Kannada ಬೈಬಲ್
ಕೀರ್ತನೆಗಳು ಒಟ್ಟು 150 ಅಧ್ಯಾಯಗಳು
ಕೀರ್ತನೆಗಳು
ಕೀರ್ತನೆಗಳು ಅಧ್ಯಾಯ 115
ಕೀರ್ತನೆಗಳು ಅಧ್ಯಾಯ 115
ಯೆಹೋವನೊಬ್ಬನೇ ರಕ್ಷಕನು 3 ದಾವೀದನ ಕೀರ್ತನೆ. ನಮ್ಮನ್ನಲ್ಲ, ಯೆಹೋವನೇ, ನಮ್ಮನ್ನಲ್ಲ, ನಿನ್ನ ಪ್ರೀತಿ, ಸತ್ಯತೆಗಳ ನಿಮಿತ್ತವಾಗಿ ನಿನ್ನ ಹೆಸರನ್ನೇ ಘನಪಡಿಸು.
2 “ಅವರ ದೇವರು ಎಲ್ಲಿದ್ದಾನೆ?” ಎಂದು ಅನ್ಯರು ಏಕೆ ಹೇಳಬೇಕು?
3 ನಮ್ಮ ದೇವರು ಪರಲೋಕದಲ್ಲಿದ್ದಾನೆ; ಆತನು ತನಗೆ ಬೇಕಾದುದನ್ನೆಲ್ಲಾ ಮಾಡುತ್ತಾನೆ.
ಕೀರ್ತನೆಗಳು ಅಧ್ಯಾಯ 115
4 ಅವರ ವಿಗ್ರಹಗಳೋ ಬೆಳ್ಳಿ ಬಂಗಾರದವುಗಳೇ; ಅವು ಮನುಷ್ಯರ ಕೈಕೆಲಸವಷ್ಟೇ.
5 ಅವು ಬಾಯಿದ್ದರೂ ಮಾತನಾಡುವುದಿಲ್ಲ; ಕಣ್ಣಿದ್ದರೂ ನೋಡುವುದಿಲ್ಲ.
6 ಕಿವಿಯಿದ್ದರೂ ಕೇಳುವುದಿಲ್ಲ; ಮೂಗಿದ್ದರೂ ಮೂಸುವುದಿಲ್ಲ.
7 ಕೈಯುಂಟು ಮುಟ್ಟುವುದಿಲ್ಲ; ಕಾಲುಂಟು ನಡೆಯುವುದಿಲ್ಲ; ಅವುಗಳ ಗಂಟಲಲ್ಲಿ ಶಬ್ದವೇ ಇಲ್ಲ.
ಕೀರ್ತನೆಗಳು ಅಧ್ಯಾಯ 115
8 ಅವುಗಳನ್ನು ಮಾಡುವವರೂ, ಅವುಗಳಲ್ಲಿ ಭರವಸವಿಡುವವರೂ ಅವುಗಳಂತೆಯೇ.
9 ಇಸ್ರಾಯೇಲರೇ, ಯೆಹೋವನಲ್ಲಿ ಭರವಸವಿಡಿರಿ. ಅವರ ಸಹಾಯಕನು, ಗುರಾಣಿಯು ಆತನೇ.
10 ಆರೋನನ ಮನೆತನದವರೇ, ಯೆಹೋವನಲ್ಲಿ ಭರವಸವಿಡಿರಿ. ಅವರ ಸಹಾಯಕನು, ಗುರಾಣಿಯು ಆತನೇ.
11 ಯೆಹೋವನ ಭಕ್ತರೇ, ಯೆಹೋವನಲ್ಲಿ ಭರವಸವಿಡಿರಿ. ಅವರ ಸಹಾಯಕನು, ಗುರಾಣಿಯು ಆತನೇ.
ಕೀರ್ತನೆಗಳು ಅಧ್ಯಾಯ 115
12 ಯೆಹೋವನು ನಮ್ಮನ್ನು ನೆನಪುಮಾಡಿಕೊಂಡಿದ್ದಾನೆ; ಸಣ್ಣವರು ಮೊದಲುಗೊಂಡು ದೊಡ್ಡವರ ವರೆಗೆ ಎಲ್ಲರನ್ನೂ ಆಶೀರ್ವದಿಸುವನು.
13 ಇಸ್ರಾಯೇಲನ ಮನೆತನದವರನ್ನು ಆಶೀರ್ವದಿಸುವನು; ಆರೋನನ ಮನೆತನದವರನ್ನು ಆಶೀರ್ವದಿಸುವನು. ತನ್ನ ಭಕ್ತರನ್ನು ಆಶೀರ್ವದಿಸುವನು.
14 ಯೆಹೋವನು ನಿಮ್ಮನ್ನೂ, ನಿಮ್ಮ ಮಕ್ಕಳನ್ನೂ ಅಭಿವೃದ್ಧಿಪಡಿಸಲಿ;
ಕೀರ್ತನೆಗಳು ಅಧ್ಯಾಯ 115
15 ಯೆಹೋವನಿಂದ ನಿಮಗೆ ಆಶೀರ್ವಾದವಾಗಲಿ. ಆತನು ಭೂಪರಲೋಕಗಳನ್ನು ಉಂಟುಮಾಡಿದ್ದಾನೆ.
16 ಪರಲೋಕವು ಯೆಹೋವನದು; ಭೂಲೋಕವನ್ನು ಮಾನವ ಸಂತಾನಕ್ಕೆ ಕೊಟ್ಟಿದ್ದಾನೆ.
17 ಸತ್ತವರು ಯೆಹೋವನನ್ನು ಸ್ತುತಿಸುವುದಿಲ್ಲ; ಮೌನಲೋಕವನ್ನು ಸೇರಿದವರಲ್ಲಿ ಯಾರೂ ಆತನನ್ನು ಕೀರ್ತಿಸುವುದಿಲ್ಲ.
ಕೀರ್ತನೆಗಳು ಅಧ್ಯಾಯ 115
18 ನಾವೋ ಇಂದಿನಿಂದ ಸದಾಕಾಲವೂ ಯೆಹೋವನನ್ನು ಕೊಂಡಾಡುವೆವು. ಯೆಹೋವನಿಗೆ ಸ್ತೋತ್ರ!