Kannada ಬೈಬಲ್

2 ಥೆಸಲೊನೀಕದವರಿಗೆ ಒಟ್ಟು 3 ಅಧ್ಯಾಯಗಳು

2 ಥೆಸಲೊನೀಕದವರಿಗೆ

2 ಥೆಸಲೊನೀಕದವರಿಗೆ ಅಧ್ಯಾಯ 1
2 ಥೆಸಲೊನೀಕದವರಿಗೆ ಅಧ್ಯಾಯ 1

1 ನಮ್ಮ ತಂದೆ ದೇವರಲ್ಲಿಯೂ, ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ ಪೌಲ, ಸಿಲ್ವಾನ, ತಿಮೊಥೆಯರು ಬರೆಯುವುದು:

2 ನಮ್ಮ ತಂದೆ ದೇವರಿಂದಲೂ ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಉಂಟಾಗಲಿ.

ಕೃತಜ್ಞತಾಸ್ತುತಿ ಹಾಗೂ ಪ್ರಾರ್ಥನೆ 3 ಪ್ರಿಯರೇ, ನಾವು ಯಾವಾಗಲೂ ನಿಮಗಾಗಿ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಲು ಬದ್ಧರಾಗಿದ್ದೇವೆ. ಹಾಗೆ ಮಾಡುವುದು ಯೋಗ್ಯ. ಏಕೆಂದರೆ ನಿಮ್ಮ ವಿಶ್ವಾಸವು ಹೆಚ್ಚೆಚ್ಚಾಗಿ ಅಭಿವೃದ್ಧಿಯಾಗುತ್ತಾ ಇದೆ ಮತ್ತು ಪರಸ್ಪರ ನಿಮ್ಮೆಲ್ಲರಲ್ಲಿ ಪ್ರೀತಿಯೂ ಹೆಚ್ಚುತ್ತಿದೆ.

2 ಥೆಸಲೊನೀಕದವರಿಗೆ ಅಧ್ಯಾಯ 1

4 ಹೀಗಿರುವುದರಿಂದ, ನೀವು ಸಹಿಸುತ್ತಿರುವ ನಿಮ್ಮ ಎಲ್ಲಾ ಹಿಂಸೆಗಳಲ್ಲಿಯೂ ಸಂಕಟಗಳಲ್ಲಿಯೂ ನಿಮಗೆ ತೋರಿ ಬಂದ ನಿಮ್ಮ ತಾಳ್ಮೆ, ನಂಬಿಕೆಗಳನ್ನು ನೆನೆಸಿ ನಿಮ್ಮ ವಿಷಯವಾಗಿ ದೇವರ ಸಭೆಗಳಲ್ಲಿ ನಾವೇ ಹೆಮ್ಮೆಪಡುತ್ತೇವೆ.

5 ನೀವು ಯಾವ ದೇವರ ರಾಜ್ಯಕ್ಕಾಗಿ ಕಷ್ಟವನ್ನು ಅನುಭವಿಸುತ್ತಿರುವಿರೋ, ಆ ರಾಜ್ಯಕ್ಕಾಗಿ ನೀವು ಯೋಗ್ಯರೆಂದು ಎಣಿಕೆಯಾಗಲು ಇದು ದೇವರ ನೀತಿಯುಳ್ಳ ನ್ಯಾಯತೀರ್ಪಿಗೆ ಸ್ಪಷ್ಟವಾದ ನಿದರ್ಶನವಾಗಿದೆ.

2 ಥೆಸಲೊನೀಕದವರಿಗೆ ಅಧ್ಯಾಯ 1

6 ನಿಮ್ಮನ್ನು ಸಂಕಟ ಪಡಿಸುವವರಿಗೆ ದೇವರು ಪ್ರತಿಯಾಗಿ ಸಂಕಟವನ್ನೂ ಮತ್ತು

7 ಸಂಕಟ ಪಡುವವರಾದ ನಿಮಗೆ ನಮ್ಮೊಡನೆ ಉಪಶಮನವನ್ನೂ ಕೊಡುವುದು ದೇವರಿಗೆ ನ್ಯಾಯವಾಗಿದೆ. ನಮಗೆ ಕರ್ತ ಆಗಿರುವ ಯೇಸು ತಮ್ಮ ಶಕ್ತಿಯುತವಾದ ದೂತರೊಂದಿಗೆ ಪರಲೋಕದಿಂದ ಪ್ರಜ್ವಲಿಸುವ ಜ್ವಾಲೆಯಲ್ಲಿ ಪ್ರತ್ಯಕ್ಷರಾಗುವಾಗ ಇದಾಗುವುದು.

8 ಅವರು ದೇವರನ್ನು ಅರಿಯದವರಿಗೂ ನಮಗೆ ಕರ್ತ ಆಗಿರುವ ಯೇಸುವಿನ ಸುವಾರ್ತೆಗೆ ಅವಿಧೇಯರಾದವರಿಗೂ ಪ್ರತೀಕಾರ ಮಾಡುವರು.

2 ಥೆಸಲೊನೀಕದವರಿಗೆ ಅಧ್ಯಾಯ 1

9 ಅಂಥವರು ಕರ್ತ ಯೇಸುವಿನ ಸನ್ನಿಧಿಯಿಂದಲೂ ಅವರ ಮಹಿಮೆಯ ಬಲದಿಂದಲೂ ಬಹಿಷ್ಕೃತರಾಗಿ ನಿತ್ಯನಾಶದ ಶಿಕ್ಷೆಯನ್ನು ಅನುಭವಿಸುವರು.

10 ಆ ದಿನದಲ್ಲಿ ಕರ್ತ ಯೇಸು ತಮ್ಮ ಪರಿಶುದ್ಧ ಜನರಲ್ಲಿ ಮಹಿಮೆ ಹೊಂದುವವರಾಗಿಯೂ ನಂಬುವವರೆಲ್ಲರನ್ನು ಆಶ್ಚರ್ಯಪಡಿಸುವವರಾಗಿಯೂ ಬರುವರು. ನಮ್ಮ ಸಾಕ್ಷಿಯನ್ನು ನಂಬಿದ್ದರಿಂದ ನಿಮಗೂ ಇವು ಸಂಭವಿಸುವುವು.

11 ನಮ್ಮ ದೇವರು ನೀಡಿರುವ ಕರೆಯುವಿಕೆಗೆ ನಿಮ್ಮನ್ನು ಯೋಗ್ಯರೆಂದು ಎಣಿಸಿ, ಒಳಿತನ್ನು ಮಾಡಲು ನಿಮ್ಮ ಎಲ್ಲಾ ಇಷ್ಟಾರ್ಥವನ್ನೂ ವಿಶ್ವಾಸದಿಂದ ಆಗಿರುವ ನಿಮ್ಮ ಎಲ್ಲಾ ಕಾರ್ಯಗಳನ್ನೂ ದೇವರು ತಮ್ಮ ಶಕ್ತಿಯಿಂದ ಪರಿಪೂರ್ಣಗೊಳಿಸುವಂತೆ ನಾವು ಯಾವಾಗಲೂ ನಿಮಗೋಸ್ಕರ ಪ್ರಾರ್ಥನೆ ಮಾಡುತ್ತೇವೆ.

2 ಥೆಸಲೊನೀಕದವರಿಗೆ ಅಧ್ಯಾಯ 1

12 ನಮ್ಮ ದೇವರ ಹಾಗೂ ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಕೃಪೆಯ ಅನುಸಾರವಾಗಿ, ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನ ಹೆಸರು ನಿಮ್ಮಲ್ಲಿ ಮಹಿಮೆ ಹೊಂದಬೇಕು. ಮಾತ್ರವಲ್ಲದೇ ನೀವು ಕೂಡಾ ಅವರಲ್ಲಿ ಮಹಿಮೆ ಹೊಂದಬೇಕು ಎಂದು ಬೇಡಿಕೊಳ್ಳುತ್ತೇವೆ.