Kannada ಬೈಬಲ್
ಕೀರ್ತನೆಗಳು ಒಟ್ಟು 150 ಅಧ್ಯಾಯಗಳು
ಕೀರ್ತನೆಗಳು
ಕೀರ್ತನೆಗಳು ಅಧ್ಯಾಯ 24
ಕೀರ್ತನೆಗಳು ಅಧ್ಯಾಯ 24
ಯೆಹೋವನ ಸನ್ನಿಧಿಯಲ್ಲಿ ಸೇರತಕ್ಕವರು 3 ದಾವೀದನ ಕೀರ್ತನೆ. ಭೂಮಿಯೂ ಅದರಲ್ಲಿರುವ ಸಮಸ್ತವೂ ಯೆಹೋವನದು; ಲೋಕವೂ ಮತ್ತು ಅದರ ನಿವಾಸಿಗಳೂ ಆತನವೇ.
2 ಆತನೇ ಅದರ ಅಸ್ತಿವಾರವನ್ನು ಸಾಗರದ ಮೇಲೆ ಹಾಕಿದವನು; ಅದನ್ನು ಜಲರಾಶಿಗಳ ಮೇಲೆ ಸ್ಥಿರಪಡಿಸಿದವನು ಆತನೇ.
3 ಯೆಹೋವನ ಪರ್ವತವನ್ನು* ಪರ್ವತವನ್ನು ಇದು ದೇವಾಲಯವನ್ನು ಕಟ್ಟಿದ ಪರ್ವತವಾಗಿದೆ. ಚೀಯೋನ್ ಪರ್ವತಾರೋಹಣವನ್ನು ಮಾಡುವ ಮತ್ತು ದೇವಾಲಯವನ್ನು ಪ್ರವೇಶಿಸುವ ಉದ್ದೇಶವೇನೆಂದರೆ ಯೆಹೋವನನ್ನು ಆರಾಧಿಸಲು ಹೋಗುವುದಾಗಿದೆ. ಹತ್ತತಕ್ಕವನು ಯಾರು? ಆತನ ಪವಿತ್ರಸ್ಥಾನದಲ್ಲಿ † ಅಥವಾ ನಿಲ್ಲುವುದಕ್ಕೆ. ಪ್ರವೇಶಿಸುವುದಕ್ಕೆ ಎಂಥವನು ಯೋಗ್ಯನು?
ಕೀರ್ತನೆಗಳು ಅಧ್ಯಾಯ 24
4 ಯಾರು ಅಯೋಗ್ಯಕಾರ್ಯಗಳಲ್ಲಿ ಮನಸ್ಸಿಡದೆ, ಮೋಸ ಪ್ರಮಾಣಮಾಡದೆ, ಶುದ್ಧಹಸ್ತವೂ, ನಿರ್ಮಲಮನಸ್ಸೂ ಉಳ್ಳವನಾಗಿದ್ದಾನೋ,
5 ಅವನೇ ಯೆಹೋವನಿಂದ ಶುಭವನ್ನು ಹೊಂದುವನು; ತನ್ನ ರಕ್ಷಕನಾದ ದೇವರಿಂದ ನೀತಿಫಲವನ್ನು ಪಡೆಯುವನು.
6 ಇಂಥವರೇ ಆತನ ದರ್ಶನವನ್ನು ಬಯಸುವವರು. ಯಾಕೋಬ್ಯರ ದೇವರೇ, ನಿನ್ನ ಸಾನ್ನಿಧ್ಯವನ್ನು ಸೇರುವವರು ಇಂಥವರೇ. QSS ಸೆಲಾ SE
ಕೀರ್ತನೆಗಳು ಅಧ್ಯಾಯ 24
7 ದ್ವಾರಗಳೇ, ಉನ್ನತವಾಗಿರ್ರಿ! ಪುರಾತನವಾದ ಕದಗಳೇ ತೆರೆದುಕೊಂಡಿರ್ರಿ! ಮಹಾಮಹಿಮೆಯುಳ್ಳ ಅರಸನು ಆಗಮಿಸುತ್ತಾನೆ.
8 ಮಹಾಮಹಿಮೆಯುಳ್ಳ ಈ ಅರಸನು ಯಾರು? ಮಹಾ ಬಲಿಷ್ಠನೂ, ವಿಶೇಷ ಪರಾಕ್ರಮಿಯೂ ಆಗಿರುವ ಯೆಹೋವ, ಯುದ್ಧವೀರನಾಗಿರುವ ಯೆಹೋವ.
9 ದ್ವಾರಗಳೇ, ಉನ್ನತವಾಗಿರ್ರಿ! ಪುರಾತನವಾದ ಕದಗಳೇ, ತೆರೆದುಕೊಂಡಿರ್ರಿ! ಮಹಾಮಹಿಮೆಯುಳ್ಳ ಅರಸನು ಆಗಮಿಸುತ್ತಾನೆ.
ಕೀರ್ತನೆಗಳು ಅಧ್ಯಾಯ 24
10 ಮಹಾಮಹಿಮೆಯುಳ್ಳ ಈ ಅರಸನು ಯಾರು? ಸೇನಾಧೀಶ್ವರನಾದ ಯೆಹೋವನೇ, ಮಹಾಮಹಿಮೆಯುಳ್ಳ ಅರಸನು ಈತನೇ. QSS ಸೆಲಾ. SE