Kannada ಬೈಬಲ್

ಯೋನ ಒಟ್ಟು 4 ಅಧ್ಯಾಯಗಳು

ಯೋನ

ಯೋನ ಅಧ್ಯಾಯ 2
ಯೋನ ಅಧ್ಯಾಯ 2

ಯೋನನ ಪ್ರಾರ್ಥನೆ 1

2 ಯೋನನು ಆ ಮೀನಿನ ಹೊಟ್ಟೆಯೊಳಗೆ ಇದ್ದು ಕೊಂಡು ತನ್ನ ದೇವರಾದ ಯೆಹೋವನಿಗೆ ಹೀಗೆ ಪ್ರಾರ್ಥನೆ ಮಾಡಿದನು: “ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು; ಆತನು ನನಗೆ ಸದುತ್ತರವನ್ನು ದಯಪಾಲಿಸಿದನು; ಪಾತಾಳದ ಗರ್ಭದೊಳಗಿಂದ ಸಹಾಯಕ್ಕಾಗಿ ಕೂಗಿಕೊಂಡೆನು! ಆಹಾ, ನೀನು ನನ್ನ ಸ್ವರವನ್ನು ಲಾಲಿಸಿದೆ.

ಯೋನ ಅಧ್ಯಾಯ 2

3 ನನ್ನನ್ನು ಸಮುದ್ರದ ಅಗಾಧಸ್ಥಳದಲ್ಲಿ ಹಾಕಿದ್ದೀಯಲ್ಲಾ; ಪ್ರವಾಹವು ನನ್ನನ್ನು ಸುತ್ತಿಕೊಂಡಿತು; ಲೆಕ್ಕವಿಲ್ಲದ ಸಮುದ್ರದ ಅಲೆಗಳೂ, ತೆರೆಗಳೂ ನನ್ನ ಮೇಲೆ ದಾಟಿ ಹೋದವು

4 ‘ನಿನ್ನ ಸಾನ್ನಿಧ್ಯದಿಂದ ತಳ್ಳಲ್ಪಟ್ಟಿದ್ದೇನೆ ಎಂದುಕೊಂಡೆನು; ನಾನು ನಿನ್ನ ಪರಿಶುದ್ಧ ಮಂದಿರದ ಕಡೆಗೆ ಪುನಃ ಹೇಗೆ ನೋಡುವೆನು?’

ಯೋನ ಅಧ್ಯಾಯ 2

5 ಜಲರಾಶಿಯು ನನ್ನನ್ನು ಮುತ್ತಿ ನನ್ನ ಪ್ರಾಣಕ್ಕೆ ಹಾನಿ ತಂದಿತು, ಮಹಾಸಾಗರವು ನನ್ನನ್ನು ಆವರಿಸಿತು, ಕಡಲಕಳೆಯು ನನ್ನ ತಲೆಯನ್ನು ಸುತ್ತಿಕೊಂಡಿತು.

6 ಪರ್ವತಗಳ ತಳಹದಿಗೆ ಇಳಿದುಹೋದೆನು, ಭೂಲೋಕದ ದ್ವಾರಗಳ ಚಿಲಕಗಳು ಎಂದಿಗೂ ತೆಗೆಯದ ಹಾಗೆ ನನ್ನನ್ನು ಬಂಧಿಸಿದವು; ನನ್ನ ದೇವರಾದ ಯೆಹೋವನೇ, ನೀನು ನನ್ನ ಪ್ರಾಣವನ್ನು ಅಧೋಲೋಕದೊಳಗಿನಿಂದ ಉದ್ಧರಿಸಿದ್ದೀ.

ಯೋನ ಅಧ್ಯಾಯ 2

7 “ನನ್ನ ಆತ್ಮವು ನನ್ನಲ್ಲಿ ಕುಂದಿಹೋದಾಗ ಯೆಹೋವನಾದ ನಿನ್ನನ್ನು ನೆನಪು ಮಾಡಿಕೊಂಡು ಸ್ಮರಿಸಿದೆನು; ನನ್ನ ಬಿನ್ನಹವು ನಿನಗೆ ಮುಟ್ಟಿತು, ಅದು ನಿನ್ನ ಪರಿಶುದ್ಧಾಲಯವನ್ನು ಬಂದು ಸೇರಿತು.

8 “ನಿರ್ಜೀವ ವಿಗ್ರಹಗಳನ್ನು ಅವಲಂಬಿಸಿದವರು ತಮ್ಮ ದೇವರ ಕರುಣಾನಿಧಿಯನ್ನು ತೊರೆದುಬಿಡುವರು.

9 ಆದರೆ ನಾನು ಸ್ತೋತ್ರ ಧ್ವನಿಯಿಂದ ನಿನಗೆ ಯಜ್ಞವನ್ನರ್ಪಿಸುವೆನು, ನಿನಗೆ ಮಾಡಿಕೊಂಡ ಹರಕೆಯನ್ನು ಸಲ್ಲಿಸುವೆನು. ರಕ್ಷಣೆಯು ಯೆಹೋವನಿಂದಲೇ ಉಂಟಾಗುವುದು.”

ಯೋನ ಅಧ್ಯಾಯ 2

10 ಆಗ ಯೆಹೋವನು ಮೀನಿಗೆ ಅಪ್ಪಣೆಕೊಡಲು ಅದು ಯೋನನನ್ನು ಸಮುದ್ರದ ದಡದಲ್ಲಿ ಕಾರಿಬಿಟ್ಟಿತು.