Kannada ಬೈಬಲ್

ಕೀರ್ತನೆಗಳು ಒಟ್ಟು 150 ಅಧ್ಯಾಯಗಳು

ಕೀರ್ತನೆಗಳು

ಕೀರ್ತನೆಗಳು ಅಧ್ಯಾಯ 118
ಕೀರ್ತನೆಗಳು ಅಧ್ಯಾಯ 118

ಹಬ್ಬದ ಗೀತೆ
ನೆಹೆ 8:14-18; ಯೆಶಾ 12

1 ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾಗಿದೆ.

2 ಇಸ್ರಾಯೇಲರು, “ಆತನ ಕೃಪೆಯು ಶಾಶ್ವತ” ಎಂದು ಹೇಳಲಿ.

3 ಆರೋನನ ಮನೆತನದವರು, “ಆತನ ಕೃಪೆಯು ಶಾಶ್ವತ” ಎಂದು ಹೇಳಲಿ.

ಕೀರ್ತನೆಗಳು ಅಧ್ಯಾಯ 118

4 ಯೆಹೋವನ ಭಕ್ತರು, “ಆತನ ಕೃಪೆಯು ಶಾಶ್ವತ” ಎಂದು ಹೇಳಲಿ.

5 ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಟ್ಟೆನು; ಆತನು ಸದುತ್ತರವನ್ನು ದಯಪಾಲಿಸಿ, ನನ್ನನ್ನು ವಿಶಾಲವಾದ ಸ್ಥಳದಲ್ಲಿ ನೆಲೆಸುವಂತೆ ಮಾಡಿದನು.

6 ಯೆಹೋವನು ನನ್ನ ಕಡೆ ಇದ್ದಾನೆ; ಭಯಪಡೆನು. ಮನುಷ್ಯನು ನನಗೆ ಏನು ಮಾಡಾನು?

7 ಯೆಹೋವನು ನನಗೆ ಇದ್ದಾನೆ; ಆತನೇ ನನಗೆ ಸಹಾಯಕನು; ನನ್ನ ವೈರಿಗಳಿಗಾಗುವ ಶಿಕ್ಷೆಯನ್ನು ನೋಡುವೆನು.

ಕೀರ್ತನೆಗಳು ಅಧ್ಯಾಯ 118

8 ಮನುಷ್ಯರಲ್ಲಿ ಭರವಸವಿಡುವುದಕ್ಕಿಂತ, ಯೆಹೋವನನ್ನು ಆಶ್ರಯಿಸುವುದು ಒಳ್ಳೆಯದು.

9 ಪ್ರಭುಗಳಲ್ಲಿ ಭರವಸವಿಡುವುದಕ್ಕಿಂತ, ಯೆಹೋವನನ್ನು ಆಶ್ರಯಿಸುವುದು ಒಳ್ಳೆಯದು.

10 ಜನಾಂಗದವರೆಲ್ಲಾ ನನ್ನನ್ನು ಸುತ್ತಿಕೊಂಡರು; ಯೆಹೋವನ ಬಲದಿಂದ* ಬಲದಿಂದ ಅಥವಾ ಹೆಸರಿನಿಂದ. ಅವರನ್ನು ಸಂಹರಿಸುವೆನು.

ಕೀರ್ತನೆಗಳು ಅಧ್ಯಾಯ 118

11 ಅವರು ನನ್ನನ್ನು ಸುತ್ತಲೂ ಮುತ್ತಿದರು; ಯೆಹೋವನ ಹೆಸರಿನ ಬಲದಿಂದ ಅವರನ್ನು ಸಂಹರಿಸುವೆನು.

12 ಅವರು ಜೇನು ನೊಣಗಳಂತೆ ನನ್ನನ್ನು ಕವಿದರೂ; ಮುಳ್ಳಿನ ಬೆಂಕಿಯಂತೆ ಕ್ಷಣದಲ್ಲಿ ಅಳಿದುಹೋಗುವರು. ಯೆಹೋವನ ಹೆಸರಿನಿಂದ ಅವರನ್ನು ಸಂಹರಿಸುವೆನು.

13 ವೈರಿಯೇ, ನನ್ನನ್ನು ಬೀಳುವಂತೆ ಮಾಡಿದಿ; ಆದರೆ ಯೆಹೋವನು ನನಗೆ ಸಹಾಯ ಮಾಡಿದನು.

ಕೀರ್ತನೆಗಳು ಅಧ್ಯಾಯ 118

14 ನನ್ನ ಬಲವು, ಕೀರ್ತನೆಯು ಯೆಹೋವನೇ; ಆತನಿಂದ ನನಗೆ ರಕ್ಷಣೆಯುಂಟಾಯಿತು.

15 ಉತ್ಸಾಹಧ್ವನಿಯು, ಜಯಘೋಷವು ನೀತಿವಂತರ ಗುಡಾರಗಳಲ್ಲಿವೆ; ಯೆಹೋವನ ಬಲಗೈ ಪರಾಕ್ರಮವನ್ನು ನಡೆಸುತ್ತದೆ.

16 ಯೆಹೋವನ ಬಲಗೈ ಉನ್ನತವಾಗಿದೆ; ಯೆಹೋವನ ಬಲಗೈ ಪರಾಕ್ರಮವನ್ನು ನಡೆಸುತ್ತದೆ.

17 ನಾನು ಸಾಯುವುದಿಲ್ಲ; ಜೀವದಿಂದಿದ್ದು ಯೆಹೋವನ ಕ್ರಿಯೆಗಳನ್ನು ಸಾರುವೆನು.

ಕೀರ್ತನೆಗಳು ಅಧ್ಯಾಯ 118

18 ಯೆಹೋವನು ನನ್ನನ್ನು ಕಠಿಣವಾಗಿ ಶಿಕ್ಷಿಸಿದನು; ಆದರೆ ಮರಣಕ್ಕೆ ಒಪ್ಪಿಸಲಿಲ್ಲ.

19 ನೀತಿದ್ವಾರಗಳನ್ನು ನೀತಿದ್ವಾರಗಳನ್ನು ಅಥವಾ ದೇವಜನರು ಪ್ರವೇಶಿಸುವಂಥ ದ್ವಾರವನ್ನು ಅಥವಾ ದೇವಾಲಯದ ದ್ವಾರವನ್ನು ತೆರೆಯಿರಿ. ತೆರೆಯಿರಿ; ನಾನು ಒಳಗೆ ಪ್ರವೇಶಿಸಿ ಯೆಹೋವನನ್ನು ಕೊಂಡಾಡುವೆನು.

20 ಇದು ಯೆಹೋವನ ಮಂದಿರದ್ವಾರವು; ಇದರೊಳಗೆ ಪ್ರವೇಶಿಸತಕ್ಕವರು ನೀತಿವಂತರೇ.

ಕೀರ್ತನೆಗಳು ಅಧ್ಯಾಯ 118

21 ನನಗೆ ಸದುತ್ತರವನ್ನು ದಯಪಾಲಿಸಿ ರಕ್ಷಿಸಿದಾತನೇ, ನಿನ್ನನ್ನು ಕೊಂಡಾಡುತ್ತೇನೆ.

22 ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ, ಮುಖ್ಯವಾದ ಮೂಲೆಗಲ್ಲಾಯಿತು;

23 ಇದು ಯೆಹೋವನಿಂದಲೇ ಆಯಿತು; ನಮಗೆ ಆಶ್ಚರ್ಯವಾಗಿ ತೋರುತ್ತದೆ.

24 ಈ ದಿನವು ಯೆಹೋವನಿಂದಲೇ ನೇಮಕವಾದದ್ದು; ಇದರಲ್ಲಿ ನಾವು ಉಲ್ಲಾಸದಿಂದ ಆನಂದಿಸೋಣ.

ಕೀರ್ತನೆಗಳು ಅಧ್ಯಾಯ 118

25 ಯೆಹೋವನೇ, ದಯವಿಟ್ಟು ರಕ್ಷಿಸು; ಯೆಹೋವನೇ, ದಯವಿಟ್ಟು ಸಾಫಲ್ಯಕೊಡು.

26 ಯೆಹೋವನ ಹೆಸರಿನಲ್ಲಿ ಒಳಗೆ ಬರುವವನಿಗೆ ಆಶೀರ್ವಾದ; ಯೆಹೋವನ ಮಂದಿರದಲ್ಲಿರುವ ನಾವು ನಿಮ್ಮನ್ನು ಆಶೀರ್ವದಿಸುತ್ತೇವೆ.

27 ಯೆಹೋವನೇ ದೇವರು; ಆತನು ನಮಗೆ ಪ್ರಕಾಶವನ್ನು ಅನುಗ್ರಹಿಸಿದ್ದಾನೆ. ರೆಂಬೆಗಳನ್ನು ಹಿಡಿದುಕೊಂಡು ಮೆರವಣಿಗೆಯಾಗಿ ಯಜ್ಞವೇದಿಯ ಕೊಂಬುಗಳ ಸಮೀಪಕ್ಕೆ ಬನ್ನಿರಿ.

ಕೀರ್ತನೆಗಳು ಅಧ್ಯಾಯ 118

28 ನೀನು ನನ್ನ ದೇವರು; ನಿನ್ನನ್ನು ಕೊಂಡಾಡುತ್ತೇನೆ; ನನ್ನ ದೇವರೇ, ನಿನ್ನನ್ನು ಘನಪಡಿಸುತ್ತೇನೆ.

29 ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾದದ್ದು.