Kannada ಬೈಬಲ್

ಯೋಹಾನನು ಒಟ್ಟು 21 ಅಧ್ಯಾಯಗಳು

ಯೋಹಾನನು

ಯೋಹಾನನು ಅಧ್ಯಾಯ 5
ಯೋಹಾನನು ಅಧ್ಯಾಯ 5

ಯೇಸು ಸಬ್ಬತ್ ದಿನದಲ್ಲಿ ಒಬ್ಬ ರೋಗಿಯನ್ನು ಸ್ವಸ್ಥಮಾಡಿದ್ದರಿಂದ ಯೆಹೂದ್ಯರು ಆತನನ್ನು ವಿರೋಧಿಸಿದ್ದು 1 ಇದಾದ ಮೇಲೆ ಯೆಹೂದ್ಯರ ಒಂದು * ಅಥವಾ, ಹಬ್ಬ. ಜಾತ್ರೆ ಇದ್ದುದರಿಂದ ಯೇಸು ಯೆರೂಸಲೇಮಿಗೆ ಹೋದನು.

2 ಅಲ್ಲಿ ಕುರಿಬಾಗಿಲು ಎಂಬ ಸ್ಥಳದ ಬಳಿ ಐದು ಮಂಟಪಗಳಿಂದ ಕೂಡಿದ ಒಂದು ಕೊಳವಿದೆ. ಅದನ್ನು ಇಬ್ರಿಯ ಭಾಷೆಯಲ್ಲಿ ಕೆಲವು ಪ್ರತಿಗಳಲ್ಲಿ ಬೇತ್ಸಾಯಿದವೆಂದು, ಬೇರೆ ಕೆಲವು ಪ್ರತಿಗಳಲ್ಲಿ ಬೇಥೆಸ್ಥ ಎಂದು ಬರೆದಿದೆ. ಬೇತ್ಸಥಾ ಎಂದು ಕರೆಯುತ್ತಾರೆ.

ಯೋಹಾನನು ಅಧ್ಯಾಯ 5

3 (3-4)ಇವುಗಳಲ್ಲಿ ಅಸ್ವಸ್ಥರೂ, ರೋಗಿಗಳೂ, ಕುರುಡರೂ, ಕುಂಟರೂ, ಪಾರ್ಶ್ವವಾಯು ಪೀಡಿತರು ಮೊದಲಾದ ಅನೇಕ ರೋಗಿಗಳು ಅಲ್ಲಿ ಬಿದ್ದುಕೊಂಡಿರುತ್ತಿದ್ದರು. ಕೆಲವು ಪ್ರತಿಗಳಲ್ಲಿ ಈ ಭಾಗವು ಕಂಡುಬರುವುದಿಲ್ಲ (ನೀರು ಕಲಕುವುದನ್ನು ಕಾದುಕೊಂಡು ಅಲ್ಲಿ ಬಿದ್ದುಕೊಂಡಿರುತ್ತಿದ್ದರು. ಆಗಾಗ ಒಬ್ಬ ದೂತನು ಬಂದು ಕೊಳದ ನೀರನ್ನು ಕಲಕಿಹೊಗುತ್ತಿದ್ದನು. ಆಗ ಮೊದಲು ಯಾರು ಕೊಳದೊಳಗೆ ಇಳಿಯುತ್ತಿದ್ದರೋ ಅವರ ರೋಗವು ವಾಸಿಯಾಗುತ್ತಿತ್ತು.)

ಯೋಹಾನನು ಅಧ್ಯಾಯ 5

4

5 ಅಲ್ಲಿ ಮೂವತ್ತೆಂಟು ವರ್ಷಗಳಿಂದ ರೋಗಿಯಾಗಿದ್ದ ಒಬ್ಬ ಮನುಷ್ಯನಿದ್ದನು.

6 ಅವನು ಬಿದ್ದುಕೊಂಡಿರುವುದನ್ನು ಯೇಸು ನೋಡಿ ಇವನಿಗೆ ಹೀಗಾಗಿ ಬಹು ಕಾಲವಾಗಿದೆ ಎಂದು ಅರಿತು ಅವನಿಗೆ “ನಿನಗೆ ಗುಣಹೊಂದಲು ಮನಸ್ಸಿದೆಯೋ?” ಎಂದು ಕೇಳಿದನು.

7 ಅದಕ್ಕೆ ಆ ರೋಗಿಯು “ಆಯ್ಯಾ, ನೀರು ಉಕ್ಕುವಾಗ ನನ್ನನ್ನು ಕೊಳದೊಳಗೆ ಇಳಿಸುವುದಕ್ಕೆ ಯಾರೂ ಇಲ್ಲ. ನಾನು ಹೋಗುವುದರೊಳಗೆ ನನಗಿಂತ ಮೊದಲು ಮತ್ತೊಬ್ಬನು ಇಳಿಯುತ್ತಾನೆ” ಎಂದನು.

ಯೋಹಾನನು ಅಧ್ಯಾಯ 5

8 ಯೇಸು ಅವನಿಗೆ, “ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ” ಎಂದು ಹೇಳಿದನು.

9 ಕೂಡಲೇ ಆ ಮನುಷ್ಯನು ಸ್ವಸ್ಥನಾಗಿ ತನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆದನು. ಅಂದು ಸಬ್ಬತ್ ದಿನವಾಗಿತ್ತು,

10 ಆದುದರಿಂದ ಯೆಹೂದ್ಯರು ಸ್ವಸ್ಥವಾದವನಿಗೆ, “ಈ ದಿನ ಸಬ್ಬತ್ ದಿನವಾದುದರಿಂದ ನೀನು ಹಾಸಿಗೆಯನ್ನು ಹೊತ್ತುಕೊಂಡು ಹೋಗುವುದು ಧರ್ಮಶಾಸ್ತ್ರಕ್ಕೆ ವಿರುದ್ಧವಾಗಿದೆಯೆಂದು” ಹೇಳಿದ್ದಕ್ಕೆ,

ಯೋಹಾನನು ಅಧ್ಯಾಯ 5

11 ಅವನು, “ನನ್ನನ್ನು ಸ್ವಸ್ಥಮಾಡಿದವನೇ ‘ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಡೆ’ ಎಂದು ನನಗೆ ಹೇಳಿದನು” ಎಂದನು.

12 ಅದಕ್ಕೆ ಯೆಹೂದ್ಯರು ಅವನಿಗೆ, “ಅದನ್ನು ಎತ್ತಿಕೊಂಡು ನಡೆ ಎಂದು ನಿನಗೆ ಹೇಳಿದ ಮನುಷ್ಯನು ಯಾರು?” ಎಂದು ಕೇಳಿದರು.

13 ಆದರೆ ಆತನು ಯಾರೆಂದು ಸ್ವಸ್ಥನಾದವನಿಗೆ ತಿಳಿದಿರಲಿಲ್ಲ, ಏಕೆಂದರೆ, ಯೇಸು ಆ ಸ್ಥಳದಲ್ಲಿ ಇದ್ದ ಜನರ ಗುಂಪಿನ ಮಧ್ಯದಲ್ಲಿ ಮರೆಯಾದನು.

14 ಇದಾದ ಮೇಲೆ ಯೇಸು ಅವನನ್ನು ದೇವಾಲಯದಲ್ಲಿ ಕಂಡು, “ನಿನಗೆ ಸ್ವಸ್ಥವಾಯಿತಲ್ಲಾ;§ ಯೋಹಾ 8:11: ಇನ್ನು ಮೇಲೆ ಪಾಪ ಮಾಡಬೇಡ, ನಿನಗೆ ಹೆಚ್ಚಿನ ಕೇಡು ಬಂದೀತು” ಎಂದನು.

ಯೋಹಾನನು ಅಧ್ಯಾಯ 5

15 ಆ ಮನುಷ್ಯನು ಅಲ್ಲಿಂದ ಹೋಗಿ, ತನ್ನನ್ನು ಸ್ವಸ್ಥಪಡಿಸಿದಾತನು ಯೇಸುವೇ ಎಂದು ಯೆಹೂದ್ಯರಿಗೆ ತಿಳಿಸಿದನು.

16 ಆದಕಾರಣ ಯೆಹೂದ್ಯರು, ಯೇಸು ಸಬ್ಬತ್ ದಿನಗಳಲ್ಲಿ ಇಂಥಾ ಕಾರ್ಯಗಳನ್ನು ಮಾಡುತ್ತಾನಲ್ಲಾ ಎಂದು ಆತನನ್ನು ಹಿಂಸಿಸತೊಡಗಿದರು.

17 ಅದಕ್ಕೆ ಯೇಸು ಅವರಿಗೆ, “ನನ್ನ ತಂದೆಯು ಇಂದಿನವರೆಗೂ ಕೆಲಸ ಮಾಡುತ್ತಿದ್ದಾನೆ, ನಾನೂ ಕೆಲಸ ಮಾಡುತ್ತೇನೆ” ಎಂದು ಹೇಳಿದನು.

ಯೋಹಾನನು ಅಧ್ಯಾಯ 5

18 ಯೇಸು ಈ ಮಾತನ್ನು ಹೇಳಿದ್ದರಿಂದ, ಆತನು ಸಬ್ಬತ್ ದಿನವನ್ನು ಅಲಕ್ಷ್ಯಮಾಡಿದ್ದಲ್ಲದೇ, ದೇವರನ್ನು ತನ್ನ ಸ್ವಂತ ತಂದೆ ಎಂದು ಹೇಳಿ ತನ್ನನ್ನು ದೇವರಿಗೆ ಸರಿಸಮಾನ ಮಾಡಿಕೊಂಡನೆಂದು ಯೆಹೂದ್ಯರು ಆತನನ್ನು ಕೊಲ್ಲುವುದಕ್ಕೆ ಇನ್ನಷ್ಟು ಪ್ರಯತ್ನಪಟ್ಟರು.

ದೇವಕುಮಾರನ ಅಧಿಕಾರವನ್ನು ಮತ್ತು ಆತನಿಗಿರುವ ಸಾಕ್ಷಿಯನ್ನು ಕುರಿತು ಯೇಸು ಮಾಡಿದ ಉಪದೇಶ 19 ಯೇಸು ಅವರಿಗೆ, “ನಿಮಗೆ ನಿಜನಿಜವಾಗಿ ಹೇಳುತ್ತೇನೆ, ತಂದೆಯು ಮಾಡುವುದನ್ನು ಕಂಡು ಮಗನು ಮಾಡುತ್ತಾನೆಯೇ, ಹೊರತು ತನ್ನಷ್ಟಕ್ಕೆ ತಾನೇ ಏನೂ ಮಾಡಲಾರನು. ಏಕೆಂದರೆ ಆತನು ಯಾವುದನ್ನೆಲ್ಲಾ ಮಾಡುವನೋ ಹಾಗೆಯೇ ಮಗನೂ ಮಾಡುತ್ತಾನೆ.

ಯೋಹಾನನು ಅಧ್ಯಾಯ 5

20 ಏಕೆಂದರೆ, ತಂದೆಯು ಮಗನನ್ನು ಪ್ರೀತಿಸುತ್ತಾನೆ, ತಾನು ಮಾಡುವುದನ್ನೆಲ್ಲಾ ಅವನಿಗೆ ತೋರಿಸುತ್ತಾನೆ. ಇದಲ್ಲದೆ ಇವುಗಳಿಗಿಂತ ಮಹತ್ತಾದ ಕೆಲಸಗಳನ್ನು ಆತನಿಗೆ ತೋರಿಸುವನು. ಅವುಗಳನ್ನು ನೋಡಿ ನಿಮಗೆ ಆಶ್ಚರ್ಯವಾಗುವುದು.

21 ತಂದೆಯು ಹೇಗೆ ಸತ್ತವರನ್ನು ಎಬ್ಬಿಸಿ ಬದುಕಿಸುತ್ತಾನೋ ಹಾಗೆಯೇ ಮಗನು ಸಹ ತನಗೆ ಬೇಕಾದವರನ್ನು ಬದುಕಿಸುತ್ತಾನೆ.

22 ಇದಲ್ಲದೆ ತಂದೆಯು ಯಾರಿಗೂ ತೀರ್ಪುಮಾಡುವುದಿಲ್ಲ, ಆದರೆ ಎಲ್ಲಾ ತೀರ್ಪನ್ನು ಮಗನಿಗೆ ಕೊಟ್ಟಿದ್ದಾನೆ.

ಯೋಹಾನನು ಅಧ್ಯಾಯ 5

23 ಎಲ್ಲರೂ ತಂದೆಯನ್ನು ಯಾವ ರೀತಿಯಲ್ಲಿ ಗೌರವಿಸುವರೋ ಅದೇ ರೀತಿಯಲ್ಲಿ ಮಗನನ್ನೂ ಗೌರವಿಸಬೇಕೆಂದು ಹಾಗೆ ಮಾಡಿದ್ದಾನೆ. ಮಗನನ್ನು ಗೌರವಿಸದವನು ಆತನನ್ನು ಕಳುಹಿಸಿದ ತಂದೆಯನ್ನು ಗೌರವಿಸಲಾರನು.

24 ನಿಮಗೆ ನಿಜನಿಜವಾಗಿ ಹೇಳುತ್ತೇನೆ ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯ ಜೀವವನ್ನು ಹೊಂದಿದ್ದಾನೆ, ಅವನು ಖಂಡನೆಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದಾನೆ.

ಯೋಹಾನನು ಅಧ್ಯಾಯ 5

25 ನಿಮಗೆ ನಿಜನಿಜವಾಗಿ ಹೇಳುತ್ತೇನೆ ಸತ್ತವರು ದೇವಕುಮಾರನ ಸ್ವರವನ್ನು ಕೇಳುವ ಕಾಲ ಬರುತ್ತದೆ, ಅದು ಈಗಾಗಲೇ ಬಂದಿದೆ, ಕೇಳಿದವರು ಬದುಕುವರು.

26 ತಂದೆಯು ತಾನು ಹೇಗೆ ಸ್ವತಃ ಜೀವವುಳ್ಳವನಾಗಿದ್ದಾನೋ, ಹಾಗೆಯೇ ಮಗನೂ ಸ್ವತಃ ಜೀವವುಳ್ಳವನಾಗಿರುವಂತೆ ಮಾಡಿದ್ದಾನೆ.

27 ಮಗನು ಮನುಷ್ಯಕುಮಾರನಾಗಿರುವುದರಿಂದ ನ್ಯಾಯತೀರ್ಪು ಮಾಡುವ ಅಧಿಕಾರವನ್ನೂ ತಂದೆ ಆತನಿಗೆ ಕೊಟ್ಟಿದ್ದಾನೆ.

ಯೋಹಾನನು ಅಧ್ಯಾಯ 5

28 ಅದಕ್ಕೆ ಆಶ್ಚರ್ಯಪಡಬೇಡಿರಿ. ಒಂದು ಕಾಲ ಬರುತ್ತದೆ, ಆಗ* ದಾನಿ. 12:2; ಪ್ರಕ 20:4,5,12,13: ಸಮಾಧಿಗಳಲ್ಲಿರುವವರೆಲ್ಲಾ ಆತನ ಸ್ವರವನ್ನು ಕೇಳಿ,

29 ಎದ್ದು ಹೊರಗೆ ಬರುವರು. ಒಳ್ಳೆಯದನ್ನು ಮಾಡಿದವರಿಗೆ ನಿತ್ಯಜೀವಕ್ಕಾಗಿ ಪುನರುತ್ಥಾನವಾಗುವುದು. ಕೆಟ್ಟದ್ದನ್ನು ಮಾಡಿದವರು ಖಂಡನೆಗಾಗಿ ಪುನರುತ್ಥಾನವನ್ನೂ ಹೊಂದುವರು.

ಯೋಹಾನನು ಅಧ್ಯಾಯ 5

30 “ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು ತಂದೆಯು ಹೇಳಿದ್ದನ್ನು ನಾನು ಕೇಳಿ ನ್ಯಾಯತೀರಿಸುತ್ತೇನೆ ಮತ್ತು ಸ್ವಂತ ಚಿತ್ತ ನೆರವೇರಬೇಕೆಂದು ಅಪೇಕ್ಷಿಸದೆ ನನ್ನನ್ನು ಕಳುಹಿಸಿದಾತನ ಚಿತ್ತ ನೆರವೇರಬೇಕೆಂದು ನಾನು ಬಯಸುವುದರಿಂದ ನಾನು ಮಾಡುವ ತೀರ್ಪು ನ್ಯಾಯವಾಗಿದೆ.

31 ನನ್ನ ವಿಷಯವಾಗಿ ನಾನೇ ಸಾಕ್ಷಿ ಹೇಳಿಕೊಂಡರೆ ನನ್ನ ಸಾಕ್ಷಿಯು ಸತ್ಯವಾದದ್ದಲ್ಲ.

ಯೋಹಾನನು ಅಧ್ಯಾಯ 5

32 ನನ್ನ ವಿಷಯವಾಗಿ ಸಾಕ್ಷಿ ಹೇಳುವವನು ಮತ್ತೊಬ್ಬನಿದ್ದಾನೆ. ಆತನು ನನ್ನ ವಿಷಯವಾಗಿ ಹೇಳುವ ಸಾಕ್ಷಿಯು ನಿಜವೆಂದು ನಾನು ಬಲ್ಲೆನು.

33 ನೀವು ಯೋಹಾನನ ಬಳಿಗೆ ದೂತರನ್ನು ಕೇಳಿಕೊಂಡು ಬರುವುದಕ್ಕೆ ಕಳುಹಿಸಿದಿರಿ. ಅವನು ಸತ್ಯಕ್ಕೆ ಸಾಕ್ಷಿ ಹೇಳಿದನು.

34 ನಾನಂತೂ ನನಗೆ ಬೇಕಾದ ಸಾಕ್ಷಿಯನ್ನು ಮನುಷ್ಯರಿಂದ ಸ್ವೀಕರಿಸುವುದಿಲ್ಲ. ಆದರೂ ನಿಮಗೆ ರಕ್ಷಣೆಯಾಗಬೇಕೆಂದು ಇದನ್ನು ನಿಮಗೆ ಹೇಳಿದ್ದೇನೆ.

ಯೋಹಾನನು ಅಧ್ಯಾಯ 5

35 ಯೋಹಾನನು ಉರಿಯುವ ದೀಪದಂತೆ ಪ್ರಕಾಶಿಸಿದನು. ಅವನು ಕೊಡುವ ಬೆಳಕಿನಲ್ಲಿ ಸ್ವಲ್ಪ ಕಾಲ ಅತ್ಯಾನಂದಪಡುವುದಕ್ಕೆ ಮನಸ್ಸು ಮಾಡಿದಿರಿ.

36 ನನಗಂತೂ ಯೋಹಾನನ ಸಾಕ್ಷಿಗಿಂತ ದೊಡ್ಡದಾದಸಾಕ್ಷಿ ಉಂಟು. ಹೇಗೆಂದರೆ, ಪೂರೈಸುವುದಕ್ಕೆ ತಂದೆಯು ನನಗೆ ಕೊಟ್ಟಿರುವ ಕೆಲಸಗಳೇ, ಅಂದರೆ ನಾನು ಮಾಡುವ ಈ ಕೆಲಸಗಳೇ ತಂದೆಯು ನನ್ನನ್ನು ಕಳುಹಿಸಿದ್ದಾನೆಂದು ನನ್ನ ವಿಷಯವಾಗಿ ಸಾಕ್ಷಿ ಕೊಡುತ್ತವೆ.

ಯೋಹಾನನು ಅಧ್ಯಾಯ 5

37 ಇದಲ್ಲದೆ ನನ್ನನ್ನು ಕಳುಹಿಸಿಕೊಟ್ಟ ತಂದೆಯು ನನ್ನ ವಿಷಯವಾಗಿ ಸಾಕ್ಷಿ ಹೇಳಿದ್ದಾನೆ. ನೀವು ಎಂದಾದರೂ ಆತನ ಸ್ವರವನ್ನು ಕೇಳಿದ್ದೂ ಇಲ್ಲ, ಆತನ ರೂಪವನ್ನು ನೋಡಿದ್ದೂ ಇಲ್ಲ.

38 ಆತನ ವಾಕ್ಯವು ನಿಮ್ಮಲ್ಲಿ ನೆಲೆಗೊಂಡಿಲ್ಲ. ಏಕೆಂದರೆ ಆತನು ಕಳುಹಿಸಿದಾತನನ್ನು ನೀವು ನಂಬದೇ ಇದ್ದೀರಿ.

39 ಲೂಕ 24:27, 44-47; ಅ. ಕೃ. 17:11: ಧರ್ಮಶಾಸ್ತ್ರಗಳಿಂದ ನಿತ್ಯಜೀವವು ದೊರೆಯುತ್ತದೆಂದು ನೀವು ತಿಳಿದು ಅವುಗಳನ್ನು ಪರಿಶೋಧಿಸುತ್ತಿರಾ? ಅವುಗಳೂ ನನ್ನ ವಿಷಯದಲ್ಲಿ ಸಾಕ್ಷಿ ಕೊಡುವವುಗಳಾಗಿವೆ.

ಯೋಹಾನನು ಅಧ್ಯಾಯ 5

40 ಆದರೂ ಜೀವ ಹೊಂದುವುದಕ್ಕಾಗಿ ನನ್ನ ಬಳಿಗೆ ಬರುವುದಕ್ಕೆ ನಿಮಗೆ ಮನಸ್ಸಿಲ್ಲ.

41 “ನಾನು ಮನುಷ್ಯರಿಂದ ಬರುವ ಪ್ರಶಂಸೆಯನ್ನು ಸ್ವೀಕರಿಸುವುದಿಲ್ಲ,

42 ಆದರೆ ನಿಮ್ಮನ್ನು ನಾನು ಬಲ್ಲೆನು. ದೇವರ ಪ್ರೀತಿ ನಿಮ್ಮೊಳಗೆ ಇಲ್ಲವೆಂದು ನನಗೆ ತಿಳಿದಿದೆ.

43 ನಾನು ನನ್ನ ತಂದೆಯ ಹೆಸರಿನಲ್ಲಿ ಬಂದಿದ್ದೇನೆ ಆದರೂ ನನ್ನನ್ನು ನೀವು ಸ್ವೀಕರಿಸುವುದಿಲ್ಲ. ಮತ್ತೊಬ್ಬನು ತನ್ನ ಸ್ವಂತ ಹೆಸರಿನಲ್ಲಿ ಬಂದರೆ ಅವನನ್ನು ನೀವು ಸ್ವೀಕರಿಸುತ್ತೀರಿ.

ಯೋಹಾನನು ಅಧ್ಯಾಯ 5

44 ಒಬ್ಬನೇ ದೇವರಿಂದ ಬರುವ ಮಹಿಮೆಯನ್ನು ಅಪೇಕ್ಷಿಸದೇ ನಿಮ್ಮ ನಿಮ್ಮೊಳಗೇ ಪ್ರಶಂಸೆಯನ್ನು ಸ್ವೀಕರಿಸುವವರಾದ ನೀವು ಅದನ್ನು ನಂಬಲು ಹೇಗೆ ಸಾಧ್ಯ?

45 ನಾನು ತಂದೆಯ ಮುಂದೆ ನಿಮ್ಮ ಮೇಲೆ ಅಪವಾದ ಹೊರಿಸುತ್ತಿದ್ದೇನೆಂದು ತಿಳಿಯಬೇಡಿರಿ. ನಿಮ್ಮ ಮೇಲೆ ಅಪವಾದ ಹೊರಿಸುವವನು ಒಬ್ಬನಿದ್ದಾನೆ; ಅವನೇ ನೀವು ನಿರೀಕ್ಷೆಯಿಟ್ಟಿರುವ ಮೋಶೆ!

46 ಅವನು ನನ್ನ ವಿಷಯವಾಗಿ ಬರೆದನು, ಆದುದರಿಂದ ನೀವು ಮೋಶೆಯನ್ನೂ ನಂಬುವವರಾಗಿದ್ದರೆ ನನ್ನನ್ನೂ ನಂಬುತ್ತಿದ್ದಿರಿ.

ಯೋಹಾನನು ಅಧ್ಯಾಯ 5

47 ಅವನು ಧರ್ಮಶಾಸ್ತ್ರದಲ್ಲಿ ಬರೆದಿರುವುದನ್ನು ನೀವು ನಂಬದಿದ್ದರೆ ನಾನು ಹೇಳುವ ಮಾತುಗಳನ್ನು ಹೇಗೆ ನಂಬುವಿರಿ?” ಎಂದನು.