Kannada ಬೈಬಲ್

ಕೀರ್ತನೆಗಳು ಒಟ್ಟು 150 ಅಧ್ಯಾಯಗಳು

ಕೀರ್ತನೆಗಳು

ಕೀರ್ತನೆಗಳು ಅಧ್ಯಾಯ 114
ಕೀರ್ತನೆಗಳು ಅಧ್ಯಾಯ 114

1 ಇಸ್ರಾಯೇಲನು ಐಗುಪ್ತದೊಳಗಿಂದಲೂ ಯಾಕೋಬನ ಮನೆ ತನವು ಅನ್ಯಭಾಷೆಯುಳ್ಳ ಜನರೊಳಗಿಂದಲೂ ಹೊರಟಾಗ

2 ಯೆಹೂದನು ಆತನ ಪರಿಶುದ್ಧ ಸ್ಥಳವೂ ಇಸ್ರಾಯೇಲನು ಆತನ ದೊರೆತನವೂ ಆಗಿದ್ದರು.

3 ಸಮುದ್ರವು ನೋಡಿ ಓಡಿಹೋಯಿತು; ಯೊರ್ದನ್ ಹಿಂತಿರುಗಿತು.

4 ಬೆಟ್ಟಗಳು ಟಗರುಗಳ ಹಾಗೆಯೂ ಗುಡ್ಡಗಳು ಕುರಿಮರಿಗಳ ಹಾಗೆಯೂ ಹಾರಾಡಿದವು.

5 ಸಮುದ್ರವೇ, ನಿನಗೆ ಏನಾಯಿತು? ಯಾಕೆ ಓಡಿ ಹೋಗುತ್ತೀ? ಯೊರ್ದನೇ, ಯಾಕೆ ಹಿಂದಿರುಗುತ್ತೀ?

ಕೀರ್ತನೆಗಳು ಅಧ್ಯಾಯ 114

6 ಬೆಟ್ಟಗಳೇ, ಟಗರುಗಳ ಹಾಗೆಯೂ ಚಿಕ್ಕ ಗುಡ್ಡಗಳೇ, ನೀವು ಕುರಿಮರಿಗಳ ಹಾಗೆಯೂ ಹಾರಾಡುವದು ಯಾಕೆ?

7 ಬಂಡೆಯನ್ನು ನೀರಿನ ಕೆರೆಗೂ ಬೆಣಚು ಕಲ್ಲನ್ನು ನೀರಿನ ಬುಗ್ಗೆಗೂ ಮಾರ್ಪಡಿಸುವ

8 ಕರ್ತನ ಸನ್ನಿಧಿ ಯಲ್ಲಿಯೂ ಯಾಕೋಬನ ದೇವರ ಮುಂದೆಯೂ ಭೂಮಿಯೇ, ನಡುಗು.