Kannada ಬೈಬಲ್
1 ಸಮುವೇಲನು ಒಟ್ಟು 31 ಅಧ್ಯಾಯಗಳು
1 ಸಮುವೇಲನು
1 ಸಮುವೇಲನು ಅಧ್ಯಾಯ 8
1 ಸಮುವೇಲನು ಅಧ್ಯಾಯ 8
ಇಸ್ರಾಯೇಲರು ತಮಗೊಬ್ಬ ಅರಸನು ಬೇಕೆಂದು ಬೇಡಿಕೊಂಡಿದ್ದು 1 ಸಮುವೇಲನು ಮುದುಕನಾದ ಮೇಲೆ ತನ್ನ ಮಕ್ಕಳನ್ನು ಇಸ್ರಾಯೇಲರಿಗೆ ನ್ಯಾಯಸ್ಥಾಪಕರನ್ನಾಗಿ ಮಾಡಿದನು.
2 ಅವನ ಮೊದಲನೆಯ ಮಗನ ಹೆಸರು ಯೋವೇಲ್, ಎರಡನೆಯ ಮಗನ ಹೆಸರು ಅಬೀಯ. ಇವರು ಬೇರ್ಷೆಬದಲ್ಲಿ ನ್ಯಾಯಸ್ಥಾಪಕರಾಗಿದ್ದರು.
3 ಇವರು ತಂದೆಯ ಮಾರ್ಗದಲ್ಲಿ ನಡೆಯದೆ ದ್ರವ್ಯಾಶೆಯಿಂದ ಲಂಚತೆಗೆದುಕೊಂಡು, ನ್ಯಾಯವಿರುದ್ಧವಾದ ತೀರ್ಪು ಕೊಡುತ್ತಿದ್ದರು.
1 ಸಮುವೇಲನು ಅಧ್ಯಾಯ 8
4 ಆದ್ದರಿಂದ ಇಸ್ರಾಯೇಲರ ಹಿರಿಯರೆಲ್ಲರೂ ಸೇರಿಕೊಂಡು ರಾಮದಲ್ಲಿದ್ದ ಸಮುವೇಲನ ಬಳಿಗೆ ಬಂದು
5 ಅವನಿಗೆ, “ನೀನಂತೂ ಮುದುಕನಾದಿ; ನಿನ್ನ ಮಕ್ಕಳು ನಿನ್ನ ಮಾರ್ಗದಲ್ಲಿ ನಡೆಯುತ್ತಿಲ್ಲ. * ಅ.ಕೃ. 13: 21. ಆದ್ದರಿಂದ ಬೇರೆ ಎಲ್ಲಾ ಜನಾಂಗಗಳಿಗೆ ಇರುವಂತೆ ನಮಗೂ ಒಬ್ಬ ಅರಸನನ್ನು ನೇಮಿಸಿಕೊಡು. ಅವನೇ ನಮ್ಮ ನ್ಯಾಯಸ್ಥಾಪಕನಾಗಿರಲಿ” ಅಂದರು.
6 ನ್ಯಾಯಸ್ಥಾಪನೆಗೋಸ್ಕರ ನಮಗೊಬ್ಬ ಅರಸನನ್ನು ನೇಮಿಸಿಕೊಡು ಎಂಬ ಅವರ ಮಾತಿಗೆ ಸಮುವೇಲನು ದುಃಖಪಟ್ಟು ಯೆಹೋವನನ್ನು ಪ್ರಾರ್ಥಿಸಿದನು.
1 ಸಮುವೇಲನು ಅಧ್ಯಾಯ 8
7 ಆಗ ಯೆಹೋವನು ಸಮುವೇಲನಿಗೆ, “ಜನರು ಹೇಳಿದಂತೆಯೇ ಮಾಡು; † ವಿಮೋ 16: 8. ಅವರು ನಿನ್ನನ್ನಲ್ಲ, ನನ್ನನ್ನು ತಿರಸ್ಕರಿಸಿದ್ದಾರೆ. ನನ್ನ ಆಳ್ವಿಕೆಯನ್ನು ಬೇಡವೆನ್ನುತ್ತಿದ್ದಾರೆ.
8 ನಾನು ಅವರನ್ನು ಐಗುಪ್ತದಿಂದ ಬಿಡಿಸಿದಂದಿನಿಂದ ಇಂದಿನ ವರೆಗೂ ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳನ್ನು ಸೇವಿಸಿದರು. ನನಗೆ ಹೇಗೆ ಮಾಡಿದರೋ, ಹಾಗೆಯೇ ನಿನಗೂ ಮಾಡುತ್ತಾರೆ.
9 ನೀನು ಈಗ ಅವರು ಕೇಳಿಕೊಂಡಂತೆ ಮಾಡು; ಆದರೆ ಅವರ ಮೇಲೆ ರಾಜರಿಗಿರುವ ಅಧಿಕಾರ ಎಷ್ಟೆಂಬುದನ್ನು ಅವರಿಗೆ ತಿಳಿಸಿ, ಎಚ್ಚರಿಸು” ಎಂದು ಹೇಳಿದನು.
1 ಸಮುವೇಲನು ಅಧ್ಯಾಯ 8
10 ಸಮುವೇಲನು ಅರಸನನ್ನು ನೇಮಿಸಿಕೊಡು ಎಂದು ಬೇಡಿಕೊಂಡ ಜನರಿಗೆ ಯೆಹೋವನ ಮಾತುಗಳನ್ನೆಲ್ಲಾ ತಿಳಿಸಿ ಅವರಿಗೆ,
1 1 “‡ ಧರ್ಮೋ 17:16- 20. ಅರಸನಿಗಿರುವ ಅಧಿಕಾರವೆಷ್ಟೆಂದು ಕೇಳಿರಿ, [§ 1 ಸಮು 14: 52. ]ಅವನು ನಿಮ್ಮ ಮಕ್ಕಳನ್ನು ತೆಗೆದುಕೊಂಡು ತನ್ನ ಸಾರಥಿಗಳನ್ನಾಗಿಯೂ ರಾಹುತರನ್ನಾಗಿಯೂ ಮಾಡಿಕೊಳ್ಳುವನು. ಅವರು ಅವನ ರಥಗಳ ಮುಂದೆ ಓಡುವವರಾಗಬೇಕು.
1 ಸಮುವೇಲನು ಅಧ್ಯಾಯ 8
12 ಕೆಲವರನ್ನು ಸಹಸ್ರಾಧಿಪತಿಗಳನ್ನಾಗಿಯೂ, ಕೆಲವರನ್ನು ಪಂಚಶತಾಧಿಪತಿಗಳನ್ನಾಗಿಯೂ ನೇಮಿಸುವನು. ಇನ್ನು ಕೆಲವರು ಅವನ ಭೂಮಿಯನ್ನು ಉಳುವವರೂ, ಪೈರನ್ನು ಕೊಯ್ಯುವವರೂ, ಯುದ್ಧಕ್ಕೆ ಬೇಕಾದ ಆಯುಧ, ರಥಸಾಮಾಗ್ರಿಗಳನ್ನು ಮಾಡುವವರೂ ಆಗಬೇಕು.
13 ಇದಲ್ಲದೆ ಅವನು ನಿಮ್ಮ ಹೆಣ್ಣುಮಕ್ಕಳನ್ನು ಸುಗಂಧದ್ರವ್ಯ ಮಾಡುವುದಕ್ಕೂ, ಅಡಿಗೆಮಾಡುವುದಕ್ಕೂ, ರೊಟ್ಟಿಸುಡುವುದಕ್ಕೂ ನೇಮಿಸಿಕೊಳ್ಳುವನು.
14 * 1. ಅರಸು. 21: 7. ನಿಮ್ಮ ಉತ್ತಮವಾದ ಹೊಲಗಳನ್ನೂ, ದ್ರಾಕ್ಷಿತೋಟಗಳನ್ನೂ ಎಣ್ಣೇ ಮರದ ತೋಪುಗಳನ್ನೂ ಕಿತ್ತುಕೊಂಡು ತನ್ನ ಸೇವಕರಿಗೆ ಕೊಡುವನು.
1 ಸಮುವೇಲನು ಅಧ್ಯಾಯ 8
15 ನಿಮ್ಮ ಧಾನ್ಯ, ದ್ರಾಕ್ಷಿಗಳಲ್ಲಿ ಹತ್ತರಷ್ಟನ್ನು ತೆಗೆದುಕೊಂಡು ತನ್ನ ಪ್ರಧಾನರಿಗೂ, ಪರಿವಾರದವರಿಗೂ ಕೊಡುವನು.
16 ನಿಮ್ಮ ದಾಸದಾಸಿಯರನ್ನೂ, ಉತ್ತಮವಾದ † ಅಕ್ಷರಶಃವಾಗಿ ಯುವಕರು. ಎತ್ತು ಕತ್ತೆಗಳನ್ನೂ ತನ್ನ ಕೆಲಸ ಮಾಡುವುದಕ್ಕಾಗಿ ತೆಗೆದುಕೊಳ್ಳುವನು.
17 ಕುರಿಹಿಂಡುಗಳಲ್ಲಿ ಹತ್ತರಲ್ಲೊಂದು ಭಾಗವನ್ನು ತೆಗೆದುಕೊಳ್ಳುವನು. ನೀವು ಅವನಿಗೆ ದಾಸರಾಗಿರಬೇಕು.
1 ಸಮುವೇಲನು ಅಧ್ಯಾಯ 8
18 ಆಗ ನೀವು ಆರಿಸಿಕೊಂಡ ಅರಸನ ದೆಸೆಯಿಂದ ಆ ದಿನದಲ್ಲಿ ಬೇಸತ್ತು ಯೆಹೋವನಿಗೆ ಮೊರೆಯಿಡುವಿರಿ. ‡ ಜ್ಞಾನೋ 1: 28. ಆಗ ಆತನು ನಿಮ್ಮನ್ನು ಲಕ್ಷಿಸುವುದಿಲ್ಲ” ಅಂದನು.
19 ಸಮುವೇಲನು ಎಷ್ಟು ಹೇಳಿದರೂ ಜನರು ಅವನ ಮಾತುಗಳನ್ನು ಕೇಳಲೊಲ್ಲದೆ, “ಇಲ್ಲ; ನಮಗೆ ಅರಸನನ್ನು ನೇಮಿಸಿಕೊಡು;
20 ನಾವು ಇತರ ಜನಾಂಗಗಳಂತೆ ಆಗಬೇಕು. ನಮ್ಮ ನ್ಯಾಯಗಳನ್ನು ತೀರಿಸಿ ನಮಗೆ ಮುಂದಾಗಿ ಹೊರಟು ನಮಗೋಸ್ಕರ ಯುದ್ಧಮಾಡುವ ಒಬ್ಬ ಅರಸನು ಬೇಕು” ಎಂದು ಹೇಳಿದರು.
1 ಸಮುವೇಲನು ಅಧ್ಯಾಯ 8
21 ಸಮುವೇಲನು ಜನರ ಈ ಎಲ್ಲಾ ಮಾತುಗಳನ್ನು ಯೆಹೋವನಿಗೆ ತಿಳಿಸಲಾಗಿ
22 ಆತನು ಅವನಿಗೆ, “§ ಹೋಶೇ. 13: 11. ಅವರ ಇಷ್ಟದಂತೆ ಅವರಿಗೊಬ್ಬ ಅರಸನನ್ನು ನೇಮಿಸು” ಎಂದನು. ಆಗ ಸಮುವೇಲನು ಇಸ್ರಾಯೇಲರಿಗೆ, “ನಿಮ್ಮ ನಿಮ್ಮ ಊರುಗಳಿಗೆ ಹೋಗಿರಿ” ಎಂದು ಅಪ್ಪಣೆಕೊಟ್ಟನು.