Kannada ಬೈಬಲ್
ಕೀರ್ತನೆಗಳು ಒಟ್ಟು 150 ಅಧ್ಯಾಯಗಳು
ಕೀರ್ತನೆಗಳು
ಕೀರ್ತನೆಗಳು ಅಧ್ಯಾಯ 87
ಕೀರ್ತನೆಗಳು ಅಧ್ಯಾಯ 87
ಚೀಯೋನೇ ಎಲ್ಲಾ ದೇವಜನರ ಮಾತೃಭೂಮಿ 3 *ಕೋರಹೀಯರ ಕೀರ್ತನೆ; ಗೀತೆ.
ಯೆಶಾ 2:2-4; 19:19-24 *ಯೆಹೋವನು ಸ್ಥಾಪಿಸಿದ ಪಟ್ಟಣವು ಪರಿಶುದ್ಧ ಪರ್ವತದ ಮೇಲಿದೆ.
2 ಆತನು ಯಾಕೋಬ್ ವಂಶದವರ ಎಲ್ಲಾ ನಿವಾಸಗಳಿಗಿಂತ, ಚೀಯೋನಿನ ದ್ವಾರಗಳನ್ನು ಹೆಚ್ಚಾಗಿ ಪ್ರೀತಿಸುತ್ತಾನೆ.
3 ದೇವನಗರವೇ, ನಿನ್ನ ವಿಷಯವಾದ ಗೌರವೋಕ್ತಿಯೇನೆಂದರೆ,
ಕೀರ್ತನೆಗಳು ಅಧ್ಯಾಯ 87
4 “ರಹಬ* ರಹಬ ಅಥವಾ ಐಗುಪ್ತ. , ಬಾಬೆಲ್ ದೇಶಗಳವರನ್ನು, ನನ್ನನ್ನು ಬಲ್ಲವರಲ್ಲಿ ಎಣಿಸುವೆನು. ಇಗೋ ಫಿಲಿಷ್ಟಿಯ, ತೂರ್, ಕೂಷ್, ಜನಾಂಗಗಳು ಅಲ್ಲೇ ಹುಟ್ಟಿದವು” ಎಂಬುದೇ.
5 ಇದರಿಂದ ಚೀಯೋನೇ ಪ್ರತಿಯೊಂದು ಜನಾಂಗದ ಜನ್ಮನಗರವೆಂದು ಹೇಳಲ್ಪಡುವುದು; ಅದನ್ನು ಪರಾತ್ಪರನಾದ ದೇವರು ತಾನೇ ಸ್ಥಿರಪಡಿಸುವನು.
ಕೀರ್ತನೆಗಳು ಅಧ್ಯಾಯ 87
6 ಯೆಹೋವನು ಜನಾಂಗಗಳ ಪಟ್ಟಿಯನ್ನು ಮಾಡುವಾಗ, “ಪ್ರತಿಯೊಂದರ ವಿಷಯ ಇದು ಅಲ್ಲಿಯೇ ಹುಟ್ಟಿದ್ದು” ಎಂದು ಬರೆಯುವನು. QSS ಸೆಲಾ SE
7 ಇವರು ಹಾಡುತ್ತಾ, ಕುಣಿಯುತ್ತಾ, “ನನ್ನ ಜೀವಜಲದ ಒರತೆಗಳೆಲ್ಲಾ ನಿನ್ನಲ್ಲಿಯೇ ಇವೆ” ಎಂದು ಹೇಳುವರು.