Kannada ಬೈಬಲ್
ಯಾಜಕಕಾಂಡ ಒಟ್ಟು 27 ಅಧ್ಯಾಯಗಳು
ಯಾಜಕಕಾಂಡ
ಯಾಜಕಕಾಂಡ ಅಧ್ಯಾಯ 1
ಯಾಜಕಕಾಂಡ ಅಧ್ಯಾಯ 1
ಸರ್ವಾಂಗಹೋಮ ವಿಧಾನ 1 ಯೆಹೋವನು ಮೋಶೆಯನ್ನು ಕರೆದು ದೇವದರ್ಶನದ ಗುಡಾರದೊಳಗಿಂದ ಅವನ ಸಂಗಡ ಮಾತನಾಡಿ ಹೀಗೆಂದನು,
2 “ನೀನು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ, ‘ನಿಮ್ಮಲ್ಲಿ ಯಾವನಾದರೂ ಯೆಹೋವನಿಗೆ ಪಶುವನ್ನು ಕಾಣಿಕೆಯಾಗಿ ಸಮರ್ಪಿಸಬೇಕೆಂದಿದ್ದರೆ ಅವನು ಅದನ್ನು ಹಿಂಡಿನ ದನಗಳಿಂದಾಗಲಿ ಅಥವಾ ಆಡುಕುರಿಗಳ ಹಿಂಡಿನಿಂದ ತೆಗೆದುಕೊಂಡು ಸಮರ್ಪಿಸಬೇಕು.
3 “ ‘ಅವನು ದನವನ್ನು ಸರ್ವಾಂಗಹೋಮವಾಗಿ ಸಮರ್ಪಿಸುವುದಾದರೆ ಪೂರ್ಣಾಂಗವಾದ ಗಂಡನ್ನು ತರಬೇಕು. ತನ್ನನ್ನು ಯೆಹೋವನು ಮೆಚ್ಚುವಂತೆ ದೇವದರ್ಶನದ ಗುಡಾರದ ಬಾಗಿಲಿಗೆ ಅದನ್ನು ತರಬೇಕು.
ಯಾಜಕಕಾಂಡ ಅಧ್ಯಾಯ 1
4 ಅವನು ಆ ಯಜ್ಞ ಪಶುವಿನ ತಲೆಯ ಮೇಲೆ ಕೈಯಿಡಬೇಕು; ಆಗ ಅದು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದಕ್ಕಾಗಿ ಅಂಗೀಕಾರವಾಗುವುದು.
5 “ ‘ಅವನು ಆ ಹೋರಿಯನ್ನು ಯೆಹೋವನ ಎದುರಿನಲ್ಲಿ ವಧಿಸಿದ ಮೇಲೆ ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿರುವ ಯಜ್ಞವೇದಿಯ ಸುತ್ತಲೂ ಎರಚಬೇಕು.
6 ಅನಂತರ ಅವನು ಆ ಯಜ್ಞಪಶುವಿನ ಚರ್ಮವನ್ನು ಸುಲಿದು ಅದರ ದೇಹವನ್ನು ತುಂಡು ತುಂಡಾಗಿ ಕಡಿಯಬೇಕು.
ಯಾಜಕಕಾಂಡ ಅಧ್ಯಾಯ 1
7 ಆರೋನನ ವಂಶದವರಾದ ಯಾಜಕರು ಯಜ್ಞವೇದಿಯ ಮೇಲೆ ಬೆಂಕಿಯನ್ನಿಟ್ಟು, ಅದರ ಮೇಲೆ ಕಟ್ಟಿಗೆಯನ್ನು ಕೂಡಿಸಿ ಇಡಬೇಕು.
8 ಆಮೇಲೆ ಯಾಜಕರು ಅಂದರೆ ಆರೋನನ ಮಕ್ಕಳು, ಆ ತುಂಡುಗಳನ್ನು, ತಲೆಯನ್ನು ಮತ್ತು ಕೊಬ್ಬನ್ನು ಅದರ ಮೇಲೆ ಕ್ರಮವಾಗಿ ಇಡಬೇಕು.
9 ಅದರ ಕರುಳುಗಳನ್ನು ಮತ್ತು ಕಾಲುಗಳನ್ನು ನೀರಿನಲ್ಲಿ ತೊಳೆದನಂತರ ಯಾಜಕನು ಅದನ್ನು ಪೂರ್ತಿಯಾಗಿ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗುತ್ತದೆ.
ಯಾಜಕಕಾಂಡ ಅಧ್ಯಾಯ 1
10 “ ‘ಒಬ್ಬನು ಆಡನ್ನಾಗಲಿ ಅಥವಾ ಕುರಿಯನ್ನಾಗಲಿ ಸರ್ವಾಂಗಹೋಮವನ್ನಾಗಿ ಅರ್ಪಿಸಬೇಕೆಂದಿದ್ದರೆ ಅವನು ಪೂರ್ಣಾಂಗವಾದ ಗಂಡನ್ನು ತರಬೇಕು.
11 ಅದನ್ನು ಯೆಹೋವನ ಸನ್ನಿಧಿಯಲ್ಲಿ ಯಜ್ಞವೇದಿಯ ಉತ್ತರ ಭಾಗದಲ್ಲಿ ವಧಿಸಬೇಕು. ತರುವಾಯ ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಹಾಕಬೇಕು.
12 ಅವನು ಆ ಪಶುವಿನ ದೇಹವನ್ನು ತುಂಡು ತುಂಡಾಗಿ ಕಡಿದ ಮೇಲೆ ಯಾಜಕನು ಆ ತುಂಡುಗಳನ್ನು, ತಲೆಯನ್ನು ಮತ್ತು ಕೊಬ್ಬನ್ನು ಯಜ್ಞವೇದಿಯ ಮೇಲಣ ಬೆಂಕಿಯಲ್ಲಿ ಕಟ್ಟಿಗೆಯ ಮೇಲೆ ಕ್ರಮವಾಗಿ ಇಡಬೇಕು.
ಯಾಜಕಕಾಂಡ ಅಧ್ಯಾಯ 1
13 ಅದರ ಕರುಳುಗಳನ್ನು ಹಾಗು ಕಾಲುಗಳನ್ನು ನೀರಿನಲ್ಲಿ ತೊಳೆದನಂತರ ಯಾಜಕನು ಅದನ್ನು ಪೂರ್ತಿಯಾಗಿ ಯಜ್ಞವೇದಿಯ ಮೇಲೆ ಸುಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗಿದೆ.
14 “ ‘ಯೆಹೋವನಿಗೆ ಸರ್ವಾಂಗಹೋಮವಾಗಿ ಅರ್ಪಿಸುವಂಥದ್ದು ಪಕ್ಷಿಜಾತಿಯಾಗಿದ್ದರೆ ಅದು ಬೆಳವಕ್ಕಿಯಾಗಲಿ ಅಥವಾ ಪಾರಿವಾಳದ ಮರಿಯಾಗಲಿ ಆಗಿರಬೇಕು.
15 ಯಾಜಕನು ಅದನ್ನು ಯಜ್ಞವೇದಿಯ ಬಳಿಗೆ ತಂದು, ಕುತ್ತಿಗೆ ಮುರಿದು ಅದನ್ನು ಯಜ್ಞವೇದಿಯ ಮೇಲೆ ಹೋಮ ಮಾಡಬೇಕು. ಅವನು ಅದರ ರಕ್ತವನ್ನು ಯಜ್ಞವೇದಿಯ ಪಕ್ಕದಲ್ಲಿ ಹರಿಯುವಂತೆ ಮಾಡಿ ಹಿಂಗಿಸಬೇಕು.
ಯಾಜಕಕಾಂಡ ಅಧ್ಯಾಯ 1
16 ಅದರ * ಅಥವಾ ಎರೆ ಚೀಲ. ಕರುಳುಗಳನ್ನು ಮತ್ತು ರೆಕ್ಕೆಗಳನ್ನು ತೆಗೆದುಬಿಟ್ಟು ಯಜ್ಞವೇದಿಯ ಪೂರ್ವದಿಕ್ಕಿನಲ್ಲಿರುವ ಬೂದಿಯ ಸ್ಥಳದಲ್ಲಿ ಹಾಕಬೇಕು.
17 ಅವನು ಆ ಪಕ್ಷಿಯನ್ನು ರೆಕ್ಕೆಗಳ ಮಧ್ಯದಲ್ಲಿ ಇಬ್ಭಾಗವಾಗಿ ಹರಿಯಬೇಕು, ಅವನು ಅದನ್ನು ವಿಭಾಗಿಸಬಾರದು. ಆದರೆ ರೆಕ್ಕೆಗಳನ್ನು ಪೂರಾ ಕಿತ್ತುಹಾಕಬಾರದು. ಅನಂತರ ಯಾಜಕನು ಅದನ್ನು ಯಜ್ಞವೇದಿಯ ಮೇಲಣ ಬೆಂಕಿಯಲ್ಲಿರುವ ಕಟ್ಟಿಗೆಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗಿದೆ.