Kannada ಬೈಬಲ್

ರೋಮಾಪುರದವರಿಗೆ ಒಟ್ಟು 16 ಅಧ್ಯಾಯಗಳು

ರೋಮಾಪುರದವರಿಗೆ

ರೋಮಾಪುರದವರಿಗೆ ಅಧ್ಯಾಯ 7
ರೋಮಾಪುರದವರಿಗೆ ಅಧ್ಯಾಯ 7

ಕ್ರಿಸ್ತನಲ್ಲಿ ಐಕ್ಯವಾದವರು ಧರ್ಮಶಾಸ್ತ್ರದ ಅಧೀನರಲ್ಲ 1 ಸಹೋದರರೇ, ಧರ್ಮಶಾಸ್ತ್ರವನ್ನು ತಿಳಿದವರೊಂದಿಗೆ ನಾನು ಮಾತನಾಡುತ್ತಿದ್ದೇನೆ, ಒಬ್ಬ ಮನುಷ್ಯನು ಜೀವದಿಂದಿರುವವರೆಗೆ ಮಾತ್ರ ಅವನ ಮೇಲೆ ಧರ್ಮಶಾಸ್ತ್ರವು ನಿಯಂತ್ರಣ ಸಾಧಿಸುತ್ತದೆಂಬುದು ನಿಮಗೆ ಗೊತ್ತಿಲ್ಲವೇ?

2 ಇದಕ್ಕೆ ದೃಷ್ಟಾಂತ, * 1 ಕೊರಿ 7:39 ಗಂಡನು ಜೀವದಿಂದಿರುವ ತನಕ ಹೆಂಡತಿಯು ನ್ಯಾಯದ ಪ್ರಕಾರ ಅವನಿಗೆ ಬದ್ಧಳಾಗಿರುವಳು. ಗಂಡನು ಸತ್ತರೆ ಮದುವೆಯ ನಿಯಮದಿಂದ ಅವಳು ಬಿಡುಗಡೆಯಾಗುತ್ತಾಳೆ.

ರೋಮಾಪುರದವರಿಗೆ ಅಧ್ಯಾಯ 7

3 ಹೀಗಿರಲಾಗಿ ಗಂಡನು ಜೀವದಿಂದಿರುವಾಗ ಮತ್ತಾ 5:32 ಆಕೆ ಬೇರೊಬ್ಬನನ್ನು ಸೇರಿದರೆ ವ್ಯಭಿಚಾರಿಣಿ ಎನಿಸಿಕೊಳ್ಳುವಳು. ಆದರೆ ಗಂಡನು ಸತ್ತ ಮೇಲೆ ಆಕೆ ಆ ನಿಯಮದಿಂದ ಬಿಡುಗಡೆಯಾದ್ದರಿಂದ, ಆಕೆ ಮತ್ತೊಬ್ಬ ಗಂಡನನ್ನು ಮದುವೆ ಮಾಡಿಕೊಂಡರೂ ವ್ಯಭಿಚಾರಿಣಿ ಎಂದೆನಿಸಿಕೊಳ್ಳುವುದಿಲ್ಲ.

4 ಹಾಗೆಯೇ ನನ್ನ ಸಹೋದರರೇ, ನೀವು ಸಹ ಎಫೆ 2:16, ಕೊಲೊ 1:22 ಕ್ರಿಸ್ತನ ದೇಹದ ಮೂಲಕವಾಗಿ § ರೋಮಾ. 8:2, ಗಲಾ. 2:19, ಎಫೆ 2:15, ಕೊಲೊ 2:14 ಧರ್ಮಶಾಸ್ತ್ರದ ಪಾಲಿಗೆ ಸತ್ತಿದ್ದೀರಿ. * ರೋಮಾ. 6:22, ಗಲಾ. 5:22, ಎಫೆ 5:9 ದೇವರಿಗೆ ಫಲಕೊಡುವುದಕ್ಕಾಗಿ ಮತ್ತೊಬ್ಬನನ್ನು ಅಂದರೆ ಸತ್ತು ಜೀವಿತನಾಗಿ ಎದ್ದಾತನನ್ನು ಸೇರಿಕೊಂಡಿದ್ದೀರಿ.

ರೋಮಾಪುರದವರಿಗೆ ಅಧ್ಯಾಯ 7

5 ನಾವು ಶರೀರಾಧೀನ ಸ್ವಭಾವವನ್ನು ಅನುಸರಿಸುತ್ತಿದ್ದಾಗ ಧರ್ಮಶಾಸ್ತ್ರದಿಂದಲೇ ಪ್ರೇರಿತವಾದ ಪಾಪಾದಾಶೆಗಳು ನಮ್ಮ ಅಂಗಗಳಲ್ಲಿ ಸಕ್ರಿಯವಾಗಿ ರೋಮಾ. 6:21-23 ಮರಣಕ್ಕೆ ಫಲವನ್ನು ಹುಟ್ಟಿಸುತ್ತಿದ್ದವು.

6 ಈಗಲಾದರೋ ನಮ್ಮನ್ನು ಬಂಧಿಸಿಟ್ಟಿದ್ದ ಧರ್ಮಶಾಸ್ತ್ರದ ಪಾಲಿಗೆ ನಾವು ಸತ್ತವರಾದ ಕಾರಣ ಆ ಧರ್ಮಶಾಸ್ತ್ರದಿಂದ ಬಿಡುಗಡೆಹೊಂದಿದ್ದೇವೆ. ಹೀಗಿರಲಾಗಿ ಬರಹರೂಪದ ಹಿಂದಿನ ಶಾಸ್ತ್ರದ ರೀತಿಯಲ್ಲಿ ನಾವು ದೇವರಿಗೆ ಸೇವೆ ಸಲ್ಲಿಸದೆ, ಪವಿತ್ರಾತ್ಮ ಪ್ರೇರಿತವಾದ ರೋಮಾ. 6:4 ಹೊಸ ರೀತಿಯಲ್ಲಿ ಆತನ ಸೇವೆ ಮಾಡುವವರಾಗಿದ್ದೇವೆ.

ರೋಮಾಪುರದವರಿಗೆ ಅಧ್ಯಾಯ 7

ಪಾಪದಿಂದ ಬಿಡಿಸಲು ಧರ್ಮಶಾಸ್ತ್ರಕ್ಕೆ ಶಕ್ತಿ ಸಾಲದು. 7 ಹಾಗಾದರೆ ಏನು ಹೇಳೋಣ? ಧರ್ಮಶಾಸ್ತ್ರವು ಪಾಪಸ್ವರೂಪವೋ? ಎಂದಿಗೂ ಅಲ್ಲ. § ರೋಮಾ. 3:20 ಧರ್ಮಶಾಸ್ತ್ರವಿಲ್ಲದಿದ್ದರೆ ಪಾಪವೆಂದರೆ ಏನೆಂದು ನನಗೆ ಗೊತ್ತಾಗುತ್ತಿರಲಿಲ್ಲ. ದೃಷ್ಟಾಂತವಾಗಿ * ರೋಮಾ. 13:9, ವಿಮೋ 20:17, ಧರ್ಮೋ 5:21 “ದುರಾಶೆ ಪಾಪವೆಂದು” ಎಂದು ಧರ್ಮಶಾಸ್ತ್ರವು ಹೇಳದಿದ್ದರೆ ದುರಾಶೆಯಂದರೆ ಏನೆಂದು ನನಗೆ ತಿಳಿಯುತ್ತಿರಲಿಲ್ಲ.

ರೋಮಾಪುರದವರಿಗೆ ಅಧ್ಯಾಯ 7

8 ಆದರೆ ಪಾಪವು ಈ ಆಜ್ಞೆಯನ್ನು ಉಪಯೋಗಿಸಿಕೊಂಡು ಸಕಲ ವಿಧವಾದ ದುರಾಶೆಗಳನ್ನು ನನ್ನಲ್ಲಿ ಹುಟ್ಟಿಸಿತು. 1 ಕೊರಿ 15:56 ಧರ್ಮಶಾಸ್ತ್ರವು ಇಲ್ಲದಿರುವಾಗ ಪಾಪವು ಸತ್ತಂತೆ.

9 ಮೊದಲು ನಾನು ಧರ್ಮಶಾಸ್ತ್ರವಿಲ್ಲದವನಾಗಿದ್ದು ಜೀವದಿಂದಿದ್ದೆನು. ಆಜ್ಞೆಯು ಬಂದಾಗ ಪಾಪಕ್ಕೆ ಜೀವ ಬಂದಿತು. ನಾನು ಸತ್ತೆನು.

10 ಜೀವಿಸುವುದಕ್ಕಾಗಿ ಕೊಟ್ಟಿರುವ ಆಜ್ಞೆಯೇ ಮರಣಕ್ಕೆ ಕಾರಣವಾಯಿತೆಂದು ನನಗೆ ಕಂಡು ಬಂದಿತು.

ರೋಮಾಪುರದವರಿಗೆ ಅಧ್ಯಾಯ 7

11 ಹೇಗೆಂದರೆ, ಆಜ್ಞೆಯ ಮೂಲಕವೇ ಪಾಪವು ಸಮಯ ಸಾಧಿಸಿ ನನ್ನನ್ನು ವಂಚಿಸಿತು; ಆ ಕಟ್ಟಳೆಯ ಮೂಲಕವೇ ನನ್ನನ್ನು ಕೊಂದು ಹಾಕಿತು.

12 ಹೀಗಿರಲಾಗಿ ಕೀರ್ತ 19:8-9, 119:137, 2 ಪೇತ್ರ. 2:21 ಧರ್ಮಶಾಸ್ತ್ರವು ಪರಿಶುದ್ಧವಾದದ್ದು. ಮತ್ತು ಆಜ್ಞೆಯು ಪರಿಶುದ್ಧವೂ, ನ್ಯಾಯವೂ ಮತ್ತು ಒಳ್ಳೆಯದೇ ಆಗಿದೆ.

13 ಹಾಗಾದರೆ ಒಳ್ಳೆಯದೆ ನನಗೆ ಮರಣಕ್ಕೆ ಕಾರಣವಾಯಿತೋ? ಹಾಗೆ ಎಂದಿಗೂ ಅಲ್ಲ. ಪಾಪವೇ ಮರಣಕ್ಕೆ ಕಾರಣವಾದದ್ದು. ಅದು ಹಿತವಾದದರ ಮೂಲಕ ನನಗೆ ಮರಣವನ್ನು ಉಂಟುಮಾಡಿದ್ದರಿಂದ ಪಾಪವೇ ಎಂದು ಕಾಣಿಸಿಕೊಂಡಿತು. ಮತ್ತು ಆಜ್ಞೆಯ ಮೂಲಕ ಪಾಪವು ಕೇವಲ ಪಾಪಸ್ವರೂಪವೇ ಎಂದು ಸ್ಪಷ್ಟವಾಯಿತು.

ರೋಮಾಪುರದವರಿಗೆ ಅಧ್ಯಾಯ 7

14 ಧರ್ಮಶಾಸ್ತ್ರವು ಆತ್ಮೀಕವಾದದ್ದೆಂದು ನಾವು ಬಲ್ಲೆವು. ಆದರೆ ನಾನು ದೇಹಧರ್ಮಕ್ಕೆ ಒಳಗಾದವನೂ, ಪಾಪದ ಅಧೀನದಲ್ಲಿ ಗುಲಾಮನಾಗಿರುವುದಕ್ಕೆ § 1 ಅರಸು. 21:20,25; 2 ಅರಸು. 17:17, ಯೆಶಾ 50:1, 52:3 ಮಾರಲ್ಪಟ್ಟವನೂ ಆಗಿದ್ದೇನೆ.

15 ಹೇಗೆಂದರೆ ನಾನು ಮಾಡುವುದು ನನಗೇ ತಿಳಿಯುತ್ತಿಲ್ಲ, * ರೋಮಾ. 7:18-19 ಯಾವುದನ್ನು ಮಾಡಬೇಕೆಂದು ನಾನು ಇಚ್ಚಿಸುತ್ತೇನೋ ಅದನ್ನು ಮಾಡದೇ ಅದಕ್ಕೆ ವಿರುದ್ಧವಾದದ್ದನ್ನು ಮಾಡುತ್ತೇನೆ.

ರೋಮಾಪುರದವರಿಗೆ ಅಧ್ಯಾಯ 7

16 ಆದರೆ ನಾನು ಮಾಡುವಂಥದಕ್ಕೆ ನನ್ನ ಮನಸ್ಸು ಒಪ್ಪದಿದ್ದರೆ 1 ತಿಮೊ. 1:8, ರೋಮಾ. 7:12 ಧರ್ಮಶಾಸ್ತ್ರವು ಉತ್ತಮವಾದದ್ದೆಂದು ಒಪ್ಪಿಕೊಂಡ ಹಾಗಾಯಿತು.

17 ಹೀಗಿರಲಾಗಿ ರೋಮಾ. 7:20 ಆ ಅಸಹ್ಯವಾದದ್ದನ್ನು ಮಾಡುವವನು ಇನ್ನು ನಾನಲ್ಲ, ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡುತ್ತದೆ.

18 § ಆದಿ 6:5, 8:21, ಕೀರ್ತ 51:5, ಯೆರೆ 17:9 ನನ್ನಲ್ಲಿ ಅಂದರೆ ನನ್ನ ಶರೀರಾಧೀನಸ್ವಭಾವದಲ್ಲಿ ಒಳ್ಳೆಯದೇನೂ ವಾಸವಾಗಿಲ್ಲವೆಂದು ನನಗೆ ತಿಳಿದಿದೆ ಒಳ್ಳೆಯದನ್ನು ಮಾಡುವುದಕ್ಕೆ ನನಗೇನೋ ಮನಸ್ಸುಂಟು ಆದರೆ ಅದನ್ನು ಮಾಡುವುದಕ್ಕೆ ನನ್ನಿಂದಾಗದು.

ರೋಮಾಪುರದವರಿಗೆ ಅಧ್ಯಾಯ 7

19 * ರೋಮಾ. 7:15, ನಾನು ಮೆಚ್ಚುವ ಒಳ್ಳೆಯ ಕಾರ್ಯವನ್ನು ಮಾಡದೆ ಮೆಚ್ಚದಿರುವ ಕೆಟ್ಟ ಕಾರ್ಯವನ್ನೇ ಮಾಡುವವನಾಗಿದ್ದೇನೆ.

20 ಮಾಡಬಾರದೆನ್ನುವ ಕೆಲಸವನ್ನು ನಾನು ಮಾಡಿದರೆ ರೋಮಾ. 7:17 ಅದನ್ನು ಮಾಡಿದವನು ಇನ್ನು ನಾನಲ್ಲ ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡಿತು.

21 ಹೀಗಿರಲಾಗಿ ಯಾವುದು ಒಳ್ಳೆಯದೋ ಅದನ್ನು ಮಾಡಬೇಕೆಂದಿದ್ದೇನೆ ಆದರೆ ಕೆಟ್ಟದ್ದೇ ನನ್ನೊಳಗೆ ನೆಲೆಸಿದೆಯೆಂದು ನನಗೆ ಕಾಣಬರುತ್ತದೆ.

ರೋಮಾಪುರದವರಿಗೆ ಅಧ್ಯಾಯ 7

22 ಅಂತರಾತ್ಮದೊಳಗೆ ಕೀರ್ತ 1:2, 112:1, 119:35 ದೇವರ ನಿಯಮದಲ್ಲಿ ಆನಂದ ಪಡುವವನಾಗಿದ್ದೇನೆ. § ಗಲಾ. 5:17 ಆದರೆ ನನ್ನ ಅಂಗಗಳಲ್ಲಿ ಬೇರೊಂದು ನಿಯಮ ಉಂಟೆಂದು ಕಾಣುತ್ತದೆ.

23 ಅದು ನನ್ನ ಮನಸ್ಸಿನಲ್ಲಿರುವ ನಿಯಮಕ್ಕೆ ವಿರುದ್ಧವಾಗಿ ಕಾದಾಡಿ ನನ್ನನ್ನು ಸೆರೆಹಿಡಿದು ನನ್ನ ಅಂಗಗಳಲ್ಲಿರುವ ಪಾಪದ ನಿಯಮಕ್ಕೆ ನನ್ನನ್ನು ಒಪ್ಪಿಸುವಂಥದ್ದಾಗಿದೆ.

ರೋಮಾಪುರದವರಿಗೆ ಅಧ್ಯಾಯ 7

24 ಅಯ್ಯೋ, ನಾನು ಎಂಥ ದುರವಸ್ಥೆಯಲ್ಲಿ ಬಿದ್ದ ಮನುಷ್ಯನು! * ರೋಮಾ. 8:23 ಇಂಥ ಮರಣಕ್ಕೆ ಒಳಗಾದ ಈ ದೇಹದಿಂದ ನನ್ನನ್ನು ಬಿಡಿಸುವವನು ಯಾರು?

25 1 ಕೊರಿ 15:57 ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಮಾಡುತ್ತೇನೆ. ಹೀಗಿರಲಾಗಿ, ನಾನು ಬುದ್ಧಿಯಿಂದ ದೇವರ ನಿಯಮಕ್ಕೆ ದಾಸನಾಗಿಯೂ, ಮತ್ತೊಂದು ಕಡೆ ಶರೀರದಿಂದ ಪಾಪದ ನಿಯಮಕ್ಕೆ ಆಳಾಗಿಯೂ ನಡೆದುಕೊಳ್ಳುವವನಾಗಿದ್ದೇನೆ.