Kannada ಬೈಬಲ್

ಕೀರ್ತನೆಗಳು ಒಟ್ಟು 150 ಅಧ್ಯಾಯಗಳು

ಕೀರ್ತನೆಗಳು

ಕೀರ್ತನೆಗಳು ಅಧ್ಯಾಯ 28
ಕೀರ್ತನೆಗಳು ಅಧ್ಯಾಯ 28

ಭಕ್ತನ ಸ್ತುತಿ 1 ದಾವೀದನ ಕೀರ್ತನೆ. ಯೆಹೋವನೇ, ನನ್ನ ಶರಣನೇ, ನಿನಗೆ ಮೊರೆಯಿಡುತ್ತೇನೆ; ಕೇಳದೆ ಇರಬೇಡ. ನೀನು ಕಿವಿಗೊಡದೆ ಹೋದರೆ ನಾನು ಸತ್ತವರಿಗೆ ಸಮಾನನಾಗುವೆನಲ್ಲವೇ.

2 ನೀನು ವಾಸಿಸುವ ಮಹಾಪರಿಶುದ್ಧಸ್ಥಾನದ ಕಡೆಗೆ ನಾನು ಕೈಯೆತ್ತಿ ಮೊರೆಯಿಡುತ್ತೇನಲ್ಲಾ; ನನ್ನ ವಿಜ್ಞಾಪನೆಯನ್ನು ಲಾಲಿಸು.

ಕೀರ್ತನೆಗಳು ಅಧ್ಯಾಯ 28

3 ನೀನು ದುಷ್ಟರೊಡನೆಯೂ, ದುರ್ಜನಗಳ ಸಂಗಡಲೂ ನನ್ನನ್ನೂ ಎಳೆದುಕೊಂಡು ಹೋಗಬೇಡ. ಅವರು ಹೊರಗೆ ಒಳ್ಳೆಯದಾಗಲಿ ಎಂದು ಹೇಳಿದರೂ, ಒಳಗೆ ಕೇಡಾಗಲಿ ಎಂದು ಯೋಚಿಸುವವರು.

4 ಅವರ ದುಷ್ಕೃತ್ಯಗಳಿಗೂ, ಕೆಡುಕಗಳಿಗೂ ಸರಿಯಾದ ಪ್ರತಿಫಲವನ್ನು ಅವರಿಗೆ ಕೊಡು; ಅವರು ಮತ್ತೊಬ್ಬರಿಗೆ ಮಾಡಿದಂತೆಯೇ ಅವರಿಗೆ ಮಾಡು.

5 ಅವರು ಯೆಹೋವನ ಕಾರ್ಯಗಳನ್ನೂ ಮತ್ತು ಆತನ ಕೈಕೆಲಸಗಳನ್ನೂ ವಿವೇಚಿಸಿ ತಿಳಿದುಕೊಳ್ಳದೆ ಹೋದರು; ಆದುದರಿಂದ ಆತನು ಅವರನ್ನು ಹಾಳುಮಾಡುವನೇ ಹೊರತು ವೃದ್ಧಿಪಡಿಸುವುದಿಲ್ಲ.

ಕೀರ್ತನೆಗಳು ಅಧ್ಯಾಯ 28

6 ಯೆಹೋವನು ನನ್ನ ವಿಜ್ಞಾಪನೆಗಳನ್ನು ಕೇಳಿದ್ದಾನೆ; ಆತನಿಗೆ ಸ್ತೋತ್ರವಾಗಲಿ.

7 ಯೆಹೋವನು ನನಗೆ ಬಲವೂ, ಗುರಾಣಿಯೂ ಆಗಿದ್ದಾನೆ; ನಾನು ಆತನಲ್ಲಿ ಭರವಸವಿಟ್ಟೆನು, ನನಗೆ ಸಹಾಯವು ಉಂಟಾಯಿತು. ಆದಕಾರಣ ನನ್ನ ಹೃದಯವು ಹರ್ಷಿಸುವುದು; ಕೀರ್ತನಾರೂಪವಾಗಿ ಆತನನ್ನು ಸ್ತುತಿಸುವೆನು.

8 ಯೆಹೋವನು ತನ್ನ ಜನರಿಗೆ ಬಲವೂ, ತಾನು ಅಭಿಷೇಕಿಸಿದವನಿಗೆ ಆಶ್ರಯದುರ್ಗವೂ ಆಗಿದ್ದಾನೆ.

ಕೀರ್ತನೆಗಳು ಅಧ್ಯಾಯ 28

9 ಯೆಹೋವನೇ, ನಿನ್ನ ಜನರನ್ನು ರಕ್ಷಿಸು; ನಿನ್ನ ಸ್ವಕೀಯ ಪ್ರಜೆಯನ್ನು ಆಶೀರ್ವದಿಸು. ನೀನು ಅವರ ಕುರುಬನಾಗಿರು; ಅವರನ್ನು ಯಾವಾಗಲೂ ಪರಿಪಾಲಿಸುತ್ತಾ ಆಧಾರವಾಗಿರು.