Kannada ಬೈಬಲ್
ವಿಮೋಚನಕಾಂಡ ಒಟ್ಟು 40 ಅಧ್ಯಾಯಗಳು
ವಿಮೋಚನಕಾಂಡ
ವಿಮೋಚನಕಾಂಡ ಅಧ್ಯಾಯ 13
ವಿಮೋಚನಕಾಂಡ ಅಧ್ಯಾಯ 13
ಚೊಚ್ಚಲಾದವರ ಪ್ರತಿಷ್ಠೆ 1 ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,
2 “ಇಸ್ರಾಯೇಲರಲ್ಲಿ ಹುಟ್ಟಿರುವ ಪ್ರತಿಯೊಂದು ಚೊಚ್ಚಲ ಗಂಡನ್ನು ನನಗಾಗಿ ಮೀಸಲಾಗಿಡು. ಮನುಷ್ಯರಾಗಿರಲಿ, ಪಶುಪ್ರಾಣಿಗಳಾಗಿರಲಿ ಪ್ರಥಮ ಗರ್ಭಫಲವು ನನ್ನದಾಗಿದೆ,” ಎಂದರು.
3 ಆಗ ಮೋಶೆಯು ಜನರಿಗೆ, “ನೀವು ಈಜಿಪ್ಟಿನ ದಾಸತ್ವದಿಂದ ಹೊರಬಂದ ಈ ದಿನವನ್ನು ಜ್ಞಾಪಕಮಾಡಿಕೊಳ್ಳಿರಿ. ಏಕೆಂದರೆ ಯೆಹೋವ ದೇವರು ನಿಮ್ಮನ್ನು ತಮ್ಮ ಭುಜಬಲದಿಂದ ಅಲ್ಲಿಂದ ಹೊರಗೆ ಬರಮಾಡಿದ್ದಾರೆ. ಹೀಗಿರುವುದರಿಂದ ಈ ದಿನ ನೀವು ಹುಳಿರೊಟ್ಟಿಯನ್ನು ತಿನ್ನಬಾರದು.
ವಿಮೋಚನಕಾಂಡ ಅಧ್ಯಾಯ 13
4 ಅಬೀಬ* ಅಬೀಬ ಅಂದರೆ ಹೀಬ್ರೂ ಕ್ಯಾಲೆಂಡರಿನ ಪ್ರಕಾರ ಮೊದಲ ತಿಂಗಳು ತಿಂಗಳಿನ ಈ ದಿನದಲ್ಲಿ ನೀವು ಹೊರಗೆ ಬಂದಿದ್ದೀರಿ.
5 ಆದ್ದರಿಂದ ಯೆಹೋವ ದೇವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಹಾಲೂ ಜೇನೂ ಹರಿಯುವ ದೇಶಕ್ಕೆ ಅಂದರೆ ಕಾನಾನ್ಯರ, ಹಿತ್ತಿಯರ, ಅಮೋರಿಯರ, ಹಿವ್ವಿಯರ, ಯೆಬೂಸಿಯರ ದೇಶಕ್ಕೆ ನಿಮ್ಮನ್ನು ಕರೆತಂದು ಅದನ್ನು ನಿಮಗೆ ಕೊಟ್ಟಾಗ ಈ ಹಬ್ಬವನ್ನು ಈ ತಿಂಗಳಲ್ಲಿ ಆಚರಿಸಬೇಕು.
ವಿಮೋಚನಕಾಂಡ ಅಧ್ಯಾಯ 13
6 ನೀವು ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿವಸ ತಿನ್ನಬೇಕು. ಏಳನೆಯ ದಿನದಲ್ಲಿ ಯೆಹೋವ ದೇವರಿಗೆ ಹಬ್ಬವನ್ನಾಚರಿಸಬೇಕು.
7 ಆ ಏಳು ದಿನಗಳಲ್ಲಿ ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಬೇಕು. ಅಲ್ಲದೆ ನಿಮ್ಮ ಬಳಿಯಲ್ಲಿ ಹುಳಿಯಾಗಲಿ ಇಲ್ಲವೆ ಹುಳಿಹಿಟ್ಟಾಗಲಿ ನಿಮ್ಮ ಯಾವ ಮೇರೆಯಲ್ಲೂ ಕಾಣಬಾರದು.
8 ಆ ದಿನದಲ್ಲಿ ನಿಮ್ಮ ಮಕ್ಕಳಿಗೆ, ‘ನಾವು ಈಜಿಪ್ಟಿನಿಂದ ಹೊರಗೆ ಬಂದಾಗ ಯೆಹೋವ ದೇವರು ನಮಗೆ ಮಾಡಿದ್ದನ್ನು ಸ್ಮರಿಸುವುದಕ್ಕಾಗಿ ಇದನ್ನು ಆಚರಿಸುತ್ತೇವೆ,’ ಎಂದು ತಿಳಿಸಬೇಕು.
ವಿಮೋಚನಕಾಂಡ ಅಧ್ಯಾಯ 13
9 ಏಕೆಂದರೆ ಯೆಹೋವ ದೇವರು ನಿಮ್ಮನ್ನು ತಮ್ಮ ಭುಜಬಲದಿಂದ ಈಜಿಪ್ಟಿನಿಂದ ಹೊರಗೆ ಬರಮಾಡಿದ್ದಾರೆ. ಆದ್ದರಿಂದ ದೇವರ ನಿಯಮವು ನಿಮ್ಮ ಬಾಯಲ್ಲಿ ಇರುವಂತೆ, ಈ ಆಚರಣೆಯು ನಿಮ್ಮ ಕೈಯಲ್ಲಿ ಗುರುತಾಗಿಯೂ ನಿಮ್ಮ ಹಣೆಯಲ್ಲಿ ಜ್ಞಾಪಕಾರ್ಥವಾಗಿಯೂ ಇರಬೇಕು.
10 ಹೀಗಿರುವುದರಿಂದ ನೀವು ಪ್ರತಿ ವರುಷವು ನೇಮಿತವಾದ ಕಾಲದಲ್ಲಿ ಈ ಶಾಸನವನ್ನು ಕೈಗೊಳ್ಳಬೇಕು.
11 “ಯೆಹೋವ ದೇವರು ನಿಮಗೂ ನಿಮ್ಮ ಪಿತೃಗಳಿಗೂ ಪ್ರಮಾಣ ಮಾಡಿದ ಪ್ರಕಾರ, ನಿಮ್ಮನ್ನು ಕಾನಾನ್ಯರ ದೇಶಕ್ಕೆ ಬರಮಾಡಿ, ಅದನ್ನು ನಿಮಗೆ ಕೊಟ್ಟನಂತರ,
ವಿಮೋಚನಕಾಂಡ ಅಧ್ಯಾಯ 13
12 ನಿಮ್ಮಲ್ಲಿಯೂ ನಿಮ್ಮ ಪಶುಪ್ರಾಣಿಗಳಲ್ಲಿಯೂ ಹುಟ್ಟುವ ಪ್ರತಿಯೊಂದು ಗರ್ಭದ ಪ್ರಥಮ ಫಲವನ್ನು ನೀವು ಯೆಹೋವ ದೇವರಿಗೆ ಕೊಡಬೇಕು.
13 ಕತ್ತೆಯ ಚೊಚ್ಚಲು ಮರಿಗೆ ಬದಲಾಗಿ ಕುರಿಮರಿಯನ್ನು ಕೊಟ್ಟು ವಿಮೋಚಿಸಿಕೊಳ್ಳಬೇಕು. ಹಾಗೆ ವಿಮೋಚಿಸಿಕೊಳ್ಳದೆ ಹೋದರೆ ಅದರ ಕುತ್ತಿಗೆ ಮುರಿಯಬೇಕು. ಮನುಷ್ಯರಲ್ಲಿ ಚೊಚ್ಚಲ ಗಂಡು ಮಕ್ಕಳನ್ನು ಬದಲುಕೊಟ್ಟು, ವಿಮೋಚಿಸಲೇಬೇಕು.
14 “ಮುಂದೆ ಬರುವ ಕಾಲದಲ್ಲಿ ನಿಮ್ಮ ಪುತ್ರರು ನಿಮಗೆ, ‘ಇದರ ಅರ್ಥವೇನು?’ ಎಂದು ಕೇಳುವಾಗ, ನೀವು ಅವರಿಗೆ, ‘ಯೆಹೋವ ದೇವರು ತಮ್ಮ ಭುಜಬಲದಿಂದ ನಮ್ಮನ್ನು ಈಜಿಪ್ಟಿನ ದಾಸತ್ವದೊಳಗಿಂದ ಹೊರಗೆ ಬರಮಾಡಿದ್ದಾರೆ.
ವಿಮೋಚನಕಾಂಡ ಅಧ್ಯಾಯ 13
15 ಫರೋಹನು ಹಟಮಾರಿತನದಿಂದ ನಮ್ಮನ್ನು ಕಳುಹಿಸದೆ ಇದ್ದಾಗ, ಯೆಹೋವ ದೇವರು ಈಜಿಪ್ಟ್ ದೇಶದಲ್ಲಿ ಚೊಚ್ಚಲಾದದ್ದನ್ನೆಲ್ಲಾ ಎಂದರೆ, ಮನುಷ್ಯರ ಹಾಗೂ ಪಶುಪ್ರಾಣಿಗಳ ಚೊಚ್ಚಲಾದವುಗಳನ್ನು ಕೊಂದುಹಾಕಿದರು. ಆದ್ದರಿಂದ ಚೊಚ್ಚಲ ಗಂಡುಗಳನ್ನೆಲ್ಲಾ ಯೆಹೋವ ದೇವರಿಗೆ ಅರ್ಪಿಸುತ್ತೇವೆ. ನಮ್ಮ ಪುತ್ರರಲ್ಲಿ ಚೊಚ್ಚಲಾದವರೆಲ್ಲರನ್ನು ವಿಮೋಚಿಸುತ್ತೇವೆ,’
16 ಇದು ನಿಮ್ಮ ಕೈಯಲ್ಲಿ ಗುರುತಾಗಿಯೂ ನಿಮ್ಮ ಹಣೆಯ ಮೇಲೆ ಸಂಕೇತವಾಗಿಯೂ ಇರಲಿ. ಏಕೆಂದರೆ ಯೆಹೋವ ದೇವರು ತಮ್ಮ ಭುಜಬಲದಿಂದ ನಮ್ಮನ್ನು ಈಜಿಪ್ಟಿನೊಳಗಿಂದ ಹೊರಗೆ ಬರಮಾಡಿದ್ದಾರೆ ಎಂದು ಹೇಳಬೇಕು,” ಎಂದರು.
ವಿಮೋಚನಕಾಂಡ ಅಧ್ಯಾಯ 13
ಸಮುದ್ರವನ್ನು ದಾಟಿದ್ದು 17 ಫರೋಹನು ಜನರನ್ನು ಕಳುಹಿಸಿಬಿಟ್ಟಾಗ, ಫಿಲಿಷ್ಟಿಯರ ದೇಶದ ದಾರಿಯು ಸಮೀಪವಿದ್ದರೂ ದೇವರು ಅವರನ್ನು ಅದರಲ್ಲಿ ನಡೆಸಲಿಲ್ಲ. ಏಕೆಂದರೆ ದೇವರು, “ಜನರು ಯುದ್ಧವನ್ನು ನೋಡಿ, ಮನಸ್ಸನ್ನು ಬೇರೆಮಾಡಿಕೊಂಡು, ಈಜಿಪ್ಟಿಗೆ ಹಿಂದಿರುಗಿಯಾರು,” ಎಂದು ಹೇಳಿದರು.
18 ಹೀಗಿರುವುದರಿಂದ ಯೆಹೋವ ದೇವರು ಜನರನ್ನು ಕೆಂಪುಸಮುದ್ರದ ಮರುಭೂಮಿಯಲ್ಲಿ ಸುತ್ತಿಕೊಂಡು ಹೋಗುವಂತೆ ಮಾಡಿದರು. ಇಸ್ರಾಯೇಲರು ಯುದ್ಧಸನ್ನದ್ಧರಾಗಿ ಈಜಿಪ್ಟ್ ದೇಶದೊಳಗಿಂದ ಹೋದರು.
ವಿಮೋಚನಕಾಂಡ ಅಧ್ಯಾಯ 13
19
50 ಆಗ ಮೋಶೆಯು ತನ್ನೊಂದಿಗೆ ಯೋಸೇಫನ ಎಲುಬುಗಳನ್ನು ತೆಗೆದುಕೊಂಡು ಹೋದನು. ಏಕೆಂದರೆ ಯೋಸೇಫನು ಇಸ್ರಾಯೇಲರಿಗೆ, “ದೇವರು ನಿಜವಾಗಿಯೂ ನಿಮ್ಮ ಸಹಾಯಕ್ಕೆ ಬರುವರು. ಆಗ ನೀವು ನನ್ನ ಎಲುಬುಗಳನ್ನು ಇಲ್ಲಿಂದ ನಿಮ್ಮ ಕೂಡ ತೆಗೆದುಕೊಂಡು ಹೋಗಬೇಕು,”† ನೋಡಿರಿ ಆದಿ 50:25 ಎಂದು ಹೇಳಿ ಅವರಿಂದ ದೃಢಪ್ರಮಾಣ ಮಾಡಿಸಿದ್ದನು. ಹೀಗೆ ಅವರು ಸುಕ್ಕೋತಿನಿಂದ ಪ್ರಯಾಣಮಾಡಿ, ಏತಾಮಿನ ಮರುಭೂಮಿಯ ಅಂಚಿನಲ್ಲಿ ಇಳಿದುಕೊಂಡರು.
ವಿಮೋಚನಕಾಂಡ ಅಧ್ಯಾಯ 13
21 ಇದಲ್ಲದೆ ಅವರು ಹಗಲೂ ರಾತ್ರಿಯೂ ಪ್ರಯಾಣ ಮಾಡುವ ಹಾಗೆ ಯೆಹೋವ ದೇವರು ಹಗಲಲ್ಲಿ ಅವರಿಗೆ ದಾರಿ ತೋರಿಸುವುದಕ್ಕೆ ಮೇಘದ ಸ್ತಂಭದಲ್ಲಿಯೂ ರಾತ್ರಿಯಲ್ಲಿ ಅವರಿಗೆ ಬೆಳಕು ಕೊಡುವುದಕ್ಕೆ ಅಗ್ನಿಯ ಸ್ತಂಭದಲ್ಲಿಯೂ ಅವರ ಮುಂದೆ ಹೋದರು.
22 ದೇವರು ಹಗಲಲ್ಲಿ ಮೇಘಸ್ತಂಭವನ್ನೂ ರಾತ್ರಿಯಲ್ಲಿ ಅಗ್ನಿಸ್ತಂಭವನ್ನೂ ಜನರ ಎದುರಿನಿಂದ ತೆಗೆದುಬಿಡಲಿಲ್ಲ.