Kannada ಬೈಬಲ್

ಅಪೊಸ್ತಲರ ಕೃತ್ಯಗ ಒಟ್ಟು 28 ಅಧ್ಯಾಯಗಳು

ಅಪೊಸ್ತಲರ ಕೃತ್ಯಗ

ಅಪೊಸ್ತಲರ ಕೃತ್ಯಗ ಅಧ್ಯಾಯ 12
ಅಪೊಸ್ತಲರ ಕೃತ್ಯಗ ಅಧ್ಯಾಯ 12

ಪೇತ್ರನನ್ನು ಸೆರೆಯಿಂದ ಹಾಕಿಸಿದ್ದು 1 ಆ ಸಮಯದಲ್ಲೇ ಅರಸನಾದ ಹೆರೋದನು ಸಭೆಯವರಲ್ಲಿ ಕೆಲವರನ್ನು ಹಿಂಸೆಪಡಿಸುವುದಕ್ಕೆ ಕೈಹಾಕಿದನು.

2 ಯೋಹಾನನ ಅಣ್ಣನಾದ ಯಾಕೋಬನನ್ನು ಕತ್ತಿಯಿಂದ ಕೊಲ್ಲಿಸಿದನು.

3 ಇದು ಯೆಹೂದ್ಯರಿಗೆ ಮೆಚ್ಚಿಕೆಯಾಗಿದೆ ಎಂದು ತಿಳಿದು, ಅಷ್ಟಕ್ಕೆ ನಿಲ್ಲದೆ ಪೇತ್ರನನ್ನೂ ಬಂಧಿಸಿದನು. ಆ ಕಾಲದಲ್ಲಿ ಪಸ್ಕಹಬ್ಬ ಅಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬ ನಡೆಯುತ್ತಿತ್ತು.

ಅಪೊಸ್ತಲರ ಕೃತ್ಯಗ ಅಧ್ಯಾಯ 12

4 ಅವನನ್ನು ಪಸ್ಕ ಹಬ್ಬವಾದ ಮೇಲೆ ಜನರ ಮುಂದೆ ತರಿಸಬೇಕೆಂಬ ಯೋಚನೆಯಿಂದ ಸೆರೆಯಲ್ಲಿ ಹಾಕಿಸಿ ಅವನನ್ನು ಕಾಯಲಿಕ್ಕೆ ನಾಲ್ಕು ನಾಲ್ಕು ಸಿಪಾಯಿಗಳಿದ್ದ ನಾಲ್ಕು ಗುಂಪುಗಳ ವಶಕ್ಕೆ ಕೊಟ್ಟನು.

5 ಪೇತ್ರನು ಸೆರೆಮನೆಯೊಳಗೆ ಕಾವಲಲ್ಲಿದ್ದಾಗ, ಸಭೆಯವರು ಅವನಿಗೋಸ್ಕರ ಆಸಕ್ತಿಯಿಂದ ದೇವರಿಗೆ ಪ್ರಾರ್ಥನೆ ಮಾಡುತ್ತಿದ್ದರು.

ದೇವದೂತನು ಪೇತ್ರನನ್ನು ಸೆರೆಯಿಂದ ಬಿಡಿಸಿದ್ದು 6 ಹೆರೋದನು ಅವನನ್ನು ಜನರ ಮುಂದೆ ತರಿಸಬೇಕೆಂದಿದ್ದ ದಿನದ ಹಿಂದಿನ ರಾತ್ರಿಯಲ್ಲಿ, ಪೇತ್ರನು ಎರಡು ಸರಪಣಿಗಳಿಂದ ಕಟ್ಟಲ್ಪಟ್ಟವನಾಗಿ, ಇಬ್ಬರು ಸಿಪಾಯಿಗಳ ನಡುವೆ ನಿದ್ದೆಮಾಡುತ್ತಿದ್ದನು. ಕಾವಲುಗಾರರು ಬಾಗಿಲ ಮುಂದೆ ನಿಂತು ಸೆರೆಮನೆಯನ್ನು ಕಾಯುತ್ತಿದ್ದರು.

ಅಪೊಸ್ತಲರ ಕೃತ್ಯಗ ಅಧ್ಯಾಯ 12

7 ಫಕ್ಕನೆ ಕರ್ತನ ದೂತನು ಪೇತ್ರನೆದುರಿಗೆ ನಿಂತನು; ಅವನಿದ್ದ ಕೋಣೆಯಲ್ಲಿ ಬೆಳಕು ಹೊಳೆಯಿತು. ಅವನು ಪೇತ್ರನ ಪಕ್ಕೆಯನ್ನು ತಟ್ಟಿ ಎಬ್ಬಿಸಿ; “ತಟ್ಟನೆ ಏಳು” ಅಂದನು. ಆಗಲೇ ಅವನ ಕೈಗಳಿಗೆ ಹಾಕಿದ್ದ ಸರಪಣಿಗಳು ಕಳಚಿಬಿದ್ದವು.

8 ಆ ದೂತನು ಅವನಿಗೆ; “ನಡುಕಟ್ಟಿಕೊಂಡು, ನಿನ್ನ ಕೆರಗಳನ್ನು ಮೆಟ್ಟಿಕೋ” ಎಂದು ಹೇಳಲು, ಅವನು ಹಾಗೆಯೇ ಮಾಡಿದನು. “ನಿನ್ನ ಮೇಲಂಗಿಯನ್ನು ಹಾಕಿಕೊಂಡು ನನ್ನ ಹಿಂದೆ ಬಾ” ಅಂದನು.

9 ಅವನು ಹೊರಗೆ ಬಂದು ಆ ದೂತನ ಹಿಂದೆಯೇ ಹೋಗುತ್ತಾ, ದೂತನ ಮೂಲಕವಾಗಿ ನಡೆದ ಸಂಗತಿ ನಿಜವಾದದ್ದೆಂದು ತಿಳಿಯದೆ ತಾನು ನೋಡಿದ್ದು ಕನಸು ಎಂದು ತಿಳಿದನು.

ಅಪೊಸ್ತಲರ ಕೃತ್ಯಗ ಅಧ್ಯಾಯ 12

10 ಅವರು ಮೊದಲನೆಯ ಮತ್ತು ಎರಡನೆಯ ಕಾವಲುಗಳನ್ನು ದಾಟಿ, ಪಟ್ಟಣಕ್ಕೆ ಹೋಗುವ ಕಬ್ಬಿಣದ ಬಾಗಿಲಿಗೆ ಬಂದಾಗ ಅದು ತನ್ನಷ್ಟಕ್ಕೆ ತಾನೇ ಅವರಿಗೆ ತೆರೆಯಿತು; ಅವರು ಹೊರಗೆ ಬಂದು ಒಂದು ಬೀದಿಯನ್ನು ದಾಟಿದರು; ಕೂಡಲೇ ಆ ದೂತನು ಅವನನ್ನು ಬಿಟ್ಟು ಹೋದನು.

11 ಆಗ ಪೇತ್ರನು ಎಚ್ಚರಗೊಂಡು; “ಕರ್ತನು ತನ್ನ ದೂತನನ್ನು ಕಳುಹಿಸಿ ಹೆರೋದನ ಕೈಯಿಂದಲೂ, ಯೆಹೂದ್ಯಜನರು ನನಗೆ ಮಾಡಬೇಕೆಂದಿದ್ದ ಕೇಡಿನಿಂದಲೂ, ನನ್ನನ್ನು ಬಿಡಿಸಿದನೆಂದು ನನಗೀಗ ನಿಜವಾಗಿ ತಿಳಿಯಿತು” ಎಂದು ಅಂದುಕೊಂಡನು.

ಅಪೊಸ್ತಲರ ಕೃತ್ಯಗ ಅಧ್ಯಾಯ 12

12 ಆತನು ಇದನ್ನು ತಿಳಿದುಕೊಂಡ ತರುವಾಯ, ಅವನು ಮಾರ್ಕನೆನಿಸಿಕೊಳ್ಳುವ ಯೋಹಾನನ ತಾಯಿಯಾದ ಮರಿಯಳ ಮನೆಗೆ ಬಂದನು. ಅಲ್ಲಿ ಅನೇಕರು ಕೂಡಿಬಂದು ಪ್ರಾರ್ಥನೆಮಾಡುತ್ತಿದ್ದರು.

13 ಪೇತ್ರನು ಬಾಗಿಲಿನ ಕದವನ್ನು ತಟ್ಟಲು ರೋದೆ ಎಂಬ ಒಬ್ಬ ಕೆಲಸದವಳು ನೋಡುವುದಕ್ಕೆ ಬಂದಳು.

14 ಅವಳು ಪೇತ್ರನ ಧ್ವನಿಯನ್ನು ಗುರುತುಹಿಡಿದು ಅತಿಯಾದ ಆನಂದದಿಂದ ಬಾಗಿಲನ್ನು ತೆರೆಯದೆ ಒಳಕ್ಕೆ ಓಡಿಹೋಗಿ; “ಪೇತ್ರನು ಬಾಗಿಲ ಮುಂದೆ ನಿಂತಿದ್ದಾನೆ” ಎಂದು ತಿಳಿಸಿದಳು. ಅವರು ಅವಳಿಗೆ; “ನಿನಗೆ ಹುಚ್ಚು ಹಿಡಿದದೆ” ಎಂದು ಹೇಳಿದರು.

ಅಪೊಸ್ತಲರ ಕೃತ್ಯಗ ಅಧ್ಯಾಯ 12

15 ಆದರೆ ಅವಳು ತಾನು ಹೇಳಿದಂತೆಯೇ ಅದೆ ಎಂದು ದೃಢವಾಗಿ ಹೇಳುತ್ತಾ ಇರಲು, ಅದಕ್ಕೆ ಅವರು; “ಅವನ ದೂತನಾಗಿರಬೇಕು” ಅಂದರು.

16 ಆದರೆ ಪೇತ್ರನು ಬಾಗಿಲು ತಟ್ಟುತ್ತಲೇ ಇರಲು, ಅವರು ಬಾಗಿಲನ್ನು ತೆರೆದು ಅವನನ್ನು ಕಂಡು ಬೆರಗಾದರು.

17 ಅವನು ಸುಮ್ಮನಿರಿ ಎಂದು ಅವರಿಗೆ ಕೈಸನ್ನೆ ಮಾಡಿ ತನ್ನನ್ನು ಕರ್ತನು ಸೆರೆಮನೆಯೊಳಗಿಂದ ಹೊರಗೆ ಕರೆದುಕೊಂಡು ಬಂದ ರೀತಿಯನ್ನು ವಿವರಿಸಿ; “ಈ ಸಂಗತಿಗಳನ್ನು ಯಾಕೋಬನಿಗೂ, ಸಹೋದರರೆಲ್ಲರಿಗೂ ತಿಳಿಸಿರೆಂದು” ಹೇಳಿ ಬೇರೆ ಸ್ಥಳಕ್ಕೆ ಹೊರಟುಹೋದನು.

ಅಪೊಸ್ತಲರ ಕೃತ್ಯಗ ಅಧ್ಯಾಯ 12

18 ಬೆಳಗಾದ ಮೇಲೆ ಪೇತ್ರನು ಏನಾದನೆಂದು ಸಿಪಾಯಿಗಳಲ್ಲಿ ಬಹಳ ಕಳವಳ ಉಂಟಾಯಿತು.

19 ಹೆರೋದನು ಅವನನ್ನು ಹುಡುಕಿಸಿ ಅವನು ಸಿಕ್ಕಲಿಲ್ಲವಾದ್ದರಿಂದ, ಕಾವಲುಗಾರರನ್ನು ವಿಚಾರಣೆಮಾಡಿ, ಅವರಿಗೆ ಮರಣದಂಡನೆಯನ್ನು ವಿಧಿಸಿದನು. ಬಳಿಕ ಹೆರೋದನು ಯೂದಾಯದಿಂದ ಕೈಸರೈಗೆ ಹೋಗಿ ಅಲ್ಲಿ ಕೆಲವು ಕಾಲ ಇದ್ದನು.

ಅರಸನಾದ ಹೆರೋದನು ಸತ್ತದ್ದು 20 ಆ ಕಾಲದಲ್ಲಿ ತೂರ್ ಮತ್ತು ಸೀದೋನ್ ಪಟ್ಟಣಗಳ ನಿವಾಸಿಗಳು ತಮ್ಮ ಮೇಲೆ ಹೆರೋದನು ಬಹಳವಾಗಿ ಕೋಪಿಸಿಕೊಂಡಿರುವುದನ್ನು ನೋಡಿ ಒಮ್ಮನಸ್ಸಿನಿಂದ ಅವನ ಸನ್ನಿಧಿಗೆ ಬಂದು ಅರಸನ ಅಂತಃಪುರದ ಮೇಲಣ ಅಧಿಕಾರಿಯಾದ ಬ್ಲಾಸ್ತನನ್ನು ಒಲಿಸಿಕೊಂಡು ಸಮಾಧಾನವಾಗಿರಬೇಕೆಂದು ಅರಸನನ್ನು ಬೇಡಿಕೊಂಡರು. ಏಕೆಂದರೆ ಅರಸನ ಸೀಮೆಯಿಂದಲೇ ಅವರ ಸೀಮೆಗೆ ದವಸಧಾನ್ಯ ಬರುತ್ತಿತ್ತು.

ಅಪೊಸ್ತಲರ ಕೃತ್ಯಗ ಅಧ್ಯಾಯ 12

21 ಗೊತ್ತುಮಾಡಿದ ಒಂದು ದಿನದಲ್ಲಿ ಹೆರೋದನು ರಾಜವಸ್ತ್ರವನ್ನು ಧರಿಸಿಕೊಂಡು ಸಿಂಹಾಸನದ ಮೇಲೆ ಕುಳಿತು ಅವರಿಗೆ ಉಪನ್ಯಾಸ ಮಾಡಿದನು.

22 ಕೂಡಿದ್ದ ಜನರು; “ಇದು ಮನುಷ್ಯನ ಧ್ವನಿಯಲ್ಲ, ದೇವರ ಧ್ವನಿಯೇ” ಎಂದು ಆರ್ಭಟಿಸಿದರು.

23 ಆ ಘನತೆಯನ್ನು ಅವನು ದೇವರಿಗೆ ಸಲ್ಲಿಸದೆ, ಹೋದುದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಬಡಿದನು; ಅವನು ಹುಳಬಿದ್ದು ಸತ್ತನು.

24 ಆದರೆ ದೇವರ ವಾಕ್ಯವು ಹಬ್ಬಿ ಹೆಚ್ಚುತ್ತಾ ಬಂದಿತು.

ಅಪೊಸ್ತಲರ ಕೃತ್ಯಗ ಅಧ್ಯಾಯ 12

25 ಬಾರ್ನಬನು ಮತ್ತು ಸೌಲನು ಮಾಡಬೇಕಾದ ಧರ್ಮ ಕಾರ್ಯವನ್ನು ಮುಗಿಸಿ ಮಾರ್ಕನೆನಿಸಿಕೊಳ್ಳುವ ಯೋಹಾನನನ್ನು ಕರೆದುಕೊಂಡು ಯೆರೂಸಲೇಮಿನಿಂದ ಹಿಂತಿರುಗಿ ಬಂದರು.