1 ಅರಸುಗಳು ಅಧ್ಯಾಯ 19
12 ಭೂಕಂಪದ ತರುವಾಯ ಬೆಂಕಿಯು; ಆ ಬೆಂಕಿಯಲ್ಲಿ ಕರ್ತನು ಇರಲಿಲ್ಲ. ಬೆಂಕಿಯ ತರು ವಾಯ ಮೆಲ್ಲನೆಯಾದಂಥ, ಸೂಕ್ಷ್ಮವಾದಂಥ ಶಬ್ದವು.
13 ಎಲೀಯನು ಅದನ್ನು ಕೇಳಿದಾಗ ತನ್ನ ಕಂಬಳಿ ಯಿಂದ ತನ್ನ ಮುಖವನ್ನು ಮುಚ್ಚಿಕೊಂಡು ಹೊರಗೆ ಬಂದು ಗವಿಯ ದ್ವಾರದಲ್ಲಿ ನಿಂತನು. ಆಗ ಇಗೋಎಲೀಯನೇ, ಇಲ್ಲಿ ಏನು ಮಾಡುತ್ತೀ ಎಂಬ ಶಬ್ದವು ಅವನಿಗೆ ಉಂಟಾಯಿತು.
14 ಅದಕ್ಕೆ ಅವನು--ಸೈನ್ಯಗಳ ದೇವರಾದ ಕರ್ತನಿಗೋಸ್ಕರ ನಾನು ಮಹಾ ರೋಷವು ಳ್ಳವನಾಗಿದ್ದೆನು; ಯಾಕಂದರೆ ಇಸ್ರಾಯೇಲಿನ ಮಕ್ಕಳು ನಿನ್ನ ಒಡಂಬಡಿಕೆಯನ್ನು ಬಿಟ್ಟು ನಿನ್ನ ಬಲಿಪೀಠಗಳನ್ನು ಕೆಡವಿ ನಿನ್ನ ಪ್ರವಾದಿಗಳನ್ನು ಕತ್ತಿಯಿಂದ ಕೊಂದು ಹಾಕಿದ್ದಾರೆ; ನಾನೊಬ್ಬನೇ ಉಳಿದಿದ್ದೇನೆ; ಅವರು ನನ್ನ ಪ್ರಾಣವನ್ನು ತೆಗೆಯಲು ಹುಡುಕುತ್ತಾರೆ ಅಂದನು.
8