ಯೆಶಾಯ ಅಧ್ಯಾಯ 11
10 ಆ ದಿನದಲ್ಲಿ ಹುಡುಕುವ ಅನ್ಯಜನರಿಗೆ ಇಷ ಯನ ಬೇರು ಒಂದು ಗುರುತಾಗಿ ನಿಲ್ಲುವದು; ಅವನ ವಿಶ್ರಾಂತಿ ವೈಭವವುಳ್ಳದ್ದಾಗಿರುವದು.
11 ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವದಕ್ಕೆ ಎರಡನೇ ಸಾರಿ ಕೈಹಾಕಿ ಅಶ್ಶೂರ; ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಮತ್ತು ಸಮುದ್ರದ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.
12 ಜನಾಂಗ ಗಳಿಗೆ ಗುರುತಾಗಿ ಇಟ್ಟ ಇಸ್ರಾಯೇಲಿನಿಂದ ತಳ್ಳಿಬಿಟ್ಟವ ರನ್ನು ಕೂಡಿಸುವನು ಮತ್ತು ಯೆಹೂದದಿಂದ ಚದರಿದ ವರನ್ನು ಭೂಮಿಯ ನಾಲ್ಕು ಮೂಲೆಗಳಿಂದ ಒಟ್ಟುಗೂಡಿಸುವನು.
7