Kannada ಬೈಬಲ್
ಆಮೋಸ ಒಟ್ಟು 9 ಅಧ್ಯಾಯಗಳು
ಆಮೋಸ ಅಧ್ಯಾಯ 1
1 ತೆಕೋವದ ಕುರುಬರಲಿದ್ದ ಆಮೋಸನು ಯೆಹೂದದ ಅರಸನಾದ ಉಜ್ಜೀಯನ ದಿನಗಳಲ್ಲಿಯೂ ಇಸ್ರಾಯೇಲಿನ ಅರಸನಾದ ಯೋವಾಷನ ಮಗನಾದ ಯಾರೊಬ್ಬಾಮನ ದಿನಗಳ ಲ್ಲಿಯೂ ಭೂಕಂಪಕ್ಕೆ ಎರಡು ವರುಷಗಳ ಮುಂಚೆ ಇಸ್ರಾಯೇಲಿನ ವಿಷಯವಾಗಿ ನೋಡಿದ ವಾಕ್ಯಗಳು.
2 ಅವನು ಹೇಳಿದ್ದೇನಂದರೆ--ಕರ್ತನು ಚೀಯೋನಿ ನಿಂದ ಘರ್ಜಿಸಿ ಯೆರೂಸಲೇಮಿನಿಂದ ತನ್ನ ಧ್ವನಿಗೈಯು ವನು; ಕುರುಬರ ವಾಸದ ಸ್ಥಳಗಳು ಗೋಳಾಡುತ್ತವೆ ಮತ್ತು ಕರ್ಮೆಲಿನ ತುದಿಯು ಒಣಗಿ ಹೋಗುತ್ತದೆ ಎಂದು ಹೇಳುತ್ತಾನೆ.
ಆಮೋಸ ಅಧ್ಯಾಯ 1
3 ಕರ್ತನು ಹೀಗೆ ಹೇಳುತ್ತಾನೆ--ದಮಸ್ಕದ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತ ನಾನು ಅವರನ್ನು ದಂಡಿಸದೆ ಹಿಂತಿರುಗುವದಿಲ್ಲ; ಅವರು ಕಬ್ಬಿಣದ ಆಯುಧಗಳಿಂದ ಗಿಲ್ಯಾದನ್ನು ಬಡಿದಿರುವರು.
4 ಆದರೆ ನಾನು ಹಜಾಯೇಲನ ಮನೆಯೊಳಗೆ ಬೆಂಕಿಯನ್ನು ಕಳುಹಿಸುತ್ತೇನೆ; ಅದು ಬೆನ್ಹದದನ ಅರಮನೆಗಳನ್ನು ನುಂಗಿಬಿಡುವದು.
5 ನಾನು ದಮಸ್ಕದ ಅಡ್ಡ ದಂಡೆ ಯನ್ನು ಸಹ ಮುರಿಯುವೆನು; ಆವೆನ್ ತಗ್ಗಿನಿಂದ ನಿವಾಸಿಯನ್ನೂ ಎದೆನಿನ ಮನೆಯಿಂದ ರಾಜದಂಡ ಹಿಡಿಯುವನನ್ನೂ ಕಡಿದುಬಿಡುವೆನು; ಸಿರಿಯಾದ ಜನರು ಸೆರೆಯಾಗಿ ಕೀರಿಗೆ ಹೋಗುವರೆಂದು ಕರ್ತನು ಹೇಳುತ್ತಾನೆ.
ಆಮೋಸ ಅಧ್ಯಾಯ 1
6 ಕರ್ತನು ಹೀಗೆ ಹೇಳುತ್ತಾನೆ--ಗಾಜದ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತ ನಾನು ಅದರ ದಂಡನೆಯ ಕಡೆಯಿಂದ ತಿರುಗಿಸಿಬಿಡುವದಿಲ್ಲ; ಅವ ರನ್ನು ಸೆರೆಗೆ ಒಪ್ಪಿಸುವದಕ್ಕಾಗಿ ಎದೋಮಿಗೆ ಎಲ್ಲಾ ಸೆರೆಯವರನ್ನು ಕರೆತಂದರು.
7 ಆದರೆ ನಾನು ಗಾಜದ ಗೋಡೆಯಮೇಲೆ ಬೆಂಕಿಯನ್ನು ಕಳುಹಿಸುತ್ತೇನೆ; ಅದು ಅವರ ಅರಮನೆಗಳನ್ನು ನುಂಗಿಬಿಡುವದು.
8 ಅಷ್ಡೋ ದಿನಿಂದ ನಿವಾಸಿಯನ್ನು ಅಷ್ಕೆಲೋನಿನಿಂದ ರಾಜದಂಡ ಹಿಡಿಯುವವನನ್ನು ಕಡಿದುಬಿಟ್ಟು ನಾನು ಎಕ್ರೋನಿಗೆ ವಿರೋಧವಾಗಿ ನನ್ನ ಕೈಯನ್ನು ತಿರುಗಿಸುತ್ತೇನೆ. ಉಳಿದ ಫಿಲಿಪ್ಪಿಯರು ನಾಶವಾಗುವರೆಂದು ಕರ್ತನಾದ ದೇವರು ಹೇಳುತ್ತಾನೆ.
ಆಮೋಸ ಅಧ್ಯಾಯ 1
9 ಕರ್ತನು ಹೀಗೆ ಹೇಳುತ್ತಾನೆ--ತೂರಿನ ಮೂರು ಮತ್ತು ನಾಲ್ಕರ ನಿಮಿತ್ತ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದಿಲ್ಲ; ಅವರು ಸಹೋದರರ ಒಡಂಬ ಡಿಕೆಯನ್ನು ಜ್ಞಾಪಕಮಾಡಲಿಲ್ಲ; ಪೂರ್ಣ ಸೆರೆಯನ್ನು ಎದೋಮಿಗೆ ಒಪ್ಪಿಸಿಬಿಟ್ಟರು.
10 ಆದರೆ ನಾನು ತೂರಿನ ಗೋಡೆಯ ಮೇಲೆ ಬೆಂಕಿಯನ್ನು ಕಳುಹಿಸುವೆನು, ಅದು ಅಲ್ಲಿಯ ಅರಮನೆಗಳನ್ನು ನುಂಗಿಬಿಡುವದು.
11 ಕರ್ತನು ಹೀಗೆ ಹೇಳುತ್ತಾನೆ--ಎದೋಮಿನ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತವಾಗಿ ನಾನು ಅದರ ದಂಡನೆಯಿಂದ ತಪ್ಪಿಸುವದಿಲ್ಲ. ಅವನು ತನ್ನ ಎಲ್ಲಾ ಕನಿಕರಗಳನ್ನು ಬಿಸಾಡಿಬಿಟ್ಟು ತನ್ನ ಸಹೋ ದರನನ್ನು ಕತ್ತಿಯ ಸಹಿತ ಹಿಂಬಾಲಿಸಿದನು. ಅವನ ಕೋಪವು ನಿರಂತರವಾಗಿ ಹರಿಯುತ್ತಿತ್ತು; ತನ್ನ ರೌದ್ರ ವನ್ನು ನಿತ್ಯವಾಗಿ ಇಟ್ಟುಕೊಂಡನು.
ಆಮೋಸ ಅಧ್ಯಾಯ 1
12 ಆದರೆ ನಾನು ತೇಮಾನಿನ ಮೇಲೆ ಬೆಂಕಿಯನ್ನು ಕಳುಹಿಸುವೆನು, ಅದು ಬೊಚ್ರದ ಅರಮನೆಗಳನ್ನು ನುಂಗಿಬಿಡುವದು.
13 ಕರ್ತನು ಹೀಗೆ ಹೇಳುತ್ತಾನೆ--ಅಮ್ಮೋನಿನ ಮಕ್ಕಳ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತ ವಾಗಿ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವ ದಿಲ್ಲ; ತಮ್ಮ ಮೇರೆಯನ್ನು ವಿಸ್ತಾರ ಮಾಡುವದಕ್ಕಾಗಿ ಗಿಲ್ಯಾದಿನ ಗರ್ಭಿಣಿಯರನ್ನು ಸೀಳಿದ್ದಾರೆ.
14 ಆದರೆ ನಾನು ರಬ್ಬದ ಗೋಡೆಯಲ್ಲಿ ಬೆಂಕಿಯನ್ನು ಹತ್ತಿಸುವೆನು; ಅದು ಯುದ್ಧದ ದಿನದಲ್ಲಿ ಆರ್ಭಟದ ಸಂಗಡವೂ ಬಿರುಗಾಳಿಯ ದಿನದಲ್ಲಿ ಸುಳಿಗಾಳಿಯ ಸಂಗಡವೂ ಅಲ್ಲಿಯ ಅರಮನೆಗಳನ್ನು ನುಂಗಿಬಿಡುವದು.
ಆಮೋಸ ಅಧ್ಯಾಯ 1
15 ಅವರ ಅರಸನು ತಾನು ತನ್ನ ರಾಜಕುಮಾರರ ಸಂಗಡ ಸೆರೆಗೆ ಹೋಗುವನೆಂದು ಕರ್ತನು ಹೇಳುತ್ತಾನೆ.