Kannada ಬೈಬಲ್
ಕೀರ್ತನೆಗಳು ಒಟ್ಟು 150 ಅಧ್ಯಾಯಗಳು
ಕೀರ್ತನೆಗಳು
ಕೀರ್ತನೆಗಳು ಅಧ್ಯಾಯ 110
ಕೀರ್ತನೆಗಳು ಅಧ್ಯಾಯ 110
1 ಯೆಹೋವನು ನನ್ನ ಒಡೆಯನಿಗೆ, “ನಾನು ನಿನ್ನ ಶತ್ರುಗಳನ್ನು ನಿನಗೆ ಪಾದಪೀಠವನ್ನಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂದು ಹೇಳಿದನು.
2 ಯೆಹೋವನು ನಿನ್ನ ರಾಜ್ಯವನ್ನು ಅಭಿವೃದ್ಧಿಪಡಿಸುವನು. ನಿನ್ನ ರಾಜ್ಯವು ಚೀಯೋನಿನಲ್ಲಿ ಆರಂಭಗೊಂಡು ನಿನ್ನ ಶತ್ರುಗಳ ದೇಶಗಳನ್ನು ಆವರಿಸಿಕೊಳ್ಳುವುದು.
3 ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ ಜನರು ತಾವಾಗಿಯೇ ನಿನ್ನ ಸೈನ್ಯವನ್ನು ಸೇರಿಕೊಳ್ಳುವರು.
ಅವರು ಸಮವಸ್ತ್ರಗಳನ್ನು ಧರಿಸಿಕೊಂಡು ಪ್ರತಿ ಮುಂಜಾನೆ ಸೇರಿಬರುವರು. ಆ ಯುವಕರು ನಿನಗೆ ಉದಯಕಾಲದ ಇಬ್ಬನಿಯಂತಿರುವರು.
ಕೀರ್ತನೆಗಳು ಅಧ್ಯಾಯ 110
4 ಯೆಹೋವನು ನನಗೆ, “ನೀನು ಸದಾಕಾಲ ಮೆಲ್ಕಿಜೆದೇಕನಂತಹ ಯಾಜಕನಾಗಿರುವೆ” ಎಂದು ವಾಗ್ದಾನ ಮಾಡಿದ್ದಾನೆ. ಆತನು ತನ್ನ ಮನಸ್ಸನ್ನು ಬದಲಾಯಿಸುವುದಿಲ್ಲ.
5 ನನ್ನ ಯೆಹೋವನು ನಿನ್ನ ಬಲಗಡೆಯಲ್ಲಿದ್ದಾನೆ. ಆತನು ಕೋಪಗೊಂಡಾಗ ಇತರ ರಾಜರುಗಳನ್ನು ಸೋಲಿಸಿಬಿಡುವನು.
6 ಆತನು ಜನಾಂಗಗಳಿಗೆ ತೀರ್ಪು ಮಾಡುವನು. ರಣರಂಗವು ಅವರ ಹೆಣಗಳಿಂದ ತುಂಬಿಹೋಗುವುದು. ಬಲಿಷ್ಠ ರಾಷ್ಟ್ರಗಳ ನಾಯಕರನ್ನು ಆತನು ದಂಡಿಸುವನು.
ಕೀರ್ತನೆಗಳು ಅಧ್ಯಾಯ 110
7 ರಾಜನು ಮಾರ್ಗದಲ್ಲಿ ತೊರೆಯ ನೀರನ್ನು ಕುಡಿದು ಬಲ ಹೊಂದುವನು.