Kannada ಬೈಬಲ್
ಕೀರ್ತನೆಗಳು ಒಟ್ಟು 150 ಅಧ್ಯಾಯಗಳು
ಕೀರ್ತನೆಗಳು
ಕೀರ್ತನೆಗಳು ಅಧ್ಯಾಯ 141
ಕೀರ್ತನೆಗಳು ಅಧ್ಯಾಯ 141
1 ಯೆಹೋವನೇ, ಸಹಾಯಕ್ಕಾಗಿ ನಿನಗೆ ಮೊರೆಯಿಡುತ್ತಿದ್ದೇನೆ. ನನ್ನ ಪ್ರಾರ್ಥನೆಗೆ ಕಿವಿಗೊಡು. ಬೇಗನೆ ಬಂದು ನನಗೆ ಸಹಾಯಮಾಡು!
2 ನನ್ನ ಪ್ರಾರ್ಥನೆಯು ನಿನಗೆ ಧೂಪದಂತೆಯೂ ಸಾಯಂಕಾಲದ ಯಜ್ಞದಂತೆಯೂ ಸಮರ್ಪಕವಾಗಲಿ.
3 ಯೆಹೋವನೇ, ನನ್ನ ಮಾತುಗಳನ್ನು ಹಿಡಿತದಲ್ಲಿಟ್ಟುಕೊಳ್ಳುವುದಕ್ಕೂ ವಿವೇಚಿಸಿ ನುಡಿಯುವುದಕ್ಕೂ ನನಗೆ ಸಹಾಯ ಮಾಡು.
ಕೀರ್ತನೆಗಳು ಅಧ್ಯಾಯ 141
4 ಕೆಟ್ಟದ್ದನ್ನು ಮಾಡಲು ನನಗೆ ಅವಕಾಶಕೊಡಬೇಡ. ಕೆಟ್ಟವರೊಂದಿಗೆ ಸೇರಿ ಕೆಟ್ಟದ್ದನ್ನು ಮಾಡದಂತೆ ನನ್ನನ್ನು ಕಾಪಾಡು. ಅವರು ಹರ್ಷಿಸುವಂಥವುಗಳಲ್ಲಿ ನಾನು ಪಾಲುಗಾರನಾಗದಂತೆ ನೋಡಿಕೋ.
5 ನೀತಿವಂತನು ನನ್ನನ್ನು ಸರಿಪಡಿಸಿದರೆ ಅದು ನನಗೇ ಒಳ್ಳೆಯದು.
ನಿನ್ನ ಭಕ್ತರು ನನ್ನನ್ನು ಗದರಿಸಿದರೆ ಅದು ನನಗೇ ಒಳ್ಳೆಯದು.
ಆದರೆ ಕೆಟ್ಟವರ ಕೆಟ್ಟಕೃತ್ಯಗಳ ವಿರೋಧವಾಗಿ ನಾನು ಯಾವಾಗಲೂ ಪ್ರಾರ್ಥಿಸುತ್ತೇನೆ.
ಕೀರ್ತನೆಗಳು ಅಧ್ಯಾಯ 141
6 ಅವರ ಅಧಿಪತಿಗಳು ದೊಬ್ಬಲ್ಪಡಲಿ. ನಾನು ಹೇಳಿದ್ದು ಸತ್ಯವೆಂದು ಆಗ ಜನರು ತಿಳಿದುಕೊಳ್ಳುವರು.
7 ಜನರು ಹೊಲವನ್ನು ಉತ್ತು ಹೆಂಟೆಗಳನ್ನು ಪುಡಿಮಾಡಿ ಚದರಿಸುವಂತೆಯೇ ಕೆಟ್ಟವರ ಎಲುಬುಗಳು ಅವರ ಸಮಾಧಿಗಳಲ್ಲಿ ಹರಡಿಕೊಂಡಿರುತ್ತವೆ.
8 ನನ್ನ ಒಡೆಯನಾದ ಯೆಹೋವನೇ, ಸಹಾಯಕ್ಕಾಗಿ ನಿನ್ನನ್ನೇ ಎದುರುನೋಡುವೆನು. ನಾನು ನಿನ್ನಲ್ಲಿ ಭರವಸವಿಟ್ಟಿದ್ದೇನೆ. ದಯವಿಟ್ಟು ನನ್ನನ್ನು ಮರಣಕ್ಕೀಡು ಮಾಡಬೇಡ.
ಕೀರ್ತನೆಗಳು ಅಧ್ಯಾಯ 141
9 ಕೆಟ್ಟವರು ನನಗೆ ಬಲೆಗಳನ್ನು ಒಡ್ಡಿದ್ದಾರೆ. ಅವರ ಬೋನುಗಳಿಂದ ನನ್ನನ್ನು ತಪ್ಪಿಸು.
10 ಅವರು ತಮ್ಮ ಬಲೆಗಳಿಗೆ ತಾವೇ ಸಿಕ್ಕಿಬೀಳಲಿ. ಆಗ ನಾನು ತಪ್ಪಿಸಿಕೊಳ್ಳುವೆನು.