Kannada ಬೈಬಲ್
2 ಕೊರಿಂಥದವರಿಗೆ ಒಟ್ಟು 13 ಅಧ್ಯಾಯಗಳು
2 ಕೊರಿಂಥದವರಿಗೆ
2 ಕೊರಿಂಥದವರಿಗೆ ಅಧ್ಯಾಯ 10
2 ಕೊರಿಂಥದವರಿಗೆ ಅಧ್ಯಾಯ 10
ತನಗೆ ಅಧಿಕಾರವಿಲ್ಲವೆಂದು ವಿರೋಧಿಗಳು ಹೇಳಿದ ಮಾತಿಗೆ ಪೌಲನು ಕೊಡುವ ಉತ್ತರ 1 ಪೌಲನು ನಮ್ಮೆದುರಿನಲ್ಲಿರುವಾಗ ದೀನನಾಗಿ ನಡೆದುಕೊಳ್ಳುವನೂ ದೂರದಲ್ಲಿರುವಾಗ ನಮ್ಮನ್ನು ಕುರಿತು ದಿಟ್ಟತನ ತೋರಿಸುವವನೂ ಆಗಿದ್ದಾನೆ ಎಂದು ಹೇಳಲ್ಪಡುವ ಆ ಪೌಲನೆಂಬ ನಾನು ಕ್ರಿಸ್ತನ * ಜೆಕ. 9:9, ಮತ್ತಾ 11:29, ಫಿಲಿ. 2:7-8 ಶಾಂತ ಮನಸ್ಸನ್ನೂ ಸಾತ್ವಿಕತ್ವವನ್ನೂ ನೆನಪಿಗೆ ತಂದುಕೊಂಡು ನಿಮಗೆ ಖಂಡಿತವಾಗಿ ಹೇಳುವುದೇನಂದರೆ,
2 ಕೊರಿಂಥದವರಿಗೆ ಅಧ್ಯಾಯ 10
2 † 1 ಕೊರಿ 4:18 ಯಾರು ನಮ್ಮನ್ನು ಲೋಕ ರೀತಿಯಾಗಿ ಜೀವಿಸುವವರೆಂದು ಎಣಿಸುತ್ತಾರೋ ಅವರೊಂದಿಗೆ ದಿಟ್ಟತನದಿಂದಲೇ ಇರಬೇಕೆಂದು ಅಂದುಕೊಂಡಿದೇನೆ. ‡ 2 ಕೊರಿ 13:2,10:; 1 ಕೊರಿ 4:21 ನಾವು ನಿಮ್ಮೊಂದಿಗಿರುವಾಗ ಅಂಥ ದಿಟ್ಟತನವನ್ನು ತೋರಿಸುವುದಕ್ಕೆ ಅವಕಾಶವುಂಟಾಗಬಾರದೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
3 ನಾವು ಲೋಕದಲ್ಲಿದ್ದರೂ ಲೋಕಾನುಸಾರವಾಗಿ ಯುದ್ಧಮಾಡುವವರಲ್ಲ.
2 ಕೊರಿಂಥದವರಿಗೆ ಅಧ್ಯಾಯ 10
4 § 2 ಕೊರಿ 6:7, ಎಫೆ 6:11, 1 ಥೆಸ. 5:8 ನಾವು ಉಪಯೋಗಿಸುವ ಆಯುಧಗಳು ಲೋಕದ ಆಯುಧಗಳಲ್ಲ. ಅವು ದೇವರ ಎಣಿಕೆಯಲ್ಲಿ ಬಲವಾಗಿದ್ದು * ಯೆರೆ 1:10 ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ.
5 ನಾವು ದೇವಜ್ಞಾನಕ್ಕೆ ವಿರೋಧವಾಗಿ ಏಳುವ ಅಹಂಭಾವಗಳನ್ನು ಧ್ವಂಸಮಾಡಿ, ಪ್ರತಿಯೊಂದು ಆಲೋಚನೆಗಳನ್ನೂ ಕ್ರಿಸ್ತನಿಗೆ ವಿಧೇಯರಾಗುವಂತೆ ಸೆರೆಹಿಡಿದು,
6 † 2 ಕೊರಿ 2:9, 7:15 ನಿಮ್ಮ ವಿಧೇಯತ್ವವು ಪರಿಪೂರ್ಣವಾದ ಮೇಲೆ ‡ ವ 2 ನೋಡಿರಿ ಎಲ್ಲಾ ಅವಿಧೇಯತ್ವಕ್ಕೆ ಪ್ರತಿಕಾರವನ್ನು ನೀಡುವುದಕ್ಕೆ ಸಿದ್ಧರಾಗಿದ್ದೇವೆ.
2 ಕೊರಿಂಥದವರಿಗೆ ಅಧ್ಯಾಯ 10
7 ನೀವು ಬಾಹ್ಯವಾದುದ್ದುನ್ನು ಮಾತ್ರ ನೋಡುತ್ತೀರಿ. § 1 ಕೊರಿ 1:12, 14:37 ಯಾವನಾದರೂ ತನ್ನನ್ನು ಕ್ರಿಸ್ತನವನೆಂದು ಒಪ್ಪಿಕೊಂಡರೆ ಅವನು ಆಲೋಚನೆಮಾಡಿಕೊಂಡು * 1 ಕೊರಿ 3:23 ತಾನು ಹೇಗೆ ಕ್ರಿಸ್ತನವನೋ † 2 ಕೊರಿ 11:23, 1 ಕೊರಿ 9:1, ಗಲಾ. 1:12 ಹಾಗೆ ನಾವೂ ಕ್ರಿಸ್ತನವರೆಂದು ತಿಳಿದುಕೊಳ್ಳಲಿ.
8 ‡ 2 ಕೊರಿ 13:10 ನಮಗಿರುವ ಅಧಿಕಾರವನ್ನು ಕುರಿತು ನಾವು ಒಂದು ವೇಳೆ ಹೆಚ್ಚಾಗಿ ಹೊಗಳಿಕೊಂಡರೂ ಹಾಗೆ ಹೊಗಳಿಕೊಳ್ಳುವುದರಲ್ಲಿ ನಾಚಿಕೆಪಡಬೇಕಾಗಿರುವುದಿಲ್ಲ. ಆದರೆ ನಿಮ್ಮನ್ನು ಕೆಡವಿಹಾಕುವುದಕ್ಕಲ್ಲ ಕಟ್ಟುವುದಕ್ಕಾಗಿಯೇ ಕರ್ತನು ಈ ಅಧಿಕಾರವನ್ನು ನಮಗೆ ಕೊಟ್ಟಿರುವವನು.
2 ಕೊರಿಂಥದವರಿಗೆ ಅಧ್ಯಾಯ 10
9 ನಾನು ಪತ್ರಿಕೆಗಳಿಂದ ನಿಮ್ಮನ್ನು ಹೆದರಿಸುತ್ತಿದ್ದೆನೆಂದು ತಿಳಿದುಕೊಳ್ಳಬೇಡಿರಿ.
10 “ಅವನಿಂದ ಬಂದ ಪತ್ರಿಕೆಗಳು ಕಠೋರವಾದವುಗಳೂ, ಪ್ರಬಲವಾದವುಗಳೂ ಆಗಿವೆ. § 2 ಕೊರಿ 11:21, 2 ಕೊರಿ 12:7 ಆದರೆ ದೈಹಿಕವಾಗಿ ಅವನು ದುರ್ಬಲನು * 1 ಕೊರಿ 1:17 ಅವನ ಮಾತುಗಳು ನಿಂದಾತ್ಮಕವಾದವುಗಳೆಂದು ಕೆಲವರು ಹೇಳುತ್ತಾರಲ್ಲಾ.”
11 ಅಂಥವರು, ನಾವು ದೂರದಲ್ಲಿರುವಾಗ ಪತ್ರಿಕೆಗಳ ಮೂಲಕ ಮಾತಿನಲ್ಲಿ ಎಂಥವರಾಗಿದ್ದೇವೋ ಹತ್ತಿರದಲ್ಲಿರುವಾಗ ಕಾರ್ಯದಲ್ಲಿಯೂ ಅಂಥವರಾಗಿಯೇ ಇದ್ದೇವೆಂದು ತಿಳಿದುಕೊಳ್ಳಲಿ.
2 ಕೊರಿಂಥದವರಿಗೆ ಅಧ್ಯಾಯ 10
ಮತ್ತೊಬ್ಬರು ಸುವಾರ್ತೆ ಸಾರಿದ ಕಡೆಯಲ್ಲಿ ತಾನು ಸಾರುವವನಲ್ಲವೆಂದು ಪೌಲನು ಹೇಳುವುದು 12 † ವ. 18 ನೋಡಿರಿ ತಮ್ಮನ್ನು ತಾವೇ ಹೊಗಳಿಕೊಳ್ಳುವ ಕೆಲವರಲ್ಲಿ ನಮ್ಮನ್ನು ಸೇರಿಸಿಕೊಳ್ಳುವುದಕ್ಕಾಗಲಿ ಅವರೊಂದಿಗೆ ಹೋಲಿಸುವುದಕ್ಕಾಗಲಿ ನಾನು ಇಷ್ಟಪಡುವುದಿಲ್ಲ. ಅವರಂತೂ ತಮ್ಮತಮ್ಮೊಳಗೆ ತಮ್ಮನ್ನು ಅಳತೆಮಾಡಿಕೊಂಡು ತಮ್ಮನ್ನು ತಮಗೇ ಹೋಲಿಸಿಕೊಂಡು ‡ ಜ್ಞಾ. 26:12 ವಿವೇಕವಿಲ್ಲದವರಾಗಿದ್ದಾರೆ.
2 ಕೊರಿಂಥದವರಿಗೆ ಅಧ್ಯಾಯ 10
13 ನಾವಾದರೋ ನಮ್ಮ ಯೋಗ್ಯತೆಗೆ ಮೀರಿ ಹೊಗಳಿಕೊಳ್ಳದೇ § ರೋಮಾ. 12:3 ದೇವರು ನಮಗೆ ನೇಮಿಸಿರುವಂಥ ಮೇರೆಯೊಳಗಿದ್ದು ಹೊಗಳಿಕೊಳ್ಳುತ್ತೇವೆ. * ರೋಮಾ. 15:20 ಈ ಮೇರೆಯೊಳಗಿದ್ದು ನಿಮ್ಮ ತನಕ ಬಂದಿದ್ದೇವೆ.
14 ನಾವು ಕ್ರಿಸ್ತನ ಸುವಾರ್ತೆಯನ್ನು ಸಾರುತ್ತಾ ಇತರರಿಗಿಂತ ಮೊದಲು † 1 ಕೊರಿ 3:5, 4:15, 9:1 ನಿಮ್ಮ ಬಳಿಗೆ ಬಂದದ್ದರಿಂದ ನಿಮ್ಮ ಮೇಲೆ ಅಧಿಕಾರವಿಲ್ಲದವರಂತೆ ಮೇರೆಯನ್ನು ಅತಿಕ್ರಮಿಸಿಹೋಗುತ್ತಿಲ್ಲ.
2 ಕೊರಿಂಥದವರಿಗೆ ಅಧ್ಯಾಯ 10
15 ನಾವು ಮಿತಿಗಳನ್ನು ಮೀರಿ ಮತ್ತೊಬ್ಬರ ಪ್ರಯಾಸದ ಫಲಗಳನ್ನು ತೆಗೆದುಕೊಂಡು, ಇವು ನಮ್ಮವು ಎಂದು ಹಿಗ್ಗುವವರಲ್ಲ. ಆದರೆ ನಿಮ್ಮ ನಂಬಿಕೆಯು ಹೆಚ್ಚಿದಾಗೆಲ್ಲಾ ನಿಮ್ಮ ಮೂಲಕ ನಮ್ಮ ಮಿತಿಯು ಇನ್ನೂ ವಿಸ್ತರಿಸಿತು.
16 ‡ ಅ. ಕೃ. 19:21 ನಿಮಗೆ ಆಚೆಯಿರುವ ಸೀಮೆಗಳಲ್ಲಿಯೂ ಸುವಾರ್ತೆಯನ್ನು ಸಾರುವೆವೆಂಬ ನಿರೀಕ್ಷೆಯನ್ನಿಟ್ಟುಕೊಂಡಿದ್ದೆವಷ್ಟೇ. ಮತ್ತೊಬ್ಬರ ಜಾಗದಲ್ಲಿ ಸಿದ್ಧವಾಗಿ ನಮಗೆ ಸಿಕ್ಕಿದ ಫಲವನ್ನು ಕುರಿತು ನಾವು ಹೆಚ್ಚಳಪಡುವುದಿಲ್ಲ.
2 ಕೊರಿಂಥದವರಿಗೆ ಅಧ್ಯಾಯ 10
17 § 1 ಕೊರಿ 1:31, ಯೆರೆ 9:23-24 “ಹೆಚ್ಚಳಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ.”
18 ತನ್ನನ್ನು ತಾನೇ ಹೊಗಳಿಕೊಳ್ಳುವವನು ಯೋಗ್ಯನಲ್ಲ. * ರೋಮಾ. 2:29, 1 ಕೊರಿ 4:5 ಕರ್ತನು ಯಾರನ್ನು ಹೊಗಳುತ್ತಾನೋ ಅವನೇ ಯೋಗ್ಯನು.