋಡಿಕೊಳ್ಳಬೇಕಾಗಿತ್ತು.
32 ಮಹಾಯಾಜಕ ಆರೋನನ ಮಗನಾದ ಎಲ್ಲಾಜಾರನು ಲೇವಿಯರಿಗೆ ನಾಯಕನಾಗಿದ್ದನು. ಪವಿತ್ರವಸ್ತುಗಳನ್ನು ನೋಡಿಕೊಳ್ಳುವ ಜನರಿಗೆಲ್ಲಾ ಎಲ್ಲಾಜಾರನು ಮೇಲ್ವಿಚಾರಕನಾಗಿದ್ದನು.
ಅರಣ್ಯಕಾಂಡ ಅಧ್ಯಾಯ 3
33 (33-34)ಮಹ್ಲೀ ಮತ್ತು ಮೂಷೀಯ ಗೋತ್ರಗಳವರು ಮೆರಾರೀಯ ಕುಲದವರಾಗಿದ್ದರು. ಮಹ್ಲೀಯ ಗೋತ್ರದಲ್ಲಿ ಒಂದು ತಿಂಗಳು ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳ 6,200 ಮಂದಿ ಗಂಡಸರು ಮತ್ತು ಗಂಡುಮಕ್ಕಳು ಇದ್ದರು.
34
35 ಮೆರಾರೀ ಗೋತ್ರಗಳ ನಾಯಕನು ಅಬೀಹೈಲನ ಮಗನಾದ ಚೂರೀಯೇಲ್. ಮೆರಾರೀ ಗೋತ್ರಗಳವರು ಪವಿತ್ರ ಗುಡಾರದ ಉತ್ತರ ದಿಕ್ಕಿನಲ್ಲಿ ಪಾಳೆಯ ಮಾಡಿಕೊಂಡರು.
36 ಮೆರಾರೀ ಕುಲದವರಿಗೆ ಪವಿತ್ರ ಗುಡಾರದ ಚೌಕಟ್ಟುಗಳನ್ನು ನೋಡಿಕೊಳ್ಳುವ ಕೆಲಸ ಕೊಡಲ್ಪಟ್ಟಿತು. ಅವರು ಎಲ್ಲಾ ಅಗುಳಿಗಳನ್ನು, ಕಂಬಗಳನ್ನು, ಗದ್ದಿಗೇಕಲ್ಲುಗಳನ್ನು, ಅದರ ಎಲ್ಲ ಉಪಕರಣಗಳನ್ನು ಮತ್ತು ಅವುಗಳಿಗೆ ಸಂಬಂಧಪಟ್ಟ ಕಷ್ಟಕರವಾದ ಎಲ್ಲಾ ಕೆಲಸವನ್ನು ನೋಡಿಕೊಳ್ಳಬೇಕಾಗಿತ್ತು.
ಅರಣ್ಯಕಾಂಡ ಅಧ್ಯಾಯ 3
37 ಅವರು ಪವಿತ್ರ ಗುಡಾರದ ಸುತ್ತಲಿನ ಅಂಗಳದ ಎಲ್ಲಾ ಕಂಬಗಳನ್ನು ನೋಡಿಕೊಳ್ಳಬೇಕಾಗಿತ್ತು. ಇದರಲ್ಲಿ ಎಲ್ಲಾ ಗದ್ದಿಗೇಕಲ್ಲುಗಳೂ ಗುಡಾರದ ಗೂಟಗಳೂ ಹಗ್ಗಗಳೂ ಸೇರಿವೆ.
38 ಮೋಶೆ, ಆರೋನ ಮತ್ತು ಆರೋನನ ಪುತ್ರರು ದೇವದರ್ಶನಗುಡಾರದ ಮುಂದೆ ಪವಿತ್ರ ಗುಡಾರದ ಪೂರ್ವ ದಿಕ್ಕಿನಲ್ಲಿ ಪಾಳೆಯಮಾಡಿಕೊಂಡರು. ಪವಿತ್ರಸ್ಥಳವನ್ನು ನೋಡಿಕೊಳ್ಳುವ ಕೆಲಸ ಅವರಿಗೆ ಕೊಡಲ್ಪಟ್ಟಿತು. ಅವರು ಇಸ್ರೇಲರೆಲ್ಲರಿಗೋಸ್ಕರ ಇದನ್ನು ಮಾಡಿದರು. ಇವರ ಕರ್ತವ್ಯಗಳನ್ನು ಬೇರೆ ಯಾವನಾದರೂ ಮಾಡಲು ಪ್ರಯತ್ನಿಸಿದರೆ ಅವನು ಕೊಲ್ಲಲ್ಪಡಬೇಕು.
ಅರಣ್ಯಕಾಂಡ ಅಧ್ಯಾಯ 3
39 ಆ ಲೇವಿಯರಲ್ಲಿದ್ದ ಒಂದು ತಿಂಗಳು ಮೊದಲುಗೊಂಡು ಹೆಚ್ಚು ವಯಸ್ಸುಳ್ಳ ಎಲ್ಲಾ ಗಂಡಸರನ್ನು ಮತ್ತು ಗಂಡುಮಕ್ಕಳನ್ನು ಅವರ ಗೋತ್ರಗಳಿಗನುಸಾರವಾಗಿ ಲೆಕ್ಕಿಸಬೇಕೆಂದು ಯೆಹೋವನು ಮೋಶೆ ಆರೋನರಿಗೆ ಆಜ್ಞಾಪಿಸಿದನು. ಅವರ ಒಟ್ಟು ಸಂಖ್ಯೆ 22, 0.
ಲೇವಿಯರಿಗೆ ಚೊಚ್ಚಲು ಪುತ್ರರ ಸ್ಥಾನ 40 ಯೆಹೋವನು ಮೋಶೆಗೆ, “ನೀನು ಇಸ್ರೇಲರ ಒಂದು ತಿಂಗಳು ಮತ್ತು ಅದಕ್ಕಿಂತ ಹೆಚ್ಚು ವಯಸ್ಸಾದ ಎಲ್ಲಾ ಚೊಚ್ಚಲು ಗಂಡಸರನ್ನು ಲೆಕ್ಕಿಸು. ಅವರ ಹೆಸರುಗಳ ಪಟ್ಟಿಮಾಡು.
ಅರಣ್ಯಕಾಂಡ ಅಧ್ಯಾಯ 3
41 ನಾನು ಈಗ ಇಸ್ರೇಲಿನ ಚೊಚ್ಚಲು ಗಂಡಸರನ್ನು ತೆಗೆದುಕೊಳ್ಳುವುದಿಲ್ಲ. ಯೆಹೋವನಾದ ನಾನು ಲೇವಿಯರನ್ನು ತೆಗೆದುಕೊಳ್ಳುವೆನು. ಮಾತ್ರವಲ್ಲದೆ ಇಸ್ರೇಲಿನಲ್ಲಿ ಇತರ ಜನರ ಚೊಚ್ಚಲು ಪ್ರಾಣಿಗಳ ಬದಲು, ಲೇವಿಯರ ಎಲ್ಲಾ ಚೊಚ್ಚಲು ಪ್ರಾಣಿಗಳನ್ನು ತೆಗೆದುಕೊಳ್ಳುವೆನು” ಎಂದು ಹೇಳಿದನು.
42 ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆಯು ಮಾಡಿದನು. ಮೋಶೆಯು ಇಸ್ರೇಲರ ಚೊಚ್ಚಲು ಗಂಡಸರನ್ನೆಲ್ಲ್ಲ ಲೆಕ್ಕಿಸಿದನು.
43 ಒಂದು ತಿಂಗಳು ಮತ್ತು ಅದಕ್ಕಿಂತ ಹೆಚ್ಚು ವಯಸ್ಸಾದ ಎಲ್ಲಾ ಚೊಚ್ಚಲು ಗಂಡಸರ ಹೆಸರುಗಳನ್ನು ಮೋಶೆ ಪಟ್ಟಿ ಮಾಡಿದನು. ಆ ಪಟ್ಟಿಯಲ್ಲಿ 22,273 ಹೆಸರುಗಳಿದ್ದವು.
ಅರಣ್ಯಕಾಂಡ ಅಧ್ಯಾಯ 3
44 ಯೆಹೋವನು ಮೋಶೆಗೆ ಮತ್ತೆ ಹೇಳಿದ್ದೇನೆಂದರೆ:
45 “ದೇವರಾದ ನಾನು ಈ ಆಜ್ಞೆಯನ್ನು ಕೊಡುತ್ತೇನೆ: ‘ಇಸ್ರೇಲಿನ ಇತರ ಕುಟುಂಬಗಳಿಂದ ಚೊಚ್ಚಲು ಗಂಡಸರನ್ನು ತೆಗೆದುಕೊಳ್ಳುವ ಬದಲು ಲೇವಿಯರನ್ನೇ ತೆಗೆದುಕೊ. ಇಸ್ರೇಲರ ಚೊಚ್ಚಲು ಪಶುಗಳನ್ನು ತೆಗೆದುಕೊಳ್ಳುವ ಬದಲು ಲೇವಿಯರ ಪಶುಗಳನ್ನೇ ತೆಗೆದುಕೊ. ಲೇವಿಯರು ನನ್ನ ಸ್ವತ್ತಾಗಿದ್ದಾರೆ.
46 ಲೇವಿಯರ ಸಂಖ್ಯೆ 22, 0. ಆದರೆ ಬೇರೆ ಕುಟುಂಬಗಳ ಚೊಚ್ಚಲು ಪುತ್ರರ ಸಂಖ್ಯೆ 22, 273. ಹೀಗೆ ಲೇವಿಯರಿಗಿಂತ 273 ಮಂದಿ ಹೆಚ್ಚು ಚೊಚ್ಚಲು ಪುತ್ರರಿರುತ್ತಾರೆ.
ಅರಣ್ಯಕಾಂಡ ಅಧ್ಯಾಯ 3
47 ಅಧಿಕೃತ ಅಳತೆಯನ್ನು ಉಪಯೋಗಿಸಿ ಪ್ರತಿಯೊಬ್ಬನಿಗೆ ಅಂದರೆ 273 ಮಂದಿಗೆ ಐದೈದು ಶೆಕೆಲ್ ಬೆಳ್ಳಿಯನ್ನು ಸಂಗ್ರಹಿಸು. (ಅಧಿಕೃತ ಅಳತೆಯಲ್ಲಿ ಒಂದು ಶೆಕೆಲ್ ಅಂದರೆ ಇಪ್ಪತ್ತು ಗೆರಾ.) ಇಸ್ರೇಲರಿಂದ ಈ ಬೆಳ್ಳಿಯನ್ನು ಸಂಗ್ರಹಿಸು.
48 ಆ ಬೆಳ್ಳಿಯನ್ನು ಆರೋನನಿಗೂ ಅವನ ಪುತ್ರರಿಗೂ ಕೊಡು. ಈ ಹಣವು ಇಸ್ರೇಲರ 273 ಮಂದಿಗೆ ಈಡಾಗಿದೆ.’ ”
49 ಲೇವಿಯರಿಗಿಂತ ಇಸ್ರೇಲರಲ್ಲಿ 273 ಮಂದಿ ಚೊಚ್ಚಲು ಗಂಡಸರು ಹೆಚ್ಚಾಗಿದ್ದುದರಿಂದ ಮೋಶೆಯು ಆ 273 ಮಂದಿಗೆ ಈಡು ಕೊಡುವುದಕ್ಕಾಗಿ ಹಣವನ್ನು ಸಂಗ್ರಹಿಸಿದನು.
ಅರಣ್ಯಕಾಂಡ ಅಧ್ಯಾಯ 3
50 ಮೋಶೆಯು ಇಸ್ರೇಲರಲ್ಲಿ ಚೊಚ್ಚಲಾದ ಗಂಡಸರಿಂದ ಬೆಳ್ಳಿಯನ್ನು ಸಂಗ್ರಹಿಸಿದನು. ಅವನು ಅಧಿಕೃತ ಅಳತೆಯನ್ನು ಉಪಯೋಗಿಸಿ 1,365 ಶೆಕಲ್ ಬೆಳ್ಳಿಯನ್ನು ಸಂಗ್ರಹಿಸಿದನು.
51 ಮೋಶೆಯು ಯೆಹೋವನಿಗೆ ವಿಧೇಯನಾಗಿ ಆತನ ಆಜ್ಞೆಯಂತೆ ಬೆಳ್ಳಿಯನ್ನು ಆರೋನನಿಗೂ ಅವನ ಪುತ್ರರಿಗೂ ಕೊಟ್ಟನು.