Kannada ಬೈಬಲ್
ರೋಮಾಪುರದವರಿಗೆ ಒಟ್ಟು 16 ಅಧ್ಯಾಯಗಳು
ರೋಮಾಪುರದವರಿಗೆ
ರೋಮಾಪುರದವರಿಗೆ ಅಧ್ಯಾಯ 9
ರೋಮಾಪುರದವರಿಗೆ ಅಧ್ಯಾಯ 9
ಇಸ್ರಾಯೇಲ್ಯರ ಅಪನಂಬಿಕೆಯು ಅತ್ಯಂತ ದುಃಖಕರವಾದದ್ದು 1 * 2 ಕೊರಿ 11:10; 1 ತಿಮೊ. 2:7; ಗಲಾ. 1:20 ನಾನು ಕ್ರಿಸ್ತನಲ್ಲಿದುಕೊಂಡು ಸುಳ್ಳಾಡದೆ, ಸತ್ಯವಾಗಿ ಹೇಳುತ್ತೇನೆ. ಪವಿತ್ರಾತ್ಮನಿಂದ ನೆಲೆಗೊಂಡಿರುವ ನನ್ನ ಮನಸ್ಸಾಕ್ಷಿಯೇ ಇದಕ್ಕೆ ಸಾಕ್ಷಿ.
2 ನನಗೆ ಹೆಚ್ಚಾದ ದುಃಖವೂ, ನನ್ನ ಹೃದಯದಲ್ಲಿ ಎಡೆಬಿಡದೆ ವೇದನೆಯೂ ಉಂಟು.
ರೋಮಾಪುರದವರಿಗೆ ಅಧ್ಯಾಯ 9
3 ನನ್ನ ಸ್ವಜನರೂ ರಕ್ತಸಂಬಂಧಿಕರೂ ಆದ ನನ್ನ ಪ್ರಿಯರಿಗೋಸ್ಕರವಾಗಿ ನಾನು ಕ್ರಿಸ್ತಯೇಸುವಿನಿಂದ ಬಹಿಷ್ಕ್ರಿತನಾಗಿ ಶಾಪಗ್ರಸ್ತನಾಗಲು ಸಹ ಸಿದ್ಧನಿದ್ದೇನೆ.
4 ಅವರು ಇಸ್ರಾಯೇಲಿನ ವಂಶದವರು. † ವಿಮೋ 4:22, ರೋಮಾ. 8:15 ದೇವರು ಇವರನ್ನು ಮಕ್ಕಳನ್ನಾಗಿ ಆರಿಸಿಕೊಂಡನು; ಇವರಿಗೆ ತನ್ನ ಮಹಿಮೆಯನ್ನು ವ್ಯಕ್ತಪಡಿಸಿದನು; ‡ ಆದಿ 17:2, ಧರ್ಮೋ 29:14, ಗಲಾ. 4:24 ಅವರ ಸಂಗಡ ದೇವರು ಒಡಂಬಡಿಕೆಗಳನ್ನು ಮಾಡಿಕೊಂಡಿದ್ದಾನೆ § ಧರ್ಮೋ 4:14 ಅವರಿಗೆ ಧರ್ಮಶಾಸ್ತ್ರವು, * ಇಬ್ರಿ. 9:1 ದೇವಾಲಯದಲ್ಲಿ ನಡೆಯುವ ಆರಾಧನೆಯೂ, ಎಫೆ 2:12, ಅ. ಕೃ. 13:32 ವಾಗ್ದಾನಗಳೂ ಕೊಡಲ್ಪಟ್ಟವು.
ರೋಮಾಪುರದವರಿಗೆ ಅಧ್ಯಾಯ 9
5 ಅವರ ಪೂರ್ವಿಕರು ಇವರಿಗೆ ಸಂಬಂಧಪಟ್ಟವರೇ, ಕ್ರಿಸ್ತನು ಶರೀರಸಂಬಂಧವಾಗಿ ಅವರ ವಂಶದಲ್ಲಿಯೇ ಹುಟ್ಟಿದನು. ಆತನು ‡ ರೋಮಾ. 1:25, 2 ಕೊರಿ 11:31, ಎಫೆ 4:6, ಇಬ್ರಿ. 1:8 ಎಲ್ಲಾದರ ಮೇಲೆ ಒಡೆಯನೂ, ನಿರಂತರ ಸ್ತುತಿ ಹೊಂದತಕ್ಕ ದೇವರೂ ಆಗಿದ್ದಾನೆ. ಆಮೆನ್.
ದೇವರು ಇಸ್ರಾಯೇಲ್ಯರನ್ನು ತಳ್ಳಿಬಿಟ್ಟದ್ದು ಆತನ ವಾಗ್ದಾನಗಳಿಗೆ ವಿರುದ್ಧವಾದದ್ದಲ್ಲ 6 § ಗಲಾ. 4:23 ದೇವರ ವಾಕ್ಯವು ವ್ಯರ್ಥವಾಯಿತೆಂದು ನಾವು ಭಾವಿಸಬಾರದು. ಯಾಕೆಂದರೆ ಇಸ್ರಾಯೇಲ ವಂಶದಲ್ಲಿ ಹುಟ್ಟಿದವರೆಲ್ಲರೂ ಇಸ್ರಾಯೇಲ್ಯರಲ್ಲ.
ರೋಮಾಪುರದವರಿಗೆ ಅಧ್ಯಾಯ 9
7 ಹಾಗೆಯೇ ಅಬ್ರಹಾಮನ ವಂಶದಲ್ಲಿ ಹುಟ್ಟಿದ ಮಾತ್ರಕ್ಕೆ ಅವರೆಲ್ಲರೂ ಮಕ್ಕಳೆಂದು ಎಣಿಸಲ್ಪಡುವುದಿಲ್ಲ. ಆದರೆ * ಆದಿ 21:12, ಇಬ್ರಿ 11:18 “ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರು.” ಎಂದು ದೇವರು ಹೇಳಿದನು.
8 ಆ ಮಾತಿನ ಅರ್ಥವೇನಂದರೆ ಶರೀರಸಂಬಂಧವಾಗಿ ಹುಟ್ಟಿದವರೆಲ್ಲರೂ ದೇವರ ಮಕ್ಕಳಲ್ಲ. † ಗಲಾ. 4:23, 28 ವಾಗ್ದಾನ ಸಂಬಂಧವಾಗಿ ಹುಟ್ಟಿದವರೇ ಅಬ್ರಹಾಮನ ಸಂತತಿಯವರೆಂದು ಎಣಿಸಲ್ಪಡುವರು ಎಂಬುದು.
ರೋಮಾಪುರದವರಿಗೆ ಅಧ್ಯಾಯ 9
9 ‡ ಆದಿ 18:10; 14:17,21 “ಮುಂದಿನ ವರ್ಷದಲ್ಲಿ ಇದೇ ಕಾಲದಲ್ಲಿ ನಾನು ಬರುವೆನು ಆಗ ಸಾರಳಿಗೆ ಮಗನು ಇರುವನು” ಎಂಬ ವಾಗ್ದಾನವಾಗಿದೆ.
10 ಇದು ಮಾತ್ರವಲ್ಲದೆ ರೆಬೆಕ್ಕಳು ಸಹ ನಮ್ಮ ಮೂಲಪಿತೃವಾದ ಇಸಾಕನಿಂದ ಅವಳಿ ಜವಳಿ ಮಕ್ಕಳಿಗೆ ಬಸುರಾದಾಗ ಅದರಂತೆಯೇ ಆಯಿತು.
11 (11-12)ಆ ಮಕ್ಕಳು ಒಬ್ಬ ತಂದೆಯ ಮಕ್ಕಳಾಗಿದ್ದರೂ ಅವರು ಇನ್ನು ಹುಟ್ಟದೆಯೂ, ಒಳ್ಳೆದನ್ನಾಗಲಿ, ಕೆಟ್ಟದ್ದನ್ನಾಗಲಿ ಮಾಡುವ ಮೊದಲೇ § ಆದಿ 25:23 “ಹಿರಿಯನು ಕಿರಿಯನಿಗೆ ಸೇವೆಮಾಡುವನೆಂಬುದಾಗಿ” ಆಕೆಗೆ ಹೇಳಲ್ಪಟ್ಟಿತು. ಇದರಿಂದ ದೇವರು ತನಗೆ ಮನಸ್ಸಿದ್ದವರನ್ನು ಆರಿಸಿಕೊಳ್ಳುತ್ತಾನೆಂಬ ಸಂಕಲ್ಪವು ಒಳ್ಳೆಯ ಕಾರ್ಯಗಳ ಮೇಲೆ ಆಧಾರಗೊಳ್ಳದೆ * ರೋಮಾ. 4:17, 8:28 ಕರೆಯುವಾತನ ಚಿತ್ತದ ಮೇಲೆಯೇ ಆಧಾರಗೊಂಡಿದೆ.
ರೋಮಾಪುರದವರಿಗೆ ಅಧ್ಯಾಯ 9
12
13 ಇದಕ್ಕನುಸಾರವಾಗಿ † ಮಲಾ. 1:2-3 “ಯಾಕೋಬನನ್ನು ಪ್ರೀತಿಸಿದೆನು ಹಾಗೂ ಏಸಾವನನ್ನು ‡ ಅಥವಾ ಅಲಕ್ಷ್ಯ ಮಾಡಿದೆನು, ಮತ್ತಾ 6:24, ಲೂಕ 25:23, ಯೋಹಾ 12:25 ದ್ವೇಷಿಸಿದನು” ಎಂದು ಬರೆದದೆ.
ದೇವರು ಇಸ್ರಾಯೇಲ್ಯರನ್ನು ತಳ್ಳಿಬಿಟ್ಟದ್ದು ಆತನ ನ್ಯಾಯಕ್ಕೆ ವಿರುದ್ಧವಾದದ್ದಲ್ಲ 14 ಹಾಗಾದರೆ ಏನು ಹೇಳೋಣ? § ಧರ್ಮೋ 32:4, 2 ಪೂರ್ವ 19:7, ಯೋಬ. 8:3, 34:10, ಕೀರ್ತ 92:15 ದೇವರಲ್ಲಿ ಅನ್ಯಾಯ ಉಂಟೋ? ಎಂದಿಗೂ ಇಲ್ಲ.
ರೋಮಾಪುರದವರಿಗೆ ಅಧ್ಯಾಯ 9
15 * ವಿಮೋ 33:19 “ಯಾವನ ಮೇಲೆ ನನಗೆ ಕರುಣೆ ಉಂಟೋ ಅವನನ್ನು ಕರುಣಿಸುವೆನು, ಯಾವನ ಮೇಲೆ ನನ್ನ ಕನಿಕರವಿದೆಯೋ ಅವನಿಗೆ ಕನಿಕರ ತೋರಿಸುವೆನು” ಎಂದು ದೇವರು ಮೋಶೆಗೆ ಹೇಳಿರುತ್ತಾನೆ.
16 ಆದ್ದರಿಂದ ದೇವರ ದಯೆಯು ಮನುಷ್ಯರಿಗೆ ಅಪೇಕ್ಷಿಸುವುದರಿಂದಾಗಲಿ, ಪ್ರಯತ್ನಿಸುವುದರಿಂದಾಗಲಿ ದೊರೆಯದೆ ದೇವರು ಕರುಣಿಸುವುದರಿಂದಲೇ ದೊರೆಯುತ್ತದೆ.
17 ದೇವರು ಫರೋಹನನನ್ನು ಕುರಿತು † ವಿಮೋ 9:16 “ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಖ್ಯಾತಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಉನ್ನತ ಸ್ಥಾನಕ್ಕೆ ತಂದಿದ್ದೇನೆಂದು ಹೇಳಿದನೆಂಬುದಾಗಿ” ಧರ್ಮಶಾಸ್ತ್ರದಲ್ಲಿ ಬರೆಯಲ್ಪಟ್ಟಿದೆ.
ರೋಮಾಪುರದವರಿಗೆ ಅಧ್ಯಾಯ 9
18 ದೇವರು ‡ ವಿಮೋ 4:21, 9:12, 11:10, 14:4, ಧರ್ಮೋ 2:30 ಯಾರನ್ನು ಕರುಣಿಸಿದರೋ, ಯಾರನ್ನು ಕಠಿಣಪಡಿಸಿದರೋ ಅದೆಲ್ಲವೂ ಆತನ ಇಷ್ಟಾನುಸಾರವಾಗಿಯೇ ಇದೆ ಎಂಬುದು ಇದರಿಂದ ತೋರಿಬರುತ್ತದೆ.
19 § 2 ಪೂರ್ವ 20:6, ಯೋಬ. 9:12, ದಾನಿ. 4:35 “ದೇವರ ಚಿತ್ತವನ್ನು ಎದುರಿಸುವವರು ಇಲ್ಲದಿರುವಾಗ ಆತನು ತಪ್ಪು ಹುಡುಕುವುದು ಹೇಗೆ” ಎಂದು ನೀನು ನನ್ನನ್ನು ಕೇಳುವಿ.
ರೋಮಾಪುರದವರಿಗೆ ಅಧ್ಯಾಯ 9
20 ಎಲೋ ಮನುಷ್ಯನೇ ಹಾಗೆನ್ನಬೇಡ ದೇವರಿಗೆ ವಿರುದ್ಧವಾಗಿ ಮಾತನಾಡುವುದಕ್ಕೆ ನೀನು ಎಷ್ಟರವನು? * ಯೆಶಾ 29:16, 45:9 ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ, “ಏಕೆ ನನ್ನನ್ನು ಹೀಗೆ ರೂಪಿಸಿದೆ”, ಎಂದು ಕೇಳುವುದುಂಟೇ?
21 † 2 ತಿಮೊ. 2:20 ಉತ್ತಮವಾದ ಬಳಕೆಗೆ ಒಂದು ಪಾತ್ರೆಯನ್ನೂ, ಹೀನವಾದ ಬಳಕೆಗೆ ಮತ್ತೊಂದು ಪಾತ್ರೆಯನ್ನೂ ಒಂದೇ ಮಣ್ಣಿನ ಮುದ್ದೆಯಿಂದ ಮಾಡುವುದಕ್ಕೆ ‡ ಯೆಶಾ 64:8, ಯೆರ. 18:6 ಕುಂಬಾರನಿಗೆ ಮಣ್ಣಿನ ಮೇಲೆ ಅಧಿಕಾರವಿಲ್ಲವೋ?
ರೋಮಾಪುರದವರಿಗೆ ಅಧ್ಯಾಯ 9
22 ಆದರೆ ದೇವರು ತನ್ನ ಕೋಪವನ್ನು ತೋರಿಸಿ ತನ್ನ ಶಕ್ತಿಯನ್ನು ಪ್ರಸಿದ್ಧಿಪಡಿಸಬೇಕೆಂದಿದ್ದರೂ ಹಾಗೆ ಮಾಡದೆ ತನ್ನ ಕೋಪಕ್ಕೆ ಗುರಿಯಾದ ನಾಶನಪಾತ್ರರನ್ನು ಬಹು ತಾಳ್ಮೆಯಿಂದ ಸಹಿಸಿಕೊಂಡಿದ್ದಾನೆ.
23 ಮತ್ತು § ರೋಮಾ. 8:29-30 ಮಹಿಮೆ ಹೊಂದುವುದಕ್ಕೆ ತಾನು ಮೊದಲೇ ಸಿದ್ಧಪಡಿಸಿರುವ ಕರುಣಾಪಾತ್ರರಲ್ಲಿ * ಎಫೆ 3:17 ತನ್ನ ಮಹಿಮಾತಿಶಯವನ್ನು ತೋರ್ಪಡಿಸಿದ್ದಾನೆ.
ರೋಮಾಪುರದವರಿಗೆ ಅಧ್ಯಾಯ 9
24 ಆತನು ಕರುಣಿಸಿದ ನಮ್ಮನ್ನು † ರೋಮಾ. 3:29 ಯೆಹೂದ್ಯರೊಳಗಿಂದ ಮಾತ್ರ ಕರೆಯದೆ ಹೋಶೇಯನ ಗ್ರಂಥದ ವಚನದಲ್ಲಿ ತಾನು ಸೂಚಿಸಿರುವಂತೆ ಅನ್ಯಜನರೊಳಗಿಂದ ಸಹ ‡ ರೋಮಾ. 8:25 ಕರೆದನು.
25 ಆ ವಚನವೇನಂದರೆ, § ಹೋಶೇ. 2:23, 1:10 “ನನ್ನ ಜನವಲ್ಲದವರನ್ನು ನನ್ನ ಜನರೆಂದು ನನಗೆ ಅಪ್ರಿಯವಾದವಳನ್ನು ಪ್ರಿಯಳೆಂದೂ ಹೇಳುವೆನು.
ರೋಮಾಪುರದವರಿಗೆ ಅಧ್ಯಾಯ 9
26 ಮತ್ತು ಯಾವ ಸ್ಥಳದಲ್ಲಿ ‘ನೀವು ನನ್ನ ಜನರಲ್ಲವೆಂದು’ ಅವರಿಗೆ ಹೇಳಲ್ಪಟ್ಟಿತೋ ಆ ಸ್ಥಳದಲ್ಲಿಯೇ * ರೋಮಾ. 8:14, ಮತ್ತಾ 16:16 ಅವರು ‘ಜೀವವುಳ್ಳ ದೇವರ ಮಕ್ಕಳು ಎನಿಸಿಕೊಳ್ಳುವರು’ ” ಎಂಬುದೇ.
27 ಇದಲ್ಲದೆ ಯೆಶಾಯನು ಇಸ್ರಾಯೇಲ್ ಜನರ ವಿಷಯದಲ್ಲಿ ಹೀಗೆಂದು ಘೋಷಿಸಿದ್ದಾನೆ: † ಯೆಶಾ 10:22,23 “ಇಸ್ರಾಯೇಲರ ಸಂಖ್ಯೆಯು ಸಮುದ್ರದ ಉಸುಬಿನಂತಿದ್ದರೂ ‡ ರೋಮಾ. 11:5 ಅವರಲ್ಲಿ ಕೆಲವರು ಮಾತ್ರ ರಕ್ಷಿಸಲ್ಪಡುವರು” “ಕರ್ತನು ಭೂಮಿಯಲ್ಲಿ ತನ್ನ ವಚನವನ್ನು ಕ್ಷಣದಲ್ಲಿ ನೆರವೆರಿಸಿಮುಗಿಸುವನು” ಎಂದು ಕೂಗಿ ಹೇಳುತ್ತಾನೆ.
ರೋಮಾಪುರದವರಿಗೆ ಅಧ್ಯಾಯ 9
28 ಅದೇ ಅಭಿಪ್ರಾಯದಿಂದ ಯೆಶಾಯನು § ಯೆಶಾ 1:9 ಮತ್ತೊಂದು ವಚನದಲ್ಲಿ,
29 * ಯಾಕೋಬ. 5:4 “ಸೇನಾಧೀಶ್ವರನಾದ ಕರ್ತನು ನಮಗೆ ಒಂದು ಸಂತಾನವನ್ನು ಉಳಿಸದೆ ಹೋಗಿದ್ದರೆ † ಆದಿ 19:24-25; ಧರ್ಮೋ 29: 23. “ಸೊದೋಮಿನ ಗತಿಯೇ ನಮಗಾಗುತ್ತಿತ್ತು ಗೊಮೋರದ ದುರ್ದೆಸೆಯೇ ಸಂಭವಿಸುತ್ತಿತ್ತು” ಎಂದು ಮೊದಲೇ ತಿಳಿದುಕೊಂಡು ಹೇಳಿದ್ದಾರೆ.
ರೋಮಾಪುರದವರಿಗೆ ಅಧ್ಯಾಯ 9
ಇಸ್ರಾಯೇಲ್ಯರನ್ನು ದೇವರು ತಳ್ಳಿಬಿಟ್ಟದ್ದಕ್ಕೆ ಇಸ್ರಾಯೇಲ್ಯರೇ ಕಾರಣ 30 ಹಾಗಾದರೆ ಏನು ಹೇಳೋಣ? ನೀತಿಯನ್ನು ಅನುಸರಿಸದ ‡ ರೋಮಾ. 10:20 ಅನ್ಯಜನರಿಗೆ ನೀತಿಯು ಅಂದರೆ § ರೋಮಾ. 1:17, 3:21-22, 10:6, ಗಲಾ. 2:16, 3:24, ಇಬ್ರಿ. 11:7 ನಂಬಿಕೆಯಿಂದುಂಟಾದ ನೀತಿಯು ದೊರಕಿತು.
31 ಆದರೆ ನೀತಿಯನ್ನು ಹಿಂಬಾಲಿಸಿದ್ದ * ರೋಮಾ. 10:2-3, 11:7, ಗಲಾ. 5:4 ಇಸ್ರಾಯೇಲ್ಯರು ನೀತಿಯನ್ನು ದೊರಕಿಸುವ ಧರ್ಮವನ್ನು ಹಿಡಿಯಲಾರದೆ ಹೋದರೆಂದು ಹೇಳಬೇಕು.
ರೋಮಾಪುರದವರಿಗೆ ಅಧ್ಯಾಯ 9
32 ಅದಕ್ಕೆ ಕಾರಣವೇನು? ಅವರು ನಂಬಿಕೆಯನ್ನು ಅನುಸರಿಸದೆ ನೇಮನಿಷ್ಠೆಗಳನ್ನು ಹಿಂಬಾಲಿಸಿದ್ದರಿಂದ,
33 † 1 ಪೇತ್ರ. 2:8 ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು. ಧರ್ಮಶಾಸ್ತ್ರದಲ್ಲಿ ಹೀಗೆ ಬರೆಯಲ್ಪಟ್ಟಿದೆ, ‡ ಯೆಶಾ 28:16, 8:14, 1 ಪೇತ್ರ. 2:6-7 “ಇಗೋ ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇನೆ. § ಆತನ ಮೇಲೆ ಆತನಲ್ಲಿ ನಂಬಿಕೆಯಿಡುವವನು * ಯೆಶಾ 49:23, ಯೋವೇ. 2:26-27 ಆಶಾಭಂಗಪಡುವುದಿಲ್ಲ” ಎಂಬುದೇ.