Kannada ಬೈಬಲ್

ಕೀರ್ತನೆಗಳು ಒಟ್ಟು 150 ಅಧ್ಯಾಯಗಳು

ಕೀರ್ತನೆಗಳು

ಕೀರ್ತನೆಗಳು ಅಧ್ಯಾಯ 64
ಕೀರ್ತನೆಗಳು ಅಧ್ಯಾಯ 64

ಸಂರಕ್ಷಣೆಗಾಗಿ ಪ್ರಾರ್ಥನೆ 3 *ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. *ದೇವರೇ, ನನ್ನ ಸ್ವರವನ್ನು ಕೇಳಿ, ಶತ್ರುಭಯದಿಂದ ನನ್ನ ಜೀವವನ್ನು ರಕ್ಷಿಸು.

2 ದುಷ್ಟರ ಒಳಸಂಚಿಗೂ, ಕೆಡುಕರ ಗುಪ್ತ ಆಲೋಚನೆಗೂ ಸಿಕ್ಕದಂತೆ, ನನ್ನನ್ನು ತಪ್ಪಿಸಿ ಭದ್ರಪಡಿಸು.

ಕೀರ್ತನೆಗಳು ಅಧ್ಯಾಯ 64

3 ಅವರು ನಾಲಿಗೆಯೆಂಬ ಕತ್ತಿಯನ್ನು ಮಸೆದಿದ್ದಾರೆ; ವಿಷವಚನವೆಂಬ ಬಾಣವನ್ನು ಹೂಡಿದ್ದಾರೆ.

4 ಗುಪ್ತಸ್ಥಳಗಳಲ್ಲಿದ್ದು ಸಜ್ಜನನಿಗೆ ಗುರಿಯಿಟ್ಟಿದ್ದಾರೆ. ಸ್ವಲ್ಪವೂ ಹೆದರದೆ ಅವನ ಮೇಲೆ ಫಕ್ಕನೆ ಎಸೆಯುತ್ತಾರೆ.

5 ದುಷ್ಕೃತ್ಯಕ್ಕಾಗಿ ಮನಸ್ಸನ್ನು ದೃಢಪಡಿಸಿಕೊಂಡು ತಮ್ಮೊಳಗೆ, “ರಹಸ್ಯವಾಗಿ ಬಲೆಗಳನ್ನು ಒಡ್ಡೋಣ; ನಮ್ಮನ್ನು* ನಮ್ಮನ್ನು ಅಥವಾ ಅವರನ್ನು. ನೋಡುವವರು ಯಾರು?” ಅಂದುಕೊಳ್ಳುತ್ತಾರೆ.

ಕೀರ್ತನೆಗಳು ಅಧ್ಯಾಯ 64

6 ಅವರು, “ಕೇಡನ್ನು ಕಲ್ಪಿಸಿ, ಒಳ್ಳೆಯ ಉಪಾಯವನ್ನು ಕಂಡುಕೊಂಡಿದ್ದೇವೆ” ಅಂದುಕೊಳ್ಳುತ್ತಾರೆ; ಅವರ ಹೃದಯವೂ, ಅಂತರಂಗದ ಆಲೋಚನೆಯೂ ಅಶೋಧ್ಯವಾಗಿವೆ.

7 ಆದರೆ ದೇವರು ಬಾಣವನ್ನು ಎಸೆಯಲು, ಫಕ್ಕನೆ ಅವರಿಗೆ ಗಾಯವಾಗುವುದು.

8 ಅವರ ನಾಲಿಗೆಗಳೇ ಅವರಿಗೆ ವಿಘ್ನವಾಗಿ ಅವರು ಎಡವಿಬೀಳುವರು; ಆಗ ನೋಡುವವರೆಲ್ಲರು ತಲೆ ಅಲ್ಲಾಡಿಸಿ ಅಣಕಿಸುವರು.

ಕೀರ್ತನೆಗಳು ಅಧ್ಯಾಯ 64

9 ಎಲ್ಲಾ ಮನುಷ್ಯರು ಭಯಪಟ್ಟು ದೇವರ ಕೆಲಸವೆಂದು ಹೇಳಿ, ಆತನ ಕೃತ್ಯಗಳನ್ನು ಆಲೋಚಿಸಿಕೊಳ್ಳುವರು.

10 ಸದ್ಭಕ್ತರು ಯೆಹೋವನಲ್ಲಿ ಆನಂದಪಟ್ಟು ಆತನನ್ನೇ ಆಶ್ರಯಿಸಿಕೊಳ್ಳುವರು; ಸರಳಹೃದಯದವರೆಲ್ಲರೂ ಹಿಗ್ಗುವರು.