Kannada ಬೈಬಲ್
ಕೀರ್ತನೆಗಳು ಒಟ್ಟು 150 ಅಧ್ಯಾಯಗಳು
ಕೀರ್ತನೆಗಳು
ಕೀರ್ತನೆಗಳು ಅಧ್ಯಾಯ 100
ಕೀರ್ತನೆಗಳು ಅಧ್ಯಾಯ 100
ಲೋಕವೆಲ್ಲಾ ಇಸ್ರಾಯೇಲರ ದೇವರನ್ನು ಆರಾಧಿಸಬೇಕೆಂಬ ಬೋಧನೆ 3 *ಕೃತಜ್ಞತಾಯಜ್ಞ ಕೀರ್ತನೆ.
ಕೀರ್ತ 95 *ಸಮಸ್ತಭೂನಿವಾಸಿಗಳೇ, ಯೆಹೋವನಿಗೆ ಉತ್ಸಾಹಧ್ವನಿಮಾಡಿರಿ.
2 ಯೆಹೋವನನ್ನು ಸಂತೋಷದಿಂದ ಸೇವಿಸಿರಿ; ಕೀರ್ತನೆ ಹಾಡುತ್ತಾ ಆತನ ಸನ್ನಿಧಿಗೆ ಬನ್ನಿರಿ.
3 ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ. ನಮ್ಮನ್ನು ಉಂಟುಮಾಡಿದವನು ಆತನೇ; ನಾವು ಆತನವರು, ಆತನ ಪ್ರಜೆಯೂ, ಆತನು ಪಾಲಿಸುವ ಹಿಂಡೂ ಆಗಿದ್ದೇವೆ.
ಕೀರ್ತನೆಗಳು ಅಧ್ಯಾಯ 100
4 ಕೃತಜ್ಞತಾ ಸ್ತುತಿಯೊಡನೆ ಆತನ ಮಂದಿರದ್ವಾರಗಳಿಗೂ, ಸ್ತುತಿಸ್ತೋತ್ರದೊಡನೆ ಆತನ ಅಂಗಳಗಳಿಗೂ ಬನ್ನಿರಿ; ಆತನ ಉಪಕಾರಗಳನ್ನು ಸ್ಮರಿಸಿರಿ; ಆತನ ನಾಮವನ್ನು ಕೊಂಡಾಡಿರಿ.
5 ಯೆಹೋವನು ಒಳ್ಳೆಯವನು; ಆತನ ಕೃಪೆಯು ಯುಗಯುಗಕ್ಕೂ, ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.