Kannada ಬೈಬಲ್

ಕೀರ್ತನೆಗಳು ಒಟ್ಟು 150 ಅಧ್ಯಾಯಗಳು

ಕೀರ್ತನೆಗಳು

ಕೀರ್ತನೆಗಳು ಅಧ್ಯಾಯ 138
ಕೀರ್ತನೆಗಳು ಅಧ್ಯಾಯ 138

ರಕ್ಷಣಾ ಕರ್ತನ ಸ್ತುತಿ 3 *ದಾವೀದನ ಕೀರ್ತನೆ.
ಕೀರ್ತ 102:13-23 *
ಯೆಹೋವನೇ, ಪೂರ್ಣಮನಸ್ಸಿನಿಂದ ನಿನ್ನನ್ನು ಕೊಂಡಾಡುವೆನು; ದೇವರುಗಳ ಎದುರಿನಲ್ಲಿ ನಿನ್ನನ್ನು ಕೀರ್ತಿಸುವೆನು.

2 ನಿನ್ನ ಪರಿಶುದ್ಧ ಆಲಯದ ಕಡೆಗೆ ಅಡ್ಡಬೀಳುತ್ತೇನೆ; ನಿನ್ನ ಕೃಪೆ, ಸತ್ಯತೆ ಇವುಗಳಿಗೋಸ್ಕರ ನಿನ್ನ ನಾಮವನ್ನು ಕೊಂಡಾಡುತ್ತೇನೆ. * ಅಥವಾ ನಿನ್ನ ವಾಕ್ಯವನ್ನು ನಿನ್ನ ಎಲ್ಲಾ ನಾಮಕ್ಕಿಂತಲೂ ಮಿಗಿಲಾಗಿ ಘನಪಡಿಸಿದ್ದೀ. ನಿನ್ನ ನಾಮದ ಮತ್ತು ಆಜ್ಞೆಯ ಘನಪಡಿಸಿ ತೋರಿಸಿದ್ದೀ.

ಕೀರ್ತನೆಗಳು ಅಧ್ಯಾಯ 138

3 ನಾನು ಮೊರೆಯಿಟ್ಟಾಗ ಸದುತ್ತರವನ್ನು ದಯಪಾಲಿಸಿದಿ; ನನ್ನ ಆತ್ಮಕ್ಕೆ ಬಲಕೊಟ್ಟು ನನ್ನನ್ನು ಧೈರ್ಯಪಡಿಸಿದ್ದೀ.

4 ಯೆಹೋವನೇ, ಭೂರಾಜರೆಲ್ಲರು ನೀನು ನುಡಿದ ನುಡಿಗಳನ್ನು ಕೇಳಿ ನಿನ್ನನ್ನು ಸ್ತುತಿಸುವರು.

5 ಅವರು ಯೆಹೋವನ ಮಾರ್ಗಗಳನ್ನು ಹಾಡಿಹರಸುವರು; ಯೆಹೋವನ ಪ್ರಭಾವವು ದೊಡ್ಡದಾಗಿದೆಯಲ್ಲಾ.

ಕೀರ್ತನೆಗಳು ಅಧ್ಯಾಯ 138

6 ಯೆಹೋವನು ಮಹೋನ್ನತನು; ಆದರೂ ದೀನರನ್ನು ಲಕ್ಷಿಸುತ್ತಾನೆ; ಗರ್ವಿಷ್ಠರನ್ನು ದೂರದಿಂದಲೇ ಗುರುತು ಹಿಡಿಯುತ್ತಾನೆ.

7 ನಾನು ಇಕ್ಕಟ್ಟಿನ ದಾರಿಯಲ್ಲಿ ನಡೆಯುವಾಗ, ಅಥವಾ ನನ್ನನ್ನು ಕಾಪಾಡುವಿ. ನನ್ನನ್ನು ಚೈತನ್ಯಗೊಳ್ಳಿಸುವಿ, ನನ್ನ ಶತ್ರುಗಳ ಕೋಪಕ್ಕೆ ವಿರುದ್ಧವಾಗಿ ನಿನ್ನ ಕೈ ಚಾಚುವಿ, ನಿನ್ನ ಬಲಗೈ ನನ್ನನ್ನು ರಕ್ಷಿಸುವುದು.

ಕೀರ್ತನೆಗಳು ಅಧ್ಯಾಯ 138

8 ಯೆಹೋವನು ನನ್ನ ಕಾರ್ಯವನ್ನು ಸಿದ್ಧಿಗೆ ತರುವನು. ಯೆಹೋವನೇ, ನಿನ್ನ ಪ್ರೀತಿಯು ಶಾಶ್ವತವಾದದ್ದು, ನೀನು ಕೈಹಾಕಿದ ಕೆಲಸವನ್ನು ನೆರವೇರಿಸದೆ ಬಿಡಬೇಡ.