Kannada ಬೈಬಲ್
ಪ್ರಕಟನೆ ಒಟ್ಟು 22 ಅಧ್ಯಾಯಗಳು
ಪ್ರಕಟನೆ ಅಧ್ಯಾಯ 5
ಸುರುಳಿಯೂ ಕುರಿಮರಿಯೂ 1 ನಾನು* ಯೆಹೆ. 2:9, 10: ಸಿಂಹಾಸನದ ಮೇಲೆ ಕುಳಿತಿದ್ದಾತನ ಬಲಗೈಯಲ್ಲಿ ಒಂದು † ಪುಸ್ತಕ ಸುರುಳಿಯನ್ನು ಕಂಡೆನು. ಅದರ ಒಳಭಾಗದಲ್ಲಿಯೂ ಮತ್ತು ಹೊರಭಾಗದಲ್ಲಿಯೂ ಬರೆಯಲ್ಪಟ್ಟಿತ್ತು. ‡ ಯೆಶಾ 29:11; ದಾನಿ. 12:4: ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು.
2 ಇದಲ್ಲದೆ § ಪ್ರಕ 10:1; 18:21: ಬಲಿಷ್ಠನಾದ ಒಬ್ಬ ದೇವದೂತನು “ಈ ಸುರುಳಿಯನ್ನು ಬಿಚ್ಚುವುದಕ್ಕೂ ಇದರ ಮುದ್ರೆಗಳನ್ನು ಒಡೆಯುವುದಕ್ಕೂ ಯಾವನು ಯೋಗ್ಯನು?” ಎಂದು ಮಹಾಶಬ್ದದಿಂದ ಕೂಗುವುದನ್ನು ಕಂಡೆನು.
ಪ್ರಕಟನೆ ಅಧ್ಯಾಯ 5
3 ಆದರೆ ಆ ಸುರುಳಿಯನ್ನು ತೆರೆಯುವುದಕ್ಕಾದರೂ ಅದರೊಳಗೆ ನೋಡುವುದಕ್ಕಾದರೂ ಪರಲೋಕದಲ್ಲಿಯಾಗಲಿ, ಭೂಮಿಯಲ್ಲಿಯಾಗಲಿ, ಭೂಮಿಯ ಕೆಳಗಾಗಲಿ ಯಾರಿಂದಲೂ ಆಗಲಿಲ್ಲ.
4 ಸುರುಳಿಯನ್ನು ತೆರೆಯುವುದಕ್ಕಾಗಲಿ ಅದನ್ನು ನೋಡುವುದಕ್ಕಾಗಲಿ ಯೋಗ್ಯನಾದವನು ಒಬ್ಬನೂ ಸಿಕ್ಕಲಿಲ್ಲವೆಂದು ನಾನು ಬಹಳವಾಗಿ ದುಃಖಿಸುತ್ತಿರುವಾಗ.
5 ಹಿರಿಯರಲ್ಲಿ ಒಬ್ಬನು ನನಗೆ, “ಅಳಬೇಡ ನೋಡು, * ಇಬ್ರಿ. 7:14: ಯೂದ ಕುಲದಲ್ಲಿ ಜನಿಸಿದ † ಅಥವಾ, ಸಿಂಹಪ್ರಾಯನೂ; ಆದಿ 49:9: ಸಿಂಹವೂ ‡ ಯೆಶಾ 11:1, 10; ರೋಮಾ. 15:12; ಪ್ರಕ 22:16: ದಾವೀದನ ವಂಶಜನೂ ಆಗಿರುವ ಒಬ್ಬನು, ಆ ಸುರುಳಿಯನ್ನು ಅದರ ಏಳು ಮುದ್ರೆಗಳನ್ನೂ ತೆರೆಯುವುದಕ್ಕೆ ಜಯವೀರನಾಗಿದ್ದಾನೆ” ಎಂದು ಹೇಳಿದನು.
ಪ್ರಕಟನೆ ಅಧ್ಯಾಯ 5
6 ಸಿಂಹಾಸನವು, ನಾಲ್ಕು ಜೀವಿಗಳೂ ಇದ್ದ ಸ್ಥಳಕ್ಕೂ ಮತ್ತು ಹಿರಿಯರು ಇದ್ದ ಸ್ಥಳಕ್ಕೂ ಮಧ್ಯದಲ್ಲಿ § ಎಲ್ಲಾ ಸ್ಥಳಗಳಲ್ಲಿಯೂ ಹಾಗೆಯೇ; ಯೆಶಾ 53:7; ಯೋಹಾ 1:29, 36; 1 ಪೇತ್ರ. 1: 19. ಪ್ರಕ 5:9, 12; 13:8: ಒಂದು ಕುರಿಮರಿಯು ವಧಿಸಲ್ಪಟಂತೆ ನಿಂತಿರುವುದನ್ನು ಕಂಡೆನು. ಅದಕ್ಕೆ ಏಳು ಕೊಂಬುಗಳೂ * ಜೆಕ. 3:9; 4:10: ಏಳು ಕಣ್ಣುಗಳೂ ಇದ್ದವು. ಅವು ಏನೆಂದರೆ ಭೂಮಿಯ ಮೇಲೆಲ್ಲಾ ಕಳುಹಿಸಲ್ಪಟ್ಟಿರುವ ದೇವರ ಏಳು ಆತ್ಮಗಳೇ.
ಪ್ರಕಟನೆ ಅಧ್ಯಾಯ 5
7 ಈತನು ಮುಂದೆ ಬಂದು ಸಿಂಹಾಸನದ ಮೇಲೆ ಕುಳಿತಿದ್ದಾತನ ಬಲಗೈಯೊಳಗಿಂದ ಆ ಸುರುಳಿಯನ್ನು ತೆಗೆದುಕೊಂಡನು.
8 ಅದನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಪಾದಕ್ಕೆ ಅಡ್ಡ † ಪ್ರಕ 4:10: ಬಿದ್ದರು. ಹಿರಿಯರ ಕೈಗಳಲ್ಲಿ ‡ ಪ್ರಕ 14:2; 15:2: ವೀಣೆಗಳೂ § ಕೀರ್ತ 141:2; ಪ್ರಕ 8:3, 4: ದೇವಜನರ ಪ್ರಾರ್ಥನೆಗಳೆಂಬ ಧೂಪದಿಂದ ತುಂಬಿದ್ದ * ಪ್ರಕ 15:7: ಚಿನ್ನದ ಧೂಪಾರತಿಗಳೂ ಇದ್ದವು.
ಪ್ರಕಟನೆ ಅಧ್ಯಾಯ 5
9 ಅವರು † ಕೀರ್ತ 40. 3; 96:1; ಯೆಶಾ 42:10; ಪ್ರಕ 14:3: ಹೊಸಹಾಡನ್ನು ಹಾಡುತ್ತಾ, “ನೀನು ಸುರುಳಿಯನ್ನು ಸ್ವೀಕರಿಸಲು ಅದರ ಮುದ್ರೆಯನ್ನು ಒಡೆಯಲು ನೀನು ಅರ್ಹನಾಗಿದ್ದಿ. ನೀನು ವಧಿಸಲ್ಪಟ್ಟು, ‡ ವ. 6: ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ § ಪ್ರಕ 7:9; 11:9; 14:6; ದಾನಿ. 3:4: ಸಕಲ ಕುಲ, ಭಾಷೆ, ಜನ, ಜನಾಂಗಗಳನ್ನು * ಪ್ರಕ 14:3, 4; 2 ಪೇತ್ರ. 2:1: ದೇವರಿಗಾಗಿ ಕೊಂಡುಕೊಂಡಿರುವೆ.
ಪ್ರಕಟನೆ ಅಧ್ಯಾಯ 5
10 ಅವರನ್ನು ನಮ್ಮ ದೇವರಿಗೋಸ್ಕರ ರಾಜ್ಯವನ್ನಾಗಿಯೂ, † ವಿಮೋ 19:6; ಪ್ರಕ 1:6: ಯಾಜಕರನ್ನಾಗಿಯೂ ಮಾಡಿರುವೆ. ಅವರು ಭೂಮಿಯನ್ನು ಆಳುವರು.”
11 ಇದಲ್ಲದೆ ನಾನು ನೋಡಲಾಗಿ ಸಿಂಹಾಸನದ, ಜೀವಿಗಳ ಹಾಗೂ ಹಿರಿಯರ ಸುತ್ತಲೂ ಬಹುಮಂದಿ ದೇವದೂತರ ಧ್ವನಿಯನ್ನು ಕೇಳಿದೆನು. ‡ ದಾನಿ. 7:19; ಇಬ್ರಿ. 12:22: ಅವರ ಸಂಖ್ಯೆಯು ಲಕ್ಷೋಪಲಕ್ಷವಾಗಿಯೂ ಕೋಟ್ಯಾನುಕೋಟಿಯಾಗಿಯೂ ಇತ್ತು.
ಪ್ರಕಟನೆ ಅಧ್ಯಾಯ 5
12 ಅವರು “ವಧಿಸಲ್ಪಟ್ಟ ಕುರಿಮರಿಯು § ಪ್ರಕ 4:11: ಬಲ, ಐಶ್ವರ್ಯ, ಜ್ಞಾನ, ಸಾಮರ್ಥ್ಯ, ಘನತೆ, ಮಹಿಮೆ ಸ್ತೋತ್ರಗಳನ್ನು ಹೊಂದುವುದಕ್ಕೆ ಯೋಗ್ಯನು” ಎಂದು ಮಹಾಧ್ವನಿಯಿಂದ ಹಾಡಿದರು.
13 ಇದಲ್ಲದೆ * ಕೀರ್ತ 145:21; 150. 6: ಆಕಾಶದಲ್ಲಿಯೂ, ಭೂಮಿಯ ಮೇಲೆಯೂ, ಭೂಮಿಯ ಕೆಳಗಡೆಯೂ, ಸಮುದ್ರದಲ್ಲಿಯೂ ಇರುವ ಎಲ್ಲಾ ಸೃಷ್ಟಿಗಳೂ ಅಂದರೆ ಭೂಮ್ಯಾಕಾಶ ಸಮುದ್ರಗಳೊಳಗೆ ಇರುವುದೆಲ್ಲವೂ, “ಸಿಂಹಾಸನದ ಮೇಲೆ ಕುಳಿತಿದ್ದಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರ, ಗೌರವ, ಮಹಿಮೆ, ಅಧಿಪತ್ಯಗಳು ಯುಗಯುಗಾಂತರಗಳಲ್ಲಿಯೂ ಇರಲಿ” ಎಂದು ಹೇಳುವುದನ್ನು ಕೇಳಿದೆನು.
ಪ್ರಕಟನೆ ಅಧ್ಯಾಯ 5
14 ಆಗ ನಾಲ್ಕು ಜೀವಿಗಳು † ಪ್ರಕ 7:12; 19:4: “ಆಮೆನ್” ಅಂದವು ಮತ್ತು ‡ ವ. 8; ಪ್ರಕ 4:10: ಹಿರಿಯರು ಅಡ್ಡಬಿದ್ದು ಆರಾಧಿಸಿದರು.