Kannada ಬೈಬಲ್
ಕೀರ್ತನೆಗಳು ಒಟ್ಟು 150 ಅಧ್ಯಾಯಗಳು
ಕೀರ್ತನೆಗಳು
ಕೀರ್ತನೆಗಳು ಅಧ್ಯಾಯ 3
ಕೀರ್ತನೆಗಳು ಅಧ್ಯಾಯ 3
ಶತ್ರುಬಾಧಿತನಾದ ದೈವಭಕ್ತನ ಉದಯಗೀತೆ 3 ದಾವೀದನು ತನ್ನ ಮಗನಾದ ಅಬ್ಷಾಲೋಮನಿಂದ ಓಡಿಹೋದಾಗ ರಚಿಸಿದ ಕೀರ್ತನೆ. ಯೆಹೋವನೇ, ನನ್ನ ವಿರೋಧಿಗಳು ಎಷ್ಟೋ ಹೆಚ್ಚಾಗಿದ್ದಾರೆ; ನನಗೆ ವೈರಿಗಳಾಗಿ ನಿಂತ ಜನರು ಅತ್ಯಧಿಕವಾಗಿದ್ದಾರೆ.
2 ಅನೇಕರು ನನ್ನ ವಿಷಯದಲ್ಲಿ, “ಅವನಿಗೆ ದೇವರಿಂದ * ಅಥವಾ ರಕ್ಷಣೆಯುಂಟಾಗುವುದಿಲ್ಲ. ಸಹಾಯವು ಆಗುವುದೇ ಇಲ್ಲ” ಎಂದು ಹೇಳಿಕೊಳ್ಳುತ್ತಾರೆ. QSS ಸೆಲಾ SE
ಕೀರ್ತನೆಗಳು ಅಧ್ಯಾಯ 3
3 ಆದರೂ ಯೆಹೋವನೇ, ನೀನು ನನ್ನನ್ನು ಕಾಯುವ ಗುರಾಣಿಯೂ; ನೀನು ನನ್ನ ಗೌರವಕ್ಕೆ ಆಧಾರನೂ, ನನ್ನ ತಲೆಯನ್ನು ಎತ್ತುವಂತೆ ಮಾಡುವವನೂ ಆಗಿದ್ದೀ.
4 ನಾನು ಸ್ವರವೆತ್ತಿ ಯೆಹೋವನಿಗೆ ಮೊರೆಯಿಡುವಾಗ, ಆತನು ತನ್ನ ಪರಿಶುದ್ಧ ಪರ್ವತದಿಂದ ಸದುತ್ತರವನ್ನು ಅನುಗ್ರಹಿಸುತ್ತಾನೆ. QSS ಸೆಲಾ. SE
ಕೀರ್ತನೆಗಳು ಅಧ್ಯಾಯ 3
5 ಯೆಹೋವನು ನನ್ನನ್ನು ಕಾಪಾಡುವವನು, ಆದುದರಿಂದ ನಾನು ಮಲಗಿಕೊಂಡು ನಿದ್ದೆಮಾಡಿ ಸುಖವಾಗಿ ಎಚ್ಚರಗೊಂಡೆನು.
6 ನನ್ನ ಸುತ್ತಲು ಸನ್ನದ್ಧರಾಗಿ ನಿಂತಿರುವ ಸಾವಿರಾರು ವೈರಿಗಳಿಗಾದರೂ ನಾನು ಹೆದರೆನು.
7 ಯೆಹೋವನೇ, ನನ್ನ ದೇವರೇ, ನನ್ನ ಎಲ್ಲಾ ಶತ್ರುಗಳ ದವಡೆಯನ್ನು ಬಡಿದು ಅವರ ಹಲ್ಲುಗಳನ್ನು ಉದುರಿಸಿಬಿಟ್ಟವನೇ, ಎದ್ದು ಬಂದು ನನ್ನನ್ನು ರಕ್ಷಿಸು.
ಕೀರ್ತನೆಗಳು ಅಧ್ಯಾಯ 3
8 † ಅಥವಾ ರಕ್ಷಣೆಯು. ಜಯವು ಯೆಹೋವನಿಂದಲೇ ಉಂಟಾಗುವುದು. ಯೆಹೋವನೇ, ನಿನ್ನ ಆಶೀರ್ವಾದವು ನಿನ್ನ ಜನರ ಮೇಲೆ ಇರಲಿ. QSS ಸೆಲಾ. SE