Kannada ಬೈಬಲ್

ಯಾಕೋಬನು ಒಟ್ಟು 5 ಅಧ್ಯಾಯಗಳು

ಯಾಕೋಬನು

ಯಾಕೋಬನು ಅಧ್ಯಾಯ 5
ಯಾಕೋಬನು ಅಧ್ಯಾಯ 5

1 ಧನಿಕರೇ, ನಿಮಗೆ ಬರುವ ದುರ್ದಶೆ ಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ

2 ನಿಮ್ಮ ಐಶ್ವರ್ಯವು ನಾಶವಾಗಿದೆ, ನಿಮ್ಮ ಬಟ್ಟೆಗಳಿಗೆ ನುಸಿ ಹಿಡಿದಿದೆ.

3 ನಿಮ್ಮ ಚಿನ್ನ ಬೆಳ್ಳಿಗಳು ತುಕ್ಕು ಹಿಡಿದವೆ; ಅವುಗಳ ತುಕ್ಕು ನಿಮಗೆ ವಿರೋಧವಾಗಿ ಸಾಕ್ಷಿಯಾಗಿದ್ದು ಬೆಂಕಿಯಂತೆ ನಿಮ್ಮ ಮಾಂಸವನ್ನು ತಿಂದು ಬಿಡುವದು. ಕಡೇ ದಿನಗಳಿಗಾಗಿ ಸಂಪತ್ತನ್ನು ಕೂಡಿಸಿ ಇಟ್ಟುಕೊಂಡಿ ದ್ದೀರಿ.

4 ಇಗೋ, ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿ ದ್ದೀರಿ. ಆ ಕೂಲಿ ಕೂಗಿಕೊಳ್ಳುತ್ತದೆ; ಕೊಯಿದವರ ಕೂಗು ಸೈನ್ಯಗಳ ಕರ್ತನ ಕಿವಿಗಳಲ್ಲಿ ಬಿದ್ದಿದೆ.

ಯಾಕೋಬನು ಅಧ್ಯಾಯ 5

5 ಭೂಲೋಕದಲ್ಲಿ ನೀವು ಭೋಗಿಗಳಾಗಿ ಮನಸ್ಸು ಬಂದಂತೆ ಜೀವಿಸಿದ್ದೀರಿ; ವಧೆಯ ದಿವಸಕ್ಕಾಗಿಯೇ ಎಂಬಂತೆ ನಿಮ್ಮ ಹೃದಯಗಳನ್ನು ಪೋಷಿಸಿಕೊಂಡಿದ್ದೀರಿ.

6 ನೀತಿವಂತನಿಗೆ ದಂಡನೆಯನ್ನು ವಿಧಿಸಿ ಕೊಂದು ಹಾಕಿ ದ್ದೀರಿ; ಅವನು ನಿಮ್ಮನ್ನು ಎದುರಾಯಿಸುವವನಲ್ಲ.

7 ಸಹೋದರರೇ, ಕರ್ತನು ಬರುವ ತನಕ ದೀರ್ಘ ಶಾಂತಿಯಿಂದಿರ್ರಿ. ವ್ಯವಸಾಯಗಾರನನ್ನು ನೋಡಿರಿ; ಅವನು ಭೂಮಿಯ ಅಮೂಲ್ಯವಾದ ಫಲಕ್ಕಾಗಿ ಕಾದಿದ್ದು ಮುಂಗಾರು ಹಿಂಗಾರು ಮಳೆಗಳು ಬರುವ ತನಕ ದೀರ್ಘಶಾಂತಿಯಿಂದಿರುವನು.

ಯಾಕೋಬನು ಅಧ್ಯಾಯ 5

8 ನೀವೂ ದೀರ್ಘಶಾಂತಿಯಿಂದಿರ್ರಿ; ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳಿರಿ, ಯಾಕಂದರೆ ಕರ್ತನ ಪ್ರತ್ಯ ಕ್ಷತೆಯು ಹತ್ತಿರವಾಯಿತು.

9 ಸಹೋದರರೇ, ನೀವು ಒಬ್ಬರನ್ನೊಬ್ಬರು ದ್ವೇಷಿಸಬೇಡಿರಿ; ನ್ಯಾಯವಿಚಾರಣೆಗೆ ಗುರಿಯಾದೀರಿ. ಅಗೋ, ನ್ಯಾಯಾಧಿಪತಿಯು ಬಾಗಲಿನ ಮುಂದೆಯೇ ನಿಂತಿದ್ದಾನೆ.

10 ನನ್ನ ಸಹೋದರರೇ, ಬಾಧೆಯನ್ನು ತಾಳ್ಮೆಯಿಂದ ಸಹಿಸಿ ಕೊಳ್ಳುವ ವಿಷಯದಲ್ಲಿ ಕರ್ತನ ಹೆಸರಿನಿಂದ ಮಾತ ನಾಡಿದ ಪ್ರವಾದಿಗಳನ್ನೇ ಮಾದರಿ ಮಾಡಿಕೊಳ್ಳಿರಿ.

ಯಾಕೋಬನು ಅಧ್ಯಾಯ 5

11 ಇಗೋ, ತಾಳಿಕೊಳ್ಳುವವರನ್ನು ಧನ್ಯರೆಂದು ನಾವು ಎಣಿಸುತ್ತೇವಲ್ಲವೇ. ನೀವು ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ ಕರ್ತನು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ನೋಡಿ ಕರ್ತನು ಬಹಳ ಕರುಣೆಯುಳ್ಳ ವನೂ ದಯಾಳುವೂ ಆಗಿದ್ದಾನೆಂದು ತಿಳಿದಿದ್ದೀರಷ್ಟೆ.

12 ಮುಖ್ಯವಾಗಿ ನನ್ನ ಸಹೋದರರೇ, ಆಣೆ ಇಡಲೇ ಬೇಡಿರಿ; ಆಕಾಶದ ಮೇಲಾಗಲಿ ಭೂಮಿಯ ಮೇಲಾಗಲಿ ಇನ್ನಾವದರ ಮೇಲಾಗಲಿ ಆಣೆ ಇಡ ಬೇಡಿರಿ. ಹೌದೆಂದು ಹೇಳಬೇಕಾದರೆ ಹೌದೆನ್ನಿರಿ, ಅಲ್ಲವೆನ್ನಬೇಕಾದರೆ ಅಲ್ಲವೆನ್ನಿರಿ; ಹೀಗಾದರೆ ನೀವು ನ್ಯಾಯವಿಚಾರಣೆಗೆ ಗುರಿಯಾಗುವದಿಲ್ಲ.

ಯಾಕೋಬನು ಅಧ್ಯಾಯ 5

13 ನಿಮ್ಮಲ್ಲಿ ಯಾವನಾದರೂ ಬಾಧೆಪಡುವವನು ಇದ್ದಾನೋ? ಅವನು ಪ್ರಾರ್ಥಿಸಲಿ. ನಿಮ್ಮಲ್ಲಿ ಯಾವನಾದರೂ ಸಂತೋಷಪಡುವವನಿದ್ದಾನೋ? ಅವನು ಕೀರ್ತನೆಗಳನ್ನು ಹಾಡಲಿ.

14 ನಿಮ್ಮಲ್ಲಿ ಯಾವ ನಾದರೂ ಅಸ್ವಸ್ಥನಾಗಿರುವವನು ಇದ್ದಾನೋ? ಅವನು ಸಭೆಯ ಹಿರಿಯರನ್ನು ಕರೇಕಳುಹಿಸಲಿ; ಅವರು ಕರ್ತನ ಹೆಸರಿನಿಂದ ಎಣ್ಣೆಹಚ್ಚಿ ಅವನಿಗೋಸ್ಕರ ಪ್ರಾರ್ಥಿಸಲಿ.

15 ನಂಬಿಕೆಯಿಂದ ಮಾಡಿದ ಪ್ರಾರ್ಥನೆ ಯು ರೋಗಿಯನ್ನು ರಕ್ಷಿಸುವದು; ಕರ್ತನು ಅವನನ್ನು ಎಬ್ಬಿಸುವನು, ಪಾಪಗಳನ್ನು ಮಾಡಿದವನಾಗಿದ್ದರೆ ಅವು ಕ್ಷಮಿಸಲ್ಪಡುವವು.

ಯಾಕೋಬನು ಅಧ್ಯಾಯ 5

16 ನೀವು ಸ್ವಸ್ಥವಾಗಬೇಕಾದರೆ ನಿಮ್ಮ ತಪ್ಪುಗಳನ್ನು ಒಬ್ಬರಿಗೊಬ್ಬರು ಅರಿಕೆಮಾಡಿ ಒಬ್ಬರಿ ಗೋಸ್ಕರ ಒಬ್ಬರು ಪ್ರಾರ್ಥಿಸಿರಿ; ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಫಲಕಾರಿಯಾಗುತ್ತದೆ.

17 ಎಲೀಯನು ನಮ್ಮಂಥ ಸ್ವಭಾವವುಳ್ಳವ ನಾಗಿದ್ದನು; ಅವನು ಮಳೆ ಬರಬಾರದೆಂದು ಆಸಕ್ತಿ ಯಿಂದ ಪ್ರಾರ್ಥಿಸಲು ಮೂರು ವರುಷ ಆರು ತಿಂಗಳ ವರೆಗೂ ಮಳೆ ಬೀಳಲಿಲ್ಲ.

18 ತಿರಿಗಿ ಅವನು ಪ್ರಾರ್ಥನೆ ಮಾಡಲು ಆಕಾಶವು ಮಳೆಗರೆಯಿತು, ಭೂಮಿಯು ಬೆಳೆಯಿತು.

ಯಾಕೋಬನು ಅಧ್ಯಾಯ 5

19 ಸಹೋದರರೇ, ನಿಮ್ಮಲ್ಲಿ ಯಾವನಾದರೂ ಸತ್ಯ ದಿಂದ ತಪ್ಪಿಹೋಗಿರಲಾಗಿ ಮತ್ತೊಬ್ಬನು ಅವನನ್ನು ಯಥಾಸ್ಥಾನಕ್ಕೆ ತಂದರೆ

20 ಅವನು ಪಾಪಮಾಡಿದವ ನನ್ನು ತಪ್ಪಾದ ಮಾರ್ಗದಿಂದ ತಿರುಗಿಸಿದ್ದಲ್ಲದೆ ಅವನ ಆತ್ಮವನ್ನು ಮರಣಕ್ಕೆ ತಪ್ಪಿಸಿ ಬಹುಪಾಪಗಳನ್ನು ಮುಚ್ಚಿದವನಾದನೆಂದು ತಿಳುಕೊಳ್ಳಲಿ.